Homeಚಳವಳಿರಾಜ್ಯೋತ್ಸವದಂದು ಕನ್ನಡ ಧ್ವಜ ಹಾರಿಸದ ಸರ್ಕಾರದ ನಡೆಗೆ ಕನ್ನಡಿಗರ ಆಕ್ರೋಶ: ಟ್ವಿಟರ್ ಆಂದೋಲನಕ್ಕೆ ಕರೆ

ರಾಜ್ಯೋತ್ಸವದಂದು ಕನ್ನಡ ಧ್ವಜ ಹಾರಿಸದ ಸರ್ಕಾರದ ನಡೆಗೆ ಕನ್ನಡಿಗರ ಆಕ್ರೋಶ: ಟ್ವಿಟರ್ ಆಂದೋಲನಕ್ಕೆ ಕರೆ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರೇ ಕನ್ನಡ ಧ್ವಜ ಹಾರಿಸಿರುವಾಗ ಜಿಲ್ಲಾ ಉಸ್ತುವಾರಿ ಸಚಿವರು ಬಾವುಟ ಹಾರಿಸದಂತೆ ತಡೆದ ಶಕ್ತಿ ಯಾವುದು ಎಂದು ಕರ್ನಾಟಕ ರಕ್ಷಣಾ ವೇದಿಕೆ ಪ್ರಶ್ನಿಸಿದೆ.

- Advertisement -
- Advertisement -

ನಿನ್ನೆ 65ನೇ ಕನ್ನಡ ರಾಜ್ಯೋತ್ಸವ ಜರುಗಿದೆ. ಪ್ರತಿ ವರ್ಷವು ಕನ್ನಡದ ಹಬ್ಬದಂತೆ ವಿಜೃಂಭಣೆಯಿಂದ ಆಚರಿಸುತ್ತಿದ್ದ ಕನ್ನಡಿಗರ ಪಾಲಿಗೆ ಈ ವರ್ಷ ಕೊರೊನಾ ಸಣ್ಣ ತಡೆಯಾದರೆ ಬಿಜೆಪಿ ಸರ್ಕಾರ ದೊಡ್ಡ ಬಂಡೆಯಂತೆ ಅಡ್ಡನಿಂತಿದೆ. ರಾಜ್ಯೋತ್ಸವದಂದೇ ಜಿಲ್ಲಾಕೇಂದ್ರಗಳಲ್ಲಿ ಕನ್ನಡ ಧ್ವಜ ಹಾರಿಸದೆ ಕೇವಲ ರಾಷ್ಟ್ರಧ್ವಜ ಮಾತ್ರ ಹಾರಿಸಿದ ಸರ್ಕಾರದ ನಡೆಗೆ ಕನ್ನಡಿಗರು ಕೆಂಡಾಮಂಡಲವಾಗಿದ್ದಾರೆ.

ಮೊದಲಿಗೆ ಕೊರೊನಾ ಮಾರ್ಗಸೂಚಿಗಳ ಅನ್ವಯ 100 ಜನಕ್ಕಿಂತ ಹೆಚ್ಚು ಸೇರಬಾರದು, ಮೆರವಣಿಗೆ ಮಾಡಬಾರದು, ಕಾರ್ಯಕ್ರಮಕ್ಕೆ ಅನುಮತಿ ಪಡೆಯಬೇಕೆಂದು ನಿಯಮಗಳನ್ನು ಹೇರಿದ ಸರ್ಕಾರ, ಉಪಚುನಾವಣೆಯ ಪ್ರಚಾರಕ್ಕೆ ಮಾತ್ರ ನಿಷೇಧ ಹೇರಿಲ್ಲ ಎಂದು ಹಲವು ಕನ್ನಡಿಗರು ಕಿಡಿಕಾರಿದ್ದಾರೆ.

ಮಂಡ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇವಲ ರಾಷ್ಟ್ರ ಧ್ವಜ ಮಾತ್ರ ಹಾರಿಸಿರುವುದು.

