Homeಮುಖಪುಟತನ್ನ ವಿರುದ್ಧದ ಮಾನಹಾನಿ ಪ್ರಕರಣ ರದ್ದತಿ ಕೋರಿ ಕಂಗನಾ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಕೋರ್ಟ್

ತನ್ನ ವಿರುದ್ಧದ ಮಾನಹಾನಿ ಪ್ರಕರಣ ರದ್ದತಿ ಕೋರಿ ಕಂಗನಾ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಕೋರ್ಟ್

- Advertisement -
- Advertisement -

ನಟಿ ಕಂಗನಾ ರಾಣಾವತ್ ವಿರುದ್ಧ ಗೀತರಚನೆಕಾರ ಜಾವೇದ್ ಅಖ್ತರ್ ಹೂಡಿದ್ದ ಮಾನಹಾನಿ ಪ್ರಕರಣದ ತನಿಖೆಗೆ ತಡೆ ನೀಡಬೇಕು ಮತ್ತು ತನ್ನ ವಿರುದ್ಧದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಬೇಕು ಎಂದು ಕಂಗನಾ ಸಲ್ಲಿಸಿದ ಅರ್ಜಿಯನ್ನು ಮುಂಬೈನ ದಿಂಡೋಶಿಯ ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿದೆ.

ನಟ ಸುಶಾಂತ್ ಸಿಂಗ್ ರಜಪೂತ್ ಅಸಹಜ ಸಾವಿನ ಪ್ರಕರಣದಲ್ಲಿ ನಟಿ ಕಂಗನಾ ಅನಗತ್ಯವಾಗಿ ನನ್ನನ್ನು ಎಳೆದು ತರುವ ಪ್ರಯತ್ನ ಮಾಡಿದ್ದಾರೆ. ಖಾಸಗಿವಾಹಿನಿಗಳಿಗೆ ನೀಡಿರುವ ಸಂದರ್ಶನಗಳಲ್ಲಿ ನನ್ನ ವಿರುದ್ಧ ಆಧಾರರಹಿತ ದೂರುಗಳನ್ನು ಮಾಡುವ ಮೂಲಕ ನನ್ನ ಮಾನಹಾನಿ ಮಾಡಿದ್ದಾರೆ ಎಂದು ಜಾವೇದ್ ಅಖ್ತರ್‌ ಮುಂಬೈ ನ್ಯಾಯಾಲಯದಲ್ಲಿ ಕ್ರಿಮಿನಲ್ ಮಾನಹಾನಿ ದೂರು ದಾಖಲಿಸಿದ್ದಾರೆ.

ಐಪಿಸಿ ಸೆಕ್ಷನ್ 499 ಮತ್ತು 500 (ಮಾನಹಾನಿ) ಅಡಿಯಲ್ಲಿ ಶಿಕ್ಷಾರ್ಹ ಅಪರಾಧಗಳಿಗೆ ಸಂಬಂದಿಸಿದಂತೆ ನವೆಂಬರ್‌ನಲ್ಲಿ ಅಂಧೇರಿಯಲ್ಲಿರುವ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಜಾವೇದ್ ಅಖ್ತರ್ ದೂರು ಸಲ್ಲಿಸಿದ್ದರು.

ಅಂಧೇರಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಮಾರ್ಚ್ 1 ರಂದು ನಟಿ ಕಂಗನಾ ರಾಣಾವತ್ ವಿರುದ್ಧ ನ್ಯಾಯಾಲಯಕ್ಕೆ ಹಾಜರಾಗಲು ವಿಫಲವಾದ ಕಾರಣದಿಂದ ಜಾಮೀನು ವಾರೆಂಟ್ ಹೊರಡಿಸಿತ್ತು.

ಮಾನಹಾನಿ ದೂರಿನಲ್ಲಿ ಮ್ಯಾಜಿಸ್ಟ್ರೇಟ್ ಹೊರಡಿಸಿರುವ ಜಾಮೀನು ವಾರೆಂಟ್ ಅನ್ನು ಪ್ರಶ್ನಿಸಿ ನಟಿ ಕಂಗನಾ ಸೆಷನ್ಸ್ ನ್ಯಾಯಾಲಯವನ್ನು ಸಂಪರ್ಕಿಸಿದ್ದರು. ನಂತರ ವಿಚಾರಣೆಯನ್ನು ಮುಂದೂಡಲಾಗಿತ್ತು. ಇಂದು ಅರ್ಜಿಯನ್ನು ವಜಾಗೊಳಿಸಲು ದಿಂಡೋಶಿಯ ಸೆಷನ್ಸ್ ನ್ಯಾಯಾಲಯ ನಿರಾಕರಿಸಿದೆ.


ಇದನ್ನೂ ಓದಿ: ಅಮೆರಿಕನ್‌ ಜೀನ್ಸ್ ಬಗ್ಗೆ ಕಂಗನಾ ಟ್ವೀಟ್: ಹಳೆಯ ಫೋಟೋಗಳನ್ನು ಶೇರ್ ಮಾಡಿ ಕಾಲೆಳೆದ ನೆಟ್ಟಿಗರು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...