Homeಮುಖಪುಟಕಂಗನಾ ವಿರುದ್ಧ ಜಾವೇದ್ ದೂರು: ಅದೊಂದು ತೋಳಗಳ ಹಿಂಡು ಎಂದ ನಟಿ!

ಕಂಗನಾ ವಿರುದ್ಧ ಜಾವೇದ್ ದೂರು: ಅದೊಂದು ತೋಳಗಳ ಹಿಂಡು ಎಂದ ನಟಿ!

ನಟಿ ಕಂಗನಾ ತನ್ನನ್ನು ಸಿಂಹಿಣಿಗೆ ಹೋಲಿಸಿಕೊಂಡಿದ್ದು, ಆಕೆಯ ವಿರುದ್ಧ ದೂರು ದಾಖಲಿಸುವವರು ಮತ್ತು ಟೀಕಿಸುತ್ತಿರುವವರನ್ನು ತೋಳಗಳಿಗೆ ಹೋಲಿಸಿದ್ದಾರೆ.

- Advertisement -
- Advertisement -

ಬಾಲಿವುಡ್ ನಟಿ ಕಂಗನಾ ರಣಾವತ್ ಮೇಲೆ ಮತ್ತೊಂದು ಪ್ರಕರಣ ದಾಖಲಾಗಿದೆ. ಬಾಲಿವುಡ್ ಗೀತರಚನೆಕಾರ ಜಾವೇದ್ ಅಖ್ತರ್‌, ಮುಂಬೈನ ಮೆಟ್ರೋಪಾಲಿಟನ್ ನ್ಯಾಯಾಲಯದಲ್ಲಿ ಕಂಗನಾ ವಿರುದ್ಧ ಮಾನಹಾನಿ ಪ್ರಕರಣದ ದೂರು ದಾಖಲಿಸಿದ್ದಾರೆ. ಇದಕ್ಕೆ ಕಂಗನಾ ಪ್ರತಿಕ್ರಿಯೆ ನೀಡಿದ್ದಾರೆ.

ನಟ ಸುಶಾಂತ್ ಸಿಂಗ್ ರಜಪೂತ್ ಅಸಹಜ ಸಾವಿನ ಪ್ರಕರಣದಲ್ಲಿ ನಟಿ ಕಂಗನಾ ಅನಗತ್ಯವಾಗಿ ನನ್ನನ್ನು ಎಳೆದು ತರುವ ಪ್ರಯತ್ನ ಮಾಡಿದ್ದಾರೆ. ಖಾಸಗಿವಾಹಿನಿಗಳಿಗೆ ನೀಡಿರುವ ಸಂದರ್ಶನಗಳಲ್ಲಿ ನನ್ನ ವಿರುದ್ಧ ಆಧಾರರಹಿತ ದೂರುಗಳನ್ನು ಮಾಡುವ ಮೂಲಕ ನನ್ನ ಮಾನಹಾನಿ ಮಾಡಿದ್ದಾರೆ ಎಂದು ಜಾವೇದ್ ಅಖ್ತರ್‌ ಮುಂಬೈ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದಾರೆ.

ಈ ವಿಷಯವನ್ನು ಶಿವಸೇನೆ ಮುಖಂಡ ಸಂಜಯ್ ರಾವತ್ ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದರು. ಇದನ್ನು ರಿಟ್ವೀಟ್ ಮಾಡಿರುವ ನಟಿ ಕಂಗನಾ ರಣಾವತ್, “ಏಕ್ ಥಿ ಶೆರ್ನಿ… ಓರ್ ಏಕ್‌ ಭೆಡಿಯೋಂಕಾ ಝೂಡ್”  (ಒಬ್ಬಳು ಸಿಂಹಿಣಿ… ಮತ್ತು ಒಂದು ತೋಳಗಳ ಹಿಂಡು) ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಕಂಗನಾ ವಿರುದ್ಧ ವಿಡಿಯೋ ಮಾಡಲು 65 ಲಕ್ಷ ಹಣ ಪಡೆಯಲಾಗಿದೆ: ಧೃವ್ ರಾಠೀ ಕೊಟ್ಟ ಉತ್ತರವೇನು?

ನಟಿ ಕಂಗನಾ ತನ್ನನ್ನು ಸಿಂಹಿಣಿಗೆ ಹೋಲಿಸಿಕೊಂಡಿದ್ದು, ಆಕೆಯ ವಿರುದ್ಧ ದೂರು ದಾಖಲಿಸುವವರು ಮತ್ತು ಟೀಕಿಸುತ್ತಿರುವವರನ್ನು ತೋಳಗಳ ಗುಂಪಿಗೆ ಹೋಲಿಸಿದ್ದಾರೆ.

