Homeಮುಖಪುಟಚುನಾವಣಾ ಪ್ರಚಾರದ ವೇಳೆ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ ಕನ್ಹಯ್ಯಾ ಕುಮಾರ್ ಮೇಲೆ ಹಲ್ಲೆ

ಚುನಾವಣಾ ಪ್ರಚಾರದ ವೇಳೆ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ ಕನ್ಹಯ್ಯಾ ಕುಮಾರ್ ಮೇಲೆ ಹಲ್ಲೆ

- Advertisement -
- Advertisement -

ಈಶಾನ್ಯ ದೆಹಲಿ ಲೋಕಸಭೆ ಕ್ಷೇತ್ರದ ಕಾಂಗ್ರೆಸ್‌ನ ಅಭ್ಯರ್ಥಿ ಕನ್ಹಯ್ಯಾ ಕುಮಾರ್ ಅವರಿಗೆ ಚುನಾವಣಾ ಪ್ರಚಾರದ ವೇಳೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ಚುನಾವಣಾ ಪ್ರಚಾರದ ವೇಳೆ ಹೂಮಾಲೆ ಹಾಕುವ ನೆಪದಲ್ಲಿ ಅವರ ಬಳಿಗೆ ಬಂದ ಕೆಲವರು ಬಳಿಕ ಅವರಿಗೆ ಥಳಿಸಿದ್ದಾರೆ. ಘಟನೆಯ ವಿಡಿಯೋ ವೈರಲ್ ಆಗಿದೆ. ಇದೇ ವೇಳೆ ದುಷ್ಕರ್ಮಿಗಳು ಆಮ್ ಆದ್ಮಿ ಪಕ್ಷದ ಮಹಿಳಾ ಕೌನ್ಸಿಲರ್ ಛಾಯಾ ಗೌರವ್ ಶರ್ಮ ಅವರೊಂದಿಗೂ ಅನುಚಿತವಾಗಿ ವರ್ತಿಸಿರುವ ಆರೋಪ ಕೇಳಿ ಬಂದಿದೆ.

ತನ್ನ ಶಾಲನ್ನು ಕಿತ್ತುಕೊಂಡು, ಪತಿಯನ್ನು ಪಕ್ಕಕ್ಕೆ ಕರೆದೊಯ್ದು ಬೆದರಿಕೆ ಹಾಕಿದ್ದಾರೆ. ಇದಲ್ಲದೆ ಗುಂಪಿನ ಮೇಲೆ ಕಪ್ಪು ಶಾಹಿ ಎರಚಲಾಗಿದ್ದು, ಕೆಲ ಮಹಿಳೆಯರು ಈ ವೇಳೆ ಗಾಯಗೊಂಡಿದ್ದಾರೆ ಎಂದು ಗೌರವ್ ಶರ್ಮ ಪೊಲೀಸರಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಪೊಲೀಸರ ಪ್ರಕಾರ, ಕೌನ್ಸಿಲರ್ ಛಾಯಾ ಶರ್ಮಾ ಅವರೊಂದಿಗಿನ ಸಭೆಯ ನಂತರ ಕನ್ಹಯ್ಯಾ ಕುಮಾರ್ ಕರ್ತಾರ್ ನಗರದಲ್ಲಿರುವ ಎಎಪಿ ಕಚೇರಿಯಿಂದ ಹೊರಗೆ ಬಂದಾಗ ಕೆಲವು ವ್ಯಕ್ತಿಗಳು ಕನ್ಹಯ್ಯಾ ಕುಮಾರ್‌ಗೆ ಹೂಮಾಲೆ ಹಾಕುವ ನೆಪದಲ್ಲಿ ಸಮೀಪಕ್ಕೆ ಬಂದು ಹಾರವನ್ನು ಹಾಕಿದ್ದಾರೆ. ಬಳಿಕ ಕನ್ಹಯ್ಯಾ ಕುಮಾರ್ ಮೇಲೆ ಶಾಯಿ ಎರಚಿ ಹಲ್ಲೆ ನಡೆಸಿದ್ದಾರೆ. ಛಾಯಾ ಶರ್ಮಾ ಅವರು ಮಧ್ಯಪ್ರವೇಶಿಸಲು ಪ್ರಯತ್ನಿಸಿದಾಗ, ಅವರು ಅನುಚಿತವಾಗಿ ವರ್ತಿಸಿದರು ಮತ್ತು ಬೆದರಿಕೆ ಹಾಕಿದರು ಎಂದು ಈಶಾನ್ಯ ಉಪ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಘಟನೆಯ ನಂತರ, ದಾಳಿಯ ಹೊಣೆಯನ್ನು ಹೊತ್ತುಕೊಂಡು ಇಬ್ಬರು ದುಷ್ಕರ್ಮಿಗಳು ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಕನ್ಹಯ್ಯಾ ಕುಮಾರ್ ದೇಶವನ್ನು ವಿಭಜಿಸುವ ಬಗ್ಗೆ ಮಾತನಾಡುತ್ತಾರೆ, ಭಾರತೀಯ ಸೇನೆಯ ವಿರುದ್ಧ ಮಾತನಾಡುತ್ತಾರೆ ಮತ್ತು ಇಂದು ನಾವು ಅವರಿಗೆ ಸರಿಯಾಗಿ ಚಿಕಿತ್ಸೆ ನೀಡಿದ್ದೇವೆ ಎಂದು ವೀಡಿಯೊದಲ್ಲಿ ಹೇಳಲಾಗಿದೆ. ದೇಶವನ್ನು ವಿಭಜಿಸುವ ಬಗ್ಗೆ ಮಾತನಾಡುವವರಿಗೆ ದೆಹಲಿ ಪ್ರವೇಶಿಸಲು ನಾವು ಅವಕಾಶ ನೀಡುವುದಿಲ್ಲ ಎಂದು ವಿಡಿಯೋದಲ್ಲಿರುವ ವ್ಯಕ್ತಿಯೊಬ್ಬರು ಪ್ರತಿಪಾದಿಸಿದ್ದಾರೆ. ಆದರೆ ಈ ಕುರಿತ ವಿಡಿಯೋದ ಅಸಲಿಯತ್ತನ್ನು ತಕ್ಷಣಕ್ಕೆ ಪರಿಶೀಲನೆ ನಡೆಸಲಾಗಿಲ್ಲ ಎಂದು ತಿಳಿದು ಬಂದಿದೆ.

