ನಮ್ಮನ್ನು ಅಗಲಿದ ನಟ ಪುನೀತ್ ರಾಜ್‌ಕುಮಾರ್ ಅವರನ್ನು ಸ್ಮರಿಸಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಕನ್ನಡ ರಾಜ್ಯೋತ್ಸವದ ಶುಭಕೋರಿದ್ದಾರೆ.
ಸರಣಿ ಟ್ವೀಟ್ ಮೂಲಕ ರಾಜ್ಯೋತ್ಸವದ ಶುಭಕೋರಿರುವ ಅವರು, “ಕನ್ನಡಿಗರ ಮನೆ-ಮನದಲ್ಲೂ ಕನ್ನಡ ಬೆಳಗುತ್ತಿದೆ, ನಿಜ. ಆದರೆ, ನಮ್ಮ ಕಣ್ಮಣಿಯಾಗಿದ್ದ ಅಕ್ಕರೆಯ ಅಪ್ಪು, ಅಣ್ಣಾವ್ರ ಮುದ್ದಿನ ಕುಡಿ ಪುನೀತ್ ರಾಜಕುಮಾರ್ ಅವರು ಕನ್ನಡ ಹಬ್ಬಕ್ಕೆ ಮುನ್ನ ನಮನ್ನಗಲಿದ್ದಾರೆ. ನಮ್ಮೊಳಗೆ ಕನ್ನಡ ದೀಪವನ್ನು ಬೆಳಗುತ್ತಲೇ ಕಳೆದುಹೋದ ಯುವರತ್ನನ ಆದರ್ಶಗಳಿಗೆ ಅಗ್ರಪೀಠ ಹಾಕಿ ನಮಿಸೋಣ. ಆ ಮೂಲಕ ಪುನೀತರಾಗೋಣ” ಎಂದಿದ್ದಾರೆ.
ಜಗತ್ತಿನ ಸಮಸ್ತ ಕನ್ನಡಿಗರಿಗೆ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ನಮ್ಮೆಲ್ಲರ ತನು ಕನ್ನಡ, ಮನ ಕನ್ನಡ, ನುಡಿ ಕನ್ನಡವಾಗಲಿ. ಉಸಿರಿನ ಪ್ರತಿ ಕಣಕಣದಲ್ಲೂ ಕನ್ನಡವಿರಲಿ. ನಮ್ಮ ಆಶಯವೇ ಇದಾಗಿರಲಿ ಎಂದು ತಿಳಿಸಿದ್ದಾರೆ.
ಜಗತ್ತಿನ ಸಮಸ್ತ ಕನ್ನಡಿಗರಿಗೆ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ನಮ್ಮೆಲ್ಲರ ತನು ಕನ್ನಡ, ಮನ ಕನ್ನಡ, ನುಡಿ ಕನ್ನಡವಾಗಲಿ. ಉಸಿರಿನ ಪ್ರತಿ ಕಣಕಣದಲ್ಲೂ ಕನ್ನಡವಿರಲಿ. ನಮ್ಮ ಆಶಯವೇ ಇದಾಗಿರಲಿ.1/4 pic.twitter.com/qKj6X5ZAv6
— H D Kumaraswamy (@hd_kumaraswamy) November 1, 2021
1,500 ವರ್ಷಗಳಿಗೂ ಹೆಚ್ಚು ಘನ ಇತಿಹಾಸವುಳ್ಳ ಕನ್ನಡ, ಶಾಸ್ತ್ರೀಯ ಸ್ಥಾನ ಅಲಂಕರಿಸಿದ ಅಭಿಜಾತ ಕನ್ನಡ, ಅಷ್ಟ ಜ್ಞಾನಪೀಠಗಳ ಮೇರುಗನ್ನಡ, ನಮ್ಮ ಬದುಕು-ಬಾಳ್ವೆಯ ತಾಯ್ಗನ್ನಡ. ಕನ್ನಡವೆಂದರೆ ಬರೀ ಭಾಷೆಯಲ್ಲ, ನಮ್ಮ ಪಾಲಿನ ದೇವಭಾಷೆ. ನಮ್ಮ ಮನಸು-ಕನಸುಗಳನ್ನು ಅರಳಿಸಿ ಭವಿಷ್ಯದ ರೆಕ್ಕೆಕೊಟ್ಟು ಹಾರಲು ಶಕ್ತಿ ತುಂಬುವ ಜೀವಭಾಷೆ ಎಂದು ಬಣ್ಣಿಸಿದ್ದಾರೆ.
ಭೂಮಂಡಲ ಇರುವಷ್ಟು ದಿನ ಕನ್ನಡವಿರುತ್ತದೆ. ಕನ್ನಡ ಇರುವಷ್ಟು ದಿನ ಅಪ್ಪು ಇರುತ್ತಾರೆ. ಈ ವರ್ಷ ಕನ್ನಡದ ಹಬ್ಬವನ್ನು ಪುನೀತ್ ರಾಜಕುಮಾರ್ ಅವರಿಗೆ ಅರ್ಪಿಸುತ್ತಾ, ಮತ್ತೊಮ್ಮೆ ಎಲ್ಲರಿಗೂ ರಾಜ್ಯೋತ್ಸವದ ಶುಭಾಶಯಗಳನ್ನು ಕೋರುತ್ತೇನೆ ಎಂದಿದ್ದಾರೆ.
