Homeಕರ್ನಾಟಕಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ಗೆದ್ದಿರುವ ’ಡೊಳ್ಳು’ ಸಿನಿಮಾ ಟೀಸರ್‌ ಬಿಡುಗಡೆ, ಜುಲೈನಲ್ಲಿ ತೆರೆಗೆ

ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ಗೆದ್ದಿರುವ ’ಡೊಳ್ಳು’ ಸಿನಿಮಾ ಟೀಸರ್‌ ಬಿಡುಗಡೆ, ಜುಲೈನಲ್ಲಿ ತೆರೆಗೆ

- Advertisement -
- Advertisement -

ಇನೋವೇಟಿವ್‌ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಅತ್ಯುತ್ತಮ ಕನ್ನಡ ಚಿತ್ರವೆಂದು ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ, ರಾಜಸ್ಥಾನ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಸ್ಪೆಷಲ್ ಜ್ಯೂರಿ ಪ್ರಶಸ್ತಿ ಮತ್ತು ಅತ್ಯುತ್ತಮ ಪ್ರಾದೇಶಿಕ ಚಿತ್ರವೆಂಬ ಎರಡು ಪ್ರಮುಖ ಪ್ರಶಸ್ತಿ ಗೆದ್ದಿದ್ದ ಕನ್ನಡದ ’ಡೊಳ್ಳು’ ಸಿನಿಮಾದ ಟೀಸರ್‌ ಬಿಡುಗಡೆಯಾಗಿದೆ. ಚಿತ್ರ ಜುಲೈನಲ್ಲಿ ತೆರೆಗೆ ಬರಲಿದೆ.

ಗೋವಾದಲ್ಲಿ ನಡೆದ 52ನೇ ಭಾರತ ಅಂತಾರಾಷ್ಟ್ರೀಯ ಸಿನಿಮಾ ಉತ್ಸವದಲ್ಲಿ ಕನ್ನಡದ ‘ಡೊಳ್ಳು’ ಸಿನಿಮಾಕ್ಕೆ ಪನೊರಮಾ ವಿಭಾಗದಲ್ಲಿ ಅತ್ಯುತ್ತಮ ಸಿನಿಮಾ ಪ್ರಶಸ್ತಿ ದೊರೆತಿದೆ. ಭಾರತೀಯ ಅಂತಾರಾಷ್ಟ್ರೀಯ ಸಿನಿಮೋತ್ಸವ, ಢಾಕಾ ಅಂತರಾಷ್ಟ್ರೀಯ ಸಿನಿಮೋತ್ಸವ, ನೇಪಾಳ ಅಂತಾರಾಷ್ಟ್ರೀಯ ಸಿನಿಮೋತ್ಸವ, ಚೆನ್ನೈ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಸೇರಿದಂತೆ ಹಲವು ಕಡೆ ಪ್ರದರ್ಶನಗೊಂಡಿದೆ.

ಗ್ರಾಮೀಣ ಭಾಗದಲ್ಲಿ ಹಾಸುಹೊಕ್ಕಾಗಿರುವ ಜನಪದ ಕಲೆ ಡೊಳ್ಳಿನ ಮಹತ್ವ ಸಾರುವ ಕಥಾಹೂರಣ ಹೊಂದಿರುವ ಡೊಳ್ಳು ಚಿತ್ರವನ್ನು ನಿರ್ದೇಶಕ ಪವನ್ ಒಡೆಯರ್ ಅವರ ನಿರ್ಮಾಣ ಸಂಸ್ಥೆ ’ಒಡೆಯರ್ ಮೂವಿಸ್’ ನಿರ್ಮಾಣ ಮಾಡಿದೆ. ಡೊಳ್ಳು ಚಿತ್ರಕ್ಕೆ ’ಮಹಾನ್ ಹುತಾತ್ಮ’ ಕಿರುಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ಪಡೆದಿದ್ದ ಸಾಗರ್ ಪುರಾಣಿಕ್ ನಿರ್ದೇಶನವಿದೆ.

ಕೈಲಾಸದಲ್ಲಿ ಕುಳಿತಿರುವ ಶಿವಪ್ಪನನ್ನು ಒಲಿಸಿಕೊಳ್ಳುವ ಭಕ್ತಿ ಮಾರ್ಗ ಕೂಡ ಡೊಳ್ಳು ಅಂತಾ ನಂಬಿರುವ ಹಳ್ಳಿ ಜನರು, ಡೊಳ್ಳು ಕಲೆಯನ್ನು ಜೀವಿಸುವ ಯುವಕನ ಪ್ರೀತಿ, ಡೊಳ್ಳು ಕುಣಿತ, ಡೊಳ್ಳಿನ ಮಹತ್ವ ಪ್ರಾಮುಖ್ಯತೆಯನ್ನು ಈ ಸಿನಿಮಾದಲ್ಲಿ ಕಾಣಬಹುದು ಎನ್ನುತ್ತದೆ ಚಿತ್ರತಂಡ.

