ದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ, ಬೆಲೆ ಏರಿಕೆ ಹಾಗೂ ಸಾಂಸ್ಕೃತಿಕ ಅವನತಿಗಳ ವಿರುದ್ಧ ಹೋರಾಟವನ್ನು ವ್ಯಾಪಕವಾಗಿ ಬೆಳೆಸುವ ಉದ್ದೇಶದೊಂದಿಗೆ ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಓ) ಕರ್ನಾಟಕ ರಾಜ್ಯ ಸಮಿತಿಯು ನವೆಂಬರ್ 27, 28ಕ್ಕೆ ಕಲಬುರಗಿಯಲ್ಲಿ 5ನೇ ರಾಜ್ಯ ಮಟ್ಟದ ಯುವಜನ ಸಮ್ಮೇಳನವನ್ನು ಹಮ್ಮಿಕೊಂಡಿದೆ.

ವಿಶ್ವದಲ್ಲೇ ಅತಿ ಹೆಚ್ಚು ಯುವಜನರಿಂದ ತುಂಬಿರುವ ದೇಶದಲ್ಲಿ ಇಂದು ಯುವಜನರು ಭವಿಷ್ಯದ ಬಗ್ಗೆ ಆತಂಕಗೊಂಡಿದ್ದಾರೆ. ನಿರುದ್ಯೋಗ, ಬಡತನ, ಬೆಲೆ ಏರಿಕೆಗಳು ಯುವಜನರನ್ನು ಆರ್ಥಿಕವಾಗಿ ಕುಗ್ಗಿಸಿವೆ. ಮೌಲ್ಯಗಳು ನಶಿಸಿ, ಯುವಜನರು ಇಂದು ಸಾಂಸ್ಕೃತಿಕವಾಗಿ ಅಧ:ಪತನದತ್ತ ಸಾಗುವಂತೆ ಮಾಡಲಾಗುತ್ತಿದೆ. ಇದಕ್ಕೆ ವಿರುದ್ಧವಾಗಿ ಬಲಿಷ್ಠ ಯುವಜನ ಚಳುವಳಿಯನ್ನು ಕಟ್ಟಬೇಕಿದೆ. ಕಳೆದ ಕೆಲವು ವರ್ಷಗಳಿಂದ ನಿರುದ್ಯೋಗಿ ಯುವಜನರ ಹೋರಾಟ ಸಮಿತಿಯನ್ನು ರಚಿಸಿಕೊಂಡು ರಾಜ್ಯವ್ಯಾಪಿ ಉದ್ಯೋಗಕ್ಕೆ ಆಗ್ರಹಿಸಿ ಬಲಿಷ್ಠ ಯುವಜನಾಂದೋಲವನ್ನು ಸಂಘಟನೆ ರೂಪಿಸುತ್ತಿದೆ ಎಂದು ತಿಳಿಸಿದೆ.
ರಾಜ್ಯದಲ್ಲಿ ಯುವಜನ ಚಳುವಳಿಯನ್ನು ಇನ್ನಷ್ಟು ತೀಕ್ಷ್ಣಗೊಳಿಸಲು ಹಾಗೂ ವಿಸ್ತರಿಸಲು ನವೆಂಬರ್ 27, 28 ರಂದು ಕಲಬುರಗಿಯಲ್ಲಿ 5ನೇ ರಾಜ್ಯಮಟ್ಟದ ಯುವಜನ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದೆ. ನಾಡಿನ ಹೆಸರಾಂತ ಸಾಹಿತಿಗಳು ಮತ್ತು ಪ್ರಗತಿಪರ ಚಿಂತಕರಾದ ನಾಡೋಜ ಡಾ.ಬರಗೂರು ರಾಮಚಂದ್ರಪ್ಪ ಸಮ್ಮೇಳನವನ್ನು ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಪಕ್ಷದ ರಾಜ್ಯ ಕಾರ್ಯದರ್ಶಿಗಳಾದ ಕಾಮ್ರೇಡ್ ಕೆ.ಉಮಾ ಭಾಗವಹಿಸಲಿದ್ದಾರೆ.

