Homeಕರ್ನಾಟಕಸಿನಿಮಾ ಸೆಟ್‌ನಲ್ಲಿ 'ಆಂತರಿಕ ಸಮಿತಿ' ಬೇಡವೆಂದ ಕನ್ನಡ ಚಲನಚಿತ್ರ ನಿರ್ಮಾಪಕರು!

ಸಿನಿಮಾ ಸೆಟ್‌ನಲ್ಲಿ ‘ಆಂತರಿಕ ಸಮಿತಿ’ ಬೇಡವೆಂದ ಕನ್ನಡ ಚಲನಚಿತ್ರ ನಿರ್ಮಾಪಕರು!

- Advertisement -
- Advertisement -

ಕೆಲಸದ ಸ್ಥಳದಲ್ಲಿ ಮಹಿಳಾ ಸುರಕ್ಷತೆಯನ್ನು ಖಾತರಿಪಡಿಸುವ ‘ಆಂತರಿಕ ಸಮಿತಿ’ ರಚನೆಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ(ಕೆಎಫ್‌ಸಿಸಿ)ಯ ನಿರ್ಮಾಪಕರು ಮತ್ತು ನಟರು ಸೋಮವಾರ ತೀವ್ರ ವಿರೋಧವನ್ನು ವ್ಯಕ್ತಪಡಿಸಿದ್ದಾರೆ. ಸಮಿತಿಯನ್ನು ಅನಗತ್ಯ ಎಂದು ಹೇಳಿರುವ ಕೆಎಫ್‌ಸಿಸಿ ಮುಖಂಡರು, ಅದರಿಂದಾಗಿ ಚಿತ್ರರಂಗಕ್ಕೆ “ಆರ್ಥಿಕ ನಷ್ಟ ಉಂಟಾಗಲಿದೆ” ಎಂದು ಎಂದು ಪ್ರತಿಪಾದಿಸಿದ್ದಾರೆ.ಕನ್ನಡ ಚಿತ್ರ ನಿರ್ಮಾಪಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮಲಯಾಳಂ ಚಲನಚಿತ್ರೋದ್ಯಮದಲ್ಲಿ ಹೇಮಾ ಸಮಿತಿ ವರದಿಯ ನಂತರ ಅಲ್ಲಿ ಮಹಿಳಾ ನಟರ ವಿರುದ್ಧ ನಡೆದ ಲೈಂಗಿಕ ದೌರ್ಜನದ ಬೆಚ್ಚಬೀಳಿಸುವ ವರದಿಗಳು ಬಹಿರಂಗಗೊಂಡಿದ್ದವು. ಹಲವಾರು ಖ್ಯಾತ ನಟರ ವಿರುದ್ಧ ಲೈಂಗಿಕ ದೌರ್ಜನ್ಯದ ಪ್ರಕರಣಗಳು ದಾಖಲಾಗಿ, ಮಲಯಾಳಂ ಚಿತ್ರನಟರ ಸಂಘಟನೆಯಾದ ‘ಅಮ್ಮಾ’ ಸಮಿತಿಯ ಎಲ್ಲರೂ ರಾಜೀನಾಮೆ ನೀಡಿದ್ದರು.

ಅದರ ನಂತರ ಕರ್ನಾಟಕ ರಾಜ್ಯ ಮಹಿಳಾ ಆಯೋಗವು ಇತ್ತೀಚೆಗೆ ಚಲನಚಿತ್ರೋದ್ಯಮದಲ್ಲಿ ಆಂತರಿಕ ಸಮಿತಿ ಸ್ಥಾಪನೆ ಮಾಡುವಂತೆ ಪ್ರಸ್ತಾಪಿಸಿತ್ತು. ಅಲ್ಲದೆ ಕನ್ನಡ ಚಿತ್ರರಂಗದ ನಟರ ಸಂಘಟನೆಯಾದ ಫೈರ್‌ ಕೂಡಾ ಹೇಮಾ ಸಮಿತಿ ಮಾದರಿಯ ಸಮಿತಿ ಕನ್ನಡ ಚಿತ್ರರಂಗದಲ್ಲೂ ರಚಿಸಬೇಕು ಎಂದು ಆಗ್ರಹಿಸಿತ್ತು. ಕೆಲಸದ ಸ್ಥಳಗಳಲ್ಲಿ ಆಂತರಿಕ ಸಮಿತಿಗಳ ರಚನೆ ಮಾಡುವುದು ಲೈಂಗಿಕ ಕಿರುಕುಳ ತಡೆಗಟ್ಟುವಿಕೆ (PoSH) ಕಾಯಿದೆಯ ಪ್ರಕಾರ ಕಡ್ಡಾಯವಾಗಿದೆ.

