Homeಮುಖಪುಟಕಂಗನಾಗೆ ನೀಡಿರುವ ಪದ್ಮಶ್ರೀ ವಾಪಸ್ ಪಡೆದು ಚಿಕಿತ್ಸೆ ಕೊಡಿಸಿ: ರಾಷ್ಟ್ರಪತಿಗೆ ಪತ್ರ ಬರೆದ DCW ಅಧ್ಯಕ್ಷೆ

ಕಂಗನಾಗೆ ನೀಡಿರುವ ಪದ್ಮಶ್ರೀ ವಾಪಸ್ ಪಡೆದು ಚಿಕಿತ್ಸೆ ಕೊಡಿಸಿ: ರಾಷ್ಟ್ರಪತಿಗೆ ಪತ್ರ ಬರೆದ DCW ಅಧ್ಯಕ್ಷೆ

- Advertisement -
- Advertisement -

ಭಾರತಕ್ಕೆ ಸ್ವಾತಂತ್ರ್ಯ ಬಂದ ಕುರಿತು ವಿವಾದಿತ ಹೇಳಿಕೆ ನೀಡಿ ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸಿರುವ ಬಾಲಿವುಡ್ ನಟಿ ಕಂಗನಾ ರಣಾವತ್‌ರವರಿಗೆ ನೀಡಿರುವ ಪದ್ಮಶ್ರೀ ಪ್ರಶಸ್ತಿಯನ್ನು ವಾಪಸ್ ಪಡೆಯಬೇಕೆಂದು ದೆಹಲಿ ಮಹಿಳಾ ಆಯೋಗದ ಅಧ್ಯಕ್ಷರಾದ ಸ್ವಾತಿ ಮಾಲಿವಾಲ್‌ರವರು ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದಾರೆ.

ಭಾರತ ದೇಶದ ಸ್ವಾತಂತ್ರ್ಯಕ್ಕಾಗಿ ಜೀವ ಸವೆಸಿದ, ತಮ್ಮ ಪ್ರಾಣ ತ್ಯಾಗ ಮಾಡಿದ ಮಹಾತ್ಮ ಗಾಂಧೀಜಿ, ಭಗತ್‌ಸಿಂಗ್‌ರಂತಹ ಸಾವಿರಾರು ಸ್ವಾತಂತ್ರ್ಯ ಹೋರಾಟಗಾರರಿಗೆ ಅವಮಾನ ಮಾಡಿರುವ ಕಂಗನಾ ರಣಾವತ್‌ರವರಿಗೆ ನೀಡಬೇಕಿರುವುದು ಚಿಕಿತ್ಸೆಯನ್ನು ಹೊರತು ಪದ್ಮಶ್ರೀಯಲ್ಲ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

1857ರ ಭಾರತದ ಪ್ರಥಮ ಸ್ವಾತಂತ್ರ್ಯ ದಂಗೆ, ಖಿಲಾಫತ್ ಚಳವಳಿ, ಚಂಪರಣ್ಯ ಸತ್ಯಾಗ್ರಹ, ಭಾರತ ಬಿಟ್ಟು ತೊಲಗಿ ಚಳವಳಿ ಸೇರಿದಂತೆ ಸ್ವಾತಂತ್ರ್ಯ ಚಳವಳಿಯ ಹಲವು ಹೋರಾಟಗಳನ್ನು ಪಟ್ಟಿಮಾಡಿರುವ ಸ್ವಾತಿ ಮಾಲಿವಾಲ್ ಇವುಗಳನ್ನು ಕಂಗನಾ ಅವಮಾನಿಸಿರುವುದನ್ನು ಖಂಡಿಸಿದ್ದಾರೆ.

ದೇಶದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷ್ ಆಡಳಿತದ ವಿರುದ್ಧ ಜಲಿಯನ್ ವಾಲಾಬಾಗ್‌ನಲ್ಲಿ ಒಟ್ಟುಗೂಡಿದ ಸಾವಿರಾರು ಜನರನ್ನು, ನಂತರ ನಡೆದ ಹತ್ಯಾಕಾಂಡವನ್ನು ಹೇಗೆ ಮರೆಯಲು ಸಾಧ್ಯ ಎಂದು ಪ್ರಶ್ನಿಸಿರುವ ಮಾಲಿವಾಲ್, ಇತಿಹಾಸದ ಈ ಪುಟಗಳು ಭಿಕ್ಷೆಯೇ ಎಂದು ಕಿಡಿಕಾರಿದ್ದಾರೆ.

“ಇದು ಕಂಗನಾ ಬಾಯಿ ತಪ್ಪಿ ಮಾತನಾಡಿದ್ದಲ್ಲ. ಅವರು ನಮ್ಮ ದೇಶದ ಜನರ ವಿರುದ್ಧ ವಿಷ ಉಗುಳುತ್ತಿರುವುದರಿಂದ ಅವರು ಸದೃಢ ಮನಸ್ಸಿನವರಾಗಿ ಕಾಣುತ್ತಿಲ್ಲ. ಅವರ ಅಭಿಪ್ರಾಯಕ್ಕೆ ಸಹಮತವಿಲ್ಲದವರ ಮೇಲೆ ಆಕ್ರಮಣ ಮಾಡಲು ಪದೇ ಪದೇ ಕೆಟ್ಟ ಭಾಷೆಯನ್ನು ಬಳಸಿದ್ದಾರೆ” ಎಂದು ಸ್ವಾತಿ ಮಾಲಿವಾಲ್ ಕಿಡಿಕಾರಿದ್ದಾರೆ.