ಇದನ್ನೂ ಓದಿ: ‘ಚಾರ್ಲಿ 777’ ಭಾವುಕತೆಯಾಚೆಗೆ ತೆರೆದುಕೊಳ್ಳದ ಸರಳರೇಖೆಯ ಸಿನಿಮಾ

ಈ ಸಿನಿಮಾ ಈಗಾಗಲೇ ಹಲವು ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ಅಲ್ಲದೇ ಹಲವು ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿಯೂ ಪ್ರದರ್ಶನಗೊಂಡಿದೆ. ಗೋವಿಂದಾಯ ನಮಃ, ಗೂಗ್ಲಿ, ರಣವಿಕ್ರಮ, ಜೆಸ್ಸಿ, ನಟರಾಜ ಸರ್ವೀಸ್ ಮತ್ತು ನಟ ಸಾರ್ವಭೌಮ ಸಿನಿಮಾಗಳನ್ನು ನಿರ್ದೇಶಿಸಿರುವ ಪವನ್ ಒಡೆಯರ್, ತಮ್ಮ ’ಒಡೆಯರ್ ಮೂವಿಸ್’ ನಿರ್ಮಾಣ ಸಂಸ್ಥೆಯಡಿ ಚಿತ್ರ ನಿರ್ಮಾಣ ಮಾಡಿದ್ದಾರೆ.

ಚಿತ್ರದಲ್ಲಿ ಕಿರುತೆರೆ ನಟ ಕಾರ್ತಿಕ್ ಮಹೇಶ್ ನಾಯಕನಾಗಿ, ನಿಧಿ ಹೆಗ್ಡೆ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಬಾಬು ಹಿರಣ್ಣಯ್ಯ, ಚಂದ್ರ ಮಯೂರ್ ಮತ್ತು ಶರಣ್ ಸುರೇಶ್ ಪ್ರಮುಖ ತಾರಂಗಣ ಚಿತ್ರಕ್ಕಿದೆ. ಶ್ರೀನಿಧಿ ಡಿಎಸ್ ಚಿತ್ರಕಥೆ ಬರೆದಿದ್ದು, ಅನಂತ್ ಕಾಮತ್ ಸಂಗೀತ ಸಂಯೋಜಿಸಿದ್ದಾರೆ.

 


ಇದನ್ನೂ ಓದಿ: ದನ ಸಾಗಿಸುತ್ತಿದ್ದ ಮುಸ್ಲಿಂ ವ್ಯಕ್ತಿಯನ್ನು ಹೊಡೆದು ಕೊಂದಿದ್ದು ಮತ್ತು ಕಾಶ್ಮೀರ ನರಮೇಧಕ್ಕೂ ಯಾವುದೇ ವ್ಯತ್ಯಾಸವಿಲ್ಲ: ನಟಿ ಸಾಯಿ ಪಲ್ಲವಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ದ್ವೇಷ ರಾಜಕಾರಣವನ್ನು ಹಿಮ್ಮೆಟ್ಟಿಸುವ ಕೆಲಸ ಕರ್ನಾಟಕದಿಂದ ಆರಂಭವಾಗಬೇಕಿದೆ: ಯೋಗೇಂದ್ರ ಯಾದವ್‌ | Naanu Gauri

ದ್ವೇಷ ರಾಜಕಾರಣವನ್ನು ಹಿಮ್ಮೆಟ್ಟಿಸುವ ಕೆಲಸ ಕರ್ನಾಟಕದಿಂದ ಆರಂಭವಾಗಬೇಕಿದೆ: ಯೋಗೇಂದ್ರ ಯಾದವ್‌

0
ದೇಶದ ತುಂಬ ಹರಡಿರುವ ದ್ವೇಷ ರಾಜಕಾರಣವನ್ನು ಹಿಮ್ಮೆಟ್ಟಿಸುವ ಕೆಲಸ ಕರ್ನಾಟಕದಿಂದ ಆರಂಭವಾಗಬೇಕಿದೆ ಎಂದು ಸ್ವರಾಜ್ ಪಕ್ಷದ ಮುಖ್ಯಸ್ಥ, ರೈತ ಹೋರಾಟಗಾರ ಯೋಗೇಂದ್ರ ಯಾದವ್‌ ಬುಧವಾರ ಬೆಂಗಳೂರಿನಲ್ಲಿ ಹೇಳಿದ್ದಾರೆ. ಅವರು ‘ಕರ್ನಾಟಕದ ಜನ ಯಾಕೆ...