Homeಕರ್ನಾಟಕಕಲಬುರಗಿ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಪೊಲೀಸ್ ವಶಕ್ಕೆ

ಕಲಬುರಗಿ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಪೊಲೀಸ್ ವಶಕ್ಕೆ

- Advertisement -
- Advertisement -

ಕಾರು ಅಪಘಾತವನ್ನು ಹಲ್ಲೆ ಎಂದು ಬಿಂಬಿಸಿ ಸುದ್ದಿಯಾಗಿದ್ದ ಕಲಬುರಗಿಯ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ ಅವರನ್ನು ಪೊಲೀಸರು ಇಂದು (ಡಿ.7) ವಶಕ್ಕೆ ಪಡೆದಿದ್ದಾರೆ.

ಇಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿಯ ಪತ್ರಿಕಾ ಭವನದಲ್ಲಿ ಮಣಿಕಂಠ ರಾಠೋಡ್ ಸುದ್ದಿಗೋಷ್ಠಿ ಕರೆದಿದ್ದರು. ಈ ಬಗ್ಗೆ ಮಾಹಿತಿ ತಿಳಿದು ಪೊಲೀಸರು ಬೆಳಿಗ್ಗೆಯೇ ಪತ್ರಿಕಾ ಭವನಕ್ಕೆ ಬಂದು ಕುಳಿತಿದ್ದರು.

ಈ ಬಗ್ಗೆ ಮಾಹಿತಿ ಪಡೆದ ರಾಠೋಡ್ ತನ್ನ ಫ್ಲ್ಯಾಟ್ ಇರುವ ಹುಮನಾಬಾದ್ ರಸ್ತೆಯ ಭಾರತ್ ಪ್ರೈಡ್ ಅಪಾರ್ಟ್‌ಮೆಂಟ್‌ಗೆ ಬರುವಂತೆ ವಾಟ್ಸಾಪ್ ಮೂಲಕ ಪತ್ರಕರ್ತರನ್ನು ಆಹ್ವಾನಿಸಿದ್ದರು. ಪತ್ರಕರ್ತರು ಅಪಾರ್ಟ್‌ಮೆಂಟ್ ಬಳಿ ತಲುಪುತ್ತಿದ್ದಂತೆ ಅಲ್ಲೆ ಕಾಯುತ್ತಿದ್ದ ಪೊಲೀಸರು, ಸುದ್ದಿಗೋಷ್ಠಿ ನಡೆಸುವ ಮುನ್ನವೇ ರಾಠೋಡ್‌ನನ್ನು ವಶಕ್ಕೆ ಪಡೆದಿದ್ದಾರೆ.

ಲಿಖಿತ ಹೇಳಿಕೆ ಬಿಡುಗಡೆ ಮಾಡಿರುವ ಮಣಿಕಂಠ ರಾಠೋಡ್‌, ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮ ದಿನಾಚರಣೆ ನಿಮಿತ್ತ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾಟದಲ್ಲಿ ಜಿಲ್ಲಾಧಿಕಾರಿ ಮತ್ತು ಎಸ್ಪಿ ಟಾಸ್ ಹಾಕಿರುವ ವಿಡಿಯೋ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಮಾಡಿದ್ದೆ. ಈ ಹಿನ್ನೆಲೆ ಎಸ್ಪಿ ನನ್ನ ವಿರುದ್ದ ಸುಳ್ಳು ಆರೋಪ ಮಾಡಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿ ಕರೆದಿದ್ದ ಪ್ರಿಯಾಂಕ್ ಖರ್ಗೆ ಕೂಡ ನನ್ನ ವಿರುದ್ದ ಸುಳ್ಳು ಆರೋಪ ಮಾಡಿದ್ದಾರೆ ಎಂದು ಹೇಳಿರುವುದಾಗಿ ಪ್ರಜಾವಾಣಿ ವರದಿ ಮಾಡಿದೆ.

