Homeಕರ್ನಾಟಕಕನ್ನಡವೆಂದರೆ ನಮ್ಮ ದೇವ ಭಾಷೆ; ‘ಅಪ್ಪು’ ನೆನೆದು ಎಚ್‌ಡಿಕೆ ಸರಣಿ ಟ್ವೀಟ್‌

ಕನ್ನಡವೆಂದರೆ ನಮ್ಮ ದೇವ ಭಾಷೆ; ‘ಅಪ್ಪು’ ನೆನೆದು ಎಚ್‌ಡಿಕೆ ಸರಣಿ ಟ್ವೀಟ್‌

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್‌ ಮಾಡಿ ಕನ್ನಡ ರಾಜ್ಯೋತ್ಸವದ ಶುಭಕೋರಿದ್ದಾರೆ.

- Advertisement -
- Advertisement -

ನಮ್ಮನ್ನು ಅಗಲಿದ ನಟ ಪುನೀತ್‌ ರಾಜ್‌ಕುಮಾರ್‌ ಅವರನ್ನು ಸ್ಮರಿಸಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರು ಕನ್ನಡ ರಾಜ್ಯೋತ್ಸವದ ಶುಭಕೋರಿದ್ದಾರೆ.

ಸರಣಿ ಟ್ವೀಟ್‌ ಮೂಲಕ ರಾಜ್ಯೋತ್ಸವದ ಶುಭಕೋರಿರುವ ಅವರು, “ಕನ್ನಡಿಗರ ಮನೆ-ಮನದಲ್ಲೂ ಕನ್ನಡ ಬೆಳಗುತ್ತಿದೆ, ನಿಜ. ಆದರೆ, ನಮ್ಮ ಕಣ್ಮಣಿಯಾಗಿದ್ದ ಅಕ್ಕರೆಯ ಅಪ್ಪು, ಅಣ್ಣಾವ್ರ ಮುದ್ದಿನ ಕುಡಿ ಪುನೀತ್‌ ರಾಜಕುಮಾರ್‌ ಅವರು ಕನ್ನಡ ಹಬ್ಬಕ್ಕೆ ಮುನ್ನ ನಮನ್ನಗಲಿದ್ದಾರೆ. ನಮ್ಮೊಳಗೆ ಕನ್ನಡ ದೀಪವನ್ನು ಬೆಳಗುತ್ತಲೇ ಕಳೆದುಹೋದ ಯುವರತ್ನನ ಆದರ್ಶಗಳಿಗೆ ಅಗ್ರಪೀಠ ಹಾಕಿ ನಮಿಸೋಣ. ಆ ಮೂಲಕ ಪುನೀತರಾಗೋಣ” ಎಂದಿದ್ದಾರೆ.

ಜಗತ್ತಿನ ಸಮಸ್ತ ಕನ್ನಡಿಗರಿಗೆ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ನಮ್ಮೆಲ್ಲರ ತನು ಕನ್ನಡ, ಮನ ಕನ್ನಡ, ನುಡಿ ಕನ್ನಡವಾಗಲಿ. ಉಸಿರಿನ ಪ್ರತಿ ಕಣಕಣದಲ್ಲೂ ಕನ್ನಡವಿರಲಿ. ನಮ್ಮ ಆಶಯವೇ ಇದಾಗಿರಲಿ ಎಂದು ತಿಳಿಸಿದ್ದಾರೆ.

1,500 ವರ್ಷಗಳಿಗೂ ಹೆಚ್ಚು ಘನ ಇತಿಹಾಸವುಳ್ಳ ಕನ್ನಡ, ಶಾಸ್ತ್ರೀಯ ಸ್ಥಾನ ಅಲಂಕರಿಸಿದ ಅಭಿಜಾತ ಕನ್ನಡ, ಅಷ್ಟ ಜ್ಞಾನಪೀಠಗಳ ಮೇರುಗನ್ನಡ, ನಮ್ಮ ಬದುಕು-ಬಾಳ್ವೆಯ ತಾಯ್ಗನ್ನಡ. ಕನ್ನಡವೆಂದರೆ ಬರೀ ಭಾಷೆಯಲ್ಲ, ನಮ್ಮ ಪಾಲಿನ ದೇವಭಾಷೆ. ನಮ್ಮ ಮನಸು-ಕನಸುಗಳನ್ನು ಅರಳಿಸಿ ಭವಿಷ್ಯದ ರೆಕ್ಕೆಕೊಟ್ಟು ಹಾರಲು ಶಕ್ತಿ ತುಂಬುವ ಜೀವಭಾಷೆ ಎಂದು ಬಣ್ಣಿಸಿದ್ದಾರೆ.

