Homeಕರ್ನಾಟಕನಟ ಪುನೀತ್ ರಾಜ್‌ಕುಮಾರ್‌ ಕನಸಿನ ಸಾಕ್ಷ್ಯಚಿತ್ರ ’ಗಂಧದಗುಡಿ’ ಟೀಸರ್‌ ಬಿಡುಗಡೆ

ನಟ ಪುನೀತ್ ರಾಜ್‌ಕುಮಾರ್‌ ಕನಸಿನ ಸಾಕ್ಷ್ಯಚಿತ್ರ ’ಗಂಧದಗುಡಿ’ ಟೀಸರ್‌ ಬಿಡುಗಡೆ

- Advertisement -
- Advertisement -

ಕಳೆದ ಅಕ್ಟೋಬರ್‌ 29 ರಂದು ನಮ್ಮನ್ನಗಲಿದ ಕನ್ನಡ ಚಿತ್ರರಂಗದ ದೈತ್ಯ ಪ್ರತಿಭೆ ಪವರ್​ ಸ್ಟಾರ್​ ಪುನೀತ್​ ರಾಜ್​ಕುಮಾರ್​ ಅವರ ಕನಸಿನ ಯೋಜನೆಯ ಸಾಕ್ಷ್ಯಚಿತ್ರದ ಟೈಟಲ್​ ಹಾಗೂ ಟೀಸರ್​​ ಇಂದು (ಡಿ.6) ಬಿಡುಗಡೆಯಾಗಿದೆ. ಕರ್ನಾಟಕದ ಅರಣ್ಯ ಸಂಪತ್ತು ಮತ್ತು ವನ್ಯಜೀವಿಗಳ ಕುರಿತು ಮಾಡಿರುವ ಈ ಡಾಕ್ಯುಮೆಂಟರಿಗೆ “ಗಂಧದಗುಡಿ” ಎಂದು ಹೆಸರಿಡಲಾಗಿದೆ.

ನಾಡಿನ ಕಾಡು, ಮೇಡು ಅಲೆದು ಪುನೀತ್‌ ರಾಜ್‌ಕುಮಾರ್‌ ಅವರು ಈ ಡಾಕ್ಯುಮೆಂಟರಿ​ ಮಾಡಿದ್ದರು. ಇದರ ಬಗ್ಗೆ ಅಕ್ಟೋಬರ್‌ 27 ರಂದು ಚಿಕ್ಕ ಸುಳಿವು ಕೂಡ ನೀಡಿದ್ದರು. ಆದರೆ ಅಷ್ಟರಲ್ಲಿ ಅನಿರೀಕ್ಷಿತ ಘಟನೆ ನಡೆದುಹೋಯಿತು.

ಪಿಆರ್‌ಕೆ ಆಡಿಯೋ ಯೂಟ್ಯೂಬ್ ಚಾನೆಲ್‌ ಮೂಲಕ ಗಂಧದಗುಡಿ ಟೀಸರ್‌ ಬಿಡುಗಡೆಯಾಗಿದೆ. ಅಶ್ವಿನಿ ಪುನೀತ್ ರಾಜ್​ಕುಮಾರ್​ ಮತ್ತು ಮಡ್‌ಸ್ಕಿಪ್ಪರ್‌ ಸಂಸ್ಥೆಯವರು ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಖ್ಯಾತ ವೈಲ್ಡ್ ಲೈಫ್ ಛಾಯಾಗ್ರಾಹಕ ಅಮೋಘವರ್ಷ ನಿರ್ದೇಶನ ಗಂಧದಗುಡಿಗಿದೆ.

ಇದನ್ನೂ ಓದಿ: ಪುನೀತ್‌ ರಾಜ್‌ಕುಮಾರ್‌‌ ಸಂಸ್ಥೆಯ ದೇಣಿಗೆಗಾಗಿ ಆಯೋಜಿಸಿದ್ದ ಕಾರ್ಯಕ್ರಮ ರದ್ದುಗೊಳಿಸಿದ ಪೊಲೀಸರು

ಕಳೆದ ಅಕ್ಟೋಬರ್‌ 27 ರಂದು ತಮ್ಮ ಟ್ವಿಟರ್‌ ಖಾತೆಯಲ್ಲಿ ಸಾಕ್ಷ್ಯಚಿತ್ರದ ಬಗ್ಗೆ ಅಪ್ಪು ಬರೆದುಕೊಂಡಿದ್ದು ಹೀಗೆ…”ದಶಕಗಳ ಹಿಂದೆ ಕಥೆಯೊಂದು ಹುಟ್ಟಿತ್ತು. ನಮ್ಮ ಜನ, ನಮ್ಮ ನೆಲದ ಹಿರಿಮೆಯನ್ನು ಮೆರೆದಿತ್ತು. ನಮ್ಮ ಅಡವಿಯ ಹಸಿರನ್ನು ಜಗತ್ತಿಗೇ ಹರಡಿತ್ತು. ಪೀಳಿಗೆಗೆ ಸ್ಫೂರ್ತಿ ನೀಡಿ ಅಜರಾಮರವಾಗಿತ್ತು. ಆ ಚರಿತ್ರೆ ಮರುಕಳಿಸುವ ಸಮಯವೀಗ ಬಂದಿದೆ” ಎಂದಿದ್ದರು. ನವೆಂಬರ್‌ 1 ರಂದು ಟೀಸರ್‌ ಬಿಡುಗಡೆಯಾಗಬೇಕಿತ್ತು.

ಸಾಕ್ಷ್ಯಚಿತ್ರಗಳು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುವುದು ಬಹಳ ವಿರಳ. ಆದರೆ, ಗಂಧದಗುಡಿ ಚಿತ್ರಿಕರಣ ಮುಗಿಸಿದ್ದು, ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. 2022 ಕ್ಕೆ ಚಿತ್ರಮಂದಿರಗಳಿಗೆ ಕಾಲಿಡಲಿದೆ ಎಂದು ಚಿತ್ರತಂಡ ತಿಳಿಸಿದೆ.

ಗಂಧಧಗುಡಿ ಟೀಸರ್‌ ಅನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕನ್ನಡ ಚಿತ್ರರಂಗದವರು, ಅಭಿಮಾನಿಗಳು ಸೇರಿದಂತೆ ಹಲವರು ಹಂಚಿಕೊಂಡಿದ್ದು ಮಿಸ್ ಯು ಅಪ್ಪು ಎಂದಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಸರ್‌ ಹಂಚಿಕೊಂಡಿದ್ದು, “ನಮ್ಮೆಲ್ಲರ ಪ್ರೀತಿಯ ಅಪ್ಪು ದಿ. ಪುನೀತ್ ರಾಜಕುಮಾರ್ ಅಭಿನಯದ ಪಿ.ಆರ್.ಕೆ ಪ್ರೊಡಕ್ಷನ್ ನಿರ್ಮಿಸಿರುವ ‘ಗಂಧದ ಗುಡಿ’ ಒಂದು ಅದ್ಭುತ ಕಲಾಕೃತಿ. ನಾಡಿನ ಪ್ರಾಕೃತಿಕ ಶ್ರೀಮಂತಿಕೆ, ಜೀವಸಂಕುಲ, ಬುಡಕಟ್ಟು ಜನರ ಸಂಸ್ಕೃತಿಗಳನ್ನು ಪರಿಚಯಿಸುವ ಮೂಲಕ, ವಿಶಿಷ್ಟ ರೀತಿಯಲ್ಲಿ ಕಥೆಯೊಂದನ್ನು ಹೇಳುತ್ತಿದೆ. ಈ ಅದ್ಭುತ ದೃಶ್ಯಕಾವ್ಯದ ಸಂದೇಶ ಎಲ್ಲರಿಗೂ ತಲುಪಬೇಕು. ಪ್ರತಿ ಭಾರತೀಯ, ಅದರಲ್ಲೂ ವಿಶೇಷವಾಗಿ ಪ್ರತಿಯೊಬ್ಬ ಕನ್ನಡಿಗ ಕರುನಾಡಿನ ಈ ಕಥಾನಕವನ್ನು ನೋಡುವಂತಾಗಲಿ. ನಮ್ಮ ಅರಣ್ಯ, ನಮ್ಮ ಪರಿಸರ, ವೈವಿಧ್ಯಮಯ ಪ್ರಾಕೃತಿಕ ಸಂಪತ್ತನ್ನು ರಕ್ಷಿಸುವ ನಿಟ್ಟಿನಲ್ಲಿ ಈ ಚಿತ್ರ ಪ್ರೇರಣೆ ನೀಡಲಿ ಎಂದು ಹಾರೈಸುತ್ತೇನೆ” ಎಂದಿದ್ದಾರೆ.


ಇದನ್ನೂ ಓದಿ: ಪುನೀತ್ ರಾಜಕುಮಾರ್ ನುಡಿನಮನ; ಮುಗ್ಧ ನಗುವೊಂದರ ಕಣ್ಮರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...