ಮಾನನಷ್ಟ ಮೊಕದ್ದಮೆ ಹೂಡುತ್ತೇನೆ : ಪ್ರಿಯಾಂಕ್ ಖರ್ಗೆ

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಿನ್ನೆ ಸಂಜೆ (ಡಿ. 6) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಅಕ್ಕಿ, ಹಾಲಿನ ಪುಡಿ ಕಳ್ಳತನದ ಆರೋಪದ ಮೇಲೆ ಶಿಕ್ಷೆಗೊಳಗಾದ ವ್ಯಕ್ತಿಯ ಮಾತು ಕೇಳಿಕೊಂಡು ನನ್ನ ಚಾರಿತ್ರ್ಯ ಹರಣ ಮಾಡಿ ರಾಜೀನಾಮೆಗೆ ಒತ್ತಾಯಿಸಿದ್ದ ವಿರೋಧ ಪಕ್ಷದ ನಾಯಕ ಆರ್ ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಸೇರಿದಂತೆ ಬಿಜೆಪಿಯ ಎಲ್ಲಾ ನಾಯಕರ ವಿರುದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ. ಸಿಎಲ್‌ಪಿ ನಾಯಕರ ಜೊತೆ ಚರ್ಚಿಸಿ ಹಕ್ಕುಚ್ಯುತಿ ಮಂಡನೆ ಮಾಡುವುದಾಗಿ ತಿಳಿಸಿದ್ದಾರೆ.

ಅಪಘಾತವನ್ನು ಹಲ್ಲೆ ಎಂದು ಬಿಂಬಿಸಿದ್ದ ಮಣಿಕಂಠ ರಾಠೋಡ್

ಶಂಕರವಾಡಿ ಕ್ರಾಸ್ ಬಳಿ ತನ್ನ ಮೇಲೆ ಹಲ್ಲೆ ನಡೆದಿರುವುದಾಗಿ ಮಣಿಕಂಠ ರಾಠೋಡ್ ನವೆಂಬರ್‌ 19ರಂದು ಶಹದಾಬಾದ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪೊಲೀಸರು ತನಿಖೆ ನಡೆಸಿದಾಗ ಅಪಘಾತವನ್ನು ಹಲ್ಲೆ ಎಂದು ಬಿಂಬಿಸಿರುವುದು ಗೊತ್ತಾಗಿದೆ ಎಂದು ಕಲಬುರಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ಬುಧವಾರ ತಿಳಿಸಿದ್ದಾರೆ.

ಇದನ್ನೂ ಓದಿ : ಕಾರು ಅಪಘಾತವನ್ನು ಹಲ್ಲೆಯೆಂದು ಬಿಂಬಿಸಿದ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕಿರ್ಗಿಸ್ತಾನ್‌ನಲ್ಲಿ ಹಿಂಸಾಚಾರ: ಮನೆಬಿಟ್ಟು ಹೊರಬರದಂತೆ ಭಾರತೀಯ ವಿದ್ಯಾರ್ಥಿಗಳಿಗೆ ಸೂಚನೆ

0
ಕಿರ್ಗಿಸ್ತಾನ್‌ನ ರಾಜಧಾನಿ ಬಿಷ್ಕೆಕ್‌ನಲ್ಲಿ ವಿದೇಶಿ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಗುಂಪು ಹಿಂಸಾಚಾರದ ವರದಿಗಳ ಮಧ್ಯೆ ಭಾರತ ಮತ್ತು ಪಾಕಿಸ್ತಾನವು ಶನಿವಾರ ಬಿಷ್ಕೆಕ್‌ನಲ್ಲಿರುವ ವಿದ್ಯಾರ್ಥಿಗಳಿಗೆ ತಾವು ತಂಗಿರುವ ಹಾಸ್ಟೆಲ್‌, ಮನೆಗಳಿಂದ ಹೊರಗೆ ಬರದಂತೆ ಸೂಚಿಸಿದೆ. ಕಿರ್ಗಿಸ್ತಾನ್‌ನಲ್ಲಿರುವ ಭಾರತದ...