Homeಕರ್ನಾಟಕಬಾವುಟಕ್ಕೆ ಬೆಂಕಿ ಇಟ್ಟವರನ್ನು ಶಿಕ್ಷಿಸಿ, ನಮ್ಮ ಧ್ವಜ ಹಿಡಿದ ಭುಜಗಳನ್ನು ರಕ್ಷಿಸಿ: ಡಾ.ಹಂಸಲೇಖ

ಬಾವುಟಕ್ಕೆ ಬೆಂಕಿ ಇಟ್ಟವರನ್ನು ಶಿಕ್ಷಿಸಿ, ನಮ್ಮ ಧ್ವಜ ಹಿಡಿದ ಭುಜಗಳನ್ನು ರಕ್ಷಿಸಿ: ಡಾ.ಹಂಸಲೇಖ

ಕನ್ನಡ ದ್ರೋಹಿಗಳನ್ನು ಹಾಗೆಯೇ ಬಿಟ್ಟರೆ ಕರ್ನಾಟಕ ನಿಮ್ಮನ್ನು ಕ್ಷಮಿಸುವುದಿಲ್ಲ ಎಂದ ಎಚ್.ಡಿ.ಕುಮಾರಸ್ವಾಮಿ

- Advertisement -
- Advertisement -

ಮಹಾರಾಷ್ಟ್ರದಲ್ಲಿ ಕನ್ನಡ ಧ್ವಜ ಸುಟ್ಟುಹಾಕಿರುವ ಘಟನೆಯನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಸಂಗೀತ ನಿರ್ದೇಶಕ ಹಂಸಲೇಖ, ಕನ್ನಡ ಚಿತ್ರನಟರು ಸೇರಿದಂತೆ ಹಲವರು ಖಂಡಿಸಿದ್ದಾರೆ.

ಎಂಇಎಸ್ ಮುಖಂಡರ ಮುಖಕ್ಕೆ ಮಸಿಬಳಿದವರನ್ನು ಪೊಲೀಸರು ಬಂಧಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಇವರುಗಳು ಕನ್ನಡಕ್ಕಾಗಿ ಹೋರಾಡಿದವರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಮುಖ್ಯಮಂತ್ರಿ ಮತ್ತು ಗೃಹ ಸಚಿವರಿಗೆ ಆಗ್ರಹಿಸಿದ್ದಾರೆ.

ಈ ಕುರಿತು ಸಂಗೀತ ನಿರ್ದೇಶಕ ಹಂಸಲೇಖ “ಬೆಳಗಾವಿ ಕರ್ನಾಟಕದ 2ನೇ ರಾಜಧಾಣಿ ನೆನಪಿರಲಿ…ನಮ್ಮ ಧ್ವಜ-ನಮ್ಮ ಮಾನ ಮತ್ತು ನಮ್ಮ ಪ್ರಾಣ..ಬೆಳಕು ಕೊಡುವ ಬಾವುಟಕ್ಕೆ ಬೆಂಕಿ ಇಟ್ಟವರನ್ನು ಶಿಕ್ಷಿಸಿ…ನಮ್ಮ ಧ್ವಜ ಹಿಡಿದ ಭುಜಗನ್ನು ರಕ್ಷಿಸಿ” ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಕಸಾಪ ನೂತನ ಅಧ್ಯಕ್ಷರ ಶುದ್ಧ ಕನ್ನಡ ವ್ಯಾಮೋಹ ಮತ್ತು ಭಾಷೆಯ ಜಾಯಮಾನ

ಘಟನೆ ಖಂಡಿಸಿ ಸರಣಿ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ “ಎಂಇಎಸ್‌ ಪುಂಡರು ಕನ್ನಡ ಧ್ವಜಕ್ಕೆ ಅಪಮಾನ ಮಾಡಿರುವ ಘಟನೆ ಅತ್ಯಂತ ಹೇಯ. ಧ್ವಜವನ್ನು ಸುಟ್ಟು ವಿಕೃತಿ ಮೆರೆದಿರುವುದು ನೀಚ ಕೃತ್ಯ. ಅಖಂಡ ಕರ್ನಾಟಕದ ಆಸ್ಮಿತೆ ಸಾರುವ ನಮ್ಮ ಧ್ವಜದ ವಿಚಾರದಲ್ಲಿ ಆಗಿರುವ ಅಪಚಾರ ಕ್ಷಮಾರ್ಹವಲ್ಲ” ಎಂದಿದ್ದಾರೆ.  

