Homeಮುಖಪುಟಕಂಗನಾ ಹೇಳಿಕೆ ಸಂಪೂರ್ಣ ತಪ್ಪು: ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ

ಕಂಗನಾ ಹೇಳಿಕೆ ಸಂಪೂರ್ಣ ತಪ್ಪು: ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ

ಬಾಲಿವುಡ್‌‌ ನಟಿ ಕಂಗನಾ ರಣಾವತ್‌ ‘ಭಾರತದ ಸ್ವಾತಂತ್ಯ್ರ’ದ ಕುರಿತು ನೀಡಿರುವ ಹೇಳಿಕೆಯ ವಿರುದ್ದ ಗುರುವಾರ ಮುಂಬೈನಲ್ಲಿ ದೂರು ದಾಖಲಾಗಿದೆ.

- Advertisement -
- Advertisement -

ಭಾರತಕ್ಕೆ ಸ್ವಾತಂತ್ರ್ಯ ಬಂದ ಕುರಿತು ವಿವಾದಿತ ಹೇಳಿಕೆ ನೀಡಿ ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸಿರುವ ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ದೇಶಾದ್ಯಂತ ಟೀಕೆ, ಖಂಡನೆ ವ್ಯಕ್ತವಾದ ಬೆನ್ನಲ್ಲೆ ಮಹಾರಾಷ್ಟ್ರ ಬಿಜೆಪಿ ಮುಖ್ಯಸ್ಥ ಚಂದ್ರಕಾಂತ್ ಪಾಟೀಲ್ ಕೂಡ ಅವರ ಹೇಳಿಕೆಯನ್ನು ಸಂಪೂರ್ಣ ತಪ್ಪು ಎಂದು ಕರೆದಿದ್ದಾರೆ.

ದೇಶದ ಸ್ವಾತಂತ್ರ್ಯ ಹೋರಾಟದ ಕುರಿತು ಕಂಗನಾ ರಣಾವತ್‌ರವರ ಹೇಳಿಕೆ ಸಂಪೂರ್ಣ ತಪ್ಪು. ಸ್ವಾತಂತ್ರ್ಯ ಚಳವಳಿಯ ಕುರಿತು ನಕರಾತ್ಮಕ ಹೇಳಿಕೆ ನೀಡುವ ಯಾರಿಗೂ ಇಲ್ಲ. ಅವರ ಯಾವ ಭಾವನೆಯಿಟ್ಟುಕೊಂಡು ಆ ಹೇಳಿಕೆ ನೀಡಿದ್ದಾರೆ ಎಂಬುದು ನನಗೆ ಗೊತ್ತಿಲ್ಲ ಎಂದು ಚಂದ್ರಕಾಂತ್ ಪಾಟೀಲ್ ಹೇಳಿದ್ದಾರೆ.

ಬುಧವಾರ (ನ.10) ಖಾಸಗಿ ಟೆಲಿವಿಷನ್ ಚಾನೆಲ್ ಟೈಮ್ಸ್ ನೌ ಆಯೋಜಿಸಿದ್ದ ಕಾನ್ಕ್ಲೇವ್‌ನಲ್ಲಿ ಭಾಗವಹಿಸಿದ್ದ ನಟಿ ಕಂಗನಾ ರಣಾವತ್ ಹಿಂದಿಯಲ್ಲಿ ಮಾತನಾಡುತ್ತಾ, “1947 ರಲ್ಲಿ ಸಿಕ್ಕಿದ್ದು ಸ್ವಾತಂತ್ರ್ಯವಲ್ಲ ಅದು ಭಿಕ್ಷೆ. ದೇಶಕ್ಕೆ ನಿಜವಾದ ಸ್ವಾತಂತ್ರ್ಯ 2014 ರಲ್ಲಿ ಬಂದಿದೆ” ಎಂದಿದ್ದರು. ಆ ಮೂಲಕ 2014 ರಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೇಶ ಸ್ವತಂತ್ರಗೊಂಡಿದೆ ಎಂಬರ್ಥದಲ್ಲಿ ಕಂಗನಾ ಮಾತನಾಡಿದ್ದರು. ಬಿಜೆಪಿ ಸಂಸದ ವರುಣ್ ಗಾಂಧಿ ಸೇರಿದಂತೆ ಲಕ್ಷಾಂತರ ಜನ ಕಂಗನಾ ಹೇಳಿಕೆಯನ್ನು ಖಂಡಿಸಿದ್ದರು.

