Homeಕರ್ನಾಟಕಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನ: ಕಲ್ಲಡ್ಕ ಪ್ರಭಾಕರ್ ಭಟ್​ಗೆ ಜಾಮೀನು

ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನ: ಕಲ್ಲಡ್ಕ ಪ್ರಭಾಕರ್ ಭಟ್​ಗೆ ಜಾಮೀನು

- Advertisement -
- Advertisement -

ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ಕೊಟ್ಟಿದ್ದ ಆರೆಸ್ಸೆಸ್​ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್​ಗೆ ಶ್ರೀರಂಗಪಟ್ಟಣದ 3ನೇ ಅಪರ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಸ್ಥಳೀಯರಿಬ್ಬರ ಶ್ಯೂರಿಟಿ ಸೇರಿ 2 ಲಕ್ಷ ರೂ ಮೌಲ್ಯದ ಬಾಂಡ್ ಆಧಾರದ ಮೇಲೆ  ಶ್ರೀರಂಗಪಟ್ಟಣದ 3ನೇ ಅಪರ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.‌ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರರ ಪರವಾಗಿ ಹಿರಿಯ ವಕೀಲರಾದ ಎಸ್ ಬಾಲನ್ ವಾದ ಮಂಡಿಸಿದ್ದರು. ಜನವರಿ 10ರಂದು ಈ ಕುರಿತು ವಿಚಾರಣೆ ನಡೆಸಿದ್ದ ನ್ಯಾಯಾಲಯ ಆದೇಶವನ್ನು ಜ.17ಕ್ಕೆ ಕಾಯ್ದಿರಿಸಿತ್ತು. ಇದೀಗ, ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ದೂರು ದಾಖಲಿಸಿದ್ದ ಅರ್ಜಿದಾರೆ ನಜ್ಮಾ ಚಿಕ್ಕನೇರಳೆ ಅವರ ಪರವಾಗಿ ವಾದ ಮಂಡಿಸಿದ್ದ ಹಿರಿಯ ವಕೀಲ ಬಾಲನ್, ಸುಪ್ರಿಂ ಕೋರ್ಟ್ ಮತ್ತು ಹಲವು ಹೈಕೋರ್ಟ್‌ಗಳ ತೀರ್ಪುಗಳ ಪ್ರಕಾರ ಆರೋಪಿ ಕಲ್ಲಡ್ಕ ಪ್ರಭಾಕರ್ ಭಟ್ ನಿರೀಕ್ಷಣಾ ಜಾಮೀನಿಗೆ ಅನರ್ಹನಾಗಿದ್ದಾನೆ. ದೇಶದ ಭದ್ರತೆ, ಸೌಹಾರ್ದತೆಗೆ ಈ ಈತ ಕಂಟಕವಾಗಿದ್ದಾನೆ. ಈ ಹಿಂದಿನ ಐಪಿಸಿ ಮಾತ್ರವಲ್ಲ, ಈಗಿನ ನ್ಯಾಯ ಸಂಹಿತಾ ಮತ್ತು ಸಾಕ್ಷ್ಯ ಅಧಿನಿಯಮದ ಪ್ರಕಾರವೂ ಆರೋಪಿ ಕಲ್ಲಡ್ಕ ಪ್ರಭಾಕರ ಭಟ್ ನಿರೀಕ್ಷಣಾ ಜಾಮೀನಿಗೆ ಅನರ್ಹನಾಗಿದ್ದಾನೆ ಎಂದು ವಾದಿಸಿದ್ದರು.

ಕಲ್ಲಡ್ಕ ಭಟ್‌ ವಿರುದ್ಧ ಪ್ರಕರಣ ದಾಖಲಿಸಿದ್ದ ನಜ್ಮಾ: 

