Homeಕರ್ನಾಟಕನಾಲ್ವರಿಗೆ ಬೆಳಕಾದ ನಟ ಪುನೀತ್‌ ಕಣ್ಣುಗಳು: ರಾಜ್ಯದಲ್ಲಿ ಮೊದಲ ಬಾರಿಗೆ ಹೊಸ ತಂತ್ರ ಬಳಕೆ

ನಾಲ್ವರಿಗೆ ಬೆಳಕಾದ ನಟ ಪುನೀತ್‌ ಕಣ್ಣುಗಳು: ರಾಜ್ಯದಲ್ಲಿ ಮೊದಲ ಬಾರಿಗೆ ಹೊಸ ತಂತ್ರ ಬಳಕೆ

- Advertisement -
- Advertisement -

ಚಂದನವನದ ರಾಜಕುಮಾರ ಪುನೀತ್ ರಾಜ್‌ಕುಮಾರ್ ಅವರ ಕಣ್ಣುಗಳನ್ನು ನಾಲ್ವರಿಗೆ ಅಳವಡಿಸಲಾಗಿದೆ. ಇದರಿಂದ ನಾಲ್ವರಿಗೆ ದೃಷ್ಟಿ ಬಂದಿದೆ ಎಂದು ನಾರಾಯಣ  ನೇತ್ರಾಲಯದ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಡಾ.ಭುಜಂಗ ಶೆಟ್ಟಿ ತಿಳಿಸಿದ್ದಾರೆ.

“ರಾಜ್ಯದಲ್ಲಿ ಇದೇ ಪ್ರಥಮ ಬಾರಿಗೆ ಈ ರೀತಿಯಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ನಾವು ಶುಕ್ರವಾರ ಅಪ್ಪು ಅವರ ಕಣ್ಣುಗಳನ್ನು ಶಸ್ತ್ರಚಿಕಿತ್ಸೆ ಮಾಡಿ ಸಂಗ್ರಹಿಸಿದೆವು. ನಂತರ, ಶುಕ್ರವಾರ ಮತ್ತು ಶನಿವಾರ ಅವರ ಕಣ್ಣುಗಳನ್ನು ಕಸಿ ಮಾಡುವ ಮೂಲಕ ನಾಲ್ವರಿಗೆ ಅಳವಡಿಸಲಾಯಿತು” ಎಂದು ಡಾ.ಭುಜಂಗ ಶೆಟ್ಟಿ ಹೇಳಿದ್ದಾರೆ.

ಯುವ ವಯಸ್ಸಿನಲ್ಲಿಯೇ ಹಠಾತ್ತನೆ ಸಾವನ್ನಪ್ಪಿದ ಪುನೀತ್‌ ರಾಜ್‌ಕುಮಾರ್‌, ತಮ್ಮ ತಂದೆ ಡಾ. ರಾಜ್‌ಕುಮಾರ್ ಮತ್ತು ತಾಯಿ ಪಾರ್ವತಮ್ಮ ಅವರ ಹಾದಿಯಲ್ಲಿಯೇ ತಮ್ಮ ನೇತ್ರಗಳನ್ನು ದಾನ ಮಾಡಿದ್ದಾರೆ. 2006ರಲ್ಲಿ ರಾಜ್‌ಕುಮಾರ್ ನೇತ್ರದಾನ ಮಾಡಿದ್ದರು ಮತ್ತು 2017 ರಲ್ಲಿ ಪಾರ್ವತಮ್ಮ ಅವರೂ ನೇತ್ರದಾನ ಮಾಡಿದ್ದರು.

ಇದನ್ನೂ ಓದಿ:   ಅಪ್ಪು ಒಡನಾಟದ ನೆನಪುಗಳನ್ನು ಹಂಚಿಕೊಂಡ ಮಿಲನ ಸಿನಿಮಾ ನಟಿ ಪಾರ್ವತಿ ತಿರುವೊತು

ಎರಡು ಕಣ್ಣಿನಿಂದ ನಾಲ್ವರಿಗೆ ದೃಷ್ಟಿ ನೀಡಿದ್ದು ಹೇಗೆ..? 

ಪ್ರತಿ ಕಣ್ಣಿನ ಕಾರ್ನಿಯಾವನ್ನು ಅರ್ಧದಷ್ಟು ಕತ್ತರಿಸಿ, ಮುಂಭಾಗದ ಭಾಗವನ್ನು ಒಬ್ಬ ಫಲಾನುಭವಿಗೆ ಮತ್ತು ಎರಡನೇ ಭಾಗವನ್ನು ಇನ್ನೊಬ್ಬರಿಗೆ ನೀಡಲಾಗಿದೆ. ಸರಿಯಾದ ಫಲಾನುಭವಿಗಳನ್ನು ಹುಡುಕುವುದು ಯಾವಾಗಲೂ ಸವಾಲಾಗಿರುತ್ತದೆ. ಏಕೆಂದರೆ ಅವರು ಆ ಕಣ್ಣುಗಳನ್ನು ಅಥವಾ ಕಣ್ಣಿನ ಭಾಗವನ್ನು ಪಡೆಯಲು ಅರ್ಹರಾಗಿರಬೇಕು. ಆದರೆ ಈ ಬಾರಿ ಎಲ್ಲವೂ ಸಾಧ್ಯವಾಯಿತು ಎಂದು ವೈದ್ಯರು ತಿಳಿಸಿದ್ದಾರೆ.

“ಕಣ್ಣುಗಳು ಸುಸ್ಥಿತಿಯಲ್ಲಿದ್ದರೆ ನಾಲ್ಕು ಜನರಿಗೆ ದಾನ ಮಾಡಬಹುದು. ಎಲ್ಲಾ ಫಲಾನುಭವಿಗಳ ಕಣ್ಣುಗಳೂ ಈಗ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ. ಪುನೀತ್‌ ಅವರ ಕಣ್ಣಿನ ಬಿಳಿಭಾಗವನ್ನೂ ಸಂಗ್ರಹಿಸಿ ಲ್ಯಾಬ್‌ಗೆ ಕಳುಹಿಸಲಾಗಿದೆ. ಅದರಿಂದ ಲಿಂಬಲ್ ಸೆಲ್‌ಗಳನ್ನು ಬೆಳೆಸಿ ಬೇರೆ ರೋಗಿಗಳಿಗೂ ಬಳಸಬಹುದು” ಎಂದು ಡಾ. ಶೆಟ್ಟಿ ವಿವರಿಸಿದ್ದಾರೆ.

ಫಲಾನುಭವಿಗಳೆಲ್ಲರೂ ಕರ್ನಾಟಕ ಮೂಲದ ಯುವಕರೇ ಆಗಿದ್ದು,ಕಣ್ಣುಗಳನ್ನು ಯಾರಿಗೆ ನೀಡಲಾಗಿದೆ ಎಂದು ಹೆಚ್ಚು ವಿವರ ಬಹಿರಂಗಪಡಿಸುವುದಿಲ್ಲ. ಒಬ್ಬ ಯುವತಿ ಮತ್ತು ಮೂವರು ಯುವಕರಿಗೆ ಕಣ್ಣು ನೀಡಲಾಗಿದೆ.  ಐವರು ವೈದ್ಯರ ತಂಡದಿಂದ ಕಸಿ ಮಾಡಲಾಗಿದೆ ಎಂದು ಡಾ.ರಾಜ್‌ಕುಮಾರ್‌ ನೇತ್ರ ಬ್ಯಾಂಕ್‌ನ ವೈದ್ಯಕೀಯ ನಿರ್ದೇಶಕ ಡಾ.ಯತೀಶ್‌ ಶಿವಣ್ಣ ಹೇಳಿದ್ದಾರೆ.

“ಪುನೀತ್‌ ಅವರ ಬಹುಮುಖ ವ್ಯಕ್ತಿತ್ವವನ್ನು ಗುರುತಿಸಲು ನಾವು ನಿರ್ದಿಷ್ಟವಾಗಿ ಅವರ ಕಣ್ಣುಗಳನ್ನು ಗರಿಷ್ಠ ಪ್ರಮಾಣದಲ್ಲಿ ಬಳಸಿಕೊಳ್ಳಲು ಬಯಸಿದ್ದೆವು. ಕಣ್ಣು ಕಸಿ ಕಾರ್ಯವು ಬೆಳಿಗ್ಗೆ 11.30ಕ್ಕೆ ಪ್ರಾರಂಭವಾಗಿ ಸಂಜೆ 5.30ರವರೆಗೆ ನಡೆಯಿತು. ಇದು ಸೂಕ್ಷ್ಮ ಶಸ್ತ್ರಚಿಕಿತ್ಸೆಯಾಗಿದ್ದರೂ, ಇದನ್ನು ಬೇಗನೆ ಮಾಡಲಾಯಿತು. ಆದ್ದರಿಂದ, ಜನರು ಇದರ ಸದುಪಯೋಗ ಪಡೆದುಕೊಳ್ಳಲು ಸಾಧ್ಯವಾಯಿತು” ಎಂದು ಮಾಹಿತಿ ನೀಡಿದ್ದಾರೆ.

ಡಾ.ರೋಹಿತ್ ಶೆಟ್ಟಿ ಅವರ ನೇತೃತ್ವದಲ್ಲಿ ಡಾ.ಯತೀಶ್ ಶಿವಣ್ಣ, ಪ್ರಾರ್ಥನಾ ಭಂಡಾರಿ, ಡಾ.ಶರೋನ್ ಡಿಸೋಜಾ, ಮತ್ತು ಡಾ.ಹರ್ಷ ನಾಗರಾಜ್ ಅವರು ಶಸ್ತ್ರಚಿಕಿತ್ಸೆಗಳನ್ನು ನಡೆಸಿದ್ದಾರೆ. ಕಾರ್ನಿಯಾ ತಂಡದ ಡಾ.ಗೈರಿಕ್ ಕುಂದು ಮತ್ತು ವೀರೇಶ್ ನೆರವು ನೀಡಿದ್ದಾರೆ.


ಇದನ್ನೂ ಓದಿ: ಚಿತ್ರರಂಗದ ’ಯುವರತ್ನ’ ಪುನೀತ್ ರಾಜ್‌ಕುಮಾರ್‌ ಅವರ ಅಪರೂಪದ ಚಿತ್ರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...