2014ರಲ್ಲಿ ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದ ನಂತರ ಸಾಮಾನ್ಯ ಜನರು ಸಹ ಸ್ವಾತಂತ್ರ್ಯ ಅನುಭವಿಸುವಂತಾಗಿದೆ. ಇಂದು ದೇಶದಲ್ಲಿ ಯಾರೂ ಕೂಡ ಎರಡೊತ್ತಿನ ಊಟ ಇಲ್ಲದೆ ಮಲಗುತ್ತಿಲ್ಲ. ಕೇವಲ 105 ರೂಗೆ ಮೋದಿ ಸರ್ಕಾರವು 35 ಕೆಜಿ ಪಡಿತರವನ್ನು ವಿತರಿಸುತ್ತಿದೆ. ಹಾಗಾಗಿ ಕಂಗನಾ ರಣಾವತ್‌ರವರು ಮೋದಿ ಸರ್ಕಾರದ ಸಾಧನೆಗಳನ್ನು ಹೊಗಳಬಹುದು. ಆದರೆ ಸ್ವಾತಂತ್ರ್ಯ ಹೋರಾಟವನ್ನು ತೆಗಳುವ ಹಕ್ಕು ಇಲ್ಲ ಎಂದು ಚಂದ್ರಕಾಂತ್ ಪಾಟೀಲ್ ಹೇಳಿದ್ದಾರೆ.

ಬಾಲಿವುಡ್‌‌ ನಟಿ ಕಂಗನಾ ರಣಾವತ್‌ ‘ಭಾರತದ ಸ್ವಾತಂತ್ಯ್ರ’ದ ಕುರಿತು ನೀಡಿರುವ ಹೇಳಿಕೆಯ ವಿರುದ್ದ ಗುರುವಾರ ಮುಂಬೈನಲ್ಲಿ ದೂರು ದಾಖಲಾಗಿದೆ. ಆಮ್ ಆದ್ಮಿ ಪಕ್ಷ(ಎಎಪಿ)ದ ರಾಷ್ಟ್ರೀಯ ಕಾರ್ಯಾಧ್ಯಕ್ಷೆ ಪ್ರೀತಿ ಮೆನನ್ ಅವರು ಈ ದೂರು ದಾಖಲಿಸಿದ್ದು, ಅವರ ವಿರುದ್ದ ದೇಶದ್ರೋಹ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದ್ದಾರೆ.

ಕಂಗನಾ ರಣಾವತ್ ನೀಡಿರುವ ದೇಶದ್ರೋಹಿ ಮತ್ತು ಪ್ರಚೋದಕ ಹೇಳಿಕೆಗಳಿಗಾಗಿ ಸೆಕ್ಷನ್ 504, 505 ಮತ್ತು 124A ಅಡಿಯಲ್ಲಿ ಕ್ರಮ ಕೈಗೊಳ್ಳುವಂತೆ ಕೋರಿ ಮುಂಬೈ ಪೊಲೀಸರಿಗೆ ಅರ್ಜಿ ಸಲ್ಲಿಸಿದ್ದೇವೆ ಎಂದು ಪ್ರೀತಿ ಮೆನನ್ ಟ್ವೀಟ್ ಮಾಡಿದ್ದಾರೆ.

ಕಂಗನಾ ರಣಾವತ್ ವಿರುದ್ಧ ಬಿಜೆಪಿ ನಾಯಕ ವರುಣ್ ಗಾಂಧಿ ಕೂಡಾ ವಾಗ್ದಾಳಿ ನಡೆಸಿದ್ದು, ಇಂತಹ ಆಲೋಚನೆಯನ್ನು ನಾನು ಹುಚ್ಚುತನ ಎನ್ನಬೇಕೋ…ದೇಶದ್ರೋಹ ಎನ್ನಬೇಕೋ..? ಎಂದು ಪ್ರಶ್ನಿಸಿದ್ದಾರೆ. “ಒಮ್ಮೆ ಮಹಾತ್ಮಾ ಗಾಂಧಿಯವರ ತ್ಯಾಗ ಮತ್ತು ತಪಸ್ಸಿಗೆ ಅವಮಾನ, ಕೆಲವೊಮ್ಮೆ ಅವರ ಕೊಲೆಗಾರನಿಗೆ ಗೌರವ. ಈಗ ಹುತಾತ್ಮ ಮಂಗಲ್ ಪಾಂಡೆಯಿಂದ ಹಿಡಿದು ರಾಣಿ ಲಕ್ಷ್ಮೀಬಾಯಿ, ಭಗತ್ ಸಿಂಗ್, ಚಂದ್ರಶೇಖರ್ ಆಜಾದ್, ನೇತಾಜಿ ಸುಭಾಷ್ ಚಂದ್ರ ಬೋಸ್ ಮತ್ತು ಲಕ್ಷಾಂತರ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗದ ಬಗ್ಗೆ ತಿರಸ್ಕಾರ. ಇಂತಹ ಆಲೋಚನೆಯನ್ನು ನಾನು ಹುಚ್ಚುತನ ಎನ್ನಲೋ…ದೇಶದ್ರೋಹ ಎನ್ನಲೋ…” ಎಂದು ವರುಣ್ ಗಾಂಧಿ ಪ್ರಶ್ನಿಸಿದ್ದಾರೆ.

