Homeಕರ್ನಾಟಕರಾಜ್ಯೋತ್ಸವ ಪ್ರಶಸ್ತಿ ಪ್ರಕಟ : ಕಾಳಿಗಿಂತ ಬೂಸಾನೇ ಹೆಚ್ಚು...

ರಾಜ್ಯೋತ್ಸವ ಪ್ರಶಸ್ತಿ ಪ್ರಕಟ : ಕಾಳಿಗಿಂತ ಬೂಸಾನೇ ಹೆಚ್ಚು…

ಪ್ರಶಸ್ತಿ ಪಟ್ಟಿಯಲ್ಲಿ ಬಿಜೆಪಿ ನಿಷ್ಠರೇ ಹೆಚ್ಚು. ಜಾತಿಗೂ ಪ್ರಾಧಾನ್ಯತೆ ಸಿಕ್ಕಿದೆ. ಪ್ರಶಸ್ತಿಗೆ ಆಯ್ಕೆಯಾದ ಅರ್ಹರೂ ಬಹುತೇಕ ಸಂಘ ಪರಿವಾರದವರೇ ಆಗಿದ್ದಾರೆ.

- Advertisement -
- Advertisement -

ಕನ್ನಡ ರಾಜ್ಯೋತ್ಸವಕ್ಕೆ ರಾಜ್ಯ ಸಜ್ಜಾಗುತ್ತಿದೆ. ನವೆಂಬರ್ ಕನ್ನಡಿಗರು ಎದ್ದುಕೂತಿದ್ದಾರೆ. ಸರ್ಕಾರವೂ ರಾಜ್ಯೋತ್ಸವ ಪ್ರಶಸ್ತಿ ಪಡೆಯುವ (ನ)ಗಣ್ಯರ ಪಟ್ಟಿಯನ್ನು ಪ್ರಕಟಿಸಿದೆ. ಈ ಪಟ್ಟಿಯಲ್ಲಿ ಕಾಳಿಗಿಂತ ಬೂಸಾನೇ ಹೆಚ್ಚು. ಅರ್ಹರಿಗಿಂತ ಅನರ್ಹರೇ ತುಂಬಿ ಹೋಗಿದ್ದಾರೆ. ಸಾಧನೆ ಮಾಡದವರು ಪ್ರಶಸ್ತಿ ಹೊಡೆದುಕೊಂಡಿದ್ದಾರೆ. ಅಂದರೆ ರಾಜ್ಯ ಸರ್ಕಾರ ಅಷ್ಟರಮಟ್ಟಿಗೆ ಪ್ರಶಸ್ತಿ ಆಯ್ಕೆಯಲ್ಲಿ ಕೈಯಾಡಿಸಿದೆ. 60 ವರ್ಷದ ಮಾನದಂಡ ಮಾತ್ರ ಪಾಲನೆಯಾದಂತೆ ಕಾಣುತ್ತಿದೆ. ಬಿಜೆಪಿ ಸರ್ಕಾರವೂ ತನಗೆ ಬೇಕಾದವರ ಹೆಸರನ್ನೇ ಆಯ್ದುಕೊಂಡಂತಿದೆ. ಆಯ್ಕೆ ಸಮಿತಿ ವರದಿಗೂ ಸ್ವಲ್ಪಮಟ್ಟಿಗೆ ಮನ್ನಣೆ ಸಿಕ್ಕಿದೆ.

