Homeಮುಖಪುಟಕಾಂಚ ಗಚಿಬೌಲಿ ಅರಣ್ಯ ನಾಶ ಪ್ರಕರಣ | 'ಮತ್ತೆ ಅರಣ್ಯ ಬೆಳೆಸಿ, ಇಲ್ಲ ಜೈಲಿಗೆ ಹೋಗಲು...

ಕಾಂಚ ಗಚಿಬೌಲಿ ಅರಣ್ಯ ನಾಶ ಪ್ರಕರಣ | ‘ಮತ್ತೆ ಅರಣ್ಯ ಬೆಳೆಸಿ, ಇಲ್ಲ ಜೈಲಿಗೆ ಹೋಗಲು ಸಿದ್ದರಾಗಿ’; ತೆಲಂಗಾಣ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಎಚ್ಚರಿಕೆ

- Advertisement -
- Advertisement -

ಹೈದರಾಬಾದ್‌ನ ಕಾಂಚ ಗಚಿಬೌಲಿ ಪ್ರದೇಶದಲ್ಲಿ ಅರಣ್ಯನಾಶ ಮಾಡಿದ ತೆಲಂಗಾಣ ಸರ್ಕಾರವನ್ನು ಸುಪ್ರೀಂ ಕೋರ್ಟ್ ಗುರುವಾರ (ಮೇ.15) ತೀವ್ರ ತರಾಟೆಗೆ ತೆಗೆದುಕೊಂಡಿದೆ. “ಮತ್ತೆ ಅರಣ್ಯ ಬೆಳೆಸಿ, ಇಲ್ಲವೇ ಅಧಿಕಾರಿಗಳನ್ನು ಜೈಲಿಗೆ ಕಳುಹಿಸಲು ಸಿದ್ಧರಾಗಿ” ಎಂದು ಎಚ್ಚರಿಕೆ ನೀಡಿದೆ.

“ಸರ್ಕಾರ ದೀರ್ಘ ವಾರಾಂತ್ಯದ (ಲಾಂಗ್ ವೀಕೆಂಡ್) ವೇಳೆ ಅರಣ್ಯ ನಾಶ ಮಾಡಿದೆ. ಹಾಗಾಗಿ, ಇದೊಂದು ಪೂರ್ವಯೋಜಿತ ಕೃತ್ಯ ಎಂದು ತೋರುತ್ತದೆ ಎಂದು ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್ ಗವಾಯಿ ಮತ್ತು ನ್ಯಾಯಮೂರ್ತಿ ಎ.ಜಿ ಮಸಿಹ್ ಅವರ ಪೀಠ ಹೇಳಿದೆ ಎಂದು ವರದಿಯಾಗಿದೆ.

ಕಾಂಚ ಗಚಿಬೌಲಿಯ ಅರಣ್ಯದ ಸ್ಥಿತಿಯನ್ನು ಪರಿಶೀಲನೆ ನಡೆಸಿದ ಕೇಂದ್ರೀಯ ಸಬಲೀಕರಣ ಸಮಿತಿ (ಸಿಇಸಿ) ಆ ಪ್ರದೇಶವನ್ನು ಅರಣ್ಯವೆಂದು ಪರಿಗಣಿಸಿ, ರಾಜ್ಯ ಸರ್ಕಾರ ಮತ್ತೆ ಅರಣ್ಯ ಬೆಳೆಸಬೇಕೆಂದು ಶಿಫಾರಸು ಮಾಡಿ ಅಂತಿಮ ವರದಿಯನ್ನು ಸಲ್ಲಿಸಿದ ನಂತರ ಸುಪ್ರೀಂ ಕೋರ್ಟ್‌ ಮೇಲಿನ ಆದೇಶ ನೀಡಿದೆ.