ಬುಧವಾರ (ನ.10) ಖಾಸಗಿ ಟೆಲಿವಿಷನ್ ಚಾನೆಲ್ ಟೈಮ್ಸ್ ನೌ ಆಯೋಜಿಸಿದ್ದ ಕಾನ್ಕ್ಲೇವ್‌ನಲ್ಲಿ ಭಾಗವಹಿಸಿದ್ದ ನಟಿ ಕಂಗನಾ ರಣಾವತ್ ಹಿಂದಿಯಲ್ಲಿ ಮಾತನಾಡುತ್ತಾ, “1947 ರಲ್ಲಿ ಸಿಕ್ಕಿದ್ದು ಸ್ವಾತಂತ್ರ್ಯವಲ್ಲ ಅದು ಭಿಕ್ಷೆ. ದೇಶಕ್ಕೆ ನಿಜವಾದ ಸ್ವಾತಂತ್ರ್ಯ 2014 ರಲ್ಲಿ ಬಂದಿದೆ” ಎಂದಿದ್ದರು. ಆ ಮೂಲಕ 2014 ರಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೇಶ ಸ್ವತಂತ್ರಗೊಂಡಿದೆ ಎಂಬರ್ಥದಲ್ಲಿ ಕಂಗನಾ ಮಾತನಾಡಿದ್ದರು. ಬಿಜೆಪಿ ಸಂಸದ ವರುಣ್ ಗಾಂಧಿ ಸೇರಿದಂತೆ ಲಕ್ಷಾಂತರ ಜನ ಕಂಗನಾ ಹೇಳಿಕೆಯನ್ನು ಖಂಡಿಸಿದ್ದರು.

ಕಂಗನಾ ರಣಾವತ್ ತನ್ನ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು, ಅದನ್ನು ಯಾರಾದರೂ ತಪ್ಪೆಂದು ಸಾಬೀತುಪಡಿಸಿದರೆ ಪದ್ಮಶ್ರೀ ವಾಪಸ್ ಮಾಡುತ್ತೇನೆ ಎಂದು ಹೇಳಿದ್ದಾರೆ.

ಇಂದು ಈ ಕುರಿತು ಮತ್ತೆ ಪ್ರತಿಕ್ರಿಯಿಸಿರುವ ಕಂಗನಾ, “ಭಾರತದಲ್ಲಿ ಬ್ರಿಟಿಷರು ಮಾಡಿದ ಲೆಕ್ಕವಿಲ್ಲದಷ್ಟು ಅಪರಾಧಗಳಿಗೆ ಹೊಣೆಗಾರರಾಗದಿರುವುದು ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ತೋರಿದ ಅಗೌರವ” ಎಂದಿದ್ದಾರೆ.

ಸ್ವಾತಂತ್ರ್ಯದ ಸಮಯದಲ್ಲಿ ನಮ್ಮ ದೇಶದ ಸಂಪತ್ತನ್ನು ಲೂಟಿ ಮಾಡುವುದರಿಂದ ಹಿಡಿದು ನಮ್ಮ ಸ್ವಾತಂತ್ರ್ಯ ಹೋರಾಟಗಾರರನ್ನು ನಿರ್ದಯವಾಗಿ ಕೊಂದು ನಮ್ಮ ದೇಶವನ್ನು ಎರಡು ಭಾಗಗಳಾಗಿ ವಿಭಜಿಸುವವರೆಗೆ ಭಾರತದಲ್ಲಿ ಮಾಡಿದ ಲೆಕ್ಕವಿಲ್ಲದಷ್ಟು ಅಪರಾಧಗಳಿಗೆ ನಮ್ಮ ರಾಷ್ಟ್ರ ನಿರ್ಮಾತೃಗಳು ಬ್ರಿಟಿಷರನ್ನು ಹೊಣೆಗಾರರನ್ನಾಗಿ ಮಾಡಲಿಲ್ಲ. ಎರಡನೇ ವಿಶ್ವಯುದ್ಧದ ನಂತರ ಬ್ರಿಟಿಷರು ತಮ್ಮ ಬಿಡುವಿನ ವೇಳೆಯಲ್ಲಿ ಭಾರತವನ್ನು ತೊರೆದರು. ವಿನ್‌ಸ್ಟನ್ ಚರ್ಚಿಲ್ ಅವರನ್ನು ಯುದ್ಧ ವೀರ ಎಂದು ಪ್ರಶಂಸಿಸಲಾಯಿತು. ಬಂಗಾಳದ ಕ್ಷಾಮಕ್ಕೆ ಕಾರಣವಾದ ಅದೇ ವ್ಯಕ್ತಿ; ಅವರು ತನ್ನ ಅಪರಾಧಗಳಿಗಾಗಿ ಸ್ವತಂತ್ರ ಭಾರತದ ನ್ಯಾಯಾಲಯಗಳಲ್ಲಿ ಎಂದಾದರೂ ವಿಚಾರಣೆಗೆ ಒಳಗಾಗಿದ್ದಾರೆಯೇ? ಇಲ್ಲ ಎಂದು ಕಂಗನಾ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಬರೆದಿದ್ದಾರೆ.


ಇದನ್ನೂ ಓದಿ: ನನ್ನ ಹೇಳಿಕೆ ತಪ್ಪೆಂದು ಸಾಬೀತುಪಡಿಸಿದರೆ ಪದ್ಮಶ್ರೀ ವಾಪಸ್ ಮಾಡುತ್ತೇನೆ: ಕಂಗನಾ ರಣಾವತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...