Homeಕರ್ನಾಟಕಕಲಬುರಗಿ: ಅಂಬೇಡ್ಕರ್ ಪುತ್ಥಳಿಗೆ ಅಪಮಾನ ಖಂಡಿಸಿ ದಲಿತ ಸಂಘಟನೆಗಳಿಂದ ಪ್ರತಿಭಟನೆ

ಕಲಬುರಗಿ: ಅಂಬೇಡ್ಕರ್ ಪುತ್ಥಳಿಗೆ ಅಪಮಾನ ಖಂಡಿಸಿ ದಲಿತ ಸಂಘಟನೆಗಳಿಂದ ಪ್ರತಿಭಟನೆ

- Advertisement -
- Advertisement -

ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಪುತ್ಥಳಿಗೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿ ಅಪಮಾನ ಮಾಡಿರುವ ಘಟನೆ ಕಲಬುರಗಿ ನಗರದ ಹೊರವಲಯದಲ್ಲಿರುವ ಕೋಟನೂರ (ಡಿ) ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ.

ಕೃತ್ಯವನ್ನು ಖಂಡಿಸಿ ಮಂಗಳವಾರ ಬೆಳಿಗ್ಗೆಯಿಂದ ದಲಿತ ಸಂಘಟನೆಗಳು ಕಲಬುರಗಿ ನಗರದ ರಾಮಮಂದಿರ, ಫರತಹಬಾದ್, ನಾಗನಹಳ್ಳಿ ರಿಂಗ್‌ ರೋಡ್‌, ಲುಂಬಿಣಿ ಪಾರ್ಕ್‌ ಸೇರಿದಂತೆ ಹಲವೆಡೆ ಸಂಚಾರ ಮತ್ತು ಮಳಿಗೆಗಳನ್ನು ಬಂದ್ ಮಾಡಿಸಿ, ಟೈರ್‌ಗೆ ಬೆಂಕಿ ಹಚ್ಚಿದ ಪ್ರತಿಭಟನೆ ನಡೆಸಿವೆ.

ನಿನ್ನೆ (ಸೋಮವಾರ) ರಾತ್ರಿ ಕಿಡಿಗೇಡಿಗಳು ಅಂಬೇಡ್ಕರ್ ಪುತ್ಥಳಿಗೆ ಅಪಮಾನ ಮಾಡಿದ್ದು, ಇಂದು (ಮಂಗಳವಾರ) ಕಲಬುರಗಿ ರಸ್ತೆ ಮತ್ತು ರಾಮಮಂದಿರ ವೃತ್ತದಲ್ಲಿ ಜಮಾಯಿಸಿದ ಜನರು, ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಬಂದು ನಮ್ಮ ಮನವಿ ಆಲಿಸಬೇಕು, ಅಂಬೇಡ್ಕರ್‌ಗೆ ಅಪಮಾನ ಮಾಡಿದ ಆರೋಪಿಗಳನ್ನು ಶೀಘ್ರವೇ ಬಂಧಿಸುವಂತೆ ಆಗ್ರಹಿಸಿದರು.

ಪ್ರತಿಭಟನೆ ಹೆಚ್ಚಾದಾಗ ಸ್ಥಳಕ್ಕೆ ಬಂದು ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಡಾ.ಬಿ.ಆರ್ ಅಂಬೇಡ್ಕರ್ ಅವರು ನಮಗೆಲ್ಲರಿಗೂ ನಾಯಕ. ಅವರಿಗೆ ಅಪಮಾನ ಮಾಡಿದವರನ್ನು ಶೀಘ್ರದಲ್ಲೇ ಪತ್ತೆ ಹಚ್ಚಿ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು.

ಬಳಿಕ ಘಟನಾ ಸ್ಥಳಕ್ಕೆ ಬಂದ ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್ ಹಾಗೂ ಪೊಲೀಸ್ ಆಯುಕ್ತರು ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ : ಮಂಡ್ಯ: ನಾಪತ್ತೆಯಾಗಿದ್ದ ಶಿಕ್ಷಕಿ ಶವವಾಗಿ ಪತ್ತೆ, ಕೊಲೆ ಶಂಕೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅರವಿಂದ್ ಕೇಜ್ರಿವಾಲ್‌ನ್ನು ಚುನಾವಣೆಗೆ ಮುನ್ನ ಬಂಧಿಸಿದ್ದು ಏಕೆ? EDಗೆ ಉತ್ತರಿಸುವಂತೆ ಸೂಚಿಸಿದ ಸುಪ್ರೀಂ ಕೋರ್ಟ್‌

0
ಸಾರ್ವತ್ರಿಕ ಚುನಾವಣೆಗೆ ಮುನ್ನ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನಕ್ಕೆ ಸಂಬಂಧಿಸಿದ ಪ್ರಶ್ನೆಗಳಿಗೆ ಉತ್ತರಿಸುವಂತೆ ಸುಪ್ರೀಂಕೋರ್ಟ್ ಜಾರಿ ನಿರ್ದೇಶನಾಲಯಕ್ಕೆ ಸೂಚಿಸಿದ್ದು, ಅರವಿಂದ್ ಕೇಜ್ರಿವಾಲ್ ಅವರನ್ನು ಚುನಾವಣೆಗೂ ಮುನ್ನ ಬಂಧಿಸಿದ್ದು ಏಕೆ? ಎಂದು...