“ನಾವು ನಿಮ್ಮನ್ನು ಗಮನಿಸುತ್ತಿದ್ದೇವೆ. ನೀವು ನಿಮ್ಮ ಕೃತ್ಯವನ್ನು ಸಮರ್ಥಿಸಿಕೊಳ್ಳಲು ಪ್ರಯತ್ನಿಸುತ್ತಿದ್ದೀರಿ. ಇದರಲ್ಲಿ ಎಲ್ಲಾ ಅಧಿಕಾರಿಗಳು ಭಾಗಿಯಾಗಿರುವುದರಿಂದ ನೀವು ದೊಡ್ಡ ತೊಂದರೆಗೆ ಸಿಲುಕುತ್ತೀರಿ. ದೀರ್ಘ ವಾರಾಂತ್ಯದ ಲಾಭ ಪಡೆದು ನೀವು ಇಷ್ಟೆಲ್ಲಾ ಕೆಲಸಗಳನ್ನು ಮಾಡಿದ್ದೀರಿ. ನೀವು ಪೋಟೋಗಳನ್ನು ನೋಡಿದ್ದೀರಾ? ಡಜನ್‌ಗಟ್ಟಲೆ ಬುಲ್ಡೋಜರ್‌ಗಳನ್ನು ತಂದು ನಿಲ್ಲಿಸಲಾಗಿತ್ತು. ಪ್ರಾಥಮಿಕವಾಗಿ, ಇದೆಲ್ಲವೂ ಪೂರ್ವ ಯೋಜಿತವಾಗಿದೆ ಎಂದು ತೋರುತ್ತದೆ” ಎಂದು ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಹೇಳಿದ್ದಾರೆ.

“ಮುಖ್ಯ ಕಾರ್ಯದರ್ಶಿ ಸೇರಿದಂತೆ ಅಧಿಕಾರಿಗಳನ್ನು ತಾತ್ಕಾಲಿಕ ಜೈಲಿಗೆ ಕಳುಹಿಸಬೇಕೆಂದು ನೀವು ಬಯಸಿದರೆ, ನಾವು ಅದನ್ನು ಮಾಡುತ್ತೇವೆ. ನಾವು ಯಾವಾಗಲೂ ಸುಸ್ಥಿರ ಅಭಿವೃದ್ಧಿಯ ಪ್ರತಿಪಾದಕರು, ಇಲ್ಲಿ ಪ್ರಶ್ನೆಯೆಂದರೆ 1,000 ಮರಗಳನ್ನು ತೆರವುಗೊಳಿಸಿರುವುದು ಮತ್ತು ದೀರ್ಘ ರಜೆಯ ಲಾಭವನ್ನು ದುರುಪಯೋಗ ಮಾಡಿಕೊಂಡಿರುವುದು (ಅರಣ್ಯ ನಾಶಕ್ಕೆ ಬಳಸಿರುವುದು)” ಎಂದಿದ್ದಾರೆ.

ತೆಲಂಗಾಣ ಸರ್ಕಾರದ ಪರ ನ್ಯಾಯಾಲಯಕ್ಕೆ ಹಾಜರಾಗಿದ್ದ ಹಿರಿಯ ವಕೀಲ ಅಭಿಷೇಕ್ ಮನುಸಿಂಘ್ವಿ ಅವರು, ವಾರಾಂತ್ಯದಲ್ಲಿ ತರಾತುರಿಯಲ್ಲಿ ಮರ ತೆರವು ಮಾಡಿಲ್ಲ. ಒಂದು ವರ್ಷದ ಸಾಂಸ್ಥಿಕ ಪ್ರಕ್ರಿಯೆ ಬಳಿಕ ತೆರವು ಮಾಡಲಾಗಿದೆ ಎಂದಿದ್ದಾರೆ. ಇದಕ್ಕೆ ನ್ಯಾಯಾಲಯ ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ.

