Homeಕರ್ನಾಟಕಕಲಬುರಗಿ: ಬೊಮ್ಮಾಯಿಗೆ ಕಪ್ಪು ಬಾವುಟ ಪ್ರದರ್ಶನ; ಹೋರಾಟಗಾರರ ಬಂಧನ

ಕಲಬುರಗಿ: ಬೊಮ್ಮಾಯಿಗೆ ಕಪ್ಪು ಬಾವುಟ ಪ್ರದರ್ಶನ; ಹೋರಾಟಗಾರರ ಬಂಧನ

- Advertisement -
- Advertisement -

ಕರ್ನಾಟಕ ರಾಜ್ಯ ತಳವಾರ ಎಸ್‌ಟಿ ಹೋರಾಟ ಸಮಿತಿ ಸದಸ್ಯರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಕಪ್ಪು ಬಾವುಟ ಪ್ರದರ್ಶಿಸಿದ್ದು, ತಳವಾರ ಸಮುದಾಯಕ್ಕೆ ಪರಿಶಿಷ್ಟ ಪಂಗಡದ ಪ್ರಮಾಣಪತ್ರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಬಿಗಿ ಭದ್ರತೆಯ ನಡುವೆಯೂ, ಕರ್ನಾಟಕ ರಾಜ್ಯ ತಳವಾರ ಎಸ್ಟಿ ಹೋರಾಟ ಸಮಿತಿಯ ಸದಸ್ಯರು ಕಲಬುರಗಿಯ ಸರ್ದಾರ್ ವಲ್ಲಭಭಾಯಿ ಪಟೇಲ್ ಚೌಕ್‌ನಲ್ಲಿ ಶನಿವಾರ (ಸೆಪ್ಟೆಂಬರ್ 17, 2022) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕಪ್ಪು ಬಾವುಟವನ್ನು ಪ್ರದರ್ಶಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವದ ಅಂಗವಾಗಿ ನಗರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮಗಳಿಗೆ ಚಾಲನೆ ನೀಡಲು ಸರ್ದಾರ್ ವಲ್ಲಭಭಾಯಿ ಪಟೇಲರ ಪ್ರತಿಮೆಗೆ ಮಾಲಾರ್ಪಣೆ ಮಾಡಲು ಬೊಮ್ಮಾಯಿಯವರು ವೃತ್ತಕ್ಕೆ ಆಗಮಿಸುತ್ತಿದ್ದಂತೆಯೇ ಕಾರ್ಯಕರ್ತರು ಗುಂಪುಗುಂಪಾಗಿ ಎದ್ದು ಕಪ್ಪು ಬಾವುಟ ಪ್ರದರ್ಶಿಸಿದರು. ತಳವಾರ ಸಮುದಾಯಕ್ಕೆ ಪರಿಶಿಷ್ಟ ಪಂಗಡಗಳ ಪ್ರಮಾಣ ಪತ್ರ ನೀಡಬೇಕು ಎಂದು ಆಗ್ರಹಿಸಿದರು.

ಪೊಲೀಸರು ತಕ್ಷಣ ಧಾವಿಸಿ ಪ್ರತಿಭಟನಾಕಾರರನ್ನು ಮುಂದೆ ಸಾಗದಂತೆ ತಡೆದು ಮುಖ್ಯಮಂತ್ರಿ ಸುರಕ್ಷಿತವಾಗಿ ತೆರಳಲು ಅನುಕೂಲ ಮಾಡಿಕೊಟ್ಟರು. ನಂತರ ಧರಣಿ ನಿರತ ಕಾರ್ಯಕರ್ತರನ್ನು ವಶಕ್ಕೆ ಪಡೆದು ವಿಶ್ವವಿದ್ಯಾಲಯ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು.

ಬಸವಕಲ್ಯಾಣ, ಮಾಸ್ಕಿ ಮತ್ತು ಸಿಂದಗಿ ಉಪಚುನಾವಣೆ ಪ್ರಚಾರದ ವೇಳೆ ಬಿಜೆಪಿ ಸರ್ಕಾರವು ಉಪಚುನಾವಣೆ ಮುಗಿದ ಕೂಡಲೇ ಈ ಸಮಸ್ಯೆಯನ್ನು ಬಗೆಹರಿಸಲಾಗುವುದು, ತಳವಾರ ಸಮುದಾಯದವರಿಗೆ ಎಸ್‌ಟಿ ಪ್ರಮಾಣ ಪತ್ರ ವಿತರಿಸಲಾಗುವುದು ಎಂದು ಭರವಸೆ ನೀಡಿತ್ತು. ಆದರೆ ಬಿಜೆಪಿ ತನ್ನ ಮಾತನ್ನು ಉಳಿಸಿಕೊಳ್ಳಲಿಲ್ಲ.

