ಇತ್ತೀಚಿಗೆ ಕರ್ನಾಟಕದಲ್ಲಿ ಸರ್ಕಾರಿ ಹಾಗೂ ಖಾಸಗೀ ಕಾರ್ಯಕ್ರಮಗಳಲ್ಲಿ ಕನ್ನಡ ಭಾಷೆ ಕಡೆಗಣಿಸುತ್ತಿದ್ದು ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಮಾತ್ರ ಕಾರ್ಯಕ್ರಮ ನಡೆಸುತ್ತಿರುವುದಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಆಕ್ಷೇಪ ವ್ಯಕ್ತಪಡಿಸಿದೆ. ಇನ್ನು ಮುಂದೆ ಕರ್ನಾಟಕದಲ್ಲಿ ಕನ್ನಡ ಕಡೆಗಣಿಸಿದರೆ ಸಹಿಸುವುದಿಲ್ಲ ಎಂದು ಕರವೇ ಎಚ್ಚರಿಕೆ ನೀಡಿದೆ.

ಎಸ್‌ಡಿಎಸ್ ಕ್ಷಯರೋಗ ಸಂಶೋಧನಾ ಕೇಂದ್ರ ಹಾಗೂ ರಾಜೀವ್ ಗಾಂಧಿ ಎದೆರೋಗ ಸಂಸ್ಥೆ ಹಾಗು ರಾಷ್ಟ್ರೀಯ ನರವಿಜ್ಞಾನ ಮತ್ತು ಮಾನಸಿಕ ಆರೋಗ್ಯ ಸಂಸ್ಥೆಗಳಲ್ಲಿ 10-10-2021ರಂದು ನಡೆದ ಕಾರ್ಯಕ್ರಮಗಳಲ್ಲಿ ಕನ್ನಡವನ್ನು ಕಡೆಗಣಿಸಲಾಗಿತ್ತು. ಕಾರ್ಯಕ್ರಮದ ಬ್ಯಾನರ್ ಸೇರಿದಂತೆ ಎಲ್ಲವನ್ನು ಹಿಂದಿ, ಇಂಗ್ಲಿಷ್‌ನಲ್ಲಿ ನಡೆಸಲಾಗಿತ್ತು. ಈ ಹಿನ್ನೆಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಮುಖಂಡರು ಇಂದು ಆ ಸಂಸ್ಥೆಗಳಿಗೆ ಭೇಟಿ ನೀಡಿ ಮುಂದೆ ಕನ್ನಡವನ್ನೇ ಬಳಸುವಂತೆ ಒತ್ತಾಯಿಸಲಾಗಿದೆ.

ಈ ಕುರಿತು ಹೇಳಿಕೆ ನೀಡಿರುವ ಕರವೇ ಸಾಮಾಜಿಕ‌ ಜಾಲತಾಣ ಮಖ್ಯಸ್ಥರಾದ ದಿನೇಶ್ ಕುಮಾರ್ ಎಸ್.ಸಿ, “ನಿಮ್ಹಾನ್ಸ್ ನಿರ್ದೇಶಕಿ ಡಾ.ಪ್ರತಿಮಾ ಹಾಗು ರಾಜೀವ್ ಗಾಂಧಿ‌ ಆಸ್ಪತ್ರೆಯ ನಿರ್ದೇಶಕ‌‌ ಡಾ.ನಾಗರಾಜ್ ಅವರಿಗೆ ಖಂಡನಾ ಪತ್ರವನ್ನು ನೀಡಿದ್ದೇವೆ. ಆಗಿರುವ ಪ್ರಮಾದವನ್ನು ಮತ್ತೆ ಮರುಕಳಿಸದಂತೆ ನೋಡಿಕೊಳ್ಳಬೇಕು ಎಂದು ಎಚ್ಚರಿಕೆ ನೀಡಿದ್ದೇವೆ. ಈ ಸಂದರ್ಭದಲ್ಲಿ ಕನ್ನಡ ಕಡೆಗಣನೆ ಆಗಿರುವುದನ್ನು ಒಪ್ಪಿಕೊಂಡು‌‌ ಕ್ಷಮೆ ಯಾಚಿಸಿದ ನಿರ್ದೇಶಕರು ಇನ್ನುಮುಂದೆ ಈ ರೀತಿಯ ತಪ್ಪುಗಳು ಆಗದಂತೆ ನೋಡಿಕೊಳ್ಳುವುದಾಗಿ ವಾಗ್ದಾನ ಮಾಡಿದರು” ಎಂದಿದ್ದಾರೆ.

