Homeಕರ್ನಾಟಕಕಳಸ| ದಲಿತ ಯುವಕನ ಆತ್ಮಹತ್ಯೆಗೆ ಪೊಲೀಸ್ ದೌರ್ಜನ್ಯವೇ ಕಾರಣ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಜನಶಕ್ತಿ ಸಂಘಟನೆ...

ಕಳಸ| ದಲಿತ ಯುವಕನ ಆತ್ಮಹತ್ಯೆಗೆ ಪೊಲೀಸ್ ದೌರ್ಜನ್ಯವೇ ಕಾರಣ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಜನಶಕ್ತಿ ಸಂಘಟನೆ ಆಗ್ರಹ; ಕಳಸ ಚಲೋ’ ಎಚ್ಚರಿಕೆ

- Advertisement -
- Advertisement -

ಕಳಸ: ಕಳಸ ಸಮೀಪದ ಸಂಸೆ ಗ್ರಾಮದ ದಲಿತ ಯುವಕ ನಾಗೇಶ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕುದುರೆಮುಖ ಪೊಲೀಸರ ವಿರುದ್ಧ ಜನಶಕ್ತಿ ಜಿಲ್ಲಾ ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ. ಪೊಲೀಸರ ದೌರ್ಜನ್ಯ ಹಾಗೂ ಸ್ಥಳೀಯ ಗೂಂಡಾಗಳ ಹಲ್ಲೆಯೇ ನಾಗೇಶ್ ಸಾವಿಗೆ ನೇರ ಕಾರಣ ಎಂದು ಸಂಘಟನೆ ಗಂಭೀರ ಆರೋಪ ಮಾಡಿದೆ. ಈ ಕೂಡಲೇ ತಪ್ಪಿತಸ್ಥ ಪೊಲೀಸರು ಮತ್ತು ಗೂಂಡಾಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಿದ್ದರೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಸಮಿತಿ ಎಚ್ಚರಿಕೆ ನೀಡಿದೆ.

ಪತ್ರಿಕಾ ಪ್ರಕಟಣೆಯಲ್ಲಿ ಸಂಘಟನೆ ತಿಳಿಸಿರುವ ಪ್ರಕಾರ, ನಾಗೇಶ್ ಮೇಲೆ ಕುದುರೆಮುಖ ಪೊಲೀಸ್ ಸಿಬ್ಬಂದಿ ಸಿದ್ದೇಶ್ ಮತ್ತು ಸ್ಥಳೀಯ ಮೇಲ್ಜಾತಿ ಗೂಂಡಾಗಳು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ನಂತರ, ನಾಗೇಶ್ ಅವರ ಬದುಕಿಗೆ ಆಧಾರವಾಗಿದ್ದ ಆಟೋವನ್ನು ಸುಳ್ಳು ಪ್ರಕರಣ ದಾಖಲಿಸಿ ಜಪ್ತಿ ಮಾಡಲಾಗಿದೆ. ಇದರಿಂದ ತೀವ್ರವಾಗಿ ನೊಂದ ನಾಗೇಶ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದು ಪೊಲೀಸರು ಮತ್ತು ಗೂಂಡಾಗಳು ಸೇರಿಕೊಂಡು ನಡೆಸಿದ ವ್ಯವಸ್ಥಿತ ದೌರ್ಜನ್ಯ ಎಂದು ಸಂಘಟನೆ ಖಂಡಿಸಿದೆ.

ಸಂಘಟನೆಯ ಪ್ರಮುಖ ಬೇಡಿಕೆಗಳು ಇವು:

ಹಲ್ಲೆ ನಡೆಸಿದ ಪೊಲೀಸ್ ಸಿಬ್ಬಂದಿ ಸಿದ್ದೇಶ್ ಅವರನ್ನು ತಕ್ಷಣವೇ ಕೆಲಸದಿಂದ ವಜಾಗೊಳಿಸಿ, ಕೊಲೆ ಪ್ರಕರಣ ದಾಖಲಿಸಬೇಕು.

ಸುಳ್ಳು ಪ್ರಕರಣ ದಾಖಲಿಸಿ, ನಾಗೇಶ್ ಆತ್ಮಹತ್ಯೆಗೆ ಕಾರಣರಾದ ಕುದುರೆಮುಖ ಸಬ್ ಇನ್ಸ್‌ಪೆಕ್ಟರ್ ಆದರ್ಶ್ ಅವರನ್ನು ಕೂಡಲೇ ಬಂಧಿಸಿ, ಅವರ ಮೇಲೆ ಕೊಲೆ ಪ್ರಕರಣ ದಾಖಲಿಸಬೇಕು.

ಹಲ್ಲೆ ನಡೆಸಿದ ಸ್ಥಳೀಯ ಗೂಂಡಾಗಳಾದ ರಕ್ಷಿತ್ ಸೇರಿದಂತೆ ಎಲ್ಲ ಆರೋಪಿಗಳನ್ನು ಬಂಧಿಸಬೇಕು.

ಪೊಲೀಸ್ ಇಲಾಖೆಯೇ ನಾಗೇಶ್ ಕುಟುಂಬದ ಸಂಪೂರ್ಣ ಜವಾಬ್ದಾರಿ ಹೊರಬೇಕು.

ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರ ಮತ್ತು ಒಬ್ಬರಿಗೆ ಸರ್ಕಾರಿ ನೌಕರಿ ನೀಡಬೇಕು.

ಈ ಬೇಡಿಕೆಗಳನ್ನು ಸರ್ಕಾರ ನಿರ್ಲಕ್ಷಿಸಿದರೆ, ಜಿಲ್ಲೆಯ ಎಲ್ಲ ದಲಿತ ಹಾಗೂ ಪ್ರಗತಿಪರ ಸಂಘಟನೆಗಳೊಂದಿಗೆ ಸೇರಿ ‘ಕಳಸ ಚಲೋ’ ಬೃಹತ್ ಪ್ರತಿಭಟನೆಯನ್ನು ಆಯೋಜಿಸುವುದಾಗಿ ಜನಶಕ್ತಿ ಜಿಲ್ಲಾ ಸಮಿತಿ ಎಚ್ಚರಿಕೆ ನೀಡಿದೆ. ಈ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಸಂಘಟನೆ ಸ್ಪಷ್ಟಪಡಿಸಿದೆ.

ಪ್ರಕರಣದ ಹಿನ್ನೆಲೆ

ಪೊಲೀಸರಿಂದ ಹಲ್ಲೆಗೊಳಗಾಗಿದ್ದ ದಲಿತ ಯುವಕ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕು ಸಂಸೆ ಗ್ರಾಮದ ಬಸ್ತಿಗದ್ದೆ ವ್ಯಾಪ್ತಿಯಲ್ಲಿ ನಡೆದಿತ್ತು.

ಮೃತ ಯುವಕ ನಾಗೇಶ್ (29), ಕುದುರೆಮುಖ ಠಾಣೆಯ ಪೊಲೀಸ್ ಪೇದೆ ಸಿದ್ದೇಶ್​ ರಸ್ತೆಯಲ್ಲಿ ಕುಡಿದ ಮತ್ತಿನಲ್ಲಿ ಯುವಕ ನಾಗೇಶನಿಗೆ ಮನಸೋ ಇಚ್ಛೆ ಬಂದಂಗೆ ಹಲ್ಲೆ ಮಾಡಲಾಗಿತ್ತು ಎಂದು ಎಲ್ಲೆಡೆ ಸುದ್ದಿ ಹರಡಿತ್ತು ಹಾಗೂ ಎಫ್​ಐಅರ್ ಕೂಡ ದಾಖಲಾಗಿತ್ತು. ಹಾಗೆಯೇ, ನಾಗೇಶ್​ ವಿರುದ್ಧ ಸುಳ್ಳು ಎಫ್​ಐಆರ್ ಪೊಲೀಸರು ದಾಖಲಿಸಿದ್ದರು ಎನ್ನಲಾಗಿದೆ. ಮೃತ ಯುವಕನ ಜೀಪ್ ಸಹ ಪೊಲೀಸರು ಸೀಜ್ ಮಾಡಿದ್ದರು. ಇದರಿಂದ ಮನನೊಂದು ನಾಗೇಶ್​ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.

ಈ ಪ್ರಕರಣದ ತನಿಖೆ ನಡೆಸುವಂತೆ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ವಿಕ್ರಮ್​ ಆಮಟೆ, ಕೊಪ್ಪ DYSP ನೇತೃತ್ವದಲ್ಲಿ ತಂಡ ರಚಿಸಿದ್ದರು. ಮಂಗಳವಾರ ಪೊಲೀಸ್ ಠಾಣೆಯಲ್ಲಿ ಎಂಟು ಸಾವಿರ ಹಣ ದಂಡ ಕಟ್ಟುವಂತೆ ನಾಗೇಶ್​ ಗೆ ತಿಳಿಸಿದರು. ಈ ಕುರಿತು ಹಣ ಸಂಗ್ರಹಿಸಲು ಎಲ್ಲರ ಬಳಿ ಕೇಳಿದಾಗ ಇಲ್ಲವೆಂದು ತಿಳಿದಾಗ, ಮಾಡದ ತಪ್ಪಿಗೆ ದಂಡ ಕಟ್ಟಬೇಕೆಂದು ಬುಧಾವಾರ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸ್ಥಳೀಯರು ಮಾಧ್ಯಮಗಳಿಗೆ ಮಾಹಿತಿ  ನೀಡಿದ್ದರು.

ಈ ಪ್ರಕರಣ ಸಂಬಂಧ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ವಿಕ್ರಮ್ ಆಮಟೆ ಪೊಲೀಸ್ ಪೇದೆ ಸಿದ್ದೇಶ್​ ನನ್ನು ಅಮಾನತ್ತು ಮಾಡಿದ್ದಾರೆ. ಆದರೆ, ಕುದುರೆಮುಖ ಠಾಣೆಯ ಪಿಎಸ್​ಐ ಮತ್ತು ಸಿಬ್ಬಂದಿಗಳ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದರು.

ಚೆನ್ನೈಯಲ್ಲಿ ನೈರ್ಮಲ್ಯ ಕಾರ್ಮಿಕರ ಪ್ರತಿಭಟನೆ: ಸ್ವಾತಂತ್ರ್ಯ ಮುನ್ನಾದಿನ 2000 ಕಾರ್ಮಿಕರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...