ಇದನ್ನೂ ಓದಿ: ಬೆಂಗಳೂರು | ನಡುರಸ್ತೆಯಲ್ಲಿ ಯುವಕನ್ನು ಬೆತ್ತಲೆಗೊಳಿಸಿದ ರೌಡಿ ಶೀಟರ್!

ಸೋಮವಾರ ನಡೆದ ಮಹಿಳಾ ಆಯೋಗ ಮತ್ತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (ಕೆಎಫ್‌ಸಿಸಿ) ನಡುವೆ ನಡೆದ ಸಭೆಯಲ್ಲಿ, ಕೇರಳದ ಹೇಮಾ ಸಮಿತಿ ಮಾದರಿಯ ಸಮಿತಿ ರಚನೆಯಾದರೆ ಉದ್ಯಮದ ಹಣಕಾಸಿನ ಮೇಲೆ ಹಾನಿಕಾರಕ ಪರಿಣಾಮ ಬೀರುತ್ತದೆ ಎಂದು ನಿರ್ಮಾಪಕರು ವಾದಿಸಿದ್ದಾರೆ.

ಸಭೆಯಲ್ಲಿ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಮಾತನಾಡಿ, “ಕೇರಳದ ಹೇಮಾ ಸಮಿತಿಯಂತಹ ಸಮಿತಿಯನ್ನು ಕರ್ನಾಟಕದಲ್ಲಿ ರಚಿಸಿದರೆ ಆರ್ಥಿಕ ನಷ್ಟವಾಗುತ್ತದೆ” ಎಂದು ಹೇಳಿದ್ದಾರೆ. ಮತ್ತೋರ್ವ ನಿರ್ಮಾಪಕ ವೆಂಕಟೇಶ್ ಅವರು ಬಂದ್‌ಗೆ ಕರೆ ನೀಡುತ್ತಾ, “ಪೋಷ್ ಬಂದ್ರೆ ಮುಗಿಯಿತು ನಮ್ ಕಥೆ” ಎಂದು ಹೇಳಿದ್ದಾರೆ.

ಆದಾಗ್ಯೂ ಮಹಿಳಾ ಆಯೋಗವು ಕನ್ನಡ ಚಿತ್ರರಂಗದಲ್ಲಿ POSH ಸಮಿತಿ ರಚಿಸಬೇಕು ಎಂಬ ಆಗ್ರಹವನ್ನು ಗಟ್ಟಿಯಾಗಿ ಮಾಡಿದ್ದು, ಕನ್ನಡ ಚಿತ್ರರಂಗದಲ್ಲಿ ನಡೆಯುತ್ತಿರುವ ಕಿರುಕುಳದ ಪ್ರಮಾಣವನ್ನು ನಿರ್ಣಯಿಸಲು ಸಮಗ್ರ ಸಮೀಕ್ಷೆ ಕೂಡಾ ನಡೆಸಬೇಕು ಎಂದು ಕೋರಿದೆ. ಜೊತೆಗೆ ಈ ಮನವಿಗೆ ಪ್ರತಿಕ್ರಿಯಿಸಲು ಕೆಎಫ್‌ಸಿಸಿಗೆ 15 ದಿನಗಳ ಕಾಲಾವಕಾಶ ನೀಡಿದೆ.