ಸಾಹಿತ್ಯ ಕ್ಷೇತ್ರದಲ್ಲಿ ಬಿ. ರಾಜಶೇಖರಪ್ಪ ಪ್ರಾಚೀನ ಚಿತ್ರದುರ್ಗ, ನಿರಂತರ, ಹುಲ್ಲೂರು ಶ್ರೀನಿವಾಸ ಜೋಯಿಸರು – ಇತಿಹಾಸ ಸಂಶೋಧಕ ಹೀಗೆ ಹಲವು ಕೃತಿಗಳನ್ನು ಬರೆದು ಹೆಸರು ಮಾಡಿದ್ದಾರೆ. ರಂಗಭೂಮಿಯಲ್ಲಿ ಭಾರ್ಗವಿ ನಾರಾಯಣ (ಸಾಹಿತಿ/ಪರಿಸರವಾದಿ ಪ್ರಕಾಶ ಬೆಳವಾಡಿ ತಾಯಿ) ಚಲನಚಿತ್ರ, ಕಿರುತೆರೆ, ರಂಗಭೂಮಿಯಲ್ಲಿ ಕೆಲಸ ಮಾಡಿ ಜನರ ನಡುವೆ ಗುರುತಿಸಿಕೊಂಡಿದ್ದಾರೆ. ಪ್ರಜಾವಾಣಿಯಲ್ಲಿ ವಾರಕ್ಕೊಮ್ಮೆ ಲೇಖನ ಬರೆಯುವ ಜೊತೆಗೆ ಶಿಕ್ಷಣದ ಕುರಿತು ಕೃತಿಗಳನ್ನು ರಚಿಸಿದ ಡಾ.ಗುರುರಾಜ ಕರ್ಜಗಿ ಪ್ರಸಿದ್ದರಾಗಿದ್ದಾರೆ. ಚಂದನ ಟಿವಿಯಲ್ಲಿ ಥಟ್ ಅಂತ ಹೇಳಿ ಕಾರ್ಯಕ್ರಮ ನಡೆಸಿಕೊಡುವ ಡಾ. ನಾ.ಸೋಮಶ್ವರ್ ಮತ್ತು ಉದ್ಯಮಿಯಾಗಿ ಯಶಸ್ವಿಯಾಗಿರುವ ಡಾ.ವಿಜಯ ಸಂಕೇಶ್ವರ್, ಪ್ರಾಮಾಣಿಕತೆ ಮತ್ತು ಪಾರದರ್ಶಕತೆಗೆ ಹೆಸರಾದ ನ್ಯಾಯಮೂರ್ತಿ ಎನ್. ಕುಮಾರ್ ಹೀಗೆ ಬೆರಳೆಕೆಯ ಸಾಧಕರನ್ನು ಗುರುತಿಸಿರುವುದು ಶ್ಲಾಘನೀಯ.

ಇವರು ತಮ್ಮದೇ ಕ್ಷೇತ್ರದಲ್ಲಿ ಸ್ವಲ್ಪಮಟ್ಟಿಗಾದರೂ ಕೆಲಸ ಮಾಡಿ ಹೆಸರು ಮಾಡಿದ್ದಾರೆ. ಇಂಥವರ ಆಯ್ಕೆಯನ್ನು ಯಾರೂ ಕೂಡ ಪ್ರಶ್ನಿಸಲಾರರು. ಸಾಹಿತ್ಯ ಒಬ್ಬರು, ರಂಗಭೂಮಿ ಒಂದಿಬ್ಬರು, ನ್ಯಾಯಾಂಗದಲ್ಲಿ ಒಬ್ಬರು ಸಾಧನೆ ಮಾಡಿರುವುದನ್ನು ನಾಡಿನ ಜನತೆ ಕಂಡಿದೆ ಮತ್ತು ಗುರುತಿಸಿದೆ. ಪತ್ರಿಕೋದ್ಯಮದಲ್ಲಿ ಪರಿಣಾಮಕಾರಿ ಬರಹಗಳನ್ನು ಬರೆಯದಿದ್ದರೂ ಸಂಪಾದಕರಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಗುರುತಿಸಿಕೊಂಡಿರುವ ಬಿ.ವಿ. ಮಲ್ಲಿಕಾರ್ಜುನಯ್ಯ ಅವರಿಗೂ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಇದನ್ನು ಮೆಚ್ಚಲೇಬೇಕು.

