Homeಕರ್ನಾಟಕ'ಕನ್ನಡ ಬಾವುಟ ನಮ್ಮ ಗುರುತು': ಅಧಿಕೃತ ಮಾನ್ಯತೆಗಾಗಿ ರಕ್ಷಣಾ ವೇದಿಕೆಯಿಂದ ಅಭಿಯಾನ

‘ಕನ್ನಡ ಬಾವುಟ ನಮ್ಮ ಗುರುತು’: ಅಧಿಕೃತ ಮಾನ್ಯತೆಗಾಗಿ ರಕ್ಷಣಾ ವೇದಿಕೆಯಿಂದ ಅಭಿಯಾನ

- Advertisement -
- Advertisement -

ಕನ್ನಡ ಬಾವುಟಕ್ಕೆ ಅಧಿಕೃತ ಮಾನ್ಯತೆ ನೀಡಬೇಕೆಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಇದೇ ಶನಿವಾರ ಸಂಜೆ 5 ಗಂಟೆಯಿಂದ ಎಕ್ಸ್‌ನಲ್ಲಿ ಅಭಿಯಾನ ಹಮ್ಮಿಕೊಂಡಿದೆ.

ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಅವರು, ”ಕನ್ನಡಬಾವುಟ_ನಮ್ಮಗುರುತು #KannadaFlag_MyPride” ಎಂಬ ಹ್ಯಾಶ್ ಟ್ಯಾಗ್‌ಗಳ ಅಡಿಯಲ್ಲಿ ಈ ಅಭಿಯಾನ ನಡೆಸಲಾಗುತ್ತಿದ್ದು, ಕನ್ನಡ ಬಾವುಟಕ್ಕೆ ಅಧಿಕೃತ ಮಾನ್ಯತೆ ನೀಡಬೇಕೆಂದು ಕರ್ನಾಟಕ ಸರ್ಕಾರ ಈಗಾಗಲೇ ಭಾರತ ಒಕ್ಕೂಟ ಸರ್ಕಾರಕ್ಕೆ ನೀಡಿರುವ ಪ್ರಸ್ತಾವನೆಯನ್ನು ಅಂಗೀಕರಿಸಬೇಕೆಂದು ಒತ್ತಾಯಿಸಲಿದ್ದೇವೆ ಎಂದು ತಿಳಿಸಿದ್ದಾರೆ.

”ಕನ್ನಡಿಗರಿಗೆ ಕನ್ನಡ ಬಾವುಟ ಮೊದಲ ಗುರುತು. ಭಾರತ ಒಕ್ಕೂಟದ ಭಾಗವಾಗಿ ನಮ್ಮದೇ ಆದ ಬಾವುಟವೊಂದನ್ನು ಹೊಂದುವುದಕ್ಕೆ ಅವಕಾಶ ಇರಬೇಕು‌. ಈಗಾಗಲೇ ಕೋಟ್ಯಂತರ ಕನ್ನಡಿಗರು ಕನ್ನಡ ಬಾವುಟವನ್ನು ಆರಾಧಿಸುತ್ತಾರೆ. ಹೀಗಾಗಿ ಒಕ್ಕೂಟ ಸರ್ಕಾರ ಕೂಡಲೇ ಕನ್ನಡ ಬಾವುಟಕ್ಕೆ ಅಧಿಕೃತ ಮಾನ್ಯತೆ ನೀಡಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

”ಶನಿವಾರ ಸಂಜೆ ಸಾವಿರಾರು ಕರವೇ ಕಾರ್ಯಕರ್ತರು ಈ ಅಭಿಯಾನದಲ್ಲಿ ಪಾಲ್ಗೊಳ್ಳಲಿದ್ದು, ಕನ್ನಡ ಬಾವುಟಕ್ಕೆ ಮಾನ್ಯತೆ ಕೊಡಿಸುವ ಈ ಹೋರಾಟಕ್ಕೆ ಎಲ್ಲ ಕನ್ನಡಿಗರೂ ಬೆಂಬಲ ನೀಡಬೇಕು” ಎಂದು ಕೋರಲಾಗಿದೆ.

ಇದನ್ನೂ ಓದಿ: ಸಾಹಿತಿಗಳಿಗೆ ಬೆದರಿಕೆ ಪತ್ರ: ಸಾವರ್ಕರ್ ಕುರಿತ ಪುಸ್ತಕ ಓದುತ್ತಿದ್ದ ಆರೋಪಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...