Homeಕರ್ನಾಟಕಅಪ್ಪು ಹಾದಿಯಲ್ಲಿ ನಡೆಯುತ್ತಿರುವ ಅಭಿಮಾನಿಗಳು: ನೇತ್ರದಾನಕ್ಕೆ ಸಾಲುಗಟ್ಟಿ ನಿಂತ ಫ್ಯಾನ್ಸ್

ಅಪ್ಪು ಹಾದಿಯಲ್ಲಿ ನಡೆಯುತ್ತಿರುವ ಅಭಿಮಾನಿಗಳು: ನೇತ್ರದಾನಕ್ಕೆ ಸಾಲುಗಟ್ಟಿ ನಿಂತ ಫ್ಯಾನ್ಸ್

- Advertisement -
- Advertisement -

ನೇತ್ರದಾನ ಮಾಡಿ ನಾಲ್ವರ ಬಾಳಿಗೆ ಬೆಳಕಾಗಿರುವ ನಟ ಪುನೀತ್ ರಾಜ್‌ಕುಮಾರ್‌ ಅವರ ಹಾದಿಯಲ್ಲಿ ನಡೆಯಲು ನಿರ್ಧರಿಸಿರುವ ಅವರ ಅಭಿಮಾನಿ ಬಳಗ ತಾವು ಕೂಡ ನೇತ್ರದಾನ ಮಾಡಲು ಮುಂದಾಗಿದ್ದಾರೆ. ಕಳೆದ ಎರಡು ದಿನಗಳಿಂದ ಬಳ್ಳಾರಿಯಲ್ಲಿ ಸರತಿ ಸಾಲಿನಲ್ಲಿ ನಿಂತು ನೇತ್ರದಾನಕ್ಕೆ ನೋಂದಣಿ ಮಾಡಿಸುತ್ತಿದ್ದಾರೆ.

ತಮ್ಮ ಕಣ್ಣುಗಳನ್ನು ದಾನ ಮಾಡಿದ್ದ ಅಪ್ಪು ಅವರಿಂದ ಸ್ಪೂರ್ತಿ ಪಡೆದ ಬಳಿಕ, ಅವರ ಅಭಿಮಾನಿಗಳ ಸಂಖ್ಯೆಯನ್ನು ನೋಡಿ ಬಳ್ಳಾರಿ ಜಿಲ್ಲೆಯ ಆರೋಗ್ಯ ಅಧಿಕಾರಿಗಳು ಅಚ್ಚರಿಗೊಂಡಿದ್ದಾರೆ. ತಮ್ಮ ಸಾವಿನ ನಂತರ ತಮ್ಮ ಕಣ್ಣುಗಳನ್ನು ದಾನ ಮಾಡವ ಪ್ರತಿಜ್ಞೆಗೆ ಮುಂದಾಗಿದ್ದಾರೆ.

ಹಲವರು ಆಸ್ಪತ್ರೆಗಳಿಗೆ ತೆರಳಿ ತಮ್ಮ ಕಣ್ಣುಗಳನ್ನು ದಾನ ಮಾಡುವುದಾಗಿ ಬರೆದುಕೊಡುತ್ತಿದ್ದಾರೆ. ಅದಕ್ಕಾಗಿ ಆಸ್ಪತ್ರೆ ಮತ್ತು ಖಾಸಗಿ ವೈದ್ಯರಿಗೆ ಕರೆ ಮಾಡಿ, ನೇತ್ರದಾನದ ವಿಧಾನಗಳ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಪುನೀತ್ ಅವರ ತಂದೆ ಡಾ. ರಾಜ್‌ಕುಮಾರ್ ನಿಧನರಾದಾಗ ಅವರ ಕಣ್ಣುಗಳನ್ನು ದಾನ ಮಾಡಿದ್ದರು. ಆಗಲೂ ಇದೇ ರೀತಿಯ ವಾತಾವರಣ ಕಂಡುಬಂದಿತ್ತು.

ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಪುನೀತ್ ರಾಜ್‌ಕುಮಾರ್ ಅವರು ಹಲವಾರು ಸಿನಿಮಾಗಳನ್ನು ಚಿತ್ರೀಕರಿಸಿದ್ದಾರೆ. ಹೀಗಾಗಿ, ಈ ಎರಡೂ ಜಿಲ್ಲೆಗಳಲ್ಲಿ ಅಪಾರ ಅಭಿಮಾನಿಗಳಿದ್ದಾರೆ. ತಮ್ಮ ನೆಚ್ಚಿನ ನಟನನ್ನು ಕಳೆದುಕೊಂಡ ಅಭಿಮಾನಿಗಳು, ಪುನೀತ್ ಅವರ ಹಾದಿಯಲ್ಲಿ ಸಾಗಿ ಶ್ರದ್ಧಾಂಜಲಿ ಅರ್ಪಿಸುವ ನಿಟ್ಟಿನಲ್ಲಿ ನೇತ್ರದಾನದ ವಾಗ್ದಾನ ಕೈಗೊಳ್ಳುತ್ತಿರುವುದು ಹೆಚ್ಚಾಗಿದೆ.

