Homeಮುಖಪುಟತಮಿಳುನಾಡು ಉಪಚುನಾವಣೆಯಲ್ಲಿ ಕಾಂಗ್ರೆಸ್‌ಗೆ "ಬೇಷರತ್ ಬೆಂಬಲ" ನೀಡಿದ ಕಮಲ್ ಹಾಸನ್

ತಮಿಳುನಾಡು ಉಪಚುನಾವಣೆಯಲ್ಲಿ ಕಾಂಗ್ರೆಸ್‌ಗೆ “ಬೇಷರತ್ ಬೆಂಬಲ” ನೀಡಿದ ಕಮಲ್ ಹಾಸನ್

- Advertisement -
- Advertisement -

ಮಕ್ಕಳ್ ನೀಧಿ ಮೈಯಂ ಪಕ್ಷದ ಸಂಸ್ಥಾಪಕ, ನಟ-ರಾಜಕಾರಣಿ ಕಮಲ್ ಹಾಸನ್ ತಮಿಳುನಾಡಿನ ಈರೋಡ್ ಪೂರ್ವ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗೆ ಬೇಷರತ್ ಬೆಂಬಲ ನೀಡಿದ್ದಾರೆ. ಅವರ ಈ ನಡೆಯು  2024 ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಸೇರಲು ಕಾರಣವಾಗಬಹುದು ಎಂದು ಸುಳಿವು ನೀಡಿದಂತಿದೆ.

ಆಡಳಿತಾರೂಢ ಡಿಎಂಕೆ ಮತ್ತು ಕಾಂಗ್ರೆಸ್ ಅನ್ನು ಕಮಲ್ ಹಾಸನ್ ಟೀಕಿಸಿರುವುದನ್ನು ಪರಿಗಣಿಸಿ, ಈ ನಿಮ್ಮ ನಡೆಯು ಕಾರ್ಯತಂತ್ರದ ಬದಲಾವಣೆಯೇ ಎಂದು ಎನ್‌ಡಿಟಿವಿ ಎಂದು ಪ್ರಶ್ನೆ ಮಾಡಿತು. ಅದಕ್ಕೆ ಉತ್ತರಿಸಿದ ಅವರು, “ಜನರ ವಿಷಯಕ್ಕೆ ಬಂದಾಗ ರಾಜಿ ಎಂದು ಕರೆಯುವುದು ಏನೂ ಇಲ್ಲ, ನಾನು ಮಧ್ಯಪಂಥೀಯ, ಸಿದ್ಧಾಂತ ಮಾಡಬಾರದು. ಇದು ಜನರ ಸೇವೆಗೆ ಅಡ್ಡಿಯಾಗುತ್ತದೆ” ಎಂದು ಹೇಳಿದರು.

ಇತ್ತೀಚೆಗೆ ದೆಹಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯೊಂದಿಗೆ ಎಂಎನ್‌ಎಂ ನಾಯಕ ಪಥಸಂಚಲನ ನಡೆಸುತ್ತಿರುವುದನ್ನು ನೋಡಿದ ನಂತರ ಕಮಲ್ ಹಾಸನ್ ಅವರು ಕಾಂಗ್ರೆಸ್ ಜೊತೆಗೆ ಹೊಂದಾಣಿಯ ಬಗ್ಗೆ ಮಾತುಕತೆ ನಡೆಸಿದ್ದರು.

ಇದನ್ನೂ ಓದಿ: ‘ಚೋಳರ ಕಾಲದಲ್ಲಿ ಹಿಂದೂ ಧರ್ಮವಿರಲಿಲ್ಲ’ – ಕಮಲ್ ಹಾಸನ್

“ಕಳೆದುಹೋದ ನಮ್ಮ ಭಾರತದ ನೀತಿಗಳನ್ನು ಮರಳಿ ಪಡೆಯುವುದು ನಮ್ಮ ಜವಾಬ್ದಾರಿಯಾಗಿದೆ. ಇದು (ಭಾರತ್ ಜೋಡೋ ಅಭಿಯಾನ) ರಾಜಕೀಯವನ್ನು ಮೀರಿದ ಯಾತ್ರೆಯಾಗಿದೆ” ಎಂದು ನಟ-ರಾಜಕಾರಣಿ ಕಮಲ್ ಹಾಸನ್ ಸುದ್ದಿಗಾರರಿಗೆ ತಿಳಿಸಿದ್ದರು.

ಬಿಜೆಪಿಯನ್ನು ಪರೋಕ್ಷವಾಗಿ ಉಲ್ಲೇಖಿಸಿ, ಎಂಎನ್‌ಎಂ ಸಂಸ್ಥಾಪಕರು ಈರೋಡ್ ಚುನಾವಣೆಯು “ಕೋಮುವಾದಿ ಶಕ್ತಿಗಳ” ವಿರುದ್ಧ ಕೈಜೋಡಿಸುವ ಕಾರಣಕ್ಕಾಗಿ ಈ ಹೋರಾಟವಾಗಿದೆ. “ನಾನು ಏಕಸಂಸ್ಕೃತಿಯನ್ನು ದ್ವೇಷಿಸುತ್ತೇನೆ. ನನ್ನ ಯುದ್ಧವು ಇಲ್ಲಿ ಸಣ್ಣ ಮೈದಾನದಲ್ಲಿ ಪ್ರಾರಂಭವಾಗುತ್ತದೆ ಮತ್ತು ರಾಷ್ಟ್ರವ್ಯಾಪಿ ವಿಸ್ತರಿಸುತ್ತದೆ” ಎಂದು ಹೇಳಿದರು.