ಭೂಮಂಡಲ ಇರುವಷ್ಟು ದಿನ ಕನ್ನಡವಿರುತ್ತದೆ. ಕನ್ನಡ ಇರುವಷ್ಟು ದಿನ ಅಪ್ಪು ಇರುತ್ತಾರೆ. ಈ ವರ್ಷ ಕನ್ನಡದ ಹಬ್ಬವನ್ನು ಪುನೀತ್‌ ರಾಜಕುಮಾರ್‌ ಅವರಿಗೆ ಅರ್ಪಿಸುತ್ತಾ, ಮತ್ತೊಮ್ಮೆ ಎಲ್ಲರಿಗೂ ರಾಜ್ಯೋತ್ಸವದ ಶುಭಾಶಯಗಳನ್ನು ಕೋರುತ್ತೇನೆ ಎಂದಿದ್ದಾರೆ.

ಸಿಎಂ ಬೊಮ್ಮಾಯಿ ಶುಭಾಶಯ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಟ್ವೀಟ್‌ ಮಾಡಿ ಶುಭಕೋರಿದ್ದು, “ನಾಡಿನ ಸಮಸ್ತ ಜನತೆಗೆ 66ನೇ ಕನ್ನಡ ರಾಜ್ಯೋತ್ಸವದ ಹೃತ್ಪೂರ್ವಕ ಶುಭಕಾಮನೆಗಳು. ನಾಡಿನ ಏಕತೆ, ಸ್ವಾಭಿಮಾನ, ಸಾಮರಸ್ಯ, ಸಹಬಾಳ್ವೆಯ ಸಂಕೇತವಾದ ರಾಜ್ಯೋತ್ಸವ ಪ್ರತಿಯೊಬ್ಬ ಕನ್ನಡಿಗನ ಹೆಮ್ಮೆಯ ಆಚರಣೆ. ನಮ್ಮ ಕನ್ನಡದ ಅಸ್ಮಿತೆ ಸದಾ ಜಾಗೃತವಾಗಿರಲಿ, ಕನ್ನಡತನದ ಅಭಿಮಾನ ನಿರಂತರವಾಗಿರಲಿ” ಎಂದು ಆಶಿಸಿದ್ದಾರೆ.

ಸಿದ್ದರಾಮಯ್ಯ ಟ್ವೀಟ್‌

“ಕನ್ನಡ, ಕನ್ನಡಿಗ ಮತ್ತು ಕರ್ನಾಟಕವನ್ನು ಒಳಗೊಂಡ ಒಟ್ಟು ಕನ್ನಡತನದ ಬದುಕು ಹಸನಾಗಿಸುವ ಗುರಿ ನಮ್ಮದಾಗಿರಲಿ. ಕನ್ನಡವನ್ನು ಉಳಿಸೋಣ, ಬೆಳೆಸೋಣ. ರಾಜ್ಯದ ಸಮಸ್ತ ಕನ್ನಡ ಮನಸ್ಸುಗಳಿಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು” ಎಂದು ಮಾಜಿ ಮುಖ್ಯಮಂತ್ರಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಟ್ವೀಟ್‌ ಮಾಡಿ ಶುಭಕೋರಿದ್ದಾರೆ.


ಇದನ್ನೂ ಓದಿರಿ: ಅಪ್ಪು ಒಡನಾಟದ ನೆನಪುಗಳನ್ನು ಹಂಚಿಕೊಂಡ ಮಿಲನ ಸಿನಿಮಾ ನಟಿ ಪಾರ್ವತಿ ತಿರುವೊತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಚಾ ಶಿ ಜಯಕುಮಾರ್ ಕೃಷ್ಣರಾಜಪೇಟೆ ಮಂಡ್ಯ ಜಿಲ್ಲೆ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...