Homeಕರ್ನಾಟಕಕಾರು ಅಪಘಾತದಲ್ಲಿ ಮಹಿಳೆ ಸಾವು: ನಟ ನಾಗಭೂಷಣ ಬಂಧನ

ಕಾರು ಅಪಘಾತದಲ್ಲಿ ಮಹಿಳೆ ಸಾವು: ನಟ ನಾಗಭೂಷಣ ಬಂಧನ

- Advertisement -
- Advertisement -

ಕನ್ನಡ ನಟ ನಾಗಭೂಷಣ ಅವರ ಕಾರು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮಹಿಳೆ ಮೃತಪಟ್ಟ ಘಟನೆ ನಡೆದಿದ್ದು, ಘಟನೆ ಬಳಿಕ ನಟ ನಾಗಭೂಷಣ ಅವರನ್ನು ಬಂಧಿಸಲಾಗಿದೆ.

ಕುಮಾರಸ್ವಾಮಿ ಲೇಔಟ್ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ನಟ ನಾಗಭೂಷಣ ಕಾರು ಅಪಘಾತವಾಗಿದ್ದು, ಪಾದಚಾರಿ ಮಹಿಳೆ ಎಸ್.ಪ್ರೇಮಾ (48) ಅವರು ಮೃತಪಟ್ಟಿದ್ದಾರೆ.

ಉತ್ತರಹಳ್ಳಿಯ ವಸಂತಪುರ ಮುಖ್ಯರಸ್ತೆ ನಿವಾಸಿ ಪ್ರೇಮಾ ಅವರು ಪತಿ ಜೊತೆ ನಡೆದುಕೊಂಡು ಹೋಗುತ್ತಿದ್ದಾಗ ನಾಗಭೂಷಣ ಅವರ ಕಾರು ಅತೀ ವೇಗದಲ್ಲಿ ಬಂದು ದಂಪತಿಗೆ ಢಿಕ್ಕಿ ಹೊಡೆದು ಬಳಿಕ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಗಂಭೀರವಾಗಿದ್ದ ಪ್ರೇಮಾ ಅವರು ಮೃತಪಟ್ಟಿದ್ದಾರೆ. ಕೃಷ್ಣ ಅವರಿಗೂ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅತೀ ವೇಗ ಹಾಗೂ ನಿರ್ಲಕ್ಷ್ಯದಿಂದ ನಾಗಭೂಷಣ ಕಾರು ಚಲಾಯಿಸಿದ್ದರು. ಇದರಿಂದಲೇ ಅಪಘಾತ ಆಗಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಘಟನೆ ಬಗ್ಗೆ ಮೃತ ಪ್ರೇಮಾ ಅವರ ಸಂಬಂಧಿಕರು ದೂರು ನೀಡಿದ್ದು, ಅದರಂತೆ ನಾಗಭೂಷಣ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಇದೀಗ ಕಾರು ಜಪ್ತಿ ಮಾಡಿ, ನಾಗಭೂಷಣ ಅವರನ್ನು ಬಂಧಿಸಲಾಗಿದೆ.

ಅಪಘಾತದ ಬಳಿಕ‌ ಕಾರು ಸ್ಥಳದಲ್ಲೇ ಬಿಟ್ಟು ನಾಗಭೂಷಣ ಅವರು ಪರಾರಿಯಾಗಲು ಯತ್ನಿಸಿದ್ದರು. ಅವರನ್ನು ತಡೆದು‌ ನಿಲ್ಲಿಸಿದ್ದೆವು. ಜನರು ಹೆಚ್ಚು ಸೇರುತ್ತಿದ್ದಂತೆ ಮಾಸ್ಕ್ ಹಾಕಿಕೊಂಡಿದ್ದಾರೆ. ಬಳಿಕ ಹೊಯ್ಸಳ ವಾಹನ ಸ್ಥಳಕ್ಕೆ ಬಂದಿದ್ದು ಅದರಲ್ಲಿ ಅವರನ್ನು ಕೂರಿಸಿ‌ ಠಾಣೆಗೆ ಕಳುಹಿಸಿದೆವು ಎಂದು ಸ್ಥಳೀಯರೋರ್ವರು ಹೇಳಿದ್ದಾರೆ.

ಇದನ್ನು ಓದಿ: ಛತ್ತೀಸ್‌ಗಢ: ಸರಕಾರಿ ಆಸ್ಪತ್ರೆಯಲ್ಲಿ ಅಪಘಾತದ ಗಾಯಾಳುಗಳಿಗೆ ಮೊಬೈಲ್ ಬೆಳಕಿನಲ್ಲಿ ಚಿಕಿತ್ಸೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...