ನಿಮ್ಹಾನ್ಸ್ ಸಂಸ್ಥೆಗೆ ನೂರು ಎಕರೆ ಜಾಗ ನೀಡಿ, ಅಡಿಗಲ್ಲು ಹಾಕಿ ಸ್ಥಾಪಿಸಿದ್ದು ರಾಜರ್ಷಿ‌ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು. 1936ರಲ್ಲಿ ನಿಮ್ಹಾನ್ಸ್ ಸಂಸ್ಥೆಯನ್ನು ಸ್ಥಾಪಿಸಿದಾಗ ಹಿಂದಿ ಎಂಬ ಭಾಷೆಯ ಪರಿಚಯವೇ ಕನ್ನಡಿಗರಿಗೆ ಇರಲಿಲ್ಲ. ಇಂಥ‌ ಸಂಸ್ಥೆಯಲ್ಲಿ ಹಿಂದಿ ನುಡಿಗೆ ಹೆಚ್ಚುಗಾರಿಕೆ ನೀಡಿ,‌ ಕನ್ನಡಕ್ಕೆ ಅಪಮಾನ ಎಸಗಿದರೆ ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ದಿನೇಶ್ ಕುಮಾರ್ ತಿಳಿಸಿದ್ದಾರೆ.

ಕರ್ನಾಟಕ ರಕ್ಷಣಾ ವೇದಿಕೆ ನಿಯೋಗದಲ್ಲಿ‌ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಸಣ್ಣೀರಪ್ಪ, ರಾಜ್ಯ ಉಪಾಧ್ಯಕ್ಷ‌ ಬಿ.ಎಚ್.ಸತೀಶ್ ಗೌಡ,‌ ಯುವ ಘಟಕದ ರಾಜ್ಯಾಧ್ಯಕ್ಷ ಟಿ.ಎ.ಧರ್ಮರಾಜ್ ಗೌಡ, ಸಾಮಾಜಿಕ ಜಾಲತಾಣ ಬೆಂಗಳೂರು ನಗರ ಅಧ್ಯಕ್ಷ ನಿತೀಶ್ ಮನುಗೌಡ, ವಿಜಯನಗರ ಕ್ಷೇತ್ರ ಘಟಕದ ಅಧ್ಯಕ್ಷ ಬಾಲು, ಯುವ ಘಟಕದ ಬೆಂಗಳೂರು ನಗರ ಅಧ್ಯಕ್ಷ ಕಾರ್ತಿಕ್ ಸೇರಿದಂತೆ‌ ಹಲವರು ಪಾಲ್ಗೊಂಡಿದ್ದರು.


ಇದನ್ನೂ ಓದಿ: ನೈತಿಕತೆ ಇಲ್ಲದೇ ಬದುಕಲಾಗದು: ಮಾರಲ್ ಪೊಲೀಸಿಂಗ್ ಸಮರ್ಥಿಸಿಕೊಂಡ ಸಿಎಂ ಬಸವರಾಜ ಬೊಮ್ಮಾಯಿ

Donate

ನ್ಯಾಯದ ಜೊತೆಗಿರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ

ಜನಪರ ಸ್ವತಂತ್ರ ಪತ್ರಿಕೋದ್ಯಮವೇ ನಮ್ಮ ಆಶಯ. ನಿಮ್ಮಗಳ ಬೆಂಬಲವೇ ನಮಗೆ ಬಲ. ನ್ಯಾಯದ ಜೊತೆಗಿರಲು ಬಯಸುವ, ಸತ್ಯಪಥವನ್ನು ತುಳಿಯಲು ಪ್ರೋತ್ಸಾಹಿಸುವವರು ಬೆಂಬಲಿಸಿ. ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ ಪಾವತಿಸಬಹುದು.
ಧನ್ಯವಾದಗಳು

Independent journalism can’t be independent without your support, contribute by clicking below.

ಪ್ರತಿವಾರದ ವಿದ್ಯಮಾನಗಳ ವಿಶ್ಲೇಷಣೆಗಳು, ಅಂಕಣಗಳು ಹಾಗೂ ವಿಶೇಷ ಬರಹಗಳನ್ನು ಓದಲು ನ್ಯಾಯಪಥ ಪತ್ರಿಕೆಗೆ ಚಂದಾದಾರರಾಗಿ. ಚಂದಾ ಹಣವನ್ನು ಪಾವತಿಸಲು ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ.
+ posts

1 COMMENT

  1. ಔದು ಕರ್ನಾಟಕದಲ್ಲಿ ಕನ್ನಡ ಭಾಷೆಯೆ ಸಾರ್ವಭೌಮ ,ಕನ್ನಡ ಮೊದಲು ನಂತರ ಹಿಂದಿ ,ಇಂಗ್ಲೀಷ್ ಭಾಷೆ ಸರಿಯಾದ ವಿಚಾರವೇ ,ಆದರೆ ಮೊದಲು ಈ ಹೋರಾಟ ಗಾರರು ಕನ್ನಡ ಭಾಷೆಯ ಇತಿಹಾಸ ,ವ್ಯಾಕರಣ ,ನಾಡಗೀತೆ ಗಳನ್ನ ಮೊದಲು ತಿಳಿದಿರಬೇಕು .

LEAVE A REPLY

Please enter your comment!
Please enter your name here