HomeಅಂಕಣಗಳುKarnataka against SIRSIR: ಕೊಪ್ಪಳದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ 'ಛತ್ರಪ್ಪ' ಅವರ ಹೆಸರನ್ನೆ ಕೈಬಿಟ್ಟ ಚುನಾವಣಾ...

SIR: ಕೊಪ್ಪಳದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ‘ಛತ್ರಪ್ಪ’ ಅವರ ಹೆಸರನ್ನೆ ಕೈಬಿಟ್ಟ ಚುನಾವಣಾ ಆಯೋಗ

- Advertisement -
- Advertisement -

ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳು ದಿಢೀರ್ ನಾಪತ್ತೆಯಾಗುತ್ತಿರುವ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಕಳೆದ 50ಕ್ಕೂ ಹೆಚ್ಚು ವರ್ಷಗಳಿಂದ ಗಂಗಾವತಿಯಲ್ಲಿ ಸಮಾಜಮುಖಿ ಕಾರ್ಯಗಳ ಮೂಲಕ ಚಿರಪರಿಚಿತರಾಗಿರುವ, ಗಂಗಾವತಿ ಬಸವ ಕೇಂದ್ರದ ಅಧ್ಯಕ್ಷರು, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷರು, ನಿರುತ್ತ ಪ್ರೌಢಶಾಲೆಯಲ್ಲಿ ಸಹ-ಶಿಕ್ಷಕರಾಗಿ ಹಾಗೂ ‘ಸುದ್ದಿ ಚಿಂತನ’ ಪತ್ರಿಕೆಯ ಸಂಪಾದಕರಾಗಿ 10 ವರ್ಷಗಳ ಕಾಲ ಸೇವೆ ಸಲ್ಲಿಸಿರುವ ಗಣ್ಯರಾದ ಛತ್ರಪ್ಪ ಹನುಮಪ್ಪ ನಾರಿನಾಳ ಅವರ ಹೆಸರನ್ನೇ ಮತದಾರರ ಪಟ್ಟಿಯಿಂದ ಕೈಬಿಟ್ಟಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಛತ್ರಪ್ಪ ಅವರು ವಿಡಿಯೋ ಸಂದೇಶ

ತಾವು ಎದುರಿಸಿದ ಈ ವಿಚಿತ್ರ ಅನುಭವ ಮತ್ತು ಚುನಾವಣಾ ಸಿಬ್ಬಂದಿಯ ನಿರ್ಲಕ್ಷ್ಯದ ಕುರಿತು ಸಾಹಿತಿ ಛತ್ರಪ್ಪ ಅವರು ವಿಡಿಯೋ ಸಂದೇಶದ ಮೂಲಕ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ನಾನು ಕಳೆದ 1970ರಿಂದಲೂ ಅಂದರೆ ಸುಮಾರು 55–56 ವರ್ಷಗಳಿಂದ ಗಂಗಾವತಿಯ ನಿವಾಸಿಯಾಗಿದ್ದೇನೆ. 1970ರಿಂದಲೂ ಪ