ಆದರೆ ವಿವಿಧ ಕ್ಷೇತ್ರದ ಗಣ್ಯರನ್ನು ಆಯ್ಕೆ ಮಾಡುವಲ್ಲಿ ಸಮತೋಲನ ಕಾಯ್ದುಕೊಂಡಿಲ್ಲ. ಕೆಲವು ರಂಗಗಳಿಂದ ಹೆಚ್ಚು ಮಂದಿಯನ್ನು ಪ್ರಶಸ್ತಿಗೆ ಆಯ್ಕೆ ಮಾಡಿದ್ದರೆ, ಕೆಲ ಕ್ಷೇತ್ರಗಳಲ್ಲಿ ಒಬ್ಬರಿಗೆ ಮಾತ್ರ ಅವಕಾಶ ನೀಡಿದೆ. ಸಂಕೀರ್ಣದಲ್ಲಿ ಆರು ಮಂದಿ, ಜಾನಪದ ಐದು, ರಂಗಭೂಮಿ ಆರು, ವೈದ್ಯಕೀಯ ಐದು ಹೀಗೆ ಪಟ್ಟಿ ಅಸಮತೋಲನದಿಂದ ಕೂಡಿರುವುದನ್ನು ಯಾರೇ ಆದರೂ ಗುರುತಿಸಬಹುದು.

ವಿಮರ್ಶೆ, ಗುಡಿಕೈಗಾರಿಕೆ, ನ್ಯಾಯಾಂಗ, ಸಹಕಾರ, ಪತ್ರಿಕೋದ್ಯಮ, ಕಿರುತೆರೆ, ಚಲನಚಿತ್ರ, ಬಯಲಾಟ, ಯಕ್ಷಗಾನ ಕ್ಷೇತ್ರದಿಂದ ತಲಾ ಒಬ್ಬರನ್ನು ಮಾತ್ರ ಆಯ್ಕೆ ಮಾಡಿದೆ. ಸಂಗೀತ ಕ್ಷೇತ್ರದ ಛೋಟಿ ರೆಹಮತ್ ಖಾನ್, ಜಾನಪದ ಕ್ಷೇತ್ರದಲ್ಲಿ ಉಸ್ಮಾನ್ ಸಾಬ್ ಖಾದರ ಎಂಬಿಬ್ಬರು ಮುಸ್ಲಿಂ ಸಾಧಕರಿಗೂ ಪಟ್ಟಿಯಲ್ಲಿ ಅವಕಾಶ ಕಲ್ಪಿಸಿ ಎಲ್ಲರ ಹುಬ್ಬೇರುವಂತೆ ಮಾಡಿದೆ. ಯಾಕೆಂದರೆ ಅಲ್ಪಸಂಖ್ಯಾತರ ಮತಗಳೇ ಬೇಡ ಎನ್ನುವ, ಚುನಾವಣೆಯಲ್ಲಿ ಟಿಕೆಟ್ ನೀಡುವಾಗ ಮುಸ್ಲೀಮರಿಗೆ ಪ್ರಾತಿನಿಧ್ಯವೇ ಕಲ್ಪಿಸದ, ಟಿಪ್ಪು ಜಯಂತಿಗೆ ವಿರೋಧ ವ್ಯಕ್ತಪಡಿಸುವ ಬಿಜೆಪಿ ಸರ್ಕಾರದಲ್ಲಿ ಅಲ್ಪಸಂಖ್ಯಾತರು ಅದರಲ್ಲೂ ಮುಸ್ಲಿಂ ಸಾಧಕರನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಿರುವುದು ಸೋಜಿಗವೇ ಸರಿ.

