Homeಕರ್ನಾಟಕಕಲಬುರಗಿ: ಪ್ರತ್ಯೇಕ ರಾಜ್ಯದ ಧ್ವಜ ಪ್ರದರ್ಶನ: ಹಲವರು ಪೊಲೀಸ್ ವಶಕ್ಕೆ

ಕಲಬುರಗಿ: ಪ್ರತ್ಯೇಕ ರಾಜ್ಯದ ಧ್ವಜ ಪ್ರದರ್ಶನ: ಹಲವರು ಪೊಲೀಸ್ ವಶಕ್ಕೆ

- Advertisement -
- Advertisement -

ಕನ್ನಡ ರಾಜ್ಯೋತ್ಸವದ ದಿನದಂದೇ ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಧ್ವಜಾರೋಹಣಕ್ಕೆ ಯತ್ನಿಸಿದ್ದು, ಈ ವೇಳೆ 20ಕ್ಕೂ ಅಧಿಕ ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಕಲಬುರಗಿ ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿಯ ಸದಸ್ಯರು ಜಮಾಯಿಸಿ ಪ್ರತ್ಯೇಕ ರಾಜ್ಯದ ಬಾವುಟ ಪ್ರದರ್ಶಿಸಿ, ಮೆರವಣಿಗೆ ಮೂಲಕ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದ ಬಳಿ ತೆರಳಿ ಅಲ್ಲಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ಧ್ವಜಾರೋಹಣ ಮಾಡಲು ಸಿದ್ಧತೆ ನಡೆಸಿದ್ದರು.

ವಿಚಾರ ತಿಳಿದು ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು ಯುನೈಟೆಡ್ ಆಸ್ಪತ್ರೆಯ ಬಳಿ ಮೆರವಣಿಗೆ ತಡೆದು 20ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿಯ ಅಧ್ಯಕ್ಷ ಎಂ.ಎಸ್ .ಪಾಟೀಲ್, ಉದಯಕುಮಾರ ಜೇವರ್ಗಿ, ವಿನೋದಕುಮಾರ ಜೇನೆವರಿ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಭದ್ರತೆ ವ್ಯವಸ್ಥೆ ಮಾಡಲಾಗಿದೆ.
ಇನ್ನು ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಕರ್ನಾಟಕ ರಾಜ್ಯೋತ್ಸವಕ್ಕೆ ವಿರುದ್ಧವಾಗಿ ಆಯೋಜಿಸಿರುವ ಕರಾಳ ದಿನಾಚರಣೆಯಲ್ಲಿ ಭಾಗವಹಿಸಲು ಆಗಮಿಸುತ್ತಿದ್ದ ಶಿವಸೇನೆ ಕಾರ್ಯಕರ್ತರನ್ನು ನಿಪ್ಪಾಣಿಯ ಕೊಗನೊಳ್ಳಿ ಬಳಿ ಜಿಲ್ಲಾ ಪೊಲೀಸರು ತಡೆದಿದ್ದಾರೆ.
ಶಿವಸೇನೆಯ ಕೊಲ್ಹಾಪುರ ಜಿಲ್ಲಾಧ್ಯಕ್ಷ ವಿಜಯ ದೇವನೆ ಸೇರಿ 30  ಮಂದಿಯನ್ನು ಜಿಲ್ಲೆ ಪ್ರವೇಶಿಸದಂತೆ ತಡೆದಿದ್ದೇವೆ ಎಂದು ಎಸ್ಪಿ ಡಾ.ಭೀಮಾಶಂಕರ ಗುಳೇದ ತಿಳಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...