ಪೊಲೀಸ್ ಕಸ್ಟಡಿಯಲ್ಲಿರುವ ಕರ್ನಾಟಕ ರಾಜ್ಯ ತಳವಾರ ಎಸ್‌ಟಿ ಹೋರಾಟ ಸಮಿತಿಯ ಅಧ್ಯಕ್ಷ ಸರ್ದಾರ್ ರಾಯಪ್ಪ ಪ್ರತಿಕ್ರಿಯಿಸಿ, “ಕಳೆದ ವರ್ಷ ನವೆಂಬರ್ 17ರಂದು ಕಲಬುರಗಿಯಲ್ಲಿ ನಡೆದ ಪತ್ರಕರ್ತರ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, “48 ಗಂಟೆಗಳಲ್ಲಿ ತಳವಾರ ಸಮುದಾಯದವರಿಗೆ ಎಸ್‌ಟಿ ಪ್ರಮಾಣಪತ್ರ ನೀಡಲಾಗುವುದು, ಮಾತಿಗೆ ತಪ್ಪಿದರೆ ಕಲಬುರಗಿಗೆ ಮತ್ತೆ ಬರಲು ಅವಕಾಶ ನೀಡಬೇಡಿ” ಎಂದು ಹೇಳಿದ್ದರು. ಆದರೆ ಬೊಮ್ಮಾಯಿ ಮಾತು ತಪ್ಪಿದ್ದಾರೆ. ಆದ್ದರಿಂದ ಅವರೇ ನಮಗೆ ಹೇಳಿದಂತೆ ನಾವು ಇಂದು ಪ್ರತಿಭಟನೆ ನಡೆಸಿದ್ದೇವೆ” ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿರಿ: ಬಾಗಲಕೋಟೆ: ಲಿಂಗಾಯತ ಯುವತಿಯನ್ನು ಪ್ರೀತಿಸಿದ ಕುರುಬ ಯುವಕನಿಗೆ ಬೂಟು ನೆಕ್ಕಿಸಿದ ಪೊಲೀಸರು, ಜಾತಿವಾದಿಗಳು!

“ಸರ್ಕಾರ ನಮ್ಮ ಬೇಡಿಕೆಯನ್ನು ನಿರ್ಲಕ್ಷಿಸುವುದನ್ನು ಮುಂದುವರಿಸಿದರೆ, ನಾವು ನಮ್ಮ ಹೋರಾಟವನ್ನು ತೀವ್ರಗೊಳಿಸಬೇಕಾಗುತ್ತದೆ. ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದು, ಈ ವಿಚಾರವನ್ನೇ ಪ್ರಧಾನವಾಗಿ ಪರಿಗಣಿಸಿ ಪ್ರಚಾರ ಮಾಡುತ್ತೇವೆ. ತಂಡಗಳನ್ನು ರಚಿಸಿ ಪ್ರತಿ ಗ್ರಾಮಕ್ಕೆ ತೆರಳಿ ತಳವಾರ ಸಮುದಾಯದವರಿಗೆ ಮನವರಿಕೆ ಮಾಡಿ ಬಿಜೆಪಿಯನ್ನು ಸೋಲಿಸುತ್ತೇವೆ” ಎಂದು ಎಚ್ಚರಿಸಿದ್ದಾರೆ.

ಪೊಲೀಸ್ ಕಸ್ಟಡಿಯಲ್ಲಿರುವ ಇನ್ನೊಬ್ಬ ಕಾರ್ಯಕರ್ತ ರಾಜೇಂದ್ರ ರಾಜ್ವಾಲ್ ಪ್ರತಿಕ್ರಿಯಿಸಿ, “ಎಲ್ಲಾ ಸಮುದಾಯದವರು, ಯಾವುದೇ ಪಕ್ಷಬೇಧವಿಲ್ಲದೆ, ಸೈದ್ಧಾಂತಿಕ ಭಿನ್ನಾಭಿಪ್ರಾಯ ಮರೆತು ಹೋರಾಟದಲ್ಲಿ ತೊಡಗಿಸಿಕೊಂಡಿದ್ದಾರೆ. ನಾವು ಬಿಜೆಪಿಗೆ ಪಾಠ ಕಲಿಸುತ್ತೇವೆ” ಎಂದು ಗುಡುಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...