ಅರಣ್ಯ ನಾಶದ ನಿಮ್ಮ ಪ್ರಕ್ರಿಯೆ ನ್ಯಾಯಸಮ್ಮತವಾಗಿದ್ದರೆ ದೀರ್ಘ ವಾರಾಂತ್ಯದ ಆರಂಭದಲ್ಲಿ ಏಕೆ ಮರಗಳನ್ನು ತೆರವು ಮಾಡಲು ಪ್ರಾರಂಭಿಸಿದಿರಿ? ಪುನಃ ಅರಣ್ಯ ಬೆಳೆಸುವ ಯಾವುದೇ ಬದ್ಧತೆಯಿಲ್ಲದೆ ಸರ್ಕಾರ ತನ್ನ ಕ್ರಮಗಳನ್ನು ಸಮರ್ಥಿಸಿಕೊಂಡಿದೆ ಮತ್ತು ಆ ಸ್ಥಳದಲ್ಲಿ ಐಟಿ ಪಾರ್ಕ್‌ ನಿರ್ಮಾಣಕ್ಕೆ ಯೋಜನೆ ರೂಪಿಸಿದೆ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ಈ ಹಿಂದೆ ತೆಲಂಗಾಣ ಸರ್ಕಾರ ಪರಿಸರ ಅನುಮತಿ ಪಡೆಯುವಲ್ಲಿ ವಿಫಲವಾಗಿರುವುದನ್ನು ಮತ್ತು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ‘ನಿರ್ಮಾಣದ ಒಪ್ಪಿಗೆ’ಗೆ ಮಾತ್ರ ಅರ್ಜಿ ಸಲ್ಲಿಸಿರುವುದನ್ನು ಸಿಇಸಿ ತನ್ನ ವರದಿಯಲ್ಲಿ ಉಲ್ಲೇಖಿಸಿತ್ತು ಎಂದು ವರದಿಯಾಗಿದೆ.

ಗುರುವಾರ ಸಲ್ಲಿಸಿದ ವರದಿಯಲ್ಲಿ ಕಾಂಚ ಗಚಿಬೌಲಿ ಪ್ರದೇಶ ಅರಣ್ಯದ ಎಲ್ಲಾ ಗುಣ ಲಕ್ಷಣಗಳನ್ನು ಹೊಂದಿದೆ ಎಂದು ಸಿಇಸಿ ದೃಢಪಡಿಸಿದೆ. ಆ ಪ್ರದೇಶವನ್ನು 1972ರ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಸಂರಕ್ಷಿತ ಮೀಸಲು ಅರಣ್ಯ ಎಂದು ಘೋಷಿಸಲು ಶಿಫಾರಸು ಮಾಡಿದೆ.

ಹೈದರಾಬಾದ್ ಕೇಂದ್ರೀಯ ವಿವಿಯ ಜಮೀನಿಗೆ ಹೊಂದಿಕೊಂಡಿರುವ ನಗರದ ‘ಕಾಂಚಿ ಗಚಿಬೌಲಿ’ಯ 400 ಎಕರೆ ಅರಣ್ಯವನ್ನು ನಾಶ ಮಾಡಿ ಅಲ್ಲಿ ಐಟಿ ಪಾರ್ಕ್‌ ಸ್ಥಾಪಿಸಲು ತೆಲಂಗಾಣದ ಕಾಂಗ್ರೆಸ್ ಸರ್ಕಾರ ಮುಂದಾಗಿತ್ತು.

ವಿವಾದಿತ ಜಾಗವನ್ನು ಕಾಂಕ್ರೀಟ್ ಕಾಡಾಗಿ ಮಾರ್ಪಟ್ಟಿರುವ ಹೈದಾರಾಬಾದ್‌ನ ಐಟಿ ಹಬ್‌ ಫಿನಾಶಿಯಲ್ ಡಿಸ್ಟ್ರಿಕ್‌ನ ‘ಶ್ವಾಸಕೋಶ’ ಎಂದು ಕರೆಯಲಾಗುತ್ತದೆ. ಫಿನಾಶಿಯಲ್ ಡಿಸ್ಟ್ರಿಕ್‌ ಸಂಪೂರ್ಣ ಕಾಂಕ್ರೀಟ್ ಕಟ್ಟಡಗಳಿಂದ ತುಂಬಿದ್ದು, ಈ ವಿವಾದಿತ ಜಾಗ ಮಾತ್ರ ವನ್ಯ ಜೀವಿಗಳ ಏಕೈಕ ಅಶ್ರಯ ತಾಣವಾಗಿ ಉಳಿದಿದೆ.