ಇದನ್ನೂ ಓದಿ: ಚಿಕ್ಕಮಗಳೂರು | ಪ್ಯಾಲೆಸ್ತೀನ್ ಧ್ವಜ ಹಾರಿಸಿದ 4 ಅಪ್ರಾಪ್ತ ಬಾಲಕರ ಬಂಧನ

ಸಭೆಯಲ್ಲಿದ್ದ ಅನೇಕ ಮಹಿಳಾ ನಟರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಸಾಧ್ಯವಾಗಲಿಲ್ಲ ಎಂದು ಆರೋಪಿಸಿದ್ದು, ಕೆಲವು ನಟರು ಈ ಬಗ್ಗೆ ಮೌನವಹಿಸಿದ್ದಾರೆ ಎನ್ನಲಾಗಿದೆ. ನಟಿ ನೀತು ಶೆಟ್ಟಿ ಅವರು ಹಕ್ಕುಗಳು ಮತ್ತು ಸಮಾನತೆಗಾಗಿ ಫಿಲ್ಮ್ ಇಂಡಸ್ಟ್ರಿ (FIRE) ಸಂಘಟನೆಯ ಸದಸ್ಯರಾಗಿದ್ದರಿಂದ ಅವರಿಗೆ ಮಾತನಾಡಲು ಅವಕಾಶ ನೀಡದೆ ”ಸುಮ್ಮನೆ ಕುಳಿತುಕೊಳ್ಳಿ” ಎಂದು ಹೇಳಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, “ನಾನು ಒಬ್ಬ ನಟಿಯಾಗಿ ಸಭೆಗೆ ಬಂದಿದ್ದೇನೆ. ಉದ್ಯಮದಲ್ಲಿ ಕಿರುಕುಳ ಚಾಲ್ತಿಯಲ್ಲಿದೆ ಎಂದು ನಾನು ಸೂಚಿಸಿದೆ. ಈ ಬಗ್ಗೆ ಮಹಿಳಾ ಆಯೋಗದ ಅಧ್ಯಕ್ಷೆ ಗಮನ ಸೆಳೆದಿದ್ದರು. ಅಲ್ಲದೆ ಚಿತ್ರರಂಗದಲ್ಲಿ ನನಗೆ ಕೂಡಾ ಕಿರುಕುಳ ನಡೆದಿದೆ” ಎಂದು ಅವರು ಹೇಳಿದ್ದಾರೆ.

ನಿರ್ದೇಶಕಿ ಕವಿತಾ ಲಂಕೇಶ್, ನಟರಾದ ತಾರಾ, ಭಾವನಾ, ನೀತು ಶೆಟ್ಟಿ, ಸಿಂಧು ಲೋಕನಾಥ್, ಸಂಜನಾ ಗಲ್ರಾನಿ ಮತ್ತು ವಾಣಿಶ್ರೀ ಸೇರಿದಂತೆ ಚಿತ್ರರಂಗದ ಸುಮಾರು 14 ಮಹಿಳೆಯರು ಸಭೆಯಲ್ಲಿ ಭಾಗವಹಿಸಿದ್ದರು. ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ಸಭೆಗೆ ಹೆಚ್ಚಿನ ಮಹಿಳೆಯರು ಹಾಜರಾಗಿರಲಿಲ್ಲ ಎಂದು ಹೇಳಿದ್ದಾಗಿ ವರದಿಯಾಗಿದೆ. ಅಲ್ಲದೆ, ಮಹಿಳೆಯರ ಬಗ್ಗೆಗಿನ ಸಮಸ್ಯೆಗಳಿಂದ ವಿಷಯವನ್ನು ಬೇರೆಡೆಗೆ ತಿರುಗಿಸಲು ಸಾಕಷ್ಟು ಪ್ರಯತ್ನಗಳು ನಡೆದಿವೆ ಎಂದು ಸಭೆಯಲ್ಲಿ ಪಾಲ್ಗೊಂಡಿದ್ದ ವ್ಯಕ್ತಿಯೊಬ್ಬರು ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಸುಗ್ರೀವಾಜ್ಞೆ ಮೂಲಕ ಒಳ ಮೀಸಲಾತಿ ಜಾರಿಗೆ ‘ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟ’ ಆಗ್ರಹ

