Homeಕರ್ನಾಟಕಕಲಬುರಗಿ | ಆರೆಸ್ಸೆಸ್‌ ನಾಯಕನ ಕಾರ್ಯಕ್ರಮದ ವಿರುದ್ಧ ಪ್ರಗತಿಪರ ಸಂಘಟನೆಗಳ ಕಾರ್ಯಕ್ರಮ

ಕಲಬುರಗಿ | ಆರೆಸ್ಸೆಸ್‌ ನಾಯಕನ ಕಾರ್ಯಕ್ರಮದ ವಿರುದ್ಧ ಪ್ರಗತಿಪರ ಸಂಘಟನೆಗಳ ಕಾರ್ಯಕ್ರಮ

- Advertisement -
- Advertisement -

ಆರೆಸ್ಸೆಸ್ ಹಾಗೂ ಬಿಜೆಪಿ ಮಾಜಿ ನಾಯಕ ಕೆ.ಎನ್. ಗೋವಿಂದಾಚಾರ್ಯ ಮತ್ತು ಭಾರತ ವಿಕಾಸ ಸಂಗಮದ ಮುಖ್ಯಸ್ಥ, ಮಾಜಿ ಸಂಸದ ಬಸವರಾಜ ಪಾಟೀಲ್ ಸೇಡಂ ನೇತೃತ್ವದಲ್ಲಿ ಕಲಬುರಗಿಯ ಸೇಡಂನಲ್ಲಿ ಬಲಪಂಥೀಯ ಗುಂಪುಗಳು ನಡೆಸುತ್ತಿರುವ ‘7ನೇ ಭಾರತೀಯ ಸಂಸ್ಕೃತಿ ಉತ್ಸವ’ ಕಾರ್ಯಕ್ರಮಕ್ಕೆ ವಿರುದ್ಧವಾಗಿ ಪ್ರಗತಿಪರ ಗುಂಪುಗಳು ‘ಸೌಹಾರ್ದ ಭಾರತ ಉತ್ಸವ’ ನಡೆಸುವುದಾಗಿ ತೀರ್ಮಾನ ಕೈಗೊಂಡಿವೆ. ಕಲಬುರಗಿ

ಆರೆಸ್ಸೆಸ್‌ ಹಾಗೂ ಬಿಜೆಪಿ ಪರ ಬಲಪಂಥೀಯ ಸಂಘಟನೆಯು ಜನವರಿ 29 ಮತ್ತು ಫೆಬ್ರವರಿ 6 ರ ನಡುವೆ ‘ಭಾರತೀಯ ಸಂಸ್ಕೃತಿ ಉತ್ಸವ’ ಆಯೋಜಿಸಿದೆ. ಈ ಕಾರ್ಯಕ್ರಮಕ್ಕೆ ವಿರುದ್ಧವಾಗಿ ಜನವರಿ 17ರಂದು ಪ್ರಗತಿಪರ ಸಂಘಟನೆಗಳು ತಮ್ಮ ಆದ ಕಾರ್ಯಕ್ರಮವನ್ನು ಪ್ರಾರಂಭಿಸಲು ಪ್ರತಿಜ್ಞೆ ಮಾಡಿದೆ.

