Homeಮುಖಪುಟಕನ್ಹಯ್ಯ ಹೇಳಿಕೆ ಅಸತ್ಯ ಮತ್ತು ಭಟ್ಟಂಗಿತನ ಎಂದ ನಟ ಚೇತನ್

ಕನ್ಹಯ್ಯ ಹೇಳಿಕೆ ಅಸತ್ಯ ಮತ್ತು ಭಟ್ಟಂಗಿತನ ಎಂದ ನಟ ಚೇತನ್

- Advertisement -
- Advertisement -

ಕಾಂಗ್ರೆಸ್‌ಗೆ ಸೇರ್ಪಡೆಯಾಗಿರುವ ಸಿಪಿಐ ಯುವ ನಾಯಕ ಕನ್ಹಯ್ಯ ಕುಮಾರ್ ಕಾಂಗ್ರೆಸ್ ಕುರಿತು ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿರುವ ನಟ, ಸಾಮಾಜಿಕ ಹೋರಾಟಗಾರ ಚೇತನ್ ಕುಮಾರ್‌ ಇದು ಅಸತ್ಯ ಮತ್ತು ಭಟ್ಟಂಗಿತನ ಎಂದಿದ್ದಾರೆ.

ಸೆಪ್ಟಂಬರ್‌ 28 ರಂದು ಕಾಂಗ್ರೆಸ್‌ಗೆ ಸೇರ್ಪಡೆಯಾದ ಕನ್ಹಯ್ಯ ಕುಮಾರ್‌, “ಕಾಂಗ್ರೆಸ್ ಎಂಬುದು ಕೇವಲ ಒಂದು ಪಕ್ಷವಲ್ಲ, ಅದೊಂದು ಆದರ್ಶ. ಈ ದೇಶದ ಅತಿ ಪ್ರಾಚೀನ ಮತ್ತು ಪ್ರಜಾತಾಂತ್ರಿಕ ಪಕ್ಷವಾದ ಕಾಂಗ್ರೆಸ್ ಉಳಿಯದಿದ್ದರೆ, ಈ ದೇಶ ಉಳಿಯುವುದಿಲ್ಲ. ದೊಡ್ಡ ವಿಪಕ್ಷವನ್ನು ಉಳಿಸದಿದ್ದರೇ, ಚಿಕ್ಕ ಚಿಕ್ಕ ಪಕ್ಷಗಳು ಉಳಿಯುವುದಿಲ್ಲ” ಎಂದು ಹೇಳಿದ್ದರು.

ಕನ್ಹಯ್ಯ ಹೇಳಿಕೆಯನ್ನು ಟೀಕೆ ಮಾಡಿರುವ ನಟ ಚೇತನ್, “ಹೊಸದಾಗಿ ಕಾಂಗ್ರೆಸ್‌ಗೆ ಸೇರ್ಪಡೆಯಾದ ಕನ್ಹಯ್ಯ ಕುಮಾರ್ ಅವರು ‘ಕಾಂಗ್ರೆಸ್ ಇಲ್ಲದೇ ದೇಶ ಉಳಿಯಲು ಸಾಧ್ಯವಿಲ್ಲ’ ಎಂಬ ಹೇಳಿಕೆಯನ್ನು ನೀಡಿದ್ದಾರೆ.
ಇದು ಅಸತ್ಯ ಮತ್ತು ಭಟ್ಟಂಗಿತನ” ಎಂದಿದ್ದಾರೆ.

ಇದನ್ನೂ ಓದಿ: ಭಗತ್ ಸಿಂಗ್ ಜನ್ಮದಿನದಂದು ಕಾಂಗ್ರೆಸ್ ಸೇರಿದ ಕನ್ಹಯ್ಯ ಕುಮಾರ್‌, ಜಿಗ್ನೇಶ್ ಮೇವಾನಿ

“ಕಾಂಗ್ರೆಸ್ (ಮತ್ತು ಬಿಜೆಪಿಯ) ಅವಕಾಶವಾದ ಮತ್ತು ಬೂಟಾಟಿಕೆಗಳಿಲ್ಲದೆಯೇ ಕರ್ನಾಟಕ ಮತ್ತು ಭಾರತವು ಉತ್ತಮವಾಗಿರುತ್ತದೆ. ವೈಯಕ್ತಿಕ ಅಧಿಕಾರದ ಸಲುವಾಗಿ, ಕನ್ಹಯ್ಯ ಅವರು ವಿಶ್ವಾಸಾರ್ಹತೆಯನ್ನು ಕಳೆದುಕೊಂಡಿದ್ದಾರೆ” ಎಂದು ಕನ್ಹಯ್ಯ ವಿರುದ್ಧ ಕಿಡಿ ಕಾರಿದ್ದಾರೆ.

“ದೇಶದಲ್ಲಿ ಇಂದು ವೈಚಾರಿಕ ಸಂಘ‍ರ್ಷ ನಡೆಯುತ್ತಿದೆ. ಇದಕ್ಕೆ ಕಾಂಗ್ರೆಸ್ ನಾಯಕತ್ವ ನೀಡುತ್ತದೆ. ಆರಾಮ ಖುರ್ಚಿಯಲ್ಲಿ ಕೂತು ಮಾತಾಡುವ ಸಮಯ ಇದಲ್ಲ. ಇದು ತುರ್ತು ಸಂದರ್ಭವಾಗಿದೆ. ಹಾಗಾಗಿ ಈ ದೇಶದ ಕೋಟ್ಯಾಂತರ ಯುವಕರ ಭವಿಷ್ಯವನ್ನು ರಕ್ಷಿಸುವುದಕ್ಕಾಗಿ ನಾನು ಕಾಂಗ್ರೆಸ್ ಸೇರುತ್ತಿದ್ದೇನೆ” ಎಂದು ಕನ್ಹಯ್ಯ ಕುಮಾರ್ ಕಾಂಗ್ರೆಸ್ ಸೇರ್ಪಡೆಯಾದ ಬಳಿಕ ಸುದ್ದಿಗಾರಿಗೆ ತಿಳಿಸಿದ್ದರು.

ಕನ್ಹಯ್ಯ ಕುಮಾರ್‌ ಮತ್ತು ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಇಬ್ಬರು ಸೆಪ್ಟಂಬರ್‌ 28 ರಂದು ಕಾಂಗ್ರೆಸ್‌ಗೆ ಸೇರ್ಪಡೆಯಾದರು. ಶಾಸಕ ಜಿಗ್ನೇಶ್ ಮೇವಾನಿ ಮುಂದಿನ ಚುನಾವಣೆಯನ್ನು ಕಾಂಗ್ರೆಸ್ ಪಕ್ಷದ ಬಾವುಟ ಹಿಡಿದು ಎದುರಿಸುತ್ತೇನೆ ಎಂದು ಹೇಳಿದರು. ಕನ್ಹಯ್ಯ ಕುಮಾರ್‌ ಕಾಂಗ್ರೆಸ್ ಸೇರ್ಪಡೆಗೆ ಪರ ವಿರೋಧ ಚರ್ಚೆಗಳು ನಡೆಯುತ್ತಲೇ ಇವೆ.


ಇದನ್ನೂ ಓದಿ:  ಕಾಂಗ್ರೆಸ್ ಎಂಬುದು ಕೇವಲ ಒಂದು ಪಕ್ಷವಲ್ಲ, ಅದೊಂದು ಆದರ್ಶ: ಕನ್ಹಯ್ಯ ಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...