ಈ ಜಾಗ ಬಫಲೋ ಲೇಕ್‌, ಪೀಕಾಕ್ ಲೇಕ್, ಮಶ್ರೂಮ್ ರಾಕ್‌ನಂತಹ ಪ್ರಮುಖ ವೈಶಿಷ್ಟ್ಯಗಳನ್ನು ಹೊಂದಿದೆ. ಜಿಂಕೆ, ನವಿಲು ಸೇರಿದಂತೆ ಅನೇಕ ವನ್ಯ ಜೀವಿಗಳ ಆಶ್ರಯ ತಾಣವಾಗಿದೆ ಎಂದು ಹೇಳಲಾಗುತ್ತಿದೆ.

ಇತ್ತೀಚೆಗೆ ಸರ್ಕಾರ ಬುಲ್ಡೋಜರ್‌ಗಳನ್ನು ತಂದು ರಾತ್ರೋ ರಾತ್ರಿ ಮರಗಳ ತೆರವಿಗೆ ಮುಂದಾಗಿತ್ತು. ಇದಕ್ಕೆ ಹೈದರಾಬಾದ್ ವಿವಿಯ ವಿದ್ಯಾರ್ಥಿಗಳು, ವಿವಿಧ ಸಂಘಟನೆಗಳು, ರಾಜಕೀಯ ಪಕ್ಷಗಳು ಮತ್ತು ಪರಿಸರವಾದಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು.

ಮರಗಳ ತೆರವು ವಿರೋಧಿಸಿ ಪ್ರತಿಭಟಿಸಿದ್ದ ಹೈದರಾಬಾದ್ ವಿವಿ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಪ್ರಹಾರ ಮಾಡಿ ದಬ್ಬಾಳಿಕೆ ನಡೆಸಿದ್ದರು. ಬುಲ್ಡೋಜರ್ ತಂದು ಮರಗಳನ್ನು ಧರೆಗುಳಿಸುತ್ತಿರುವುದನ್ನು ವಿಡಿಯೋ ಮಾಡಿದ ವಿದ್ಯಾರ್ಥಿಯೊಬ್ಬರನ್ನು ಬಂಧಿಸಿದ್ದರು.

ಸಾಮಾಜಿಕ ಜಾಲತಾಣಗಳಲ್ಲಿ ರೇವಂತ್ ರೆಡ್ಡಿ ಸರ್ಕಾರದ ವಿರುದ್ದ ದೊಡ್ಡ ಮಟ್ಟದ ಆಕ್ರೋಶ ಭುಗಿಲೆದ್ದಿತ್ತು. ರಾತ್ರಿ ಹೊತ್ತು ಮರಗಳನ್ನು ಉರುಳಿಸುವಾಗ ನವಿಲುಗಳು ಚೀರಾಡುವ, ಎಲ್ಲಿಗೆ ಹೋಗಬೇಕೆಂದು ದಿಕ್ಕು ತೋಚದೆ ಓಡಾಡುವ ಜಿಂಕೆಗಳು ಹಾಗೂ ಮತ್ತಿತರ ವನ್ಯ ಜೀವಿಗಳ ಮನಕಲಕುವ ವಿಡಿಯೋಗಳು ಭಾರೀ ವೈರಲ್ ಆಗಿತ್ತು.

ಅರಣ್ಯ ನಾಶ ತಡೆಯುವಂತೆ ಕೋರಿ ತೆಲಂಗಾಣ ಹೈಕೋರ್ಟ್‌ ಮತ್ತು ಸುಪ್ರೀಂ ಕೋರ್ಟ್‌ಗೆ ಹಲವು ಅರ್ಜಿಗಳು ಸಲ್ಲಿಕೆಯಾಗಿತ್ತು.

ಮದುವೆಗೆ ಒಪ್ಪಿಗೆ: ಅತ್ಯಾಚಾರ ಅಪರಾಧಿಯ ಶಿಕ್ಷೆ ಅಮಾನತುಗೊಳಿಸಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...