Homeಕರ್ನಾಟಕಕ್ಷಮೆ ಕೇಳಲು ಕಮಲ್ ಹಾಸನ್‌ ನಕಾರ: ಕರ್ನಾಟಕದಲ್ಲಿ 'ಥಗ್‌ ಲೈಫ್‌' ಚಿತ್ರ ಬಿಡುಗಡೆ ಮುಂದೂಡಿಕೆ

ಕ್ಷಮೆ ಕೇಳಲು ಕಮಲ್ ಹಾಸನ್‌ ನಕಾರ: ಕರ್ನಾಟಕದಲ್ಲಿ ‘ಥಗ್‌ ಲೈಫ್‌’ ಚಿತ್ರ ಬಿಡುಗಡೆ ಮುಂದೂಡಿಕೆ

- Advertisement -
- Advertisement -

“ತಮಿಳಿನಿಂದ ಕನ್ನಡ ಹುಟ್ಟಿದೆ” ಎಂಬ ತನ್ನ ಹೇಳಿಕೆಯ ಹಿಂದೆ ಯಾವುದೇ ದುರುದ್ದೇಶ ಇಲ್ಲದಿರುವುದರಿಂದ ನಾನು ಕ್ಷಮೆ ಕೋರುವುದಿಲ್ಲ ಎಂದು ನಟ ಕಮಲ್‌ ಹಾಸನ್ ಹೈಕೋರ್ಟ್ ಮುಂದೆ ಹೇಳಿದ್ದಾರೆ ಎಂದು ವರದಿಯಾಗಿದೆ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ (ಕೆಎಫ್‌ಸಿಸಿ) ಜೊತೆಗೆ ಸಮಾಲೋಚನೆ ನಡೆಸುವವರೆಗೆ ಕರ್ನಾಟಕದಲ್ಲಿ ಕಮಲ್ ಹಾಸನ್ ನಟನೆಯ ‘ಥಗ್‌ ಲೈಫ್‌’ ಚಿತ್ರ ಬಿಡುಗಡೆ ಮಾಡದಿರಲು ರಾಜ್‌ಕಮಲ್‌ ಫಿಲ್ಮ್ಸ್‌ ಇಂಟರ್‌ನ್ಯಾಷನಲ್‌ ಸಂಸ್ಥೆ ನಿರ್ಧರಿಸಿದೆ. ಈ ವಿಚಾರವನ್ನು ಹೈಕೋರ್ಟ್‌ಗೆ ತಿಳಿಸಿದೆ. ಹಾಗಾಗಿ, ಕೋರ್ಟ್ ವಿಚಾರಣೆಯನ್ನು ಜೂನ್ 10ಕ್ಕೆ ಮುಂದೂಡಿದೆ.

ಕಮಲ್ ಹಾಸನ್ ಹೇಳಿಕೆ ಕನ್ನಡಿಗರಲ್ಲಿ ಆಕ್ರೋಶ ಉಂಟು ಮಾಡಿರುವ ಹಿನ್ನೆಲೆ, ‘ಥಗ್‌ ಲೈಫ್‌’ ಚಿತ್ರ ಬಿಡುಗಡೆ ಕರ್ನಾಟಕದಲ್ಲಿ ಅವಕಾಶ ಮತ್ತು ಸೂಕ್ತ ಭದ್ರತೆ ಒದಗಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಲು ಕೋರಿ ರಾಜ್‌ಕಮಲ್‌ ಫಿಲ್ಮ್ಸ್‌ ಇಂಟರ್‌ನ್ಯಾಷನಲ್‌ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿ ನಾರಾಯಣ್‌ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಇಂದು (ಮಂಗಳವಾರ) ವಿಚಾರಣೆ ನಡೆಸಿತು.

ಮಧ್ಯಾಹ್ನದ ಊಟದ ವಿರಾಮಕ್ಕೂ ಮುನ್ನ ವಿ ನಾರಾಯಣ್‌ ಅವರ ಅರ್ಜಿಯನ್ನು ಸುದೀರ್ಘ ವಿಚಾರಣೆ ನಡೆಸಿದ್ದ ನ್ಯಾಯಾಲಯ, ಕಮಲ್‌ ಹಾಸನ್‌ ಕನ್ನಡಿಗರ ಕ್ಷಮೆ ಕೋರುವ ಮೂಲಕ ವಿವಾದಕ್ಕೆ ಅಂತ್ಯ ಹಾಡಲು ಮೌಖಿಕ ಸಲಹೆ ನೀಡಿತ್ತು.

