Homeಕರ್ನಾಟಕಕಲಬುರಗಿ: ಚಿತ್ತಾಪುರ ಆರ್‌ಎಸ್‌ಎಸ್‌ ಪಥ ಸಂಚಲನಕ್ಕೆ ಅನುಮತಿ ನಿರಾಕರಿಸಿ ತಹಶೀಲ್ದಾರ್ ಆದೇಶ

ಕಲಬುರಗಿ: ಚಿತ್ತಾಪುರ ಆರ್‌ಎಸ್‌ಎಸ್‌ ಪಥ ಸಂಚಲನಕ್ಕೆ ಅನುಮತಿ ನಿರಾಕರಿಸಿ ತಹಶೀಲ್ದಾರ್ ಆದೇಶ

- Advertisement -
- Advertisement -

ಇಂದು (ಅಕ್ಟೋಬರ್ 19) ಮಧ್ಯಾಹ್ನ 3 ಗಂಟೆಗೆ ಕಲಬುರಗಿ ಜಿಲ್ಲೆ ಚಿತ್ತಾಪುರ ಪಟ್ಟಣದಲ್ಲಿ ಆರ್‌ಎಸ್‌ಎಸ್‌ ಹಮ್ಮಿಕೊಂಡಿದ್ದ ಪಥ ಸಂಚಲನಕ್ಕೆ ಅನುಮತಿ ನಿರಾಕರಿಸಿ ತಹಶೀಲ್ದಾರ್ ನಾಗಯ್ಯ ಹಿರೇಮಠ ಆದೇಶಿಸಿದ್ದಾರೆ.

ಪಥ ಸಂಚಲನಕ್ಕೆ ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದ ಆರ್‌ಎಸ್‌ಎಸ್‌ ಕಲಬುರಗಿ ಜಿಲ್ಲಾ ವ್ಯವಸ್ಥಾಪಕ ಪ್ರಹ್ಲಾದ ವಿಶ್ವಕರ್ಮ ಅವರಿಗೆ ಶನಿವಾರ (ಅಕ್ಟೋಬರ್ 18) ರಾತ್ರಿ ಪತ್ರ ಬರೆದಿರುವ ತಹಶೀಲ್ದಾರ್, “ಆರ್‌ಎಸ್‌ಎಸ್‌ ಪಥ ಸಂಚಲನ ನಡೆಸುವ ಸಮಯದಲ್ಲೇ ಭೀಮ್ ಆರ್ಮಿ ಮತ್ತು ದಲಿತ ಪ್ಯಾಂಥರ್ ಸಂಘಟನೆಯವರು ಚಿತ್ತಾಪುರ ಪಟ್ಟಣದಲ್ಲಿ ಪಥ ಸಂಚಲನ ನಡೆಸಲು ಅನುಮತಿ ಕೋರಿದ್ದಾರೆ. ಒಂದೇ ಸಮಯದಲ್ಲಿ ಪಥ ಸಂಚಲನಕ್ಕೆ ಎಲ್ಲಾ ಸಂಘಟನೆಗಳು ಅನುಮತಿ ಕೇಳಿರುವುದರಿಂದ ಕಾನೂನು ಸುವ್ಯವಸ್ಥೆ ಹದಗೆಡುವ ಸಂಭವವಿದೆ. ಹಾಗಾಗಿ, ಅನುಮತಿ ನೀಡಬಾರದು ಎಂದು ಪೊಲೀಸ್‌ ಅಧಿಕಾರಿಗಳು ವರದಿ ನೀಡಿದ್ದಾರೆ” ಎಂದು ತಿಳಿಸಿದ್ದಾರೆ.

ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾಗಿರುವ ಚಿತ್ತಾಪುರ ಪಟ್ಟಣದಲ್ಲಿ ಆರ್‌ಎಸ್‌ಎಸ್‌ ಪಥ ಸಂಚಲನ ನಿಮಿತ್ತ ಭಗವಾಧ್ವಜ, ಬ್ಯಾನ‌ರ್ ಹಾಗೂ ಬಂಟಿಂಗ್ಸ್ ಗಳನ್ನು ಅಳವಡಿಸಲಾಗಿತ್ತು. ಇದಕ್ಕೆ ಸೂಕ್ತ ಅನುಮತಿ ಪಡೆದಿಲ್ಲ ಎಂಬ ಕಾರಣಕ್ಕೆ ಪುರಸಭೆ ಅಧಿಕಾರಿಗಳು ಶನಿವಾರ ನಸುಕಿನಲ್ಲಿಯೇ ಅವುಗಳನ್ನು ತೆರವುಗೊಳಿಸಿದ್ದರು. ಈಗ ಸ್ವತಃ ತಹಶೀಲ್ದಾ‌ರ್ ಅವರೇ ಪಥ ಸಂಚಲನ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಣೆ ಮಾಡಿ ಆದೇಶ ಪ್ರಕಟಿಸಿದ್ದಾರೆ.

ಅಕ್ಟೋಬರ್ 17ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರಿ ಶಾಲಾ – ಕಾಲೇಜುಗಳು, ಅನುದಾನಿತ ಶಿಕ್ಷಣ ಸಂಸ್ಥೆಗಳು, ಉದ್ಯಾನವನಗಳು, ಆಟದ ಮೈದಾನಗಳು, ಸಾರ್ವಜನಿಕ ರಸ್ತೆಗಳು ಹಾಗೂ ಇತರೆ ಸ್ಥಳಗಳನ್ನು ಯಾವುದೇ ಖಾಸಗಿ ಸಂಘ – ಸಂಸ್ಥೆ, ಸಂಘಟನೆಗಳು ತಮ್ಮ ಚಟುವಟಿಕೆಗಳಿಗೆ ಬಳಸುವ ಮುನ್ನ ಸ್ಥಳದ ಮಾಲೀಕತ್ವ ಹೊಂದಿದ ಸಕ್ಷಮ ಪ್ರಾಧಿಕಾರಗಳಿಂದ ಅನುಮತಿ ಪಡೆಯುವುದನ್ನು ಸರ್ಕಾರ ಕಡ್ಡಾಯಗೊಳಿಸಿದೆ.

ಇದಕ್ಕೂ ಮುನ್ನ, ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳನ್ನು ನಿಷೇಧಿಸುವಂತೆ ಕೋರಿ ಸಚಿವ ಪ್ರಿಯಾಂಕ್ ಖರ್ಗೆ ಸಿಎಂಗೆ ಪತ್ರ ಬರೆದಿದ್ದರು. ಸಚಿವರ ಪತ್ರ ಪರಿಗಣಿಸಿ ಸಚಿವ ಸಂಪುಟ ನಿರ್ಧಾರ ತೆಗೆದುಕೊಂಡಿದೆ ಎಂದು ಹೇಳಲಾಗ್ತಿದೆ. ಆದರೆ, ಇದು ಆರ್‌ಎಸ್‌ಎಸ್‌ ಅನ್ನು ಮಾತ್ರ ಗುರಿಯಾಗಿಸಿ ತೆಗೆದುಕೊಂಡ ತೀರ್ಮಾನ ಅಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಪ್ರಿಯಾಂಕ್ ಖರ್ಗೆ ಅವರು ಸಿಎಂಗೆ ಪತ್ರ ಬರೆದ ಬಳಿಕ ಅವರಿಗೆ ಅಪರಿಚಿತರಿಂದ ಬೆದರಿಕೆ ಕರೆಗಳು ಬರುತ್ತಿವೆ ಎಂದು ಹೇಳಿಕೊಂಡಿದ್ದಾರೆ. ವ್ಯಕ್ತಿಯೊಬ್ಬ ಕರೆ ಮಾಡಿ ಬೆದರಿಕೆ ಹಾಕಿದ್ದಲ್ಲದೆ, ಅವಾಚ್ಯ ಶಬ್ದಗಳಿಂದ ನಿಂದಿಸಿದ ವಿಡಿಯೋವನ್ನು ಪ್ರಿಯಾಂಕ್ ಖರ್ಗೆ ಅಕ್ಟೋಬರ್ 15ರಂದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಆ ಬೆದರಿಕೆ ಕರೆ ಮಾಡಿದ ಮಹಾರಾಷ್ಟ್ರ ಮೂಲದ ವ್ಯಕ್ತಿಯನ್ನು ಅಕ್ಟೋಬರ್ 16ರಂದು ಪೊಲೀಸರು ಬಂಧಿಸಿದ್ದಾರೆ.

ಈ ನಡುವೆ ಅಕ್ಟೋಬರ್ 16ರಂದು ಕಲಬುರಗಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಚಿತ್ತಾಪುರದ ಪರಾಜಿತ ಬಿಜೆಪಿ ಅಭ್ಯರ್ಥಿ, ಮಣಿಕಂಠ ರಾಠೋಡ್ “ಪ್ರಿಯಾಂಕ್ ಖರ್ಗೆ ಅವರು ಆರ್‌ಎಸ್‌ಎಸ್‌ನ ಕ್ಷಮೆ ಕೇಳಬೇಕು. ಇಲ್ಲದಿದ್ದರೆ, ಇವತ್ತು ಫೋನ್ ಮೂಲಕ ಬೆದರಿಕೆ ಹಾಕಿದವರು, ಮುಂದೆ ನಿಮ್ಮ ಮನೆಗೂ ಬರಬಹುದು” ಎಂದು ಹೇಳಿದ್ದಾರೆ.

“ಆರ್‌ಎಸ್‌ಎಸ್‌ನವರು ಬಹಳ ಕಟ್ಟರ್ ಪಂಥದವರು, ಸ್ವಾಭಿಮಾನಿ ದೇಶ ಭಕ್ತರು, ಹಣಕ್ಕಾಗಿ ಯಾವುದೋ ಪರಿವಾರದ ಗುಲಾಮಗಿರಿ ಬೆಳೆಸುವವರು ಆರ್‌ಎಸ್‌ಎಸ್‌ನವರು ಅಲ್ಲ” ಎಂದಿದ್ದಾರೆ.

ಆರ್‌ಎಸ್‌ಎಸ್‌ ಚಟುವಟಿಕೆಗಳಿಗೆ ನಿಷೇಧ ಹೇರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, “ನಿಷೇಧ ಮಾಡಲಿ ಮುಂದೆ ನೋಡುವ, ಸರ್ಕಾರ ಶಾಶ್ವತ ಇರುವುದಿಲ್ಲವಲ್ಲ. ಸಚಿವ ಸಂಪುಟದಲ್ಲಿ ತೀರ್ಮಾನ ಆದರೆ ಇಡೀ ಕರ್ನಾಟಕದ ಕಾನೂನು, ಸುವ್ಯವಸ್ಥೆ ಕೆಟ್ಟು ಹೋಗುವ ಪರಿಸ್ಥಿತಿ ಬರುತ್ತದೆ” ಎಂದು ಹೇಳಿದ್ದಾರೆ. ಈ ಮೂಲಕ ಪ್ರಿಯಾಂಕ್ ಖರ್ಗೆ ಅವರಿಗೆ ಬಹಿರಂಗ ಬೆದರಿಕೆ ಹಾಕಿದ್ದಾರೆ.

ಈ ಎಲ್ಲಾ ಬೆಳವಣಿಗೆಗಳ ನಡುವೆ ಇದೀಗ ಆರ್‌ಎಸ್‌ಎಸ್ ಪಥ ಸಂಚಲನಕ್ಕೆ ಅನುಮತಿ ನಿರಾಕರಿಸಲಾಗಿದೆ.

ಆರ್‌ಎಸ್ಎಸ್‌ನವರು ಮನೆಗೂ ಬರಬಹುದು, ಕಾನೂನು ಸುವ್ಯವಸ್ಥೆ ಕೆಡಬಹುದು: ಪ್ರಿಯಾಂಕ್ ಖರ್ಗೆಗೆ ಬಹಿರಂಗ ಬೆದರಿಕೆ ಹಾಕಿದ ಮಣಿಕಂಠ ರಾಠೋಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....