Homeಮುಖಪುಟಭಗತ್ ಸಿಂಗ್ ಜನ್ಮದಿನದಂದು ಕಾಂಗ್ರೆಸ್ ಸೇರಿದ ಕನ್ಹಯ್ಯ ಕುಮಾರ್‌, ಜಿಗ್ನೇಶ್ ಮೇವಾನಿ

ಭಗತ್ ಸಿಂಗ್ ಜನ್ಮದಿನದಂದು ಕಾಂಗ್ರೆಸ್ ಸೇರಿದ ಕನ್ಹಯ್ಯ ಕುಮಾರ್‌, ಜಿಗ್ನೇಶ್ ಮೇವಾನಿ

ಕೆಂಪು ಧಿರಿಸಿನಲ್ಲಿ ಕನ್ಹಯ್ಯ ಕುಮಾರ್, ನೀಲಿ ಧಿರಿಸಿನಲ್ಲಿ ಜಿಗ್ನೇಶ್ ಮತ್ತು ಬಳಿ ಧಿರಿಸಿನಲ್ಲಿ ರಾಹುಲ್ ಗಾಂಧಿ ಕಾಣಿಸಿಕೊಂಡಿದ್ದಾರೆ. ಆ ಮೂಲಕ ತಮ್ಮ ಸಿದ್ದಾಂತಗಳನ್ನು ರೂಪಕಗಳ ಮೂಲಕ ಮುಂದಿಟ್ಟಿದ್ದಾರೆ.

- Advertisement -
- Advertisement -

ಸಿಪಿಐ ಯುವ ನಾಯಕ ಕನ್ಹಯ್ಯ ಕುಮಾರ್ ಮತ್ತು ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಹುತಾತ್ಮ ಭಗತ್ ಸಿಂಗ್ ಜನ್ಮದಿನವಾದ ಇಂದು ಕಾಂಗ್ರೆಸ್‌ಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಹಾರ್ದಿಕ್ ಪಟೇಲ್ ಸಮ್ಮುಖದಲ್ಲಿ ದೆಹಲಿಯ ಶಹೀದ್ ಅಜಮ್ ಭಗತ್ ಸಿಂಗ್ ಪಾರ್ಕ್‌ನಲ್ಲಿ ಒಗ್ಗಟ್ಟು ಪ್ರದರ್ಶಿಸಿದ ಯುವ ನಾಯಕರು ಕೈಗೆ ಕೈ ಜೋಡಿಸಿ ಹೊಸ ರಾಜಕಾರಣಕ್ಕೆ ಮುಂದಾಗಿದ್ದಾರೆ.

ಕೆಂಪು ಧಿರಿಸಿನಲ್ಲಿ ಕನ್ಹಯ್ಯ ಕುಮಾರ್, ನೀಲಿ ಧಿರಿಸಿನಲ್ಲಿ ಜಿಗ್ನೇಶ್ ಮತ್ತು ಬಳಿ ಧಿರಿಸಿನಲ್ಲಿ ರಾಹುಲ್ ಗಾಂಧಿ ಕಾಣಿಸಿಕೊಂಡಿದ್ದಾರೆ. ಆ ಮೂಲಕ ತಮ್ಮ ಸಿದ್ದಾಂತಗಳನ್ನು ರೂಪಕಗಳ ಮೂಲಕ ಮುಂದಿಟ್ಟಿದ್ದಾರೆ. ದೆಹಲಿಯ ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಇಬ್ಬರು ಯುವನಾಯಕರು ಮಾತನಾಡಲಿದ್ದಾರೆ.

ಕನ್ಹಯ್ಯ ಕುಮಾರ್, ಜಿಗ್ನೇಶ್‌ ಮೇವಾನಿಯವರಿಗೆ ಅಂಬೇಡ್ಕರ್, ಗಾಂಧಿ ಮತ್ತು ಭಗತ್ ಸಿಂಗ್ ಚಿತ್ರಗಳಿರುವ ಫೋಟೊ ನೀಡಿ ಪಕ್ಷಕ್ಕೆ ಬರಮಾಡಿಕೊಳ್ಳಲಾಗಿದೆ. ಕಾಂಗ್ರೆಸ್ ವಕ್ತಾರ ರಣದೀಪ್ ಸಿಂಗ್ ಸುರ್ಜೇವಾಲ ಕಾಂಗ್ರೆಸ್ ಶಾಲು ಹೊದಿಸಿದ್ದಾರೆ.

ಕನ್ಹಯ್ಯ ಕುಮಾರ್ ಈ ದೇಶದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯದ ಹೋರಾಟದ ಸಂಕೇತವಾಗಿದ್ದಾರೆ. ಅವರು ವಿದ್ಯಾರ್ಥಿ ನಾಯಕನಾಗಿ ಮೂಲಭೂತವಾದದ ವಿರುದ್ಧ ಹೋರಾಡಿದರು. ಇಂತಹ ಕ್ರಿಯಾಶೀಲ ವ್ಯಕ್ತಿತ್ವದ ಯುವ ನಾಯಕ ಕಾಂಗ್ರೆಸ್ ಸೇರಿಕೊಳ್ಳುವುದರಿಂದ ಪಕ್ಷದ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ತುಂಬುತ್ತದೆ ಎಂದು ಕಾಂಗ್ರೆಸ್ ನಾಯಕ ಕೆಸಿ ವೇಣುಗೋಪಾಲ್ ತಿಳಿಸಿದ್ದಾರೆ.

ಈ ಇಬ್ಬರೂ ನಾಯಕರು ಕಾಂಗ್ರೆಸ್ ಸೇರುವ ಬಗ್ಗೆ ಬಹಳ ದಿನಗಳಿಂದ ಚರ್ಚೆ ನಡೆಯುತ್ತಿತ್ತು. ಕನ್ಹಯ್ಯ ಕುಮಾರ್ ಮತ್ತು ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಕಾಂಗ್ರೆಸ್ ಸೇರುವಲ್ಲಿ ಹಾರ್ದಿಕ್ ಪಟೇಲ್ ಪ್ರಮುಖ ಪಾತ್ರ ವಹಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಭವಾನಿಪುರ: ಟಿಎಂಸಿ ಕಾರ್ಯಕರ್ತರ ಮೇಲೆ ಹಲ್ಲೆ ಆರೋಪ ಮಾಡಿದ ದಿಲೀಪ್ ಘೋಷ್


ಇದನ್ನೂ ಓದಿ: ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ಸ್ಥಾನಕ್ಕೆ ನವಜೋತ್ ಸಿಧು ರಾಜೀನಾಮೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...