2019 ರ ಲೋಕಸಭೆ ಚುನಾವಣೆ ಮತ್ತು 2021 ರ ರಾಜ್ಯ ವಿಧಾನಸಭಾ ಚುನಾವಣೆಗಳನ್ನು ಎಂಎನ್‌ಎಂ ಪಕ್ಷ ಸ್ವತಂತ್ರವಾಗಿ ಎದುರಿಸಿತ್ತು. ಇದೇ ಮೊದಲ ಬಾರಿಗೆ ನಟ-ರಾಜಕಾರಣಿಯು ಚುನಾವಣೆಯಲ್ಲಿ ಮತ್ತೊಂದು ಪಕ್ಷದ ಅಭ್ಯರ್ಥಿಗೆ ಬೆಂಬಲ ನೀಡುತ್ತಿದ್ದಾರೆ.

ಕಮಲ್ ಹಾಸನ್ ಅವರು, ಭ್ರಷ್ಟಾಚಾರ, ರಾಜವಂಶದ ರಾಜಕೀಯದ ವಿರುದ್ಧ ಹೋರಾಡುವ ಭರವಸೆ, ಗ್ರಾಮೀಣ ಸಬಲೀಕರಣದ ಜೊತೆಗೆ ಹಲವು ದ್ದೇಶಗಳೊಂದಿಗೆ 2018 ರಲ್ಲಿ MNM ಅನ್ನು ಪ್ರಾರಂಭಿಸಿದ್ದರು.

ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ ಶಾಸಕ ತಿರುಮಹನ್ ಎವೆರಾ ನಿಧನದ ನಂತರ ಈರೋಡ್ ಪೂರ್ವ ವಿಧಾನಸಭಾ ಕ್ಷೇತ್ರ ತೆರವಾಗಿತ್ತು. ಕೆಲ ದಿನಗಳ ಹಿಂದೆ ಕಮಲ್ ಹಾಸನ್ ಅವರ ಬೆಂಬಲ ಕೋರಿದ್ದ ತಿರುಮಹಾನ್ ಅವರ ತಂದೆ, ಹಿರಿಯ ನಾಯಕ ಇವಿಕೆಎಸ್ ಇಳಂಗೋವನ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ. ಇಳಂಗೋವನ್ ಅವರು ಒಬ್ಬ ವಿಚಾರವಾದಿ ನಾಯಕ ಹಾಗೂ ದಿವಂಗತ ಪೆರಿಯಾರ್ ಅವರ ಮೊಮ್ಮಗ ಕೂಡ ಹೌದು.

ಕಮಲ್ ಹಾಸನ್ ಅವರ ಬೆಂಬಲವು ಡಿಎಂಕೆ ನೇತೃತ್ವದ ಜಾತ್ಯತೀತ ಪ್ರಗತಿಶೀಲ ಮೈತ್ರಿಕೂಟಕ್ಕೆ ಈ ಸ್ಥಾನವನ್ನು ಗೆಲ್ಲಲು ದೊಡ್ಡ ಉತ್ತೇಜನ ನೀಡಿದೆ. ಪಕ್ಷದ ಮುಖ್ಯಸ್ಥ ಎಡಪ್ಪಾಡಿ ಪಳನಿಸಾಮಿ ಮತ್ತು ಉಚ್ಛಾಟಿತ ನಾಯಕ ಓ ಪನ್ನೀರಸೆಲ್ವಂ ನಡುವಿನ ಆಂತರಿಕ ಹೋರಾಟದಿಂದ ಪ್ರಮುಖ ವಿರೋಧ ಪಕ್ಷವಾದ ಎಐಎಡಿಎಂಕೆ ತತ್ತರಿಸಿ ಹೋಗಿದ್ದು, ಇಬ್ಬರೂ ಚುನಾವಣೆಗೆ ತಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸುವುದಾಗಿ ಹೇಳಿದ್ದಾರೆ. ಬಿಜೆಪಿ ತನ್ನನ್ನು ತಾನು ಪ್ರಬಲ ಪ್ರತಿಪಕ್ಷ ಎಂದು ಬಿಂಬಿಸಿಕೊಂಡಿತ್ತು ಆದರೆ ಇಪಿಎಸ್ ಬಣ ಈ ಸ್ಥಾನಕ್ಕೆ ಸ್ಪರ್ಧಿಸಲು ನಿರ್ಧರಿಸಿದ ನಂತರ ಹಿನ್ನಡೆ ಅನುಭವಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...