ಇದನ್ನೂ ಓದಿ: ಕನ್ನಡ ನಟರ ಅಭಿಮಾನಿಗಳಿಂದ ’ಫ್ಯಾನ್ಸ್ ವಾರ್‌’ಗೆ ಫುಲ್ ಸ್ಟಾಪ್!

ಇನ್ನು ಅಪ್ಪು ಅಭಿಮಾನಿಗಳ ಆಶಯದಂತೆ ಹೊಸಪೇಟೆಯಲ್ಲಿ ಪುನೀತ್ ರಾಜ್ ಕುಮಾರ್ ಪ್ರತಿಮೆ ಸ್ಥಾಪಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಈಗಾಗಲೇ ಹೇಳಿದ್ದಾರೆ. ಬಳ್ಳಾರಿ ಮತ್ತು ವಿಜಯನಗರದ ಅಭಿಮಾನಿಗಳು ದೇಣಿಗೆ ನೀಡಲು ಮುಂದಾಗಿದ್ದಾರೆ.

ಅಪ್ಪು ಅವರ ಕಣ್ಣುಗಳನ್ನು ಆಧುನಿಕ ತಂತ್ರಜ್ಞಾನದೊಂದಿಗೆ ಕಸಿ ಮಾಡಿ ನಾಲ್ಕು ಜನರಿಗೆ ಕಣ್ಣುಗಳನ್ನು ದಾನ ಮಾಡಿರುವುದು ಹಲವು ಜನರ ಮೇಲೆ ಪರಿಣಾಮ ಬೀರಿದೆ. ಹಲವರು ತಮ್ಮ ಕಣ್ಣುಗಳನ್ನೂ ತಾವು ನಿಧನ ಹೊಂದಿದ ಬಳಿಕ ಅದೇ ರೀತಿಯಲ್ಲಿ ಬಳಸಿಕೊಳ್ಳಬೇಕು ಎಂದು ಹೇಳುತ್ತಿದ್ದಾರೆ.

ಬಳ್ಳಾರಿ ಜಿಲ್ಲಾ ಅಂಧತ್ವ ನಿಯಂತ್ರಣ ಕಾರ್ಯಕ್ರಮದ ಅಧಿಕಾರಿ ಡಾ.ಸಿ.ರಾಜಶೇಖರ್ ರೆಡ್ಡಿ, “ಕಳೆದ ಎರಡು ದಿನಗಳಿಂದ ಅನೇಕರು ನೇತ್ರದಾನ ಮಾಡುವ ಬಗ್ಗೆ ವಿಚಾರಿಸುತ್ತಿದ್ದಾರೆ. ಇದು ಸರಳ ಪ್ರಕ್ರಿಯೆಯಾಗಿದ್ದು, ಫಾರ್ಮ್ ಅನ್ನು ಭರ್ತಿ ಮಾಡಬೇಕು. ಫಾರ್ಮ್‌ನಲ್ಲಿ ವೈಯಕ್ತಿಕ ವಿವರಗಳನ್ನು ನೀಡಬೇಕು. ದಾನಕ್ಕಾಗಿ ತಮ್ಮ ಕಣ್ಣುಗಳನ್ನು ಒತ್ತೆ ಇಟ್ಟಿರುವ ವ್ಯಕ್ತಿಯು ಸತ್ತರೆ ಹತ್ತಿರದ ಕುಟುಂಬದ ಸದಸ್ಯರು ವೈದ್ಯಕೀಯ ತಂಡಕ್ಕೆ ತಿಳಿಸುತ್ತಾರೆ. ದಾನಿಯ ಮರಣದ ಆರು ಗಂಟೆಗಳ ಒಳಗೆ ನಾವು ಅವರ ಕಣ್ಣುಗಳನ್ನು ತೆಗೆದುಕೊಳ್ಳುತ್ತೇವೆ. ಅಲ್ಲದೆ, ನಾವು ನೇತ್ರದಾನ ಪ್ರಕ್ರಿಯೆಯನ್ನು ಮತ್ತಷ್ಟು ಸರಳಗೊಳಿಸಲು ಯೋಜಿಸುತ್ತಿದ್ದೇವೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ನಾಲ್ವರಿಗೆ ಬೆಳಕಾದ ನಟ ಪುನೀತ್‌ ಕಣ್ಣುಗಳು: ರಾಜ್ಯದಲ್ಲಿ ಮೊದಲ ಬಾರಿಗೆ ಹೊಸ ತಂತ್ರ ಬಳಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...