“ಬಹುಭಾಷಾ ಪ್ರೇಮ, ಸಾಮರಸ್ಯ ಕನ್ನಡಿಗರ ದೌರ್ಬಲ್ಯವಲ್ಲ, ಔದಾರ್ಯ. ಇದನ್ನು ಕಿಡಿಗೇಡಿಗಳು ಅರ್ಥ ಮಾಡಿಕೊಳ್ಳಬೇಕಿತ್ತು. ಈ ಪರಮ ಕಿರಾತಕ ಕೃತ್ಯದ ವಿರುದ್ಧ ರಾಜ್ಯ ಸರಕಾರ ಅತ್ಯಂತ ಕಠಿಣವಾಗಿ ವರ್ತಿಸಬೇಕು. ನಮ್ಮ ಧ್ವಜವನ್ನು ಅಪಮಾನಿಸಿದ ಕನ್ನಡ ದ್ರೋಹಿಗಳಿಗೆ ತಕ್ಕಶಾಸ್ತಿ ಮಾಡಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಕನ್ನಡ ದ್ರೋಹಿಗಳನ್ನು ಹಾಗೆಯೇ ಬಿಟ್ಟರೆ ಕರ್ನಾಟಕ ನಿಮ್ಮನ್ನು ಕ್ಷಮಿಸುವುದಿಲ್ಲ. ತಕ್ಷಣವೇ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ಕ್ರಮ ವಹಿಸಬೇಕು ಹಾಗೂ ಕನ್ನಡಕ್ಕಾಗಿ ಹೋರಾಡಿದವರನ್ನು ಕೂಡಲೇ ಬಿಡುಗಡೆ ಮಾಡಬೇಕು” ಎಂದು ಆಗ್ರಹಿಸಿದ್ದಾರೆ.

ಇತ್ತ ಕನ್ನಡ ಪರ ಸಂಘಟನೆಗಳು ಕನ್ನಡ ಬಾವುಟಗಳನ್ನು ಸುಟ್ಟವರ ಮೇಲೆ ಕ್ರಮ ಕೈಗೊಳ್ಳಲು ಮತ್ತು ಬೆಳಗಾವಿಯಲ್ಲಿ ಕನ್ನಡಿಗರ, ಕನ್ನಡ ಹೋರಾಟಗಾರರ ಮೇಲೆ ದಾಳಿ ನಡೆಸುತ್ತಿರುವ ಎಂಇಎಸ್ ಸಂಘಟನೆಯನ್ನು ನಿಷೇಧಿಸಬೇಕೆಂದು ಒತ್ತಾಯಿಸಿದೆವು ಬೆಂಗಳೂರು ಮೈಸೂರು, ಕಲಬುರಗಿ, ಕೊಲ್ಲಾಪುರ, ಚಿಕ್ಕಮಗಳೂರು ಸೇರಿದಂತೆ ಹಲವೆಡೆ ಪ್ರತಿಭಟನೆ ನಡೆಸಿದ್ದಾರೆ.

ಕನ್ನಡ ಚಿತ್ರರಂಗವೂ ಕನ್ನಡ ಪರ ಹೋರಾಟಗಾರರ ಬೆಂಬಲಕ್ಕೆ ನಿಂತಿದೆ. ನಟ ಶಿವ ರಾಜ್‌ಕುಮಾರ್‌, ದರ್ಶನ್‌ ತೂಗುದೀಪ, ದುನಿಯಾ ವಿಜಯ್, ಜಗ್ಗೇಶ್, ಪ್ರಜ್ವಲ್ ದೇವರಾಜ್ ಮತ್ತು ನಿರ್ದೇಶಕ ಪವನ್‌ ಒಡೆಯರ್‌ ಸೇರಿದಂತೆ ಹಲವರು ಕನ್ನಡ ಧ್ವಜವನ್ನು ಸುಟ್ಟವರಿಗೆ ತಕ್ಕ ಶಿಕ್ಷೆ ನೀಡುವಂತೆ ಮತ್ತು ಕನ್ನಡ ಪರ ಹೋರಾಟಗಾರರನ್ನು ಬಿಡುಗಡೆಗೊಳಿಸುವಂತೆ ಆಗ್ರಹಿಸಿದ್ದಾರೆ. ಹಲವು ಮಂದಿ #ಕನ್ನಡಹೋರಾಟಗಾರರನ್ನಬಿಡುಗಡೆಗೊಳಿಸಿ ಎಂಬ ಹ್ಯಾಶ್‌ಟ್ಯಾಗ್ ಬಳಸಿ ಟ್ವೀಟ್ ಮಾಡುತ್ತಿದ್ದಾರೆ.

ಇದನ್ನೂ ಓದಿ: ಕನ್ನಡಪರ ಹೋರಾಟಗಾರರನ್ನು ಬೆಂಬಲಿಸಿದ ಕನ್ನಡ ಚಿತ್ರರಂಗ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗದಿದ್ದರೆ ಮತ್ತೆ ಹಾಗೆ ಮಾಡ್ತಾರೆ: ಅತ್ಯಾಚಾರ ಸಂತ್ರಸ್ತೆಯ ಸಹೋದರಿ ಹೇಳಿಕೆ

0
"ಪ್ರಜ್ವಲ್ ಮತ್ತು ರೇವಣ್ಣ ಯಾವತ್ತೂ ತಲೆ ಎತ್ತಿ ನಡೆಯಬಾರದು, ಅಂತಹ ಶಿಕ್ಷೆಯಾಗಬೇಕು" ಎಂದು ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯೊಬ್ಬರ ಸಹೋದರಿ ಮಾಲಾ (ಹೆಸರು ಬದಲಿಸಲಾಗಿದೆ) ಹೇಳಿರುವುದಾಗಿ thenewsminute.com ವರದಿ ಮಾಡಿದೆ. ಮಾಲಾಗೆ ತನ್ನ ಸಹೋದರಿ...