Homeಮುಖಪುಟಉತ್ತರ ಪ್ರದೇಶ: `ಒಂದು ಜಿಲ್ಲೆ, ಒಂದು ಉತ್ಪನ್ನ’ ಕಾರ್ಯಕ್ರಮಕ್ಕೆ ಕಂಗನಾ ರಾಯಭಾರಿ

ಉತ್ತರ ಪ್ರದೇಶ: `ಒಂದು ಜಿಲ್ಲೆ, ಒಂದು ಉತ್ಪನ್ನ’ ಕಾರ್ಯಕ್ರಮಕ್ಕೆ ಕಂಗನಾ ರಾಯಭಾರಿ

- Advertisement -
- Advertisement -

ಒಂದಿಲ್ಲೊಂದು ವಿವಾದಾತ್ಮ ಹೇಳಿಕೆ ನೀಡುವ, ಬಿಜೆಪಿ ಹಾಗೂ ಸಂಘಪರಿವಾರದ ಜೊತೆ ಗುರುತಿಸಿಕೊಂಡಿರುವ ಬಾಲಿವುಡ್‌ ನಟಿ ಕಂಗನಾ ರಣಾವತ್‌ ಅವರನ್ನು ಉತ್ತರ ಪ್ರದೇಶ ಸರ್ಕಾರ ಕಾರ್ಯಕ್ರಮವೊಂದಕ್ಕೆ ರಾಯಭಾರಿಯನ್ನಾಗಿ ನೇಮಿಸಿಕೊಂಡಿದೆ.

ಉತ್ತರ ಪ್ರದೇಶ ಸರ್ಕಾರ ಜಾರಿಗೆ ತರಲು ಮುಂದಾಗಿರುವ ‘ಒಂದು ಜಿಲ್ಲೆ-ಒಂದು ಉತ್ಪನ್ನ’ ಕಾರ್ಯಕ್ರಮದ ಬ್ರಾಂಡ್ ಅಂಬಾಸಿಡರ್ ಆಗಿ ನಟಿ ಕಂಗನಾ ರಣಾವತ್ ಅವರನ್ನು ಶುಕ್ರವಾರ ನೇಮಿಸಿಕೊಳ್ಳಲಾಗಿದೆ.

ನಟಿ ಕಂಗನಾ ರಣಾವತ್‌ ಅವರು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಅವರ ಅಧಿಕೃತ ನಿವಾಸದಲ್ಲಿ ಭೇಟಿಯಾಗಿದ್ದಾರೆ. ಕಂಗನಾ ಅವರನ್ನು ಬ್ರಾಂಡ್‌ ಅಂಬಾಸಿಡರ್‌ ಅಗಿ ಸರ್ಕಾರ ನೇಮಿಸಿಕೊಳ್ಳಲಾಗಿದೆ ಎಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹೇಳಿದ್ದಾರೆ.

PC: NDTV

ರಾಜ್ಯದ 75 ಜಿಲ್ಲೆಗಳಾದ್ಯಂತ ನಿರ್ದಿಷ್ಟ-ಉತ್ಪನ್ನ, ಸಾಂಪ್ರದಾಯಿಕ ಕೈಗಾರಿಕಾ ಕೇಂದ್ರಗಳನ್ನು ರಚಿಸುವ ಉದ್ದೇಶದಿಂದ ಉತ್ತರ ಪ್ರದೇಶ ಸರ್ಕಾರವು ಒಂದು ಜಿಲ್ಲೆ-ಒಂದು ಉತ್ಪನ್ನ (ಒಡಿಒಪಿ) ಕಾರ್ಯಕ್ರಮವನ್ನು ಆರಂಭಿಸಿದೆ.

“ನಟಿ ಕಂಗನಾ ರಣಾವತ್ ಅವರನ್ನು ಯುಪಿ ಸಿಎಂ ಭೇಟಿ ಮಾಡಿ, ಅವರಿಗೆ ಓಡಿಒಪಿ ಉತ್ಪನ್ನವನ್ನು ನೀಡಿದ್ದಾರೆ. ಕಂಗನಾ ಅವರು ಒಡಿಒಪಿಗೆ ನಮ್ಮ ಬ್ರಾಂಡ್ ಅಂಬಾಸಿಡರ್ ಆಗಿ ನೇಮಕಗೊಂಡಿದ್ದಾರೆ” ಎಂದು ಮಾಹಿತಿ ವಿಭಾಗದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನವನೀತ್ ಸೆಹಗಲ್ ಟ್ವೀಟ್‌ ಮಾಡಿದ್ದಾರೆ.

ಹಿರಿಯ ಅಧಿಕಾರಿಯ ಪ್ರಕಾರ,  ಸಿಎಂ ಜೊತೆಗಿನ ಸಭೆಯಲ್ಲಿ ಕಂಗನಾ ಅವರು ಉತ್ತರ ಪ್ರದೇಶದಲ್ಲಿ ಸಿಎಂ ಯೋಗಿ ಮಾಡುತ್ತಿರುವ ಕೆಲಸಗಳನ್ನು ಶ್ಲಾಘಿಸಿದ್ದಾರೆ. ಕಂಗನಾ ಅವರು ಅಯೋಧ್ಯೆಯ ರಾಮ ಮಂದಿರಕ್ಕೆ ಭೇಟಿ ನೀಡುವಂತೆ ಸಿಎಂ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಮಾನನಷ್ಟ ಮೊಕದ್ದಮೆ: ಕೊನೆಗೂ ನ್ಯಾಯಾಲಯದ ಮುಂದೆ ಹಾಜರಾದ ನಟಿ ಕಂಗನಾ ರಣಾವತ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚಾಮರಾಜನಗರ: ರೈತ ಮುಖಂಡರ ಮೇಲೆ ಬಿಜೆಪಿಗರಿಂದ ಹಲ್ಲೆ

0
ರೈತ ಮುಖಂಡರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿ ಬೆದರಿಕೆ ಹಾಕಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಬಿಜೆಪಿ ಗುಂಡಾಗಳು ಅವಾಚ್ಯವಾಗಿ ನಿಂದಿಸಿ ತಳ್ಳಾಟ ನಡೆಸಿದ್ದಾರೆ, ರೈತರ ಸ್ವಾಭಿಮಾನವಾದ ಹಸಿರು ಟವಲನ್ನು ಕಿತ್ತು ಅವಮಾನಿಸಿದ್ದಾರೆ...