ಇನ್ನು ಕನ್ನಡ ರಾಜ್ಯೋತ್ಸವದ ದಿನವಾದ ನಿನ್ನೆ ಹಲವಾರು ಜಿಲ್ಲಾಕೇಂದ್ರಗಳಲ್ಲಿ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ಕನ್ನಡ ಧ್ವಜ ಹಾರಿಸದೇ ಕನ್ನಡಿಗರ ಸ್ವಾಭಿಮಾನವನ್ನು ಕೆಣಕಲಾಗಿದೆ. ಸ್ವತಃ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರೇ ಕನ್ನಡ ಧ್ವಜ ಹಾರಿಸಿರುವಾಗ ಜಿಲ್ಲಾ ಉಸ್ತುವಾರಿ ಸಚಿವರು ಬಾವುಟ ಹಾರಿಸದಂತೆ ತಡೆದ ಶಕ್ತಿ ಯಾವುದು ಎಂದು ಕರ್ನಾಟಕ ರಕ್ಷಣಾ ವೇದಿಕೆ ಪ್ರಶ್ನಿಸಿದೆ.

ಸರ್ಕಾರದ, ಸಚಿವರುಗಳ ಉದ್ಧಟತನದ, ಅಭಿಮಾನಶೂನ್ಯ ನಡೆಯನ್ನು ಖಂಡಿಸಲು ಇಂದು ಸಂಜೆ 5 ಗಂಟೆಯಿಂದ #ನಮ್ಮಧ್ವಜ_ನಮ್ಮಹೆಮ್ಮೆ ಹೆಸರಿನಲ್ಲಿ ಟ್ವಿಟರ್ ಆಂದೋಲನಕ್ಕೆ ಕರೆ ನೀಡಿದೆ.

ಕರ್ನಾಟಕ ಏಕೀಕರಣದ 65 ವರ್ಷಗಳ ಇತಿಹಾಸದಲ್ಲಿ ರಾಜ್ಯೋತ್ಸವದಂದು ಕನ್ನಡ ಧ್ವಜ ರಾರಾಜಿಸುತ್ತಿತ್ತು. ಆದರೆ 2017 ರಿಂದ ಬಿಜೆಪಿ ಪಕ್ಷ ಮತ್ತು ಸಂಘಪರಿವಾರ ಒಂದು ದೇಶ- ಒಂದು ಧ್ವಜ ಎಂಬ ಹೆಸರಿನಲ್ಲಿ ಕೇವಲ ರಾಷ್ಟ್ರಧ್ವಜ ಮಾತ್ರ ಹಾರಿಸಬೇಕು ಎಂಬ ಪ್ರಚಾರ ಆರಂಭಿಸಿತು. ಅಲ್ಲಿಂದ ಆರಂಭವಾಗಿ ದೇಶಕ್ಕೆ ಒಂದೇ ಧ್ವಜ ಸಾಕು, ಕನ್ನಡ ಧ್ವಜದ ಅವಶ್ಯಕತೆಯಿಲ್ಲ ಎನ್ನುವಷ್ಟರ ಮಟ್ಟಿಗೆ ಚರ್ಚೆಗಳು ನಡೆದಿವೆ. ದೇಶದ ಏಕತೆ, ಏಕ ರಾಷ್ಟ್ರ-ಏಕ ಸಂಸ್ಕೃತಿ ಎಂಬಂತೆ ರಾಷ್ಟ್ರಧ್ವಜವೇ ಸಾಕು ಎಂಬುದು ಸಂಘಪರಿವಾರದ ಅಭಿಪ್ರಾಯ.

ಇದಕ್ಕೆ ವಿರುದ್ಧವಾಗಿ ನಮಗೆ ರಾಷ್ಟ್ರಧ್ವಜ ಮತ್ತು ನಾಡಧ್ವಜ ಎರಡೂ ಬೇಕು. ಕನ್ನಡ ಧ್ವಜ ನಮ್ಮ ಸ್ವಾಭಿಮಾನದ ಸಂಕೇತ. ಕನ್ನಡ ರಾಜ್ಯೋತ್ಸವದಂದು ನಾಡಧ್ವಜ ಹಾರಬೇಕು ಎಂದು ಕನ್ನಡಿಗರು ಮತ್ತು ಪ್ರಗತಿಪರರು ಒತ್ತಾಯಿಸಿದ್ದರು.