ಸಿಎಂ ಬೊಮ್ಮಾಯಿ ಶುಭಾಶಯ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಟ್ವೀಟ್ ಮಾಡಿ ಶುಭಕೋರಿದ್ದು, “ನಾಡಿನ ಸಮಸ್ತ ಜನತೆಗೆ 66ನೇ ಕನ್ನಡ ರಾಜ್ಯೋತ್ಸವದ ಹೃತ್ಪೂರ್ವಕ ಶುಭಕಾಮನೆಗಳು. ನಾಡಿನ ಏಕತೆ, ಸ್ವಾಭಿಮಾನ, ಸಾಮರಸ್ಯ, ಸಹಬಾಳ್ವೆಯ ಸಂಕೇತವಾದ ರಾಜ್ಯೋತ್ಸವ ಪ್ರತಿಯೊಬ್ಬ ಕನ್ನಡಿಗನ ಹೆಮ್ಮೆಯ ಆಚರಣೆ. ನಮ್ಮ ಕನ್ನಡದ ಅಸ್ಮಿತೆ ಸದಾ ಜಾಗೃತವಾಗಿರಲಿ, ಕನ್ನಡತನದ ಅಭಿಮಾನ ನಿರಂತರವಾಗಿರಲಿ” ಎಂದು ಆಶಿಸಿದ್ದಾರೆ.
"ನಾಡಿನ ಸಮಸ್ತ ಜನತೆಗೆ ೬೬ನೇ ಕನ್ನಡ ರಾಜ್ಯೋತ್ಸವದ ಹೃತ್ಪೂರ್ವಕ ಶುಭಕಾಮನೆಗಳು. ನಾಡಿನ ಏಕತೆ, ಸ್ವಾಭಿಮಾನ, ಸಾಮರಸ್ಯ, ಸಹಬಾಳ್ವೆಯ ಸಂಕೇತವಾದ ರಾಜ್ಯೋತ್ಸವ ಪ್ರತಿಯೊಬ್ಬ ಕನ್ನಡಿಗನ ಹೆಮ್ಮೆಯ ಆಚರಣೆ. ನಮ್ಮ ಕನ್ನಡದ ಅಸ್ಮಿತೆ ಸದಾ ಜಾಗೃತವಾಗಿರಲಿ, ಕನ್ನಡತನದ ಅಭಿಮಾನ ನಿರಂತರವಾಗಿರಲಿ" : ಮುಖ್ಯಮಂತ್ರಿ @BSBommai.#ಕನ್ನಡರಾಜ್ಯೋತ್ಸವ pic.twitter.com/RBT58cOBD1
— CM of Karnataka (@CMofKarnataka) November 1, 2021
ಸಿದ್ದರಾಮಯ್ಯ ಟ್ವೀಟ್
“ಕನ್ನಡ, ಕನ್ನಡಿಗ ಮತ್ತು ಕರ್ನಾಟಕವನ್ನು ಒಳಗೊಂಡ ಒಟ್ಟು ಕನ್ನಡತನದ ಬದುಕು ಹಸನಾಗಿಸುವ ಗುರಿ ನಮ್ಮದಾಗಿರಲಿ. ಕನ್ನಡವನ್ನು ಉಳಿಸೋಣ, ಬೆಳೆಸೋಣ. ರಾಜ್ಯದ ಸಮಸ್ತ ಕನ್ನಡ ಮನಸ್ಸುಗಳಿಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು” ಎಂದು ಮಾಜಿ ಮುಖ್ಯಮಂತ್ರಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ ಶುಭಕೋರಿದ್ದಾರೆ.
ಕನ್ನಡ,
ಕನ್ನಡಿಗ
ಮತ್ತು
ಕರ್ನಾಟಕವನ್ನು
ಒಳಗೊಂಡ ಒಟ್ಟು ಕನ್ನಡತನದ ಬದುಕು ಹಸನಾಗಿಸುವ ಗುರಿ ನಮ್ಮದಾಗಿರಲಿ.ಕನ್ನಡವನ್ನು ಉಳಿಸೋಣ, ಬೆಳೆಸೋಣ.
ರಾಜ್ಯದ ಸಮಸ್ತ ಕನ್ನಡ ಮನಸ್ಸುಗಳಿಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು.#ಕನ್ನಡರಾಜ್ಯೋತ್ಸವ pic.twitter.com/orWS6GzfE2
— Siddaramaiah (@siddaramaiah) November 1, 2021
ಇದನ್ನೂ ಓದಿರಿ: ಅಪ್ಪು ಒಡನಾಟದ ನೆನಪುಗಳನ್ನು ಹಂಚಿಕೊಂಡ ಮಿಲನ ಸಿನಿಮಾ ನಟಿ ಪಾರ್ವತಿ ತಿರುವೊತು



ಚಾ ಶಿ ಜಯಕುಮಾರ್ ಕೃಷ್ಣರಾಜಪೇಟೆ ಮಂಡ್ಯ ಜಿಲ್ಲೆ