ಕಂಗನಾ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್, ವೀರ ಸಾವರ್ಕರ್ ಅವರ ಕ್ಷಮಾದಾನ ಅರ್ಜಿಗಳನ್ನು ಉಲ್ಲೇಖಿಸಿ, ಭಿಕ್ಷೆ ಬೇಡಿದವರಿಗೆ ಕ್ಷಮೆ ಸಿಕ್ಕಿದೆ ಎಂದು ಆಕ್ರೋಶ ಹೊರಹಾಕಿದೆ. ಅವರಿಗೆ ನೀಡಲಾದ ಪದ್ಮಶ್ರೀ ಪ್ರಶಸ್ತಿಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಹಿಂಪಡೆಯಬೇಕು ಎಂದು ಕಾಂಗ್ರೆಸ್ ನಾಯಕ ಆನಂದ್ ಶರ್ಮಾ ಒತ್ತಾಯಿಸಿದ್ದಾರೆ.

ಇತ್ತೀಚೆಗೆ ಕಂಗನಾ ಅವರಿಗೆ ನೀಡಲಾದ ಪದ್ಮಶ್ರೀ ಪ್ರಶಸ್ತಿಯನ್ನು ಹಿಂಪಡೆಯುವಂತೆ ಒತ್ತಾಯಿಸಿ ರಾಷ್ಟ್ರಪತಿಗಳಿಗೆ ಪತ್ರ ಬರೆದಿದೆ. ದೇಶದ ಕಾನೂನು, ಭಾರತದ ಸಂವಿಧಾನದ ಬಗ್ಗೆ ಕಿಂಚಿತ್ತೂ ಗೌರವವಿಲ್ಲದ ಇಂತಹ ವ್ಯಕ್ತಿ ಪದ್ಮಶ್ರೀಯಂತಹ ಶ್ರೇಷ್ಠ ಪ್ರಶಸ್ತಿಗೆ ಅರ್ಹರಲ್ಲ ಎಂದು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನೆಟ್ಟಾ ಡಿಸೋಜಾ ಬರೆದಿದ್ದಾರೆ.


ಇದನ್ನೂ ಓದಿ: ಸ್ವಾತಂತ್ರ್ಯ ಹೋರಾಟಗಾರರಿಗೆ ನಟಿ ಕಂಗನಾ ಅವಮಾನ: ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಥುರಾ ಭೂ ವಿವಾದ: ಫೆಬ್ರವರಿ 29ರಂದು ಅಲಹಾಬಾದ್ ಹೈಕೋರ್ಟಿನಲ್ಲಿ ವಿಚಾರಣೆ

0
ಮಥುರಾದ ಶಾಹಿ ಈದ್ಗಾ ಮಸೀದಿಯನ್ನು ತೆರವುಗೊಳಿಸುವಂತೆ ಕೋರಿ ಹೂಡಿರುವ ದಾವೆಯ ನಿರ್ವಹಣೆಯನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ಮುಂದಿನ ವಿಚಾರಣೆಯನ್ನು ಅಲಹಾಬಾದ್ ಹೈಕೋರ್ಟ್ ಶುಕ್ರವಾರ ಫೆಬ್ರವರಿ 29ಕ್ಕೆ ನಿಗದಿಪಡಿಸಿದೆ. ಶಾಹಿ ಈದ್ಗಾ ಇಂತೇಜಾಮಿಯಾ ಸಮಿತಿಯು ಕತ್ರ...