Homeಕರ್ನಾಟಕನಾಡಧ್ವಜ ಹಾರಿಸದೆ ದ್ರೋಹವೆಸಗಿವರಿಗೆ ಕನ್ನಡಿಗರ ಕ್ಷಮೆ ಇಲ್ಲ: ’#ನಮ್ಮಧ್ವಜ_ನಮ್ಮಹೆಮ್ಮೆ’ ಟ್ರೆಂಡ್

ನಾಡಧ್ವಜ ಹಾರಿಸದೆ ದ್ರೋಹವೆಸಗಿವರಿಗೆ ಕನ್ನಡಿಗರ ಕ್ಷಮೆ ಇಲ್ಲ: ’#ನಮ್ಮಧ್ವಜ_ನಮ್ಮಹೆಮ್ಮೆ’ ಟ್ರೆಂಡ್

ನಿಮ್ಮ ಅಸ್ಮಿತೆಯನ್ನು ಕಳೆದುಕೊಳ್ಳದೆ ದೇಶವನ್ನು ಪ್ರೀತಿಸಬಹುದು, ನೋಡ್ರೀ ಹುಸಿ ದೇಶ ಭಕ್ತರೆ" ಎಂದು ಅಮೆರಿಕ ಸಂಯುಕ್ತ ಸಂಸ್ಥಾನದ ರಾಜ್ಯಗಳು ಪ್ರತ್ಯೇಕ ಧ್ವಜ ಹೊಂದಿರುವ ಚಿತ್ರವನ್ನು ರೀಟ್ವೀಟ್ ಮಾಡಲಾಗಿದೆ.

- Advertisement -
- Advertisement -

ಕನ್ನಡ ರಾಜ್ಯೋತ್ಸವದಂದು ಜಿಲ್ಲಾ ಕೇಂದ್ರಗಳಲ್ಲಿ ಕನ್ನಡ ಧ್ವಜ ಹಾರಿಸದೇ ಕೇವಲ ರಾಷ್ಟ್ರಧ್ವಜ ಮಾತ್ರ ಹಾರಿಸಿದ ರಾಜ್ಯ ಸರ್ಕಾರದ ಕ್ರಮಕ್ಕೆ ವಿರೋಧ ವ್ಯಕ್ತಪಡಿಸಿರುವ ಕನ್ನಡಿಗರು, ಟ್ವಿಟರ್‌‌ನಲ್ಲಿ ಬಿಜೆಪಿ ಸರ್ಕಾರದ ವಿರುದ್ದ “#ನಮ್ಮಧ್ವಜ_ನಮ್ಮಹೆಮ್ಮೆ” ಹ್ಯಾಶ್‌ಟ್ಯಾಗ್‌ ಮೂಲಕ ಟ್ರೆಂಡ್ ಮಾಡಿದ್ದಾರೆ.

ಕರವೇ ಕರೆ ನೀಡಿದ್ದ ಟ್ವಿಟರ್ ಅಭಿಯಾನಕ್ಕೆ ಸಾವಿರಾರು ಕನ್ನಡಿಗರು ದನಿಗೂಡಿಸಿದ್ದು, ಕರ್ನಾಟಕ ಟ್ರೆಂಡಿಂಗ್‌ನಲ್ಲಿ #ನಮ್ಮಧ್ವಜ_ನಮ್ಮಹೆಮ್ಮೆ ಹ್ಯಾಷ್‌ಟ್ಯಾಗ್ ನಂಬರ್ ಒನ್ ಸ್ಥಾನದಲ್ಲಿದ್ದು, ಆಲ್ ಇಂಡಿಯಾ ಮಟ್ಟದಲ್ಲಿ 29ನೇ ಸ್ಥಾನ ಪಡೆದಿದೆ. ಒಂದು ಗಂಟೆಯ ಅವಧಿಯಲ್ಲಿಯೇ 5,000 ಹೆಚ್ಚು ಟ್ವೀಟ್‌ಗಳು ದಾಖಲಾಗಿವೆ.

ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ನಾರಾಯಣ ಗೌಡ್ರು, “ಕನ್ನಡ ಧ್ವಜಾರೋಹಣ ಮಾಡದ ಕರ್ನಾಟಕ‌ ಸರ್ಕಾರದ ಮಂತ್ರಿಗಳಿಗೆ ಧಿಕ್ಕಾರ. ಕನ್ನಡವೆಂಬುದು ನಮ್ಮ ಗುರುತು, ನಮ್ಮ ಜೀವ, ನಮ್ಮ ಉಸಿರು, ನಮ್ಮ ಬದುಕು. ಕನ್ನಡ ಬೇಡ‌ ಎನ್ನುವವರು ಕರ್ನಾಟಕಕ್ಕೂ ಬೇಡ. ಕನ್ನಡ ಧ್ವಜಕ್ಕೆ ಅಪಮಾನಿಸಿದವರು ಕನ್ನಡ ದ್ರೋಹಿಗಳು. ಈ ಪ್ರಮಾದಕ್ಕೆ ಕಾರಣರಾದ ಸರ್ಕಾರದ‌ ಮುಖ್ಯ ಕಾರ್ಯದರ್ಶಿ ವಜಾಗೊಳಿಸಿ” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ರಾಜ್ಯೋತ್ಸವದಂದು ಕನ್ನಡ ಧ್ವಜ ಹಾರಿಸದ ಸರ್ಕಾರದ ನಡೆಗೆ ಕನ್ನಡಿಗರ ಆಕ್ರೋಶ: ಟ್ವಿಟರ್ ಆಂದೋಲನಕ್ಕೆ ಕರೆ

ಕರ್ನಾಟಕ ರಕ್ಷಣಾ ವೇದಿಕೆ ಸರಣಿ ಟ್ವೀಟ್ ಮಾಡಿದ್ದು, ಸರ್ಕಾರದ ವಿರುದ್ದ ತೀವ್ರ ಅಸಮಧಾನ ವ್ಯಕ್ತಪಡಿದೆ. “ಕನ್ನಡ ಬಾವುಟ ನಮ್ಮೆಲ್ಲರ ಸ್ವಾಭಿಮಾನದ ಪ್ರತೀಕ. ಅದನ್ನು ನಾಡಜನರೆಲ್ಲರೂ ಅಭಿಮಾನಪೂರ್ವಕವಾಗಿ ಒಪ್ಪಿಕೊಂಡು ಆದರಿಸಿದ್ದಾರೆ. ಕರ್ನಾಟಕವನ್ನು ಆಳಿದ ಎಲ್ಲ ಸರ್ಕಾರಗಳೂ ಕನ್ನಡ ಧ್ವಜಾರೋಹಣ ನಡೆಸುತ್ತ ಕನ್ನಡಿಗರ ಭಾವನೆಗಳ‌ನ್ನು ಗೌರವಿಸಿದೆ. ಬಿಜೆಪಿ ಸರ್ಕಾರದ ಮಂತ್ರಿಗಳು ಈ ಪರಂಪರೆಯ‌ನ್ನು ನಾಶಪಡಿಸಲು ಯತ್ನಿಸುತ್ತಿದ್ದಾರೆ” ಎಂದು ಕಿಡಿಕಾರಿದೆ.

ಕನ್ನಡ ಪರ ಹೋರಾಟಗಾರ ರೂಪೇಶ್ ರಾಜಣ್ಣ ಕೂಡಾ ಸರಣಿ ಟ್ವೀಟ್ ಮಾಡಿದ್ದಾರೆ. “ಹಿಂದಿ ಹೇರಿಕೆ ತಡೆಯಿರಿ ಅಂದ್ರೆ ಅದಕ್ಕೆ ತಾಕತ್ ಇಲ್ಲಾ. ಬ್ಯಾಂಕ್ ಪರೀಕ್ಷೆಗಳನ್ನು ಕನ್ನಡದಲ್ಲಿ ತನ್ನಿ ಅಂದ್ರೆ ಅದಕ್ಕೆ ತಾಕತ್ ಇಲ್ಲಾ. ಕನ್ನಡ ವಿರೋಧಿ ನೀತಿ ಅನುಸರಿಸುವ ಎಂಇಎಸ್ ವಿರುದ್ಧ ಕ್ರಮ ತಗೊಂಡಿಲ್ಲ. ಕನ್ನಡಿಗರಿಗೆ ಉದ್ಯೋಗ ಕಾನೂನು ಮಾಡಲು ಶಕ್ತಿ ಇಲ್ಲ. ಆದ್ರೆ ನಾಡ ಧ್ವಜ ಹಾರಿಸದೆ ದ್ರೋಹ ಎಸಗಿದ ನಿಮಗೆ ಕನ್ನಡಿಗರ ಕ್ಷಮೆ ಇಲ್ಲ” ಎಂದು ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.