ಆರೆಸ್ಸೆಸ್ ನಾಯಕ ಕೆ.ಎನ್. ಗೋವಿಂದಾಚಾರ್ಯ ಅವರು 2016ರಲ್ಲಿ ನೀಡಿದ್ದ ಸಂದರ್ಶನವೊಂದರಲ್ಲಿ ಮಾತನಾಡುತ್ತಾ, ‘ಭಾರತೀಯತೆಯನ್ನು ಪ್ರತಿಬಿಂಬಿಸಲು ನಾವು ಸಂವಿಧಾನವನ್ನು ಪುನಃ ಬರೆಯುತ್ತೇವೆ’ ಎಂದು ಸಂವಿಧಾನ ಬದಲಾಯಿಸುವ ಬಗ್ಗೆ ಮಾತನಾಡಿದ್ದರು. ಅವರ ನೇತೃತ್ವದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್, ಆರೆಸ್ಸೆಸ್‌ ನಾಯಕ ದತ್ತಾತ್ರೆಯ ಹೊಸಬಾಳೆ, ವೀರೇಂದ್ರ ಹೆಗಡೆ, ಯಡಿಯೂರಪ್ಪ, ಕುಮಾರಸ್ವಾಮಿ, ಶೋಭಾ ಕರಂದ್ಲಾಜೆ, ವಿಶ್ವೇಶ್ವರ ಕಾಗೇರಿ, ಯತ್ನಾಲ್, ಸುಧಾ ಮೂರ್ತಿ, ವಿಜಯೇಂದ್ರ, ಬಾಬಾ ರಾಮದೇವ್ ಸೇರಿದಂತೆ ಹಲವಾರು ಬಿಜೆಪಿ ಮತ್ತು ಸಂಘಪರಿವಾರದ ನಾಯಕರು ಇದರಲ್ಲಿ ಭಾಗವಹಿಸಲಿದ್ದಾರೆ. ಕಲಬುರಗಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅಷ್ಟೆ ಅಲ್ಲದೆ, ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಿ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ, ಸಚಿವರು, ಸಂಸದರು, ಶಾಸಕರು ಹಾಗೂ ಹಲವು ಕಾಂಗ್ರೆಸ್ ನಾಯಕ ಹೆಸರುಗಳು ಕಾಣಿಸಿಕೊಂಡಿದೆ. ಅದಾಗ್ಯೂ, ಈ ಕಾರ್ಯಕ್ರಮಕ್ಕೆ ತಾವು ತೆರಳುವುದಿಲ್ಲ ಮತ್ತು ತಮಗೆ ತಿಳಿಯದಂತೆ ನಮ್ಮ ಹೆಸರು ಸೇರಿಸಲಾಗಿದೆ ಎಂದು ಅವರು ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ಅವರು ಹೇಳಿದ್ದರು. ಉಳಿದ ಕಾಂಗ್ರೆಸ್ ನಾಯಕರು ಈ ಬಗ್ಗೆ ಯಾವುದೆ ಪ್ರತಿಕ್ರಿಯೆ ನೀಡಿದ್ದು ವರದಿಯಾಗಿಲ್ಲ.

ಪ್ರಗತಿಪರ ಸಂಘಟನೆಗಳು ನಡೆಸುತ್ತಿರುವ ಕಾರ್ಯಕ್ರಮದ ಬಗ್ಗೆ ಮಾತನಾಡಿದ ವಿದ್ವಾಂಸರಾದ ಪ್ರೊ. ಮೀನಾಕ್ಷಿ ಬಾಳಿ ಅವರು, ”ಇದು ಸಾಮಾನ್ಯ ಪ್ರತಿಭಟನೆಯಲ್ಲ. ನಾವು ಅವರನ್ನು ತಡೆಯಲು ಬಯಸುವುದಿಲ್ಲ, ಆದರೆ ಯಾವುದೇ ಸಂಭವನೀಯ ಕೋಮುವಾದಿ ಕಾರ್ಯಚಟುವಟಿಕೆ ಇದ್ದರೆ, ಬಲಪಂಥೀಯರ ರ್ಯಾಲಿಯು ಫಲಪ್ರದವಾಗದಂತೆ ಮತ್ತು ಅದರ ಉದ್ದೇಶವನ್ನು ಈಡೇರದಂತೆ ಕೆಲಸ ಮಾಡುತ್ತೇವೆ ಎಂದು ನಾವು ಖಚಿತಪಡಿಸಿಕೊಳ್ಳಲು ಬಯಸುತ್ತೇವೆ” ಎಂದು ಹೇಳಿದ್ದಾರೆ.

ಡಿಸೆಂಬರ್ 19 ರಂದು ಬೆಂಗಳೂರಿನಲ್ಲಿ ನಿರ್ಣಾಯಕ ಪೂರ್ವಸಿದ್ಧತಾ ಸಭೆಗಳು ನಡೆದಿದ್ದು, ನಂತರದ ಕಾರ್ಯತಂತ್ರದ ಸಭೆಗಳನ್ನು ದಾವಣಗೆರೆ, ವಿಜಯಪುರ ಮತ್ತು ಇತರ ಪಟ್ಟಣಗಳಲ್ಲಿ ನಡೆಸಲಾಗಿದೆ ಎಂದು ಬಾಳಿ ಅವರು ಹೇಳಿದ್ದಾರೆ.

