Homeಮುಖಪುಟ'ಕಾಂಚ ಗಚಿಬೌಲಿ' ಭೂ ವಿವಾದ: ಮೂವರು ಸಚಿವರ ಸಮಿತಿ ರಚಿಸಿದ ತೆಲಂಗಾಣ ಸರ್ಕಾರ

‘ಕಾಂಚ ಗಚಿಬೌಲಿ’ ಭೂ ವಿವಾದ: ಮೂವರು ಸಚಿವರ ಸಮಿತಿ ರಚಿಸಿದ ತೆಲಂಗಾಣ ಸರ್ಕಾರ

- Advertisement -
- Advertisement -

ಹೈದರಾಬಾದ್ ಕೇಂದ್ರಿಯ ವಿಶ್ವವಿದ್ಯಾಲಯದ (ಹೆಚ್‌ಒಯು) ಜಮೀನಿಗೆ ಹೊಂದಿಕೊಂಡಿರುವ ‘ಕಾಂಚ ಗಚಿಬೌಲಿ’ಯ 400 ಎಕರೆ ಅರಣ್ಯ ನಾಶ ವಿವಾದಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ತೆಲಂಗಾಣ ಸರ್ಕಾರ ಗುರುವಾರ (ಏ.3) ಮೂವರು ಸಚಿವರ ಸಮಿತಿ ರಚಿಸಿದೆ.

ಉಪಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವ ಮಲ್ಲು ಭಟ್ಟಿ ವಿಕ್ರಮಾರ್ಕ, ಕೈಗಾರಿಕೆ ಮತ್ತು ಹಾಗೂ ಐಟಿ ಸಚಿವ ಡಿ. ಶ್ರೀಧರ್ ಬಾಬು ಮತ್ತು ಕಂದಾಯ ಸಚಿವ ಪೊಂಗುಲೇಟಿ ಶ್ರೀನಿವಾಸ್ ರೆಡ್ಡಿ ಸಮಿತಿಯಲ್ಲಿದ್ದಾರೆ.

ಈ ಸಮಿತಿಯು ಭೂ ವಿವಾದವನ್ನು ಪರಿಹರಿಸಲು ಹೈದರಾಬಾದ್ ವಿಶ್ವವಿದ್ಯಾಲಯದ ಕಾರ್ಯಕಾರಿ ಸಮಿತಿ, ಜಂಟಿ ಕ್ರಿಯಾ ಸಮಿತಿ (ಜೆಎಸಿ) ಮತ್ತು ನಾಗರಿಕ ಗುಂಪುಗಳು, ವಿದ್ಯಾರ್ಥಿಗಳ ನಿಯೋಗ ಸೇರಿದಂತೆ ಈ ಪ್ರಕರಣದ ಎಲ್ಲಾ ಪಕ್ಷಕಾರರೊಂದಿಗೆ ಸಮಾಲೋಚನೆ ನಡೆಸಲಿದೆ.

ವಿವಾದಿತ ಭೂಮಿಯಲ್ಲಿ ಮರಗಳ ತೆರವು ಕಾರ್ಯಕ್ಕೆ ಸುಪ್ರೀಂ ಕೋರ್ಟ್ ಗುರುವಾರ ತಡೆ ನೀಡಿದೆ. ಮುಂದಿನ ಆದೇಶದವರೆಗೆ ಮರಗಳನ್ನು ಉರುಳಿಸದಂತೆ ನೋಡಿಕೊಳ್ಳಲು ತೆಲಂಗಾಣ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದೆ. ತೆಲಂಗಾಣ ಹೈಕೋರ್ಟ್‌ನ ರಿಜಿಸ್ಟ್ರಾರ್‌ಗೆ (ನ್ಯಾಯಾಂಗ) ಸ್ಥಳ ಪರಿಶೀಲಿಸಿ ವರದಿ ಸಲ್ಲಿಸುವಂತೆ ನಿರ್ದೇಶಿಸಿದೆ.

ಸರ್ಕಾರ ಅರಣ್ಯ ನಾಶ ಮುಂದುವರೆಸಬಾರದು ಎಂದು ಹೈದರಾಬಾದ್ ವಿಶ್ವವಿದ್ಯಾಲಯ ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟಿಸುತ್ತಿದ್ದಾರೆ.

ಪ್ರತಿಪಕ್ಷಗಳಾದ ಬಿಆರ್‌ಎಸ್, ಬಿಜೆಪಿ, ಸಿಪಿಐ, ಸಿಪಿಐ-ಎಂ ಮತ್ತು ಅವುಗಳಿಗೆ ಸಂಯೋಜಿತವಾಗಿರುವ ವಿದ್ಯಾರ್ಥಿ ಗುಂಪುಗಳು ವಿದ್ಯಾರ್ಥಿಗಳ ಪ್ರತಿಭಟನೆಯನ್ನು ಬೆಂಬಲಿಸಿವೆ.

ಕಳೆದ ಮಂಗಳವಾರ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ್ದ ಸಚಿವರಾದ ಮಲ್ಲು ಭಟ್ಟಿ ವಿಕ್ರಮಾರ್ಕ, ಶ್ರೀಧರ್ ಬಾಬು ಮತ್ತು ಶ್ರೀನಿವಾಸ್ ರೆಡ್ಡಿ, “ರಾಜಕೀಯ ಲಾಭಕ್ಕಾಗಿ ಜಮೀನಿನ ಬಗ್ಗೆ ಪ್ರತಿಪಕ್ಷಗಳಾದ ಬಿಆರ್‌ಎಸ್‌ ಮತ್ತು ಬಿಜೆಪಿ ಸುಳ್ಳುಗಳನ್ನು ಹರಡುತ್ತಿವೆ” ಎಂದು ವಾಗ್ದಾಳಿ ನಡೆಸಿದ್ದರು. ವಿರೋಧ ಪಕ್ಷಗಳ ಮಾತು ಕೇಳಿ ದಾರಿ ತಪ್ಪದಂತೆ ವಿದ್ಯಾರ್ಥಿಗಳಲ್ಲಿ ಅವರು ಮನವಿ ಮಾಡಿದ್ದರು.

ಸರ್ಕಾರಿ ಕೆಲಸಗಳು ಮತ್ತು ಅಭಿವೃದ್ಧಿಗೆ ಅಡ್ಡಿಪಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಎಚ್ಚರಿಸಿದ್ದರು.

ವಕ್ಫ್‌ ಮಸೂದೆ ವಿರುದ್ಧ ವಿಜಯ್ ನೇತೃತ್ವದ ಟಿವಿಕೆ ಪ್ರತಿಭಟನೆ; ಕಾನೂನು ಸಮರದ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...