Homeಮುಖಪುಟಅಮೆರಿಕನ್‌ ಜೀನ್ಸ್ ಬಗ್ಗೆ ಕಂಗನಾ ಟ್ವೀಟ್: ಹಳೆಯ ಫೋಟೋಗಳನ್ನು ಶೇರ್ ಮಾಡಿ ಕಾಲೆಳೆದ ನೆಟ್ಟಿಗರು

ಅಮೆರಿಕನ್‌ ಜೀನ್ಸ್ ಬಗ್ಗೆ ಕಂಗನಾ ಟ್ವೀಟ್: ಹಳೆಯ ಫೋಟೋಗಳನ್ನು ಶೇರ್ ಮಾಡಿ ಕಾಲೆಳೆದ ನೆಟ್ಟಿಗರು

ಇಂತಹ ಬೂಟಾಟಿಕೆಯನ್ನು ಎಲ್ಲೂ ಕಾಣಲು ಸಾಧ್ಯವಿಲ್ಲ ಎಂದು ಹಲವು ಮಂದಿ ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

’ಪ್ರಸ್ತುತ ಸಾಧಕರನ್ನು ಗುರುತಿಸಲು ಹೊರಟಾಗ ಅವರೆಲ್ಲಾ ಹರಿದ ಟೋನ್ಡ್ ಅಮೆರಿಕನ್ ಜೀನ್ಸ್‌ಗಳನ್ನು ಧರಿಸಿರುತ್ತಾರೆ ಎಂದು, ಟೋನ್ಡ್ ಅಮೆರಿಕನ್ ಜೀನ್ಸ್ ಧರಿಸಿಸುವವರನ್ನು ಪರೋಕ್ಷವಾಗಿ ಟೀಕಿಸಿದ್ದ ನಟಿ ಕಂಗನಾ ರಣಾವತ್ ಅವರನ್ನು ನೆಟ್ಟಿಗರು ಅವರದ್ದೇ ಭಾವಚಿತ್ರಗಳನ್ನು ಹಂಚಿಕೊಳ್ಳುವ ಮೂಲಕ ಕಾಲೆಳೆದಿದ್ದಾರೆ.

ಬುಧವಾರ (ಮಾರ್ಚ್ 3) ನಟಿ ಕಂಗನಾ ರಣಾವತ್ ತಮ್ಮ ಟ್ವಿಟರ್‌ ಖಾತೆಯಲ್ಲಿ ಭಾರತ, ಜಪಾನ್ ಮತ್ತು ಸಿರಿಯಾದ ಮೂವರು “ಪ್ರಾಚೀನ” ಮಹಿಳೆಯರ ಚಿತ್ರವನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಪ್ರತಿಯೊಬ್ಬರೂ ತಮ್ಮ ದೇಶಗಳ ಸಾಂಪ್ರದಾಯಿಕ ಬಟ್ಟೆಗಳನ್ನು ಧರಿಸಿದ್ದಾರೆ. 1885 ರಲ್ಲಿ ತೆಗೆದಿರುವ ಈ ಛಾಯಾಚಿತ್ರದಲ್ಲಿರುವ ಮೂವರು ಮಹಿಳೆಯರು, ತಮ್ಮ ತಮ್ಮ ದೇಶದ ಮೊದಲ ಪರವಾನಗಿ ಪಡೆದ ಮಹಿಳಾ ವೈದ್ಯರು ಎಂದು ಹೇಳಲಾಗಿದೆ.

ಈ ಚಿತ್ರದ ಜೊತೆ ಇವರ ಸಂಸ್ಕೃತಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದ ನಟಿ,  ಇಂದಿನ ಸಾಧಕರನ್ನು ಗುರುತಿಸಲು ಹೊರಟರೇ ಅವರೆಲ್ಲಾ ಹರಿದ ಅಮೆರಿಕನ್ ಜೀನ್ಸ್ ಮತ್ತು ರಾಗ್‌ಗಳನ್ನು ಬ್ಲೌಸ್‌ನಂತೆ ಧರಿಸಿರುತ್ತಾರೆ. ಇದು ಅಮೆರಿಕನ್ ಮಾರ್ಕೆಟಿಂಗ್ ಅನ್ನು ಹೊರತುಪಡಿಸಿ ಏನನ್ನೂ ಪ್ರತಿನಿಧಿಸುವುದಿಲ್ಲ ಎಂದು ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ಮಾನಹಾನಿ ಪ್ರಕರಣ: ವಿಚಾರಣೆಗೆ ಹಾಜರಾಗದ ಕಂಗನಾ ರಣಾವತ್‌ಗೆ ವಾರೆಂಟ್!

