Homeಮುಖಪುಟಕಮಲ್ ಹಾಸನ್ ನಮ್ಮ ಮುಖ್ಯಮಂತ್ರಿ ಅಭ್ಯರ್ಥಿ: ನಟ, ರಾಜಕಾರಣಿ ಶರತ್‌ ಕುಮಾರ್ ಘೋಷಣೆ

ಕಮಲ್ ಹಾಸನ್ ನಮ್ಮ ಮುಖ್ಯಮಂತ್ರಿ ಅಭ್ಯರ್ಥಿ: ನಟ, ರಾಜಕಾರಣಿ ಶರತ್‌ ಕುಮಾರ್ ಘೋಷಣೆ

- Advertisement -
- Advertisement -

“ಮಕ್ಕಳ್ ನೀದಿ ಮಯ್ಯಂ ಪಕ್ಷದ ಮುಖ್ಯಸ್ಥ ಕಮಲ್‌ ಹಾಸನ್‌ ಅವರು ನಮ್ಮ ಮುಖ್ಯಮಂತ್ರಿ ಅಭ್ಯರ್ಥಿ” ಎಂದು ಎಐಎಸ್‌ಎಂಕೆ ಪಕ್ಷದ ಮುಖ್ಯಸ್ಥ ಮತ್ತು ನಟ ಆರ್‌.ಶರತ್‌ ಕುಮಾರ್ ಘೋಷಿಸಿದ್ದಾರೆ. ತಮಿಳುನಾಡು ವಿಧಾನಸಭಾ ಕ್ಷೇತ್ರಗಳಿಗೆ ಏಪ್ರಿಲ್‌ 6ರಂದು ಚುನಾವಣೆ ನಡೆಯಲಿದ್ದು, ಕಮಲ್‌ ಹಾಸನ್,‌ “ಸಮಾನ ಯೋಚನೆಗಳಿರುವ ಪಕ್ಷಗಳೊಂದಿಗೆ ಮೈತ್ರಿ ಮಾತುಕತೆ ನಡೆಯುತ್ತಿದೆ” ಎಂದಿದ್ದಾರೆ.

ಈಗಾಗಲೇ ಎಐಎಸ್‌ಎಂಕೆ ಮತ್ತು ಎಂಎನ್‌ಎಂ ಪಕ್ಷಗಳ ಮೈತ್ರಿ ಖಚಿತಪಟ್ಟಿದ್ದು, “ತೃತೀಯ ರಂಗಕ್ಕೆ ಕಮಲ್‌ ಹಾಸನ್‌ ನೇತೃತ್ವ ಇರಲಿದೆ. ಅವರೇ ಮುಖ್ಯಮಂತ್ರಿ ಅಭ್ಯರ್ಥಿಯಾಗಿರುತ್ತಾರೆ” ಎಂದು ಶರತ್‌ ಕುಮಾರ್‌ ಹೇಳಿದ್ದಾರೆ. ಎಐಎಡಿಎಂಕೆ ಜೊತೆಗೆ ಕಳೆದ 10 ವರ್ಷಗಳಿಂದ ಎಐಎಸ್‌ಎಂಕೆ ಪಕ್ಷವು ಮೈತ್ರಿ ಮಾಡಿಕೊಂಡಿತ್ತು.

ಶರತ್‌ ಕುಮಾರ್ ಅವರ ಪತ್ನಿ, ಎಐಎಸ್‌ಎಂಕೆ ಪಕ್ಷದ ಉಪ ಪ್ರಧಾನ ಕಾರ್ಯದರ್ಶಿ ರಾಧಿಕಾ ಶರತ್‌ಕುಮಾರ್‌ ಕೋವಿಲ್‌ಪಟ್ಟಿ ಅಥವಾ ವೇಲಚೇರಿ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯುವ ಸುಳಿವು ನೀಡಿದ್ದಾರೆ.

ಇದನ್ನೂ ಓದಿ: ಕಮಲ್ ಹಾಸನ್ ಪಕ್ಷದ ಉಪಾಧ್ಯಕ್ಷನಾಗಿ APJ ಅಬ್ದುಲ್ ಕಲಾಂ ಅವರ ಸಲಹೆಗಾರ!

ಒಳ್ಳೆಯವರೊಂದಿಗೆ ಮೈತ್ರಿ ಮಾಡಿಕೊಳ್ಳುವ ಹಂಬಲ ವ್ಯಕ್ತಪಡಿಸಿರುವ ಕಮಲ್‌ ಹಾಸನ್‌, “ಹಲವು ಪಕ್ಷಗಳೊಂದಿಗೆ ಮೈತ್ರಿ ಮಾತುಕತೆ ನಡೆಯುತ್ತಿದೆ, ಸೀಟು ಹಂಚಿಕೆ ನಿರ್ಧಾರಗಳಿಗೂ ಮುನ್ನ ಮೈತ್ರಿ ಪೂರ್ಣಗೊಳಿಸುವ ಪ್ರಯತ್ನ ಮಾಡಲಾಗುತ್ತಿದೆ” ಎಂದಿದ್ದಾರೆ.

ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್‌ ಕಲಾಂ ಅವರ ವೈಜ್ಞಾನಿಕ ಸಲಹೆಗಾರರಾಗಿದ್ದ ವಿ.ಪೊನರಾಜ್‌ ಅವರು ಎಂಎನ್‌ಎಂ ಪಕ್ಷದ ಉಪಾಧ್ಯಕ್ಷರಾಗಿ ಜವಾಬ್ದಾರಿ ವಹಿಸಲಿದ್ದಾರೆ ಎಂದು ಕಮಲ್‌ ಹಾಸನ್ ಪ್ರಕಟಿಸಿದ್ದಾರೆ.

ಗೃಹಿಣಿಯರನ್ನು ಮುನ್ನೆಲೆಗೆ ತರುವ ಕಾರ್ಯವನ್ನು ಪಕ್ಷ ಮಾಡಲಿದೆ. ಮಹಿಳೆಯರಿಗೆ ಶೇ 50 ಮೀಸಲಾತಿ, ಪ್ರತಿ ಜಿಲ್ಲೆಗಳಲ್ಲಿ ರಾತ್ರಿ ವೇಳೆ ಉಳಿದುಕೊಳ್ಳಲು ಅನುಕೂಲವಾಗಲು ಹಾಸ್ಟೆಲ್‌ಗಳ ವ್ಯವಸ್ಥೆ, ಮಹಿಳೆಯರಿಗಾಗಿ ಮಹಿಳೆಯರೇ ನಡೆಸುವ ಬ್ಯಾಂಕ್‌ ಸ್ಥಾಪನೆ ಮತ್ತು 50 ಲಕ್ಷ ಯುವಕರಿಗೆ ಉದ್ಯೋಗ ನೀಡುವ ಭರವಸೆಯನ್ನು ಪಕ್ಷದ ಕಾರ್ಯಸೂಚಿಯಲ್ಲಿ ನೀಡಲಾಗಿದೆ ಎಂದು ಕಮಲ್ ಹಾಸನ್ ಹೇಳಿದ್ದಾರೆ.

ಇದನ್ನೂ ಓದಿ: ಪಕ್ಷದ ಅಭ್ಯರ್ಥಿಗಳಾಗಲು ಬಯಸುವವರು ₹ 25 ಸಾವಿರ ಪಾವತಿಸಿ: ಕಮಲ್ ಹಾಸನ್‌

“ತಮಿಳರು ಮಾರಾಟಕ್ಕಿಲ್ಲ, ಅವರ ಮತಗಳು ಸಹ ಮಾರಾಟಕ್ಕಿಲ್ಲ” ಎಂದು ಘೋಷಿಸಿರುವ ಕಮಲ್‌ ಹಾಸನ್,‌ ಭ್ರಷ್ಟಾಚಾರ ಮುಕ್ತ ಸರ್ಕಾರ ಸ್ಥಾಪನೆಗಾಗಿ ಬೆಂಬಲಿಸಿ ಎಂದು ಜನರಲ್ಲಿ ಮನವಿ ಮಾಡಿದ್ದಾರೆ.

ಪಂಚರಾಜ್ಯಗಳ ಚುನಾವಣಾ ದಿನಾಂಕ ಘೋಷಣೆಯಾಗುತ್ತಿದ್ದಂತೆ ಚುನಾವಣಾ ಕಣ ರಂಗೇರುತ್ತಿದೆ. ಅದರಲ್ಲೂ ಈ ಬಾರಿ ತಮಿಳುನಾಡು ವಿಧಾನಸಭಾ ಚುನಾವಣೆ ವಿಶೇಷವಾಗಿ ಗಮನ ಸೆಳೆದಿದೆ. ರಾಷ್ಟ್ರೀಯ ಪಕ್ಷಗಳ ಜೊತೆಗೆ ನಟ ಕಮಲ್ ಹಾಸನ್ ಅವರ ನೂತನ ಪಕ್ಷ ಮಕ್ಕಳ್ ನೀಧಿ ಮಯ್ಯಂ ಸಹ ಅದೃಷ್ಟ ಪರೀಕ್ಷೆಗೆ ಇಳಿದಿದೆ.

ತಮಿಳುನಾಡಿನಲ್ಲಿ ಈ ಬಾರಿ ಘಟಾನುಘಟಿಗಳು ಕಣಕ್ಕಿಳಿಯುವ ಸಾಧ್ಯತೆಗಳಿವೆ. ನಟಿ ಖುಷ್ಬೂ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಕೂಡ ಬಿಜೆಪಿಗೆ ಸೇರ್ಪಡೆಯಾಗಿದ್ದು, ಇತ್ತ ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ.  ನಟ ಕಮಲ್‌ ಹಾಸನ್, ರಜನಿಕಾಂತ್‌ ಮತ್ತು ಶರತ್ ಕುಮಾರ್‌ ಬೆಂಬಲ ಕೇಳಿದ್ದು, ಚುನಾವಣೆಗೆ ಬಣ್ಣದ ಲೋಕದ ಟಚ್ ನೀಡುತ್ತಿದ್ದಾರೆ.


ಇದನ್ನೂ ಓದಿ: ಬಿಗ್‌ಬಾಸ್ ನಡೆಸುವವರಿ‌ಗೆ ರಾಜಕೀಯದ ಬಗ್ಗೆ ಏನು ಗೊತ್ತು – ತಮಿಳುನಾಡು ಸಿಎಂ: ತಿರುಗೇಟು ನೀಡಿದ ಕಮಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...