ಕಳೆದ ವರ್ಷ ಕನ್ನಡ ಸಂಸ್ಕೃತಿ ಇಲಾಖೆ ಮತ್ತು ಕೆಲ ತಹಶೀಲ್ದಾರ್‌ಗಳು ಕನ್ನಡ ಧ್ವಜ ಹಾರಿಸದಂತೆ ಸುತ್ತೋಲೆ ಹೊರಡಿಸಿದ್ದರು. ಇದರಿಂದ ಹಲವು ಜಿಲ್ಲಾಕೇಂದ್ರಗಳಲ್ಲಿ ಕೇವಲ ರಾಷ್ಟ್ರಧ್ವಜ ಹಾರಿಸಿ ರಾಜ್ಯೋತ್ಸವ ಮಾಡಲಾಗಿತ್ತು. ಇದರಿಂದ ಸಿಡಿದೆದ್ದ ಕನ್ನಡಿಗರು ರಾಜ್ಯದ್ಯಂತ ಪ್ರತಿಭಟನೆ ನಡೆಸಿದ್ದರು. ಅಷ್ಟು ಮಾತ್ರವಲ್ಲದೇ ಸ್ವಾತಂತ್ರ್ಯ ದಿನಾಚರಣೆಯಂದು ಕೇವಲ ಕನ್ನಡ ಬಾವುಟ ಹಾರಿಸಿ ತಮ್ಮ ಪ್ರತಿರೋಧ ವ್ಯಕ್ತಪಡಿಸಿದ್ದರು.

ಈ ವರ್ಷವೂ ಸಹ ಬಿಜೆಪಿ ಸರ್ಕಾರ ಜಿಲ್ಲಾ ಕೇಂದ್ರಗಳಲ್ಲಿ ಕೇವಲ ರಾಷ್ಟ್ರಧ್ವಜ ಹಾರಿಸಿ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದೆ. ಇದು ಕೇವಲ ಧ್ವಜದ ವಿಷಯ ಮಾತ್ರವಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕನ್ನಡಿಗರ ಅಸ್ಮಿತೆಯನ್ನು ಪ್ರಶ್ನಿಸುವ ಕೆಲಸದಲ್ಲಿ ನಿರತವಾಗಿವೆ ಎಂದು ಕನ್ನಡಿಗರು ಸಿಡಿದೆದ್ದಿದ್ದಾರೆ.


ಇದನ್ನೂ ಓದಿ: ಕನ್ನಡ ಧ್ವಜಾರೋಹಣವಿಲ್ಲದೇ ಕನ್ನಡ ರಾಜ್ಯೋತ್ಸವ: ಸರ್ಕಾರದ ವಿರುದ್ಧ ಕಿಡಿ ಕಾರಿದ ನೆಟ್ಟಿಗರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯುಎಪಿಎ ಕಾಯಿದೆಯಡಿ ಆರೋಪ ಹೊರಿಸಿದ ಮಾತ್ರಕ್ಕೆ ವಿದೇಶ ಪ್ರಯಾಣದ ಹಕ್ಕು ಕಸಿಯಲಾಗದು: ನತಾಶಾ ನರ್ವಾಲ್‌ಗೆ ದೆಹಲಿ ಹೈಕೋರ್ಟ್ ಅಭಯ

ಒಬ್ಬ ವ್ಯಕ್ತಿಯ ವಿರುದ್ಧ ‘ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ’ (UAPA) ಯಂತಹ ಕಠಿಣ ಕಾಯಿದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂಬ ಒಂದೇ ಕಾರಣಕ್ಕೆ, ಅವರ ವಿದೇಶ ಪ್ರಯಾಣದ ಮೂಲಭೂತ ಹಕ್ಕನ್ನು ಸಂಪೂರ್ಣವಾಗಿ ಕಸಿದುಕೊಳ್ಳಲು...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ಅಭಿಜಿತ್ ದೀಪ್ಕೆಗೆ ‍‍ಜಾಮೀನು : ಪೊಲೀಸ್ ಕಸ್ಟಡಿಯಿಂದ ಬಿಡುಗಡೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಶನಿವಾರ (ಅಕ್ಟೋಬರ್ 17) ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ದೆಹಲಿಯ ಮಂದಿರ್ ಮಾರ್ಗ್ ಠಾಣೆ ಪೊಲೀಸರ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ ಎಂದು...

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...

ಸಿಜೆಐ ಸೂರ್ಯಕಾಂತ್ ವಿರುದ್ಧದ ಪೋಸ್ಟ್: ಕೇರಳ ಕಾಂಗ್ರೆಸ್ ಅಧ್ಯಕ್ಷರಿಗೆ ಎಸ್‌ಸಿಬಿಎ ಜಂಟಿ ಕಾರ್ಯದರ್ಶಿಯಿಂದ ಲೀಗಲ್ ನೋಟಿಸ್!

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರನ್ನು ಗುರಿಯಾಗಿಸಿ ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ (X) ಖಾತೆಯಿಂದ ಮಾಡಲಾಗಿತ್ತು ಎನ್ನಲಾದ ಪೋಸ್ಟ್‌ಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ (SCBA) ಜಂಟಿ...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...