ಏತನ್ಮಧ್ಯೆ, ಹಿರಿಯ ನಟಿ ಪುಷ್ಪಾ ಸ್ವಾಮಿ ಅವರು ಸಭೆಯನ್ನು “ಸಮಯ ವ್ಯರ್ಥ” ಎಂದು ಕರೆದಿದ್ದು, ಇಂತಹ ಸಮಿತಿಯ ಅಗತ್ಯವಿಲ್ಲ ಎಂದು ಹೇಳಿದ್ದಾರೆ. “ನಾನು 40 ವರ್ಷಗಳಿಂದ ಇಂಡಸ್ಟ್ರಿಯಲ್ಲಿದ್ದೇನೆ. ಮಹಿಳೆಯರು ಖ್ಯಾತಿ ಮತ್ತು ಐಷಾರಾಮಿ ಕಾರುಗಳಿಗಾಗಿ ಕೆಲಸಗಳನ್ನು ಮಾಡಲು ಒಪ್ಪಿಕೊಳ್ಳುವುದನ್ನು ನಾನು ನೋಡಿದ್ದೇನೆ. ಅವರು ಸಮಸ್ಯೆಯಾಗಿದ್ದರೆ ಈ ಬಗ್ಗೆ ಕಳವಳ ವ್ಯಕ್ತಪಡಿಸಬೇಕಿತ್ತು. ಮುಖ್ಯಮಂತ್ರಿ ಬಳಿಗೆ ಏಕೆ ಹೋಗಬೇಕು?” ಎಂದು ಅವರು ಕೇಳಿದ್ದಾರೆ.

ಸಭೆಯ ನಂತರ ಕೆಎಫ್‌ಸಿಸಿ ಪತ್ರಿಕಾಗೋಷ್ಠಿಯನ್ನೂ ನಡೆಸಿದ್ದು, ನಂತರ ಕೆಎಫ್‌ಸಿಸಿಯ ಕೆಲವು ಸದಸ್ಯರು ಮತ್ತು ನಟಿ ಸಂಜನಾ ನಡುವೆ ನಾಟಕೀಯ ವಾಗ್ವಾದವೂ ನಡೆಯಿತು. ಕೆಎಫ್‌ಸಿಸಿಯ ಪತ್ರಿಕಾಗೋಷ್ಠಿ ಮುಗಿದ ನಂತರ ಸಂಜನಾ ಅವರು ಕೆಎಫ್‌ಸಿಸಿ ಅಧ್ಯಕ್ಷ ಎನ್‌ಎಂ ಸುರೇಶ್ ಅವರ ಆಸನವನ್ನು ಬಳಸಿ ಮಾಧ್ಯಮಗಳೊಂದಿಗೆ ಮಾತನಾಡಿದ್ದರು. ಈ ವೇಳೆ ಕೆಲವು ಕೆಎಫ್‌ಸಿಸಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದು, ಸಂಜನಾ ಅವರನ್ನು “ಪ್ರೋಟೋಕಾಲ್” ಅನುಸರಿಸಲು ಕೇಳಿದ್ದು, “ಯಾರೇ ಇರ್ಲಿ, ಅವ್ರ ಅವ್ರ ಜಾಗದಲ್ಲಿ, ಅವ್ರು ಅವ್ರು ಇರ್ಬೇಕು” ಎಂದು ಹೇಳಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ನಟಿ ಸಂಜನಾ ಗಲ್ರಾನಿ, ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿಚೌದರಿ ಅವರನ್ನು ಭೇಟಿಯಾಗಲು ಇವತ್ತು ನಾನು ಹೋಗ್ತಾ ಇದ್ದೇನೆ. ಕನ್ನಡ ಚಿತ್ರರಂಗದಲ್ಲಿ ಮಹಿಳಾ ಸುರಕ್ಷಾ ಬೋರ್ಡ್‌ ಸ್ಥಾಪನೆ ಆಗುವವರೆಗೂ ನಾನು ವಿರಮಿಸುವುದಿಲ್ಲ. ಇದು ನನ್ನ ಕನಸಾಗಿದ್ದು ನನಸು ಮಾಡುವವರೆಗೂ ಹೋರಾಡುತ್ತೇನೆ” ಎಂದು ಹೇಳಿದ್ದಾರೆ.

ವಿಡಿಯೊ ನೋಡಿ: ರಾಜ್ಯಗಳ ಅಸ್ಮಿತೆ ಹಕ್ಕು ಮತ್ತು ಪಾಲಿನ ರಕ್ಷಣೆಗಾಗಿ ರಾಷ್ಟ್ರೀಯ ಅಭಿಯಾನ ಚಾಲನಾ ಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...