ಅದಾಗ್ಯೂ, ಪ್ರಗತಿಪರ ಸಂಘಟನೆಗಳು ನಡೆಸಲು ಉದ್ದೇಶಿಸಿರುವ ಈ ಆಂದೋಲನಕ್ಕೆ ಹಣದ ಕೊರತೆಯಿದೆ, ಆದರೆ, ಬಲಪಂಥೀಯರು ತಮ್ಮ ಕಾರ್ಯಕ್ರಮಕ್ಕೆ ಅಪಾರ ಪ್ರಮಾಣದ ಹಣವನ್ನು ಸುರಿಯುತ್ತಿದ್ದಾರೆ ಎಂದು ವರದಿಗಳು ಹೇಳಿವೆ. ಪ್ರಗತಿಪರ ನಾಯಕರು ತಮ್ಮ ಕಾರ್ಯಕ್ರಮವನ್ನು ನಡೆಸಲು ಹರಸಾಹಸ ಪಡುತ್ತಿದ್ದು, “ನಾವು ನಮ್ಮಲ್ಲಿರುವ ಸ್ವಲ್ಪ ಸ್ವಲ್ಪ ಹಣವನ್ನು ಒಟ್ಟುಗೂಡಿಸಿ ಕಾರ್ಯಕ್ರಮ ನಡೆಸಲಿದ್ದೇವೆ” ಎಂದು ಬಾಳಿ ಹೇಳಿದ್ದಾರೆ.

ಪ್ರಗತಿಪರರ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಬೆಂಬಲವಿದೆಯೆ ಎಂಬ ಪ್ರಶ್ನೆಗೆ ಉತ್ತರಿಸಿದ ಮೀನಾಕ್ಷಿ ಬಾಳಿ, “ಈ ಬಗ್ಗೆ ಕಾಂಗ್ರೆಸ್‌ಗೆ ಯಾವುದೇ ತಂತ್ರವಿಲ್ಲ. ಈ ಕಾರ್ಯಕ್ರಮದಿಂದ ಏನು ಅಪಾಯವಿದೆ ಎಂದು ಅವರಿಗೆ ಅರ್ಥವಾಗುತ್ತಿಲ್ಲ” ಎಂದು ಆರೋಪಿಸಿದ್ದಾರೆ.

ಈ ಮಧ್ಯೆ ಜನವರಿ 29 ರ ಆರೆಸ್ಸೆಸ್ ಕಾರ್ಯಕ್ರಮದ ಪ್ರಮುಖ ವ್ಯಕ್ತಿ ಮಾಜಿ ಸಂಸದ ಬಸವರಾಜ ಪಾಟೀಲ್ ಸೇಡಂ ಪ್ರತಿಕ್ರಿಯಿಸಿ, ಪ್ರಗತಿಪರರ ಕಾರ್ಯಕ್ರಮವನ್ನು ‘ಕೇವಲ ಸೈಡ್‌ಶೋ’ ಎಂದು ಹೇಳಿದ್ದಾರೆ. “ಇದು ಭಾರತ ವಿಕಾಸ ಸಂಗಮ್ ಮೂಲಕ ಗೋವಿಂದಾಚಾರ್ಯರು ಯೋಜಿಸಿರುವ ಪ್ರಮುಖ ಕಾರ್ಯಕ್ರಮವಾಗಿದೆ. ಪ್ರತಿ ಮೂರು ವರ್ಷಗಳಿಗೊಮ್ಮೆ ನಡೆಯುವ ಕೂಟಗಳ ಸರಣಿಯಲ್ಲಿ ಇದು ಏಳನೆಯದು. ಈ ಹಿಂದಿನ ಕಾರ್ಯಕ್ರಮಗಳಲ್ಲಿ ಭಾರಿ ಜನ ಸೇರಿದ್ದರು. ಕಲಬುರಗಿಯ ಕಾರ್ಯಕ್ರಮದಲ್ಲಿ ಸುಮಾರು 25 ಲಕ್ಷ ಜನ ಭಾಗವಹಿಸುವ ನಿರೀಕ್ಷೆಯಲ್ಲಿದ್ದೇವೆ.” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಂವಿಧಾನ ಬದಲಾಯಿಸುತ್ತೇವೆ ಎಂದಿದ್ದ ಆರೆಸ್ಸೆಸ್‌ ನಾಯಕನ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಸಚಿವರು, ಸಂಸದರು, ಶಾಸಕರು ಮತ್ತು ನಾಯಕರು ಅತಿಥಿಗಳು! ಹೋಗಲ್ಲ ಎಂದ ಸಿಎಂ!

ಸಂವಿಧಾನ ಬದಲಾಯಿಸುತ್ತೇವೆ ಎಂದಿದ್ದ ಆರೆಸ್ಸೆಸ್‌ ನಾಯಕನ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಸಚಿವರು, ಸಂಸದರು, ಶಾಸಕರು ಮತ್ತು ನಾಯಕರು ಅತಿಥಿಗಳು! ಹೋಗಲ್ಲ ಎಂದ ಸಿಎಂ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...