ಇದನ್ನೂ ಓದಿ: ’ಕನ್ನಡ ಕಂಕಣ ದಿನ’; ಕರ್ನಾಟಕ ರಣಧೀರ ಪಡೆಯಿಂದ ವಿಭಿನ್ನ ರಾಜ್ಯೋತ್ಸವ!

ಜಯತೀರ್ಥ ನಾಡಗೌಡ ಅವರು, “ಜರ್ಮನಿಯಲ್ಲಿ 88 ಲಕ್ಷ ಜನಸಂಖ್ಯೆಯಿದೆ. ಅಲ್ಲಿನ ರಾಜ್ಯಗಳಿಗೆ ತನ್ನದೆ ಆದ ಧ್ವಜವಿದ್ದ ಹೊರತೂ ಅಲ್ಲಿ ಯಾವುದೇ ಸಮಸ್ಯೆಯಿಲ್ಲ. ಆದರೆ ಕರ್ನಾಟಕ ಸರ್ಕಾರಕ್ಕೆ ಮಾತ್ರ ಯಾಕೆ ಸಮಸ್ಯೆ” ಎಂದು ಪ್ರಶ್ನಿಸಿದ್ದಾರೆ.

ಭರತ್. ಪಿ ಅವರು, “ಸಿ.ಟಿ. ರವಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಅವಮಾನ, ಮುಖ್ಯಮಂತ್ರಿಗಳೇ ಈ ವ್ಯಕ್ತಿಯನ್ನು ಮೊದಲು ಕಿತ್ತುಹಾಕಿ” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಕನ್ನಡ ಏಕೀಕರಣದಿಂದಲೂ ಕನ್ನಡ ಭಾಷೆಯ ಏಳ್ಗೆಗಾಗಿ, ಬಸವ ತತ್ವಕ್ಕಾಗಿ ಶ್ರಮಿಸುತ್ತಿರುವ ಭಾಲ್ಕಿ ಮಠ

ಮಂಜು ಎನ್ನುವವರು, “ನಿಮ್ಮ ಅಸ್ಮಿತೆಯನ್ನು ಕಳೆದುಕೊಳ್ಳದೆ ದೇಶವನ್ನು ಪ್ರೀತಿಸಬಹುದು, ನೋಡ್ರೀ ಹುಸಿ ದೇಶ ಭಕ್ತರೆ” ಎಂದು ಅಮೆರಿಕ ಸಂಯುಕ್ತ ಸಂಸ್ಥಾನದ ರಾಜ್ಯಗಳು ಪ್ರತ್ಯೇಕ ಧ್ವಜ ಹೊಂದಿರುವ ಚಿತ್ರವನ್ನು ರೀಟ್ವೀಟ್ ಮಾಡಿ ಉದಾಹರಣೆ ಸಮೇತ ಪೋಸ್ಟ್ ಮಾಡಿದ್ದಾರೆ.

ವಿಷ್ಣು, ಕನ್ನಡ ರಾಜ್ಯೋತ್ಸವದ ದಿನ ಕನ್ನಡ ಧ್ವಜವನ್ನು ಆರೋಹಣ ಮಾಡದವರಿಗೆ ನಾಚಿಕೆಯಾಗಬೇಕು ಎಂದು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಕನ್ನಡಕ್ಕೆ ಕನ್ನಡದ್ದೆ ಊಟ ಉಂಟಾ? ಡಾ. ಕೆ.ಸಿ ರಘು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...