ಈ ಟ್ವೀಟ್‌ಗೆ ಪ್ರತಿಟ್ವೀಟ್ ಮಾಡಿರುವ ನೆಟ್ಟಿಗರು ಅವರು ಟೋನ್ಡ್ ಜೀನ್ಸ್‌ಗಳನ್ನು ಧರಿಸಿರುವ ಚಿತ್ರಗಳನ್ನು ಹಂಚಿಕೊಂಡು, ಇದು ಯಾವ ಮಾರ್ಕೆಟಿಂಗ್ ಎಂದು ಪ್ರಶ್ನಿಸಿದ್ದಾರೆ.

ಇಂತಹ ಬೂಟಾಟಿಕೆಯನ್ನು ಎಲ್ಲೂ ಕಾಣಲು ಸಾಧ್ಯವಿಲ್ಲ ಎಂದು ಹಲವು ಮಂದಿ ಟ್ವೀಟ್ ಮಾಡಿದ್ದಾರೆ.

ಮತ್ತೊಬ್ಬ ಟ್ವಿಟರ್‌ ಬಳಕೆದಾರರು ನಟಿ ಕಂಗನಾ ರಣಾವತ್ ಧರಿಸಿರುವ ಹಲವು ವಿದೇಶಿ ಶೈಲಿಯ ಧಿರಿಸುಗಳ ಕುರಿತು ವಿವರವಾಗಿ ದಾಖಲಿಸಿ, ವಿದೇಶಿ ಮಾರ್ಕೆಟಿಂಗ್ ಅಂದರೆ ಇದು ಎಂದಿದ್ದಾರೆ.

ಟ್ವೀಟ್ ನೋಡಲು ಇಲ್ಲಿ ಕ್ಲಿಕ್ ಮಾಡಿ.

ನಿಶಾದ್ ಸಿಂಗ್ ಎನ್ನುವ ಟ್ವಿಟರ್‌ ಬಳಕೆದಾರರು ಕಂಗನಾ ರಣಾವತ್ ಟ್ವೀಟ್‌ಗೆ ಪ್ರತಿಕ್ರಿಯಿಸಿ, ಅವರು ನಿಜವಾದ ದೇಶಭಕ್ತರಾಗಿದ್ದರೇ ರಾಮ್‌ದೇವ್ ಅವರ ಜೀನ್ಸ್ ಧರಿಸಲು ಹೇಳಿ ಎಂದಿದ್ದಾರೆ.

ದಿ ವರ್ಲ್ಡ್‌ನ ಸಾರ್ವಜನಿಕ ರೇಡಿಯೊ ಕಾರ್ಯಕ್ರಮ ಮತ್ತು ಪಾಡ್‌ಕ್ಯಾಸ್ಟ್ ಪ್ರಕಟಿಸಿದ ವರದಿಯ ಪ್ರಕಾರ, ನಟಿ ಕಂಗನಾ ರಣಾವತ್ ಅವರು ಹಂಚಿಕೊಂಡಿರುವ ಛಾಯಾಚಿತ್ರದಲ್ಲಿನ ಮಹಿಳೆಯರು ಪೆನ್ಸಿಲ್ವೇನಿಯಾದ ಮಹಿಳಾ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು. ಚಿತ್ರ ಈಗ ಡ್ರೆಕ್ಸೆಲ್ ವಿಶ್ವವಿದ್ಯಾಲಯದ ಆರ್ಕೈವ್‌ಗಳಲ್ಲಿದೆ ಎಂದು ಎನ್‌ಡಿಟಿವಿ ಉಲ್ಲೆಖಿಸಿದೆ.


ಇದನ್ನೂ ಓದಿ: ಕಂಗನಾ ಟ್ವಿಟರ್ ಖಾತೆ ಅಮಾನತುಗೊಳಿಸಿ ಅರ್ಜಿ: ಮಾರ್ಚ್ 9 ರಂದು ವಿಚಾರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...