ಪ್ರಶಸ್ತಿ ಪಟ್ಟಿಯಲ್ಲಿ ಬಿಜೆಪಿ ನಿಷ್ಠರೇ ಹೆಚ್ಚು. ಜಾತಿಗೂ ಪ್ರಾಧಾನ್ಯತೆ ಸಿಕ್ಕಿದೆ. ಪ್ರಶಸ್ತಿಗೆ ಆಯ್ಕೆಯಾದ ಅರ್ಹರೂ ಬಹುತೇಕ ಸಂಘ ಪರಿವಾರದವರೇ ಆಗಿದ್ದಾರೆ. ಪತಂಜಲಿ ಯೋಗ ಶಿಕ್ಷಣ ಸಂಸ್ಥೆ ಯೋಗ ವ್ಯಾಪಾರದಲ್ಲಿ ನಿರತವಾಗಿದೆ. ಯೋಗ ಕಲಿಸುವ ನೆಪದಲ್ಲಿ ಬಿಜೆಪಿ ಪರ ಕೆಲಸ ಮಾಡುತ್ತಿದೆ. ಇದು ಎಲ್ಲರಿಗೂ ಗೊತ್ತಿರುವ ಸಂಗತಿ. ಯೋಗ ಕಲಿಸುವ ಅಕ್ಕಂದಿರು, ಅಣ್ಣಂದಿರುವ ಮೂಲತಃ ಕೇಸರಿ ಪರಿವಾರದವರೇ ಆಗಿರುತ್ತಾರೆ. ಅವರನ್ನು ಯೋಗ ಕಲಿಕಾರ್ಥಿಗಳಿಗೆ ಅಣ್ಣ, ಅಕ್ಕ, ಜೀ ಎಂದೇ ಸಂಬೋಧಿಸುತ್ತಾರೆ. ಹಾಗಾಗಿ ಪತಂಜಲಿ ಯೋಗ ಶಿಕ್ಷಣ ಸಂಸ್ಥೆ ಪಕ್ಷಾತೀತವಾದ ಸಂಸ್ಥೆಯಲ್ಲ. ಅದು ಕೂಡ ಸನಾತನಿಗಳ ಕೂಟ.

ಡಾ.ಕೆ.ಚಿದಾನಂದಗೌಡ ಕುವೆಂಪು ವಿವಿ ಕುಲಪತಿಯಾಗಿ ನಿವೃತ್ತರಾಗಿರುವವರು. ಅವರು ಇಂಜಿನಿಯರಿಂಗ್‌ ಗೀತೆಗಳು, ಪುಟಾಣಿಗಳ ವಿಜ್ಞಾನ ಪದ್ಯಗಳು, ಸಂಪರ್ಕ ಮಾಧ್ಯಮಗಳು ಕೃತಿಗಳನ್ನು ಬರೆದಿದ್ದಾರೆ. ಇವರನ್ನು ಶಿಕ್ಷಣ ಕ್ಷೇತ್ರದಿಂದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಶಿಕ್ಷಣ ಕ್ಷೇತ್ರಕ್ಕೆ ಇವರ ಕೊಡುಗೆ ಏನು ಎಂಬುದೇ ರಹಸ್ಯ. ಚಲನಚಿತ್ರ ಮತ್ತು ಕಿರುತೆರೆ ವಿಭಾಗದಲ್ಲಿ ಗುರುತಿಸಿರುವ ಶೈಲಶ್ರೀ ಮತ್ತು ಜಯಕುಮಾರ ಕೊಡಗನೂರ ಅವರ ಹೆಸರುಗಳೇ ಜನರಿಗೆ ಪರಿಚಯವಿಲ್ಲ. ಅಂಥವರೂ ವಯಸ್ಸಿನ ಆಧಾರದಲ್ಲಿ ಪಟ್ಟಿಯ ಒಳ ಸೇರಿದ್ದಾರೆ. ವೈದ್ಯಕೀಯ ಕ್ಷೇತ್ರದಲ್ಲಿ ಐದು ಮಂದಿ ವೈದ್ಯರನ್ನು ಗುರುತಿಸುವ ಅಗತ್ಯ ಏನಿತ್ತು ಎಂಬ ಪ್ರಶ್ನೆ ಮೂಡಿದೆ.

ನ್ಯಾಯಮೂರ್ತಿ ನಾಗಮೋಹನದಾಸ್ ಆಯ್ಕೆ ಸಮಿತಿ ವರದಿಯನ್ನು ಕೊಟ್ಟ ನಂತರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ಅವರು ಪಟ್ಟಿಯಲ್ಲಿ ಕೆಲವೊಂದು ಬದಲಾವಣೆಗಳನ್ನು ಮಾಡಿದ್ದಾರೆ. ತಮಗೆ ಬೇಕಾದವರನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಇದು ನಿರೀಕ್ಷತವೂ ಆಗಿತ್ತಲ್ಲವೇ??

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...