ಈ ಸಂಬಂಧ ಕಮಲ್ ಹಾಸನ್ ಅವರ ಸೂಚನೆ ಪಡೆದು ವಾದಿಸುವುದಾಗಿ ಪೀಠಕ್ಕೆ ತಿಳಿಸಿದ್ದ ಹಿರಿಯ ವಕೀಲ ಧ್ಯಾನ್‌ ಚಿನ್ನಪ್ಪ ಅವರು, ಮಧ್ಯಾಹ್ನದ ನಂತರದ ವಿಚಾರಣೆಯಲ್ಲಿ ಕೆಎಫ್‌ಸಿಸಿಗೆ ಕಮಲ್‌ ಹಾಸನ್‌ ಬರೆದಿರುವ ಪತ್ರವನ್ನು ಓದಿದರು. “ಸದ್ಯಕ್ಕೆ ಕರ್ನಾಟಕದಲ್ಲಿ ಚಿತ್ರ ಬಿಡುಗಡೆ ಮಾಡದಿರಲು ಕಮಲ್‌ ಹಾಸನ್‌ ತೀರ್ಮಾನಿಸಿದ್ದಾರೆ. ಹೀಗಾಗಿ, ಪೊಲೀಸ್‌ ರಕ್ಷಣೆ ಕೋರುವುದಿಲ್ಲ, ಈ ನಡುವೆ, ಕೆಎಫ್‌ಸಿಸಿ ಜೊತೆ ಸಮಾಲೋಚನೆ ನಡೆಸಲು ಅವರು ನಿರ್ಧರಿಸಿದ್ದಾರೆ” ಎಂದು ಹೇಳಿದ್ದಾರೆ.

ಧ್ಯಾನ್‌ ಚಿನ್ನಪ್ಪ ಅವರು, “ಕನ್ನಡ ನಾಡು ಮತ್ತು ಕರ್ನಾಟಕದ ಬಗ್ಗೆ ಪ್ರೀತಿ ಇದೆ ಎಂದು ಕಮಲ್‌ ಹಾಸನ್ ಹೇಳಿದ್ದಾರೆ. ದುರುದ್ದೇಶವಿದ್ದರೆ ಮಾತ್ರ ಕ್ಷಮೆ ಕೋರಬೇಕು ಎಂದು ಕೆಎಫ್‌ಸಿಸಿಗೆ ಬರೆದಿರುವ ಪತ್ರದಲ್ಲಿ ಅವರು ಘೋಷಣೆ ಮಾಡಿದ್ದಾರೆ, ಸ್ಪಷ್ಟನೆ ನೀಡಿಲ್ಲ. ಕರ್ನಾಟಕದಲ್ಲಿ ಚಿತ್ರ ಬಿಡುಗಡೆಯನ್ನು ವಿಳಂಬಿಸಬಹುದು ಎಂದಿದ್ದಾರೆ. ಹೀಗಾಗಿ, ಸಿನಿಮಾ ಬಿಡುಗಡೆಗೆ ಪೊಲೀಸರ ರಕ್ಷಣೆಯ ವಿಚಾರ ಮುಂದು ಮಾಡುವುದಿಲ್ಲ. ಕೆಎಫ್‌ಸಿಸಿ ಜೊತೆ ಸಮಾಲೋಚನೆ ನಡೆಸಲಾಗುವುದು ಎಂದಿದ್ದಾರೆ” ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಪೀಠವ “ಅಹಂ ಮುಂದೆ ಮಾಡಿದ್ದೀರಿ. ಅದು ಕಮಲ್‌ ಹಾಸನ್‌ ಅಥವಾ ಬೇರೆ ಯಾರೇ ಆಗಿರಬಹುದು. ಇದು ಜನರ ಭಾವನೆಗಳಿಗೆ ಹಾನಿ ಮಾಡುವ ವಿಚಾರವಾಗಿದೆ. ಕಮಲ್‌ ಹಾಸನ್‌ ಹೇಳಿಕೆಯಿಂದ ಇಷ್ಟೆಲ್ಲಾ ಆಗಿದ್ದು, ಇದೆಲ್ಲವನ್ನೂ ಅವರ ಹೇಳಿಕೆಯೇ ನಿಲ್ಲಿಸಬಹುದು. ಕೆಎಫ್‌ಸಿಸಿಗೆ ಬರೆದಿರುವ ಪತ್ರದಲ್ಲಿ ಕ್ಷಮೆ ವಿಚಾರ ಹೊರತುಪಡಿಸಿ ಉಳಿದೆಲ್ಲವೂ ಇದೆ” ಎಂದಿದೆ.

ಅಂತಿಮವಾಗಿ ಕೇಂದ್ರ, ರಾಜ್ಯ ಸರ್ಕಾರ ಮತ್ತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ನೋಟಿಸ್‌ ಜಾರಿಗೊಳಿಸಿ, ವಿಚಾರಣೆಯನ್ನು ಜೂನ್‌ 10ಕ್ಕೆ ಮುಂದೂಡಿದೆ.

‘ನೀವು ಭಾಷಾತಜ್ಞರೋ?’..ಕನ್ನಡ ತಮಿಳಿನಿಂದ ಹುಟ್ಟಿದೆ ಎಂದ ಕಮಲ್‌ ಹಾಸನ್‌ಗೆ ಹೈಕೋರ್ಟ್ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...