Homeಕರ್ನಾಟಕಕಲಬುರಗಿ: ದಲಿತ ಸಮುದಾಯದ ಅಂಗನವಾಡಿ ಕಾರ್ಯಕರ್ತೆ ಮೇಲೆ ಎಸ್‌ಡಿಎಂಸಿ ಅಧ್ಯಕ್ಷರಿಂದ ಹಲ್ಲೆ

ಕಲಬುರಗಿ: ದಲಿತ ಸಮುದಾಯದ ಅಂಗನವಾಡಿ ಕಾರ್ಯಕರ್ತೆ ಮೇಲೆ ಎಸ್‌ಡಿಎಂಸಿ ಅಧ್ಯಕ್ಷರಿಂದ ಹಲ್ಲೆ

- Advertisement -
- Advertisement -

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಆಲೂರು ಗ್ರಾಮದಲ್ಲಿ ದಲಿತ ಅಂಗನವಾಡಿ ಕಾರ್ಯಕರ್ತೆಯ ಮೇಲೆ ಶಾಲಾಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ (ಎಸ್‌ಡಿಎಂಸಿ) ಅಧ್ಯಕ್ಷರು ಹಲ್ಲೆ ನಡೆಸಿದ್ದು, ಜಿಲ್ಲೆಯ ದಲಿತ ಸಂಘರ್ಷ ಸಮಿತಿ ಖಂಡಿಸಿದೆ.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಅರ್ಜುನ್ ಭದ್ರೆ, ಕಳೆದ ಸೋಮವಾರ ದಲಿತ ಮಹಿಳೆ ಸಂಪತ್ತಿ ಬಾಯಿ ಮೇಲೆ ಎಸ್‌ಡಿಎಂಸಿ ಅಧ್ಯಕ್ಷ ಮಲ್ಲಪ್ಪ ನಾಟೀಕಾರ ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆ ಎಂದು ಹೇಳಿದರು.

ಆಲೂರು ಗ್ರಾಮದಲ್ಲಿ ಎರಡು ಅಂಗನವಾಡಿ ಕೇಂದ್ರಗಳಿವೆ. ಅಂಗನವಾಡಿ ಕಾರ್ಯಕರ್ತೆ ದೇವಕ್ಕಮ್ಮ ಜೋಶಿ ಅವರು ಡಿಸೆಂಬರ್ 31, 2023 ರಂದು ನಿವೃತ್ತರಾದ ನಂತರ, ಆಲೂರು ಗ್ರಾಮದ ದಲಿತ ಪ್ರದೇಶದಲ್ಲಿರುವ ಅಂಗನವಾಡಿ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ ಸಂಪತ್ತಿ ಬಾಯಿ ಅವರಿರನ್ನು ದಲಿತೇತರ ಪ್ರದೇಶದ  ಅಂಗನವಾಡಿ ಕೇಂದ್ರ-2 ರ ಹೆಚ್ಚುವರಿ ಉಸ್ತುವಾರಿ ವಹಿಸಲಾಯಿತು.

ದಲಿತೇತರ ಪ್ರದೇಶದಲ್ಲಿ ಇರುವ ಅಂಗನವಾಡಿ ಕೇಂದ್ರದಲ್ಲಿ ಸಂಪತ್ತಿ ಬಾಯಿ ಕೆಲಸ ಮಾಡುತ್ತಿರುವುದನ್ನು ನಾಟಿಕಾರ ಆಕ್ಷೇಪಿಸಿದ್ದರು.

ಅದೇ ಅಂಗನವಾಡಿ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಇನ್ನೊಬ್ಬ ಅಂಗನವಾಡಿ ಕಾರ್ಯಕರ್ತೆ ಶಾಂತಾ ಬಾಯಿ ಅವರು 15 ದಿನಗಳ ಕಾಲ (ಸೆಪ್ಟೆಂಬರ್ 3, 2024 ರಿಂದ ಸೆಪ್ಟೆಂಬರ್ 18, 2024 ರವರೆಗೆ) ಗೈರುಹಾಜರಾಗಿದ್ದರು. ರಜೆ ನಂತರ ಅವರು ತಮ್ಮ ಹಾಜರಾತಿಗೆ ಸಹಿ ಹಾಕಿದ್ದರು.

