ತಮ್ಮ ವಿರುದ್ಧ ಮುಂಬೈ ಪೊಲೀಸರು ದಾಖಲಿಸಿರುವ ಎಫ್‌ಐಆರ್ ಅನ್ನು ರದ್ದುಪಡಿಸುವಂತೆ ಕೋರಿ ಬಾಲಿವುಡ್ ನಟಿ ಕಂಗನಾ ರಣಾವತ್ ಮತ್ತು ಅವರ ಸಹೋದರಿ ರಂಗೋಲಿ ಚಾಂಡೇಲ್ ಇಂದು ಬಾಂಬೆ ಹೈಕೋರ್ಟ್‌ನಲ್ಲಿ ಮನವಿ ಸಲ್ಲಿಸಿದ್ದಾರೆ. ಕೋಮು ದ್ವೇಷ ಹರಡಲು ಪ್ರಯತ್ನಿಸಿದ್ದಾರೆ ಎಂಬ ಕಾರಣಕ್ಕೆ ಅವರ ಮೇಲೆ ಮುಂಬೈ ಪೊಲೀಸರು ಎಫ್ಐಆರ್ ದಾಖಲಿಸಿದ್ದರು.
ಕಂಗನಾ ರಣಾವತ್ ಮತ್ತು ಅವರ ಸಹೋದರಿ ಮೇಲೆ ದೇಶದ್ರೋಹ ಆರೋಪದಡಿ ಎಫ್‌ಐಆರ್ ದಾಖಲಿಸಲಾಗಿದ್ದು, ಇವರ ವಿರುದ್ಧ ದೂರು ನೀಡಿದ ಹಿನ್ನೆಲೆಯಲ್ಲಿ ವಿಚಾರಣೆ ನಡೆಸುವಂತೆ ಬಾಂದ್ರಾ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಪೊಲೀಸರಿಗೆ ನಿರ್ದೇಶನ ನೀಡಿತ್ತು.
ಇದನ್ನೂ ಓದಿ: ಕಂಗನಾ ರಣಾವತ್ ವಿರುದ್ಧ ದೂರು ದಾಖಲಿಸಿದ ಜಾವೇದ್ ಅಖ್ತರ್!
“ಈ ಎಫ್ಐಆರ್ ಮತ್ತು ಮ್ಯಾಜಿಸ್ಟ್ರೇಟ್ ನೀಡಿರುವ ಈ ಆದೇಶವನ್ನು ರದ್ದುಗೊಳಿಸುವಂತೆ ಕಂಗನಾ ರಣಾವತ್ ಮತ್ತು ರಂಗೋಲಿ ಬಾಂಬೆ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ” ಎಂದು ಅವರ ವಕೀಲ ರಿಜ್ವಾನ್ ಸಿದ್ದಿಕಿ ಪಿಟಿಐಗೆ ತಿಳಿಸಿದ್ದಾರೆ.
ಇದನ್ನೂ ಓದಿ: ಕೋಮು ದ್ವೇಷ ಹರಡಿದ ಆರೋಪ: ವಿಚಾರಣೆಗೆ ಹಾಜರಾಗುವಂತೆ ಕಂಗನಾ ರಣಾವತ್‌ಗೆ ನೋಟಿಸ್!
ಸಮುದಾಯಗಳ ನಡುವೆ ದ್ವೇಷವನ್ನು ಉತ್ತೇಜಿಸಿದ ಆರೋಪದ ಮೇಲೆ ಅವರ ವಿರುದ್ಧ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಹೇಳಿಕೆಗಳನ್ನು ದಾಖಲಿಸಲು ನವೆಂಬರ್ 23 ಮತ್ತು 24 ರಂದು ಪೊಲೀಸರ ಮುಂದೆ ಹಾಜರಾಗುವಂತೆ ಕಳೆದ ವಾರವೇ ನೋಟಿಸ್ ನೀಡಲಾಗಿತ್ತು.
ನ್ಯಾಯಾಲಯದ ನಿರ್ದೇಶನದ ಮೇರೆಗೆ, ಬಾಂದ್ರಾ ಪೊಲೀಸರು ರಣಾವತ್ ಮತ್ತು ಆಕೆಯ ಸಹೋದರಿಯ ವಿರುದ್ಧ ಐಪಿಸಿ ಸೆಕ್ಷನ್ 153 ಎ (ಧರ್ಮ, ಜನಾಂಗ, ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 295 ಎ (ಧಾರ್ಮಿಕ ಭಾವನೆಗಳನ್ನು ನೋಯಿಸುವ ಉದ್ದೇಶಪೂರ್ವಕ ಕೃತ್ಯಗಳು) ಮತ್ತು 124 (ದೇಶದ್ರೋಹ), 34ರ (ಸಾಮಾನ್ಯ ಉದ್ದೇಶ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಇದನ್ನೂ ಓದಿ: ಜಾತಿ ಮತ್ತು ಮೀಸಲಾತಿ ಬಗ್ಗೆ ನಟಿ ಕಂಗನಾ ರಣಾವತ್‌ಗೊಂದು ಪತ್ರ