ಈಶಾನ್ಯ ದೆಹಲಿಯಲ್ಲಿ ಬಿಜೆಪಿಯ ಮನೋಜ್ ತಿವಾರಿ ವಿರುದ್ಧ ಇಂಡಿಯಾ ಬ್ಲಾಕ್ ಅಭ್ಯರ್ಥಿಯಾಗಿ ಕನ್ಹಯ್ಯ ಕುಮಾರ್ ಸ್ಪರ್ಧೆಯಲ್ಲಿದ್ದಾರೆ. ತನ್ನ ವಿರುದ್ಧದ ದಾಳಿಗೆ ಮನೋಜ್ ತಿವಾರಿಯನ್ನು ಕನ್ಹಯ್ಯ ಕುಮಾರ್ ಹೊಣೆಯಾಗಿಸಿದ್ದಾರೆ. ಸಂಸದ ತಿವಾರಿ ಅವರು ನನಗೆ ಹೆಚ್ಚಿನ ಜನಬೆಂಬಲ ಸಿಗುತ್ತಿರುವ ಹಿನ್ನೆಲೆ ಹತಾಶರಾಗಿದ್ದಾರೆ. ಅದಕ್ಕಾಗಿಯೇ ಅವರು ತಮ್ಮ ಮೇಲೆ ದಾಳಿ ಮಾಡಲು ಗೂಂಡಾಗಳನ್ನು ಕಳುಹಿಸಿದ್ದಾರೆ. ಮೇ 25ರಂದು ಮತದಾನದ ಮೂಲಕ ಸಾರ್ವಜನಿಕರು ಹಿಂಸಾಚಾರಕ್ಕೆ ತಕ್ಕ ಉತ್ತರವನ್ನು ನೀಡಲಿದ್ದಾರೆ ಎಂದು ಕನ್ಹಯ್ಯ ಕುಮಾರ್ ಹೇಳಿದ್ದಾರೆ.

ಇದನ್ನು ಓದಿ: ರಾಹುಲ್ ಗಾಂಧಿಯನ್ನು ರಾಯ್ ಬರೇಲಿ ಜನರಿಗೆ ಕೊಡುತ್ತಿದ್ದೇನೆ; ಅವನು ನಿಮ್ಮನ್ನು ನಿರಾಸೆಗೊಳಿಸುವುದಿಲ್ಲ: ಸೋನಿಯಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...