​ಮುಂಬೈನ ಮೆಟ್ರೋಪಾಲಿಟನ್​​ ಕೋರ್ಟ್​​ನಲ್ಲಿ ಕಂಗನಾ ವಿರುದ್ಧ ಐಪಿಸಿ ಸೆಕ್ಷನ್​ 499 ಮತ್ತು 500 ಅಡಿಯಲ್ಲಿ ದೂರು ದಾಖಲಾಗಿದೆ. ನಿನ್ನೆ ಕೂಡ ಕಂಗನಾಗೆ ಮುಂಬೈ ಪೊಲೀಸರು ದೇಶದ್ರೋಹ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು.

ಇದನ್ನೂ ಓದಿ: ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಕಂಗನಾ ರಾಣಾವತ್ ವಿರುದ್ಧ FIR ದಾಖಲು

ಮಹಾರಾಷ್ಟ್ರದಲ್ಲಿ ಕಂಗನಾ ರಣಾವತ್ ಮತ್ತು ಆಡಳಿತರೂಢ ಶಿವಸೇನೆ ನಡುವೆ ಗುದ್ದಾಟ ನಡೆಯುತ್ತಿದ್ದು, ಇದು ಆಕೆಯ ಪರಸ್ಪರ ವಾಗ್ದಾಳಿಗೆ ಕಾರಣವಾಗಿದೆ. ನಟ ಸುಶಾಂತ್ ಸಿಂಗ್ ರಜಪೂತ್‌ ಸಾವಿನಿಂದ ಆರಂಭಗೊಂಡ ಈ ಗುದ್ದಾಟ, ಏಮ್ಸ್ ವೈದ್ಯರು ಅದು ಆತ್ಮಹತ್ಯೆ ಎಂದು ಪ್ರತಿಪಾದಿಸಿದರೂ ಸಹ ಇನ್ನು ನಿಂತಿಲ್ಲ. ನಟಿ ಕಂಗನಾ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಶಿವಸೇನೆ, ಉದ್ಧವ್ ಠಾಕ್ರೆ ಸರ್ಕಾರವನ್ನು ನೆರವಾಗಿಯೇ ಟೀಕಿಸುತ್ತಿದ್ದಾರೆ.

ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಇತ್ತಿಚೆಗೆ ಕಂಗನಾ ಹೆಸರೇಳದೆ ಅವರನ್ನು ಟೀಕಿಸಿದ್ದರು. “ಕೆಲವು ಜನರು ತಮ್ಮ ರಾಜ್ಯಗಳಲ್ಲಿ ಜೀವನೋಪಾಯಕ್ಕಾಗಿ ಏನೂ ಇಲ್ಲದೆ ಮುಂಬೈಗೆ ಬರುತ್ತಾರೆ ಮತ್ತು ದ್ರೋಹವೆಸಗುತ್ತಾರೆ. ಮುಂಬೈಯನ್ನು ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಹೋಲಿಸುವುದು ಪ್ರಧಾನಿ ನರೇಂದ್ರ ಮೋದಿಯವರಿಗೆ ಮಾಡುವ ಅಪಮಾನ. ಏಕೆಂದರೆ ಮೋದಿಯವರು ಪಾಕ್ ಆಕ್ರಮಿತ ಪ್ರದೇಶವನ್ನು ಮರಳಿ ಪಡೆಯುವುದಾಗಿ ವಾಗ್ದಾನ ಮಾಡಿದ್ದಾರೆ. ನಮ್ಮ ರಾಜ್ಯವನ್ನು ಹಳಿಯಲು ಕೆಲವರು ಯಾವ ಮಟ್ಟಕ್ಕೂ ಕೂಡ ಹೋಗಬಹುದು” ಎಂದು ಠಾಕ್ರೆ ಹೇಳಿದ್ದರು.

ಇತ್ತ ಕರ್ನಾಟಕದಲ್ಲಿಯೂ ಕಂಗನಾ ವಿರುದ್ಧ ಪ್ರಕರಣ ದಾಖಲಾಗಿದೆ. ಕೇಂದ್ರ ಸರ್ಕಾರದ ಕೃಷಿ ಮಸೂದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಭಯೋತ್ಪಾದಕರಿಗೆ ಹೋಲಿಸಿ ಕಂಗನಾ ರಣಾವತ್ ಟ್ವೀಟ್ ಮಾಡಿದ್ದನ್ನು ಉಲ್ಲೇಖಿಸಿ ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.


ಇದನ್ನೂ ಓದಿ: ಕೋಮು ದ್ವೇಷ ಹರಡಿದ ಆರೋಪ: ನಟಿ ಕಂಗನಾ ಮತ್ತು ಸಹೋದರಿಗೆ ಮತ್ತೆ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...