ಇದನ್ನೂ ಓದಿ: ಮಂಗಳೂರಿನಲ್ಲಿ ಮತೀಯ ಗೂಂಡಾಗಿರಿ: ಅನ್ಯಧರ್ಮದ ಗೆಳತಿಯನ್ನು ಡ್ರಾಪ್ ಮಾಡುತ್ತಿದ್ದ ಮುಸ್ಲಿಂ ಯುವಕನ ಮೇಲೆ ಹಲ್ಲೆ

ಅತಿಥಿಗಳಾಗಿ ಎಐಡಿವೈಓನ ಅಖಿಲ ಭಾರತ ಪ್ರಧಾನ ಕಾರ್ಯದರ್ಶಿಗಳಾದ ಕಾಮ್ರೇಡ್ ಪ್ರತಿಭಾ ನಾಯಕ್ ಮತ್ತು ಗುಲ್ಬರ್ಗಾ ವಿಶ್ವವಿದ್ಯಾಲಯದ ಜೈವಿಕ ತಂತ್ರಜ್ಞಾನ ವಿಭಾಗದ ಪ್ರಾಧ್ಯಾಪಕರಾದ ಡಾ. ರಮೇಶ ಲಂಡನಕರ್, ಎಐಡಿವೈಓ ಅಧ್ಯಕ್ಷರಾದ ಕಾಮ್ರೇಡ್ ರಾಮಾಂಜನಪ್ಪ ಆಲ್ದಳ್ಳಿ ಇತರರು ಭಾಗಿಯಾಗಲಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಆಯ್ದ ಸುಮಾರು 500ಕ್ಕೂ ಹೆಚ್ಚು ಪ್ರತಿನಿಧಿಗಳು ಈ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.

ಯುವಜನ ಸಮ್ಮೇಳನದ ಹಕ್ಕೊತ್ತಾಯಗಳು:
1. ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳಲ್ಲಿ ಗುತ್ತಿಗೆ-ಹೊರಗುತ್ತಿಗೆಯಡಿಯಲ್ಲಿ ದುಡಿಯುತ್ತಿರುವವರನ್ನು ಸೇರಿದಂತೆ ಖಾಯಂ ಆಧಾರದಲ್ಲಿ ಭರ್ತಿ ಮಾಡಿಕೊಳ್ಳಬೇಕು.
2. ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಕಾರಣವಾಗುತ್ತಿರುವ ಅಶ್ಲೀಲತೆ-ಕುಸಂಸ್ಕೃತಿಯನ್ನು ಹರಡುವ ಸಿನಿಮಾ-ಸಾಹಿತ್ಯ ಹಾಗೂ ಮದ್ಯಪಾನವನ್ನು ಸಂಪೂರ್ಣವಾಗಿ ನಿಷೇಧಿಸಬೇಕು.
3. ಪೆಟ್ರೋಲ್-ಡೀಸೆಲ್, ಅಡುಗೆ ಅನಿಲ ಸೇರಿದಂತೆ ಎಲ್ಲಾ ಅಗತ್ಯ ವಸ್ತುಗಳ ಮೇಲಿನ ತೆರಿಗೆಯನ್ನು ಕಡಿತಗೊಳಿಸಿ ಬೆಲೆ ಏರಿಕೆಯನ್ನು ನಿಯಂತ್ರಿಸಬೇಕು.
5. ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಒಂದು ಕುಟುಂಬಕ್ಕೆ ವಾರ್ಷಿಕ ಕನಿಷ್ಠ 200 ಮಾನವ ದಿನಗಳು ಉದ್ಯೋಗ ಖಾತ್ರಿಯಾಗಬೇಕು.


ಇದನ್ನೂ ಓದಿ: ಯುವಜನತೆಗೆ ಕೇಳಿಸಿದ ಗಾಂಧಿ, ಓದಿಸಿದ ಗಾಂಧಿ ಮತ್ತು ನಂಬಿಸಿದ ಗಾಂಧಿಯ ಕುರಿತು…

LEAVE A REPLY

Please enter your comment!
Please enter your name here