ಇದನ್ನು ಗಮನಿಸಿದ ಸಂಪತ್ತಿ ಬಾಯಿ ಅವರು ತಮ್ಮ ಮನೆಗೆ ಮೊಟ್ಟೆ ಮತ್ತು ಪೌಷ್ಠಿಕಾಂಶವನ್ನು ತೆಗೆದುಕೊಂಡು ಹೋಗುವುದನ್ನು ವಿರೋಧಿಸಿದಾಗ, ಶಾಂತಾ ಬಾಯಿ ನಾಟೀಕಾರರಿಗೆ ದೂರು ನೀಡಿದ್ದಾರೆ. ಕಳೆದ ಸೋಮವಾರ ಅಂಗನವಾಡಿ ಕೇಂದ್ರಕ್ಕೆ ನುಗ್ಗಿ ಸಂಪತ್ತಿ ಬಾಯಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ಸಾಲದ್ದಕ್ಕೆ ಆಕೆಯ ವಿರುದ್ಧ ಅವಾಚ್ಯ ಶಬ್ದ ಬಳಸಿದ್ದಾರೆ.

ಈ ಬಗ್ಗೆ ದೂರು ನೀಡಲು ಪೊಲೀಸ್ ಠಾಣೆಗೆ ತೆರಳುತ್ತಿದ್ದ ಸಂಪತ್ತಿ ಬಾಯಿ ಅವರನ್ನು ತಡೆದ ನಾಟೀಕರ್ ಬಸ್ ನಿಲ್ದಾಣದ ಬಳಿ ಅಡ್ಡಗಟ್ಟಿ ಥಳಿಸಿದ್ದಾರೆ.

ಪೊಲೀಸರು ನಾಟಿಕರ್ ಅವರ ವಿರುದ್ಧ ಮಾತ್ರ ದೂರು ದಾಖಲಿಸಿದ್ದಾರೆ ಮತ್ತು ಶಾಂತಾ ಬಾಯಿ ಅವರ ಹೆಸರನ್ನು ನಮೂದಿಸಲು ವಿಫಲರಾಗಿದ್ದಾರೆ ಎಂದು ಸಂಪತ್ತಿ ಬಾಯಿ ಹೇಳಿದರು.

ಇಡೀ ಪ್ರಕರಣಕ್ಕೆ ಶಾಂತಾ ಬಾಯಿಯೇ ಮೂಲ ಕಾರಣ ಎಂದು ತಮ್ಮ ಅಳಲು ತೋಡಿಕೊಂಡರು. ನಾಟಿಕರ್ ಮತ್ತು ಶಾಂತಾ ಬಾಯಿ ಇಬ್ಬರೂ ಆಕೆಯನ್ನು ನಿಂದಿಸಿದ್ದಾರೆ.

ರಾಜ್ಯದಲ್ಲಿ ಹೆಚ್ಚುತ್ತಿರುವ ದಲಿತರ ಮೇಲಿನ ದೌರ್ಜನ್ಯಗಳನ್ನು ಬಗೆಹರಿಸುವಂತೆ ನಿಯೋಗವು ಗೃಹ ಸಚಿವ ಜಿ.ಪರಮೇಶ್ವರ ಅವರನ್ನು ಭೇಟಿ ಮಾಡಿ ಒತ್ತಾಯಿಸಲಿದೆ ಎಂದು ಸಮಿತಿ ತಿಳಿಸಿದೆ.

ಇದನ್ನೂ ಓದಿ; ಮರಕುಂಬಿ ದಲಿತ ದೌರ್ಜನ್ಯ ಪ್ರಕರಣ | 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...