Homeಕರ್ನಾಟಕಕನ್ನಡದ ಪ್ರತಿಭಾವಂತ ನಟ ಪುನೀತ್ ರಾಜ್‌ಕುಮಾರ್‌ ಇನ್ನಿಲ್ಲ

ಕನ್ನಡದ ಪ್ರತಿಭಾವಂತ ನಟ ಪುನೀತ್ ರಾಜ್‌ಕುಮಾರ್‌ ಇನ್ನಿಲ್ಲ

ಪತ್ನಿ ಅಶ್ವಿನಿ, ಮಕ್ಕಳಾದ ಧೃತಿ, ವಂದಿತಾರೊಂದಿಗೆ ಅಪಾರ ಅಭಿಮಾನಿಗಳನ್ನು ಪುನೀತ್ ಅಗಲಿದ್ದಾರೆ.

- Advertisement -
- Advertisement -

ಕನ್ನಡದ ಪ್ರತಿಭಾವಂತ ನಟ ಪುನೀತ್ ರಾಜ್‌ಕುಮಾರ್‌ರವರಿಗೆ (45) ತೀವ್ರ ಹೃದಯಾಘಾತ ಸಂಭವಿಸಿ, ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಶುಕ್ರವಾರ ಬೆಳಗ್ಗೆ ಜಿಮ್‌ನಲ್ಲಿ ಕಸರತ್ತು ನಡೆಸುತ್ತಿದ್ದ ವೇಳೆ ಹೃದಯಾಘಾತದಿಂದ ಕುಸಿದು ಬಿದ್ದ ಅವರನ್ನು ಆಸ್ಪತ್ರೆಗೆ ಕರೆತರುವಾಗ ಮತ್ತೊಮ್ಮೆ ಹೃದಯಾಘಾತ ಸಂಭವಿಸಿದೆ. ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾದರೂ ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ.

ಅಭಿಮಾನಿಗಳಿಂದ ಪ್ರೀತಿಯಿಂದ ಅಪ್ಪು ಎಂದು ಕರೆಸಿಕೊಳ್ಳುವ ಪವರ್‌ ಸ್ಟಾರ್ ಪುನೀತ್ ರಾಜಕುಮಾರ್ ಕನ್ನಡ ಚಿತ್ರರಂಗದ ಪ್ರಮುಖ ನಾಯಕನಟ. ಪುನೀತ್ ರಾಜ್‌ಕುಮಾರ್‌ ನಟರಾಗಿಯಷ್ಟೇ ಅಲ್ಲದೆ ಹಿನ್ನೆಲೆ ಗಾಯಕರಾಗಿ, ನಿರ್ಮಾಪಕರಾಗಿಯೂ ಚಿತ್ರರಂಗಕ್ಕೆ ಕೊಡುಗೆ ನೀಡಿದ್ದಾರೆ.

1976 ರಲ್ಲಿ ತೆರೆಕಂಡ ಡಾ.ರಾಜ್‌ಕುಮಾರ್‌ ಅಭಿನಯದ `ಪ್ರೇಮದ ಕಾಣಿಕೆ’ ಚಿತ್ರದ ಮೂಲಕ ತೆರೆಯ ಮೇಲೆ ಕಾಣಿಸಿಕೊಂಡಿದ್ದರು. ಆಗ ಪುನೀತ್ ಆರು ತಿಂಗಳು ಮಗು. ನಂತರ ವಸಂತ ಗೀತ (1980)ಮೂಲಕ ಬಾಲ ನಟನಾಗಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಪುನೀತ್‌ ರಾಜ್‌ಕುಮಾರ್, ಸುಮಾರು ನಾಲ್ಕು ದಶಕಗಳ ತಮ್ಮ ಸಿನಿಜೀವನದಲ್ಲಿ ಬಾಲ ಕಲಾವಿದನಾಗಿ 14 ಚಿತ್ರಗಳು ಮತ್ತು ನಾಯಕ ನಟನಾಗಿ 28 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.

ಕನ್ನಡ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿರುವ ಅಣ್ಣಾವ್ರ ಕುಟುಂಬದ ಕುಡಿ ಪುನೀತ್ ರಾಜ್‌ಕುಮಾರ್. 1975 ರ ಮಾರ್ಚ್ 17 ರಂದು ವರನಟ ಡಾ.ರಾಜಕುಮಾರ್ ಮತ್ತು ಪಾರ್ವತಮ್ಮರವರ ಕಿರಿಯ ಪುತ್ರನಾಗಿ ಪುನೀತ್ ರಾಜ್‌ಕುಮಾರ್ ಜನಿಸಿದರು. ಇವರ ಹಿರಿಯ ಸಹೋದರರಾದ ಶಿವರಾಜ ಕುಮಾರ್ ಮತ್ತು ರಾಘವೇಂದ್ರ ರಾಜಕುಮಾರ್ ಕನ್ನಡ ಚಿತ್ರರಂಗದ ಯಶಸ್ವಿ ನಾಯಕನಟರು.

ತಂದೆ ರಾಜ್‌ಕುಮಾರ್ ಅವರ ಚಿತ್ರಗಳನ್ನು ನೋಡುತ್ತಾ, ಅವರ ಶೂಟಿಂಗ್‌ ಸೆಟ್‌ಗಳಿಗೆ ಭೇಟಿ ಕೊಡುತ್ತಿದ್ದ ಅಪ್ಪುಗೆ ಬಾಲ್ಯದಿಂದಲೇ ನಟನೆಯಲ್ಲಿ ಆಸಕ್ತಿಯಿತ್ತು. ಈ ಕಾರಣದಿಂದಲೇ ಬಾಲ ನಟನಾಗಿ ಚಿತ್ರರಂಗದಲ್ಲಿ ಅಳಿಸದ ಹೆಜ್ಜೆಗುರುತು ಮೂಡಿಸಿದ್ದಾರೆ.

ಬಾಲ್ಯದಲ್ಲಿ ತನ್ನ ತಂದೆ ರಾಜಕುಮಾರ್ ಅಭಿನಯದ ಚಿತ್ರಗಳಲ್ಲಿ ಬಾಲ್ಯ ನಟನಾಗಿ, ಭಾಗ್ಯವಂತ, ಚಲಿಸುವ ಮೋಡಗಳು, ಎರಡು ನಕ್ಷತ್ರಗಳು, ಪ್ರೇಮದ ಕಾಣಿಕೆ, ಬೆಟ್ಟದ ಹೂವು, ಶಿವ ಮೆಚ್ಚಿದ ಕಣ್ಣಪ್ಪ, ಪರಶುರಾಮ್, ಯಾರಿವನು, ಭಕ್ತ ಪ್ರಹ್ಲಾದ, ವಸಂತ ಗೀತ, ಭೂಮಿಗೆ ಬಂದ ಭಗವಂತ, ಸನಾದಿ ಅಪ್ಪಣ್ಣ, ತಾಯಿಗೆ ತಕ್ಕ ಮಗ ಸೇರಿದಂತೆ ಹಲವು ಚಿತ್ರಗಳ ಮೂಲಕ ಜನರ ಮನಗೆದ್ದಿದ್ದಾರೆ. ಪುನೀತ್ ಅವರ ಮೊದಲು ಹೆಸರು ಮಾ.ಲೋಹಿತ್.

ಪುನೀತ್‌ ನಟನೆಯ 1985ರಲ್ಲಿ ತೆರೆಕಂಡ ಬೆಟ್ಟದ ಹೂವು ಚಿತ್ರದ ರಾಮು ಪಾತ್ರಕ್ಕೆ ರಾಷ್ಟ್ರ ಪ್ರಶಸ್ತಿಯನ್ನು ಪಡೆದಿದ್ದಾರೆ. ಚಲಿಸುವ ಮೋಡಗಳು’ ಹಾಗೂ ‘ಎರಡು ಕನಸು’ ಚಿತ್ರಗಳಿಗಾಗಿ ಅತ್ಯುತ್ತಮ ಬಾಲ ನಟ ವಿಭಾಗದಲ್ಲಿ ರಾಜ್ಯ ಪ್ರಶಸ್ತಿ ಪಡೆದಿದ್ದಾರೆ.

ನಂತರ ಪುನೀತ್ 2002ರ ಅಪ್ಪು ಚಿತ್ರದ ಮೂಲಕ ನಾಯಕ ನಟನಾಗಿ ಬೆಳ್ಳಿತೆರೆಗೆ ಕಾಲಿಟ್ಟರು. ಅವರ ಅಭಿ, ಆಕಾಶ್, ಅರಸು, ಮಿಲನ, ಜಾಕಿ, ಹುಡುಗರು, ಅಣ್ಣಾ ಬಾಂಡ್, ಪವರ್, ಮೌರ್ಯ, ನಮ್ಮ ಬಸವ, ಪೃಥ್ವಿ, ವಂಶಿ, ರಾಜ್‌, ಪರಮಾತ್ಮ, ಯಾರೇ ಕೂಗಾಡಲಿ, ನಟ ಸಾರ್ವಭೌಮ, ರಾಜಕುಮಾರ, ಅಂಜನಿಪುತ್ರ, ರಣವಿಕ್ರಮ, ದೊಡ್ಮನೆ ಹುಡುಗ, ರಾಮ್, ನಿನ್ನಿಂದಲೇ, ಮೈತ್ರಿ, ಚಕ್ರವ್ಯೂಹ, ಯುವರತ್ನ ಸೇರಿದಂತೆ ಹಲವು ಯಶಸ್ವಿ ಚಲನಚಿತ್ರಗಳಲ್ಲಿ ನಟಿಸಿದ್ದಾರೆ.

ಪುನೀತ್‌ ರಾಜ್‌ಕುಮಾರ್ ಚಿತ್ರ ನಿರ್ಮಾಪಕರಾಗಿ`ಕವಲುದಾರಿ’, `ಮಾಯಾಬಜಾರ್’, ಫ್ರೆಂಚ್ ಬಿರಿಯಾನಿ, ಲಾ, ಫ್ಯಾಮಿಲಿ ಪ್ಯಾಕ್ ಎಂಬ ಚಿತ್ರಗಳನ್ನು ಪಿಆರ್‌ಕೆ ಪ್ರೊಡಕ್ಷನ್‌ ಎಂಬ ತಮ್ಮ ಹೋಮ್ ಬ್ಯಾನರ್ನಲ್ಲಿ ನಿರ್ಮಿಸಿದ್ದಾರೆ. ಜೊತೆಗೆ ಪ್ರೊಡಕ್ಸನ್ ಹೌಸ್ ಮೂಲಕ ಕಿರುತೆರೆ ಧಾರಾವಾಹಿಗಳನ್ನು ಕೂಡ ನಿರ್ಮಿಸಿದ್ದಾರೆ. ತಾಯಿಯ ನೆನಪಿನಲ್ಲಿ `ಪಿ.ಆರ್.ಕೆ ‘ ಆಡಿಯೋ ಕಂಪನಿಯೊಂದನ್ನು ಸ್ಥಾಪಿಸಿದ್ದಾರೆ.

ಇದರ ಜೊತೆಗೆ ಪ್ರಸಿದ್ಧ ಟಿವಿ ಕಾರ್ಯಕ್ರಮ ಕನ್ನಡದ ಕೋಟ್ಯಧಿಪತಿ, ಫ್ಯಾಮಿಲಿ ಪವರ್ ಶೋ ಗಳನ್ನು ನಿರೂಪಣೆ ಮಾಡಿದ್ದಾರೆ. ಚಿತ್ರನಟ ,ಹಿನ್ನೆಲೆ ಗಾಯಕ ಮತ್ತು ದೂರದರ್ಶನ ನಿರೂಪಕರೂ ಆಗಿದ್ದ ಪುನೀತ್‌ ರಾಜ್‌ಕುಮಾರ್, ನಾಯಕ ನಟರಾಗಿ ನಟಿಸಿದ್ದ ಮಿಲನ ಮತ್ತು ಜಾಕಿ ಚಿತ್ರಗಳಿಗೆ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಯ ಉತ್ತಮ ನಟ ಪ್ರಶಸ್ತಿ ತನ್ನದಾಗಿಸಿಕೊಂಡಿದ್ದರು. ಅಲ್ಲದೆ, ಹುಡುಗರು, ಯಾರೇ ಕೂಗಾಡಲಿ, ರಣ ವಿಕ್ರಮ, ರಾಜಕುಮಾರ ಸಿನಿಮಾಗಳಿಗೆ ದಕ್ಷಿಣ ಭಾರತ ಅಂತಾರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ.

ಪತ್ನಿ ಅಶ್ವಿನಿ, ಮಕ್ಕಳಾದ ಧೃತಿ, ವಂದಿತಾರೊಂದಿಗೆ ಅಪಾರ ಅಭಿಮಾನಿಗಳನ್ನು ಪುನೀತ್ ಅಗಲಿದ್ದಾರೆ.


ಇದನ್ನೂ ಓದಿ: ನಟ ಪುನೀತ್ ರಾಜ್‌ಕುಮಾರ್‌ ಆರೋಗ್ಯದಲ್ಲಿ ಏರುಪೇರು: ವಿಕ್ರಂ ಆಸ್ಪತ್ರೆಗೆ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...