ಡಿ.24ರಂದು ಶ್ರೀರಂಗಪಟ್ಟಣದಲ್ಲಿ ಹಿಂದೂ ಜಾಗರಣಾ ವೇದಿಕೆ ವತಿಯಿಂದ ಹನುಮ ಜಯಂತಿ ಆಂಗವಾಗಿ ಆಯೋಜಿಸಿದ್ದ ಹನುಮ ಸಂಕೀರ್ತನಾ ಯಾತ್ರೆಯಲ್ಲಿ ಮಾತನಾಡಿದ್ದ ಕಲ್ಲಡ್ಕ ಪ್ರಭಾಕರ್ ಭಟ್, ಮುಸ್ಲಿಂ ಮಹಿಳೆಯರಿಗೆ ದಿನಕ್ಕೊಬ್ಬರು ಗಂಡಂದಿರು, ಅವರಿಗೆ ಪರ್ಮೆನೆಂಟ್ ಗಂಡ ಇರಲಿಲ್ಲ. ಪರ್ಮೆನೆಂಟ್ ಗಂಡನನ್ನು ಕೊಟ್ಟಿದ್ದು ಮೋದಿ ಸರ್ಕಾರ. ಮುಸ್ಲಿಂ ಯುವಕರು ಮಾತ್ರ ಅಲ್ಲ, ಮುಸ್ಲಿಂ ಯುವತಿಯರು ಮೋಸ ಮಾಡುತ್ತಿದ್ದಾರೆ. ಹಿಂದೂ ಯುವಕ ಯುವತಿಯರನ್ನು ಲವ್ ಜಿಹಾದ್ ಮಾಡುತ್ತಿದ್ದಾರೆ. ನಿಮ್ಮಲ್ಲಿ ಯುವತಿ ಯುವಕರು ಇಲ್ಲವೇ?” ಎಂದು ಹೇಳಿಕೆ ನೀಡಿದ್ದಾನೆ.

ಈ ಹೇಳಿಕೆಯು ಮಹಿಳೆಯರ ಖಾಸಗಿತನ, ಮಹಿಳೆಯನ್ನು ಲೈಂಗಿಕವಾಗಿ ನಿಂದಿಸುವ, ಮಹಿಳೆಯ ಮೇಲೆ ಸಾರ್ವಜನಿಕರು ಬಲಪ್ರಯೋಗಿಸುವಂತೆ ಪ್ರಚೋದಿಸುವ, ಮಹಿಳೆಗೆ ಲೈಂಗಿಕ, ಜೀವ ಬೆದರಿಕೆ ಒಡ್ಡುವ, ಮಹಿಳೆಯರ ಖಾಸಗಿ ವಿಷಯವನ್ನು ಅಶ್ಲೀಲಗೊಳಿಸುವಿಕೆ, ಸಾರ್ವಜನಿಕ ಸ್ಥಳದಲ್ಲಿ ಮಹಿಳೆಯ ಬಗೆಗೆ ಅಶ್ಲೀಲವಾಗಿ ಮಾತನಾಡಿದ, ಸಾರ್ವಜನಿಕವಾಗಿ ಮಹಿಳೆಯರನ್ನು ಚುಡಾಯಿಸಿದ, ಮಹಿಳೆಯರ ಘನತೆಗೆ ಅಡ್ಡಿಯಾದ ಪ್ರಕರಣವಾದ್ದರಿಂದ ಐಪಿಸಿ ಸೆಕ್ಷನ್ 294, 354, 509, 506ರಡಿಯಲ್ಲಿ ಕಲ್ಲಡ್ಕ ಪ್ರಭಾಕರ್‌ ಭಟ್‌ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಇದಲ್ಲದೆ ಕಲ್ಲಡ್ಕ ಪ್ರಭಾಕರ್ ಭಟ್, “ದೇಶವನ್ನು ಉಳಿಸಿಕೊಳ್ಳುವ ಮಹತ್ ಕಾರ್ಯ ಹಿಂದೂಗಳಿಂದ ಮಾತ್ರ ಸಾಧ್ಯ. ಮುಸ್ಲಿಮರಿಗೆ ಹಲವು ದೇಶಗಳು ಇವೆ. ಆದರೆ, ಹಿಂದೂಗಳಿಗೆ ಭಾರತ ಮಾತ್ರ ಇರೋದು. ಹಿಂದೂಗಳಿಗೆ ಬೇರೆ ಕಡೆ ಜಾಗ ಇಲ್ಲ, ಅದಕ್ಕಾಗಿ ನಾವು ಹೋರಾಟ ಮಾಡಬೇಕು.ದೇಶದಲ್ಲಿ ನಾವು ಹಿಂದೂಗಳು ಉಳಿಯುವುದು ಹೇಗೆ? ಹಿಂದೂಗಳು ಕಡಿಮೆ ಆದರೇ ಪಾಕಿಸ್ತಾನ ಜಿಂದಾಬಾದ್ ಅನ್ನುತ್ತಾರೆ. ದೇಶದ ಆದಾಯದ ಮೊದಲ ಭಾಗ ಮುಸಲ್ಮಾನರಿಗೆ ಎಂದು ಮನಮೋಹನ್ ಸಿಂಗ್ ಹೇಳಿದ್ರು. 10 ಸಾವಿರ ಕೋಟಿ ಮುಸ್ಲಿಮರಿಗೆ ಮೀಸಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಯಾರಪ್ಪನ ದುಡ್ಡು ಅವರಿಗೆ ನೀವು ಮೀಸಲಿಡಲು. ಸರ್ಕಾರಕ್ಕೆ ತೆರಿಗೆ ಕಟ್ಟುವುದು ಹಿಂದೂಗಳು” ಎಂದು ಹೇಳಿದ್ದಾನೆ. ಇದು ಎರಡು ಧರ್ಮಗಳನ್ನು ಎತ್ತಿಕಟ್ಟಿ ಗಲಭೆ ಮಾಡಿಸುವ, ಧರ್ಮಗಳ ಮಧ್ಯೆ ಅಪನಂಬಿಕೆ ಹುಟ್ಟಿಸಿ, ಸಾಮಾಜಿಕ ಅಶಾಂತಿ ಸೃಷ್ಟಿಸುವ, ಧರ್ಮವೊಂದನ್ನು ಅವಹೇಳನ ಮಾಡುವ ಕೃತ್ಯವಾಗಿದ್ದು ಐಪಿಸಿ 153a, 295, 295a, 298 ಪ್ರಕಾರ ಅಪರಾಧವಾಗಿದೆ.

ಮುಂದುವರೆದು ಮಾತನಾಡಿರುವ ಕಲ್ಲಡ್ಕ ಪ್ರಭಾಕರ ಭಟ್ಟನು “ನಮ್ಮ ಕೋರ್ಟ್ ವ್ಯವಸ್ಥೆ ಹೇಗಿದೆ? ಕಸಬ್ ಗಾಗಿ ರಾತ್ರಿ ಕೋರ್ಟ್ ತೆರೆಯಿತು” ಎಂದು ಸಾರ್ವಜನಿಕವಾಗಿ ಹೇಳಿದ್ದಾನೆ. ಭಾರತದ ಸಂವಿಧಾನ ಮತ್ತು ನ್ಯಾಯಾಂಗ ವ್ಯವಸ್ಥೆಯಲ್ಲಿ ನಂಬಿಕೆ ಇಲ್ಲದ ವ್ಯಕ್ತಿ ಮಾತ್ರ ಹೀಗೆ ಹೇಳಲು ಸಾಧ್ಯ. ಭಯೋತ್ಪಾದಕ ಕಸಬ್ ಗೂ ಭಾರತದ ಮುಸ್ಲಿಂ ಸಮುದಾಯಕ್ಕೂ ಯಾವ ಸಂಬಂಧವೂ ಇಲ್ಲ. ಮುಸ್ಲಿಮರೂ ಸೇರಿದಂತೆ ಭಾರತದ ಪ್ರತಿಯೊಬ್ಬ ನಾಗರಿಕರು ಕಸಬ್‌ನ ಕೃತ್ಯವನ್ನು ಖಂಡಿಸುತ್ತಾರೆ. ಆದರೆ ಆರೋಪಿ ಕಲ್ಲಡ್ಕ ಪ್ರಭಾಕರ ಭಟ್ಟನು ಕಸಬ್‌ನನ್ನು ತನ್ನ ಕೃತ್ಯಗಳಿಗೆ ಬಳಸಿಕೊಂಡಿದ್ದಾನೆ. ಮಾತ್ರವಲ್ಲದೆ ಕಸಬ್‌ಗೆ ಶಿಕ್ಷೆ ನೀಡಿರುವ ನ್ಯಾಯಾಲಯವನ್ನು ಟೀಕಿಸಿದ್ದಾನೆ. “ಕಸಬ್ ಗಾಗಿ ಕೋರ್ಟ್ ರಾತ್ರಿ ತೆರೆಯಿತು. ಕೋರ್ಟ್ ವ್ಯವಸ್ಥೆ ಹೇಗಿದೆ” ಎಂದು ಟೀಕಿಸಿ ಕಸಬ್ ಗೆ ಶಿಕ್ಷೆ ನೀಡಲು ನ್ಯಾಯಾಲಯ ಕೈಗೊಂಡಿರುವ ತುರ್ತು ಕ್ರಮವನ್ನು ಟೀಕಿಸುವ ಮೂಲಕ IPC 12 Contempt of Court Act 1971 ಪ್ರಕಾರ ಗುರುತರ ಅಪರಾಧ ಮಾಡಿದ್ದಾನೆ.

ಆರೋಪಿ ಕಲ್ಲಡ್ಕ ಪ್ರಭಾಕರ ಭಟ್ಟನು ವೃತ್ತಿಪರ ಕ್ರಿಮಿನಲ್ ಆರೋಪಿಯಾಗಿದ್ದಾನೆ. ಜೀವನ ನಿರ್ವಹಣೆಗಾಗಿ ಯಾವುದೇ ನಿರ್ದಿಷ್ಟ ವೃತ್ತಿ ಹೊಂದಿಲ್ಲದ ಈತ ಈ ಹಿಂದೆಯೂ ಸಾಮಾಜಿಕ ಅಶಾಂತಿ, ಗಲಭೆ ಸೃಷ್ಟಿ, ಮಹಿಳೆಯರ ಅವಹೇಳನ, ಹುಡುಗಿಯರ ಚುಡಾವಣೆ, ಧರ್ಮಗಳ ಅವಹೇಳನ ಪ್ರಕರಣಗಳದ್ದೇ ರೀತಿಯ ಕೃತ್ಯಗಳನ್ನು ಹಲವು ಬಾರಿ ನಡೆಸಿದ್ದಾನೆ. ಕರ್ನಾಟಕದ ಹಲವು ಠಾಣೆಗಳಲ್ಲಿ ಈತನ ವಿರುದ್ದ ಈ ಹಿಂದೆ ಇಂತದ್ದೇ ಪ್ರಕರಣಗಳು ದಾಖಲಾಗಿದೆ. ಆದರೂ ಬುದ್ದಿ ಕಲಿಯದ ಈತ ತನ್ನ ಚಾಳಿಯನ್ನು ಮುಂದುವರೆಸಿದ್ದು, ಆದ್ದರಿಂದ ಈತನ ವಿರುದ್ದ ರೌಡಿ ಹಾಳೆ ತೆರೆದು, IPC 1860 – 354, 294, 509, 506, 153A, 295, 295A, 298 ಮತ್ತು IPC 12 Contempt of Court Act 1971 ಅಡಿಯಲ್ಲಿ ಪ್ರಕರಣ ದಾಖಲಿಸಿ ಮಹಿಳೆಯರಿಗೆ ಮತ್ತು ಸಾರ್ವಜನಿಕರಿಗೆ ರಕ್ಷಣೆ ನೀಡಬೇಕು ಎಂದು ದೂರು ನೀಡಲಾಗಿತ್ತು.

ಈ ಮೊದಲು ಪ್ರಕರಣಕ್ಕೆ ಸಂಬಂಧಿಸಿ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್‌ ಮಧ್ಯಂತರ ಜಾಮೀನು ನೀಡಿತ್ತು. ಜಾಮೀನು ಅರ್ಜಿ ವಿಚಾರಣೆ ವೇಳೆ ಪ್ರಭಾಕರ್‌ ಭಟ್‌ ಹೇಳಿಕೆ ಬಗ್ಗೆ ತನಿಖೆ ನಡೆಸಲಾಗುವುದು, ಅವರನ್ನು ಬಂಧಿಸುವುದಿಲ್ಲ ಎಂದು ಸರಕಾರ ಹೈಕೋರ್ಟ್‌ಗೆ ಹೇಳಿತ್ತು.

ಇದನ್ನು ಓದಿ: ದಲಿತ ಯುವಕನಿಗೆ ಥಳಿಸಿ ಮುಖದ ಮೇಲೆ ಮೂತ್ರ ವಿಸರ್ಜನೆ: ಅಮಾನವೀಯ ಘಟನೆ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...