Homeಕರ್ನಾಟಕಚಂದನವನದ ಖ್ಯಾತನಟ ರಾಕ್‌ಲೈನ್ ಸುಧಾಕರ್ ವಿಧಿವಶ!

ಚಂದನವನದ ಖ್ಯಾತನಟ ರಾಕ್‌ಲೈನ್ ಸುಧಾಕರ್ ವಿಧಿವಶ!

ಬೆಂಗಳೂರು ಕಮಲಾನಗರ ನಿವಾಸಿಯಾಗಿದ್ದ ನಟ ರಾಕ್‍ಲೈನ್ ಸುಧಾಕರ್‌ ಎರಡು ತಿಂಗಳ ಹಿಂದೆ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದರು.

- Advertisement -
- Advertisement -

ದಿಗಂತ್ ನಟನೆಯ ’ಪಂಚರಂಗಿ” ಚಿತ್ರದ ಮೂಲಕ ಖ್ಯಾತಿ ಪಡೆದಿದ್ದ ಪೋಷಕ ನಟ ರಾಕ್‌ಲೈನ್ ಸುಧಾಕರ್ (64) ವಿಧಿವಶರಾಗಿದ್ದಾರೆ. ಸಿಂಪಲ್ ಸುನಿ ನಿರ್ದೇಶನದ ಶುಗರ್‌ಲೆಸ್ ಸಿನಿಮಾ ಸೆಟ್‌ನಲ್ಲಿಯೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಈ ಬಗ್ಗೆ ನಿರ್ದೇಶಕ ಸಿಂಪಲ್ ಸುನಿ ಟ್ವೀಟ್ ಮಾಡಿ ಸಂತಾಪ ಸೂಚಿಸಿ, ’2020ರ ರೌದ್ರಾವತಾರ ಮುಂದುವರೆದಿದೆ.. ಸಿನಿಕಲಾವಿದರಾದ ರಾಕ್‌ಲೈನ್ ಸುಧಾಕರ್‌ ಅವರು ಇಂದು ಮೇಕಪ್ ಹಚ್ಚಿರುವಾಗಲೇ ಹೃದಯಘಾತದಿಂದ ನಮ್ಮನ್ನೆಲ್ಲಾ ಅಗಲಿದ್ದಾರೆ.. ಅವರ ಆತ್ಮಕ್ಕೆ ಶಾಂತಿ ಸಿಗಲಿ… ಓಂ ಶಾಂತಿ..’ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ರೈಲ್ವೇ ಖಾತೆಯ ರಾಜ್ಯ ಸಚಿವ ಸುರೇಶ್ ಅಂಗಡಿ (65) ಕೊರೊನಾದಿಂದ ನಿಧನ

ರಾಕ್‌ಲೈನ್ ಸುಧಾಕರ್ ನಿಧನಕ್ಕೆ ಸಂತಾಪ ಸೂಚಿಸಿ ಟ್ವೀಟ್ ಮಾಡಿರುವ ನಟ ಧನಂಜಯ್ ’ಪ್ರೀತಿಯ ಸುಬ್ಬಿ, ಸಿಕ್ಕಾಗಲೆಲ್ಲಾ ನಗಿಸುತ್ತ, ಬದುಕಿನ ಫಿಲಾಸಫಿಗಳ ನಿನ್ನದೇ ರೀತಿಯಲ್ಲಿ ಅದ್ಭುತವಾಗಿ ಹೇಳುತ್ತ, ಪ್ರೀತಿಯಿಂದ ತಬ್ಬಿ ಒಳ್ಳೆಯದೆ ಆಗುತ್ತದೆ ಎಂದು ಹರಸುತ್ತಿದ್ದೆ. ನಿನ್ನಗಲಿಕೆಯ ನೋವು ಹೇಳತೀರದು. ಶಾಂತಿಯಿಂದ ನಿದ್ರಿಸು. ಇಂತಿ ನಿನ್ನ ಪ್ರೀತಿಯ ಡಾಲಿ’ ಎಂದು ನೋವು ಹಂಚಿಕೊಂಡಿದ್ದಾರೆ.

ಬೆಂಗಳೂರು ಕಮಲನಗರ ನಿವಾಸಿಯಾಗಿದ್ದ ನಟ ರಾಕ್‍ಲೈನ್ ಸುಧಾಕರ್‌ ಎರಡು ತಿಂಗಳುಗಳ ಹಿಂದೆ ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದರು.

ಡ್ರಾಮಾ, ಅಧ್ಯಕ್ಷ, ಪರಮಾತ್ಮ, ಲವ್ ಇನ್ ಮಂಡ್ಯ, ಮುಕುಂದಾ ಮುರಾರಿ, ಅಜಿತ್, ಉಡುಂಬಾ, ಟೋಪಿವಾಲಾ, ಜೂಮ್, ಚಮಕ್, ಪಟಾಕಿ ಸೇರಿದಂತೆ 100ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದರು. ನಟ ಸುಧಾಕರ್, ಪತ್ನಿ ಹಾಗೂ ಪುತ್ರನನ್ನ ಅಗಲಿದ್ದಾರೆ.


ಇದನ್ನೂ ಓದಿ: ಡ್ರಗ್ಸ್‌ ಜಾಲ: ದೀಪಿಕಾ ಪಡುಕೋಣೆ, ಸಾರಾ ಅಲಿಖಾನ್‌ಗೆ ನೋಟಿಸ್‌ ಜಾರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಕಾಂಗ್ರೆಸ್ ಪ್ರಣಾಳಿಕೆ ಸರ್ಕಾರಿ ಟೆಂಡರ್‌ಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ಭರವಸೆ ನೀಡಿದೆ...

0
ಮೇ 2,2024ರಂದು ಗುಜರಾತ್‌ನ ಸುರೇಂದ್ರನಗರದಲ್ಲಿ ಚುನಾವಣಾ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ " ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಸರ್ಕಾರಿ ಟೆಂಡರ್‌ಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ಕಲ್ಪಿಸುವ ಭರವಸೆ ನೀಡಿದೆ" ಎಂದಿದ್ದಾರೆ. "ಕಾಂಗ್ರೆಸ್‌ನ ಪ್ರಣಾಳಿಕೆ...