Homeಮುಖಪುಟಕಲಬುರ್ಗಿ: ಉಮರ್ ಖಾಲಿದ್ ಬಂಧನ ಖಂಡಿಸಿ WPI ಪ್ರತಿಭಟನೆ

ಕಲಬುರ್ಗಿ: ಉಮರ್ ಖಾಲಿದ್ ಬಂಧನ ಖಂಡಿಸಿ WPI ಪ್ರತಿಭಟನೆ

ಈಶಾನ್ಯ ದೆಹಲಿಯಲ್ಲಿ ನಡೆದ ಕೋಮು ಗಲಭೆಗೆ ಪ್ರಚೋದನೆ ನೀಡಿದ್ದಾರೆಂಬ ಆರೋಪದ ಮೇರೆಗೆ ಮೇಲೆ ಸುಳ್ಳು ಪ್ರಕರಣ ದಾಖಲಿಸಿ ಅವರ ವ್ಯಕ್ತಿತ್ವ ತೇಜೋವಧೆಗೆ ಸರ್ಕಾರ ಮುಂದಾಗಿದೆ ಎಂದು ಆರೋಪಿಸಿದರು.

- Advertisement -
- Advertisement -

ವಿದ್ಯಾರ್ಥಿ ನಾಯಕ ಹಾಗೂ ಸಾಮಾಜಿಕ ಕಾರ್ಯಕರ್ತ ಉಮರ್ ಖಾಲಿದ್ ರವರ ಬಂಧನವನ್ನು ಖಂಡಿಸಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ (WPI) ಇಂದು ಪ್ರತಿಭಟನೆ ನಡೆಸಿದೆ. ಕಲಬುರ್ಗಿ ಜಿಲ್ಲಾಡಳಿತ ಮುಂಭಾಗದಲ್ಲಿ ಪ್ರತಿಭಟಿಸಿ, ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಈಶಾನ್ಯ ದೆಹಲಿಯಲ್ಲಿ ನಡೆದ ಕೋಮು ಗಲಭೆಗೆ ಪ್ರಚೋದನೆ ನೀಡಿದ್ದಾರೆಂಬ ಆರೋಪದ ಮೇರೆಗೆ ಮೇಲೆ ಸುಳ್ಳು ಪ್ರಕರಣ ದಾಖಲಿಸಿ ಅವರ ವ್ಯಕ್ತಿತ್ವ ತೇಜೋವಧೆಗೆ ಸರ್ಕಾರ ಮುಂದಾಗಿದೆ ಎಂದು ಆರೋಪಿಸಿದರು.

ಕೇಂದ್ರ ಸರಕಾರ ದ್ವೇಷ ಭಾಷಣಗಳನ್ನು ಮಾಡಿ ಹಿಂಸಾಚಾರವನ್ನು ಪ್ರಚೋದಿಸಿದ ಉನ್ನತ ಬಿಜೆಪಿ ಮುಖಂಡರನ್ನು ರಕ್ಷಿಸಿ, ಸಿಎಎ ವಿರುದ್ಧ ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ಯುವಜನಗಳ ಮೇಲೆ ಗುರಿಯಿಡುತ್ತಿದೆ. ಸಿಎಎ-ವಿರೋಧಿ ಪ್ರತಿಭಟನೆಗಳು ಮತ್ತು ಕೋಮು ಹಿಂಸಾಚಾರವನ್ನು ತಳಕು ಹಾಕುವ ದೇಶದ ಗೃಹ ಸಚಿವಾಲಯ ಮತ್ತು ದೆಹಲಿ ಪೋಲೀಸರ ಅತ್ಯಂತ ಕಪೋಲಕಲ್ಪಿತ ಆವೃತ್ತಿಯನ್ನು ತೋರಿಸಿ ಬಂಧಿಸಲಾಗುತ್ತಿದೆ.

ಇದನ್ನೂ ಓದಿ: ಉಮರ್ ಖಾಲಿದ್ ಬಂಧನಕ್ಕೆ ಟ್ವಿಟರ್‌ನಲ್ಲಿ ಖಂಡನೆ: #StandWithUmarKhalid ಟ್ರೆಂಡಿಂಗ್

“UAPAಯನ್ನು ಸಾಮಾನ್ಯ ನ್ಯಾಯ ಪ್ರಕ್ರಿಯೆಯನ್ನು ತಡೆಗಟ್ಟಲು ಬಳಸಲಾಗುತ್ತಿದೆ. ಸಾಮಾನ್ಯ ಪ್ರಕ್ರಿಯೆಯ ಮೂಲಕ ಅವರು ಜಾಮೀನಿನಲ್ಲಿ ಹೊರಬರಬಹುದಿತ್ತು. ಏಕೆಂದರೆ ಹಲವಾರು ಕೆಳಗಣ ನ್ಯಾಯಾಲಯಗಳು ಹೇಳಿರುವಂತೆ ಅವರ ಯಾರ ವಿರುದ್ಧವೂ ಹಿಂಸಾಚಾರವನ್ನು ಪ್ರಚೋದಿಸುವ ಎಳ್ಳಷ್ಟೂ ಸಾಕ್ಷ್ಯ ಇರುವುದಿಲ್ಲ. ಈ ಬಂಧನಗಳು ಅಸಮ್ಮತಿ ವ್ಯಕ್ತಪಡಿಸುವ, ಪ್ರಜಾಪ್ರಭುತ್ವದ ಹಕ್ಕಿಗೆ ಇರುವ ಸಂವಿಧಾನಿಕ ಖಾತ್ರಿಯ ಮೇಲೆ ನಡೆಸಿರುವ ಒಂದು ಆಕ್ರಮಣವಾಗಿದೆ” ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಅಭಿಪ್ರಾಯ ಪಟ್ಟಿದೆ.

CAA ವಿರುದ್ಧ ಪ್ರತಿಭಟಿಸುವುದು, ಜನರ ಮತ್ತು ವಿದ್ಯಾರ್ಥಿ ಕಾರ್ಯಕರ್ತರ ಪ್ರಜಾಪ್ರಭುತ್ವದ ಹಕ್ಕು ಎಂಬುದನ್ನು ಸರ್ಕಾರ ಮರೆಯಬಾರದು. ಆದ್ದರಿಂದ ಉಮರ್ ಖಾಲಿದ್ ಸೇರಿದಂತೆ ಎಲ್ಲಾ ಅಮಾಯಕ ಕಾರ್ಯಕರ್ತರನ್ನು ಬೇಷರತ್ತಾಗಿ, ನಷ್ಟ ಪರಿಹಾರದೊಂದಿಗೆ ತಕ್ಷಣ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಉಮರ್ ಖಾಲಿದ್ ಮತ್ತು ಕೆ.ಎಲ್.ಅಶೋಕ್: ನಮ್ಮ ಕಣ್ಣೆದುರಿಗಿನ ಸತ್ಯವೊಂದನ್ನು ಚರ್ಚಿಸೋಣ

ಅಧಿಕಾರ ದುರ್ಬಳಕೆ ಮಾಡಿಕೊಂಡ ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳು ಮತ್ತವರ ರಾಜಕೀಯ ನೇತಾರರನ್ನು ಹೊಣೆಗಾರರನ್ನಾಗಿ ಮಾಡಿ, ಕಾನೂನು ರೀತಿ ಕ್ರಮ ಜರುಗಿಸಬೇಕು ಎಂದು ಸರ್ಕಾರವನ್ನು ಆಗ್ರಹಿಸಿದ್ದಾರೆ.

ಶಾಂತಿಯುತ ರಾಜಕೀಯ ಪ್ರತಿಭಟನೆಗಳನ್ನು ಕ್ರಿಮಿನಲ್ ಅಪರಾಧ ಎಂದು ಬಿಂಬಿಸುವ ಸಂವಿಧಾನ ವಿರೋಧಿ ನಿಲುವನ್ನು ಕೂಡಲೇ ನಿಲ್ಲಿಸಬೇಕು. ಸುಳ್ಳು ಮೊಕದ್ದಮೆಗಳನ್ನು ಹೂಡಿ ಜೈಲಿಗೆ ಕಳುಹಿಸಲಾಗಿರುವ ಎಲ್ಲಾ ರಾಜಕೀಯ ಖೈದಿಗಳನ್ನು ಬೇಷರತ್ತಾಗಿ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಈ ಪ್ರತಿಭಟನೆಯಲ್ಲಿ, WPI ಜಿಲ್ಲಾಧ್ಯಕ್ಷರಾದ ಸೈಯದ್ ಅಬ್ದುಲ್ ಬಾರಿ, WPI ಪ್ರಧಾನ ಕಾರ್ಯದರ್ಶಿ ಸಲೀಂ ಅಹ್ಮದ್ ಚಿತಾಪುರ, WPI ಉತ್ತರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಮೋಬಿನ್ ಅಹ್ಮದ್, ಮುನಿರ್ ಹಾಸ್ಮಿ, ಸಲೀಂ ಸದರಿ, ಇನ್ನಿತರರು ಭಾಗವಹಿಸಿದ್ದರು.


ಇದನ್ನೂ ಓದಿ: ಸಿಎಎ ವಿರೋಧಿಗಳ ಬೇಟೆ: ದೆಹಲಿ ಗಲಭೆಗೆ ಉಮರ್‌ ಖಾಲಿದ್‌‌ರನ್ನು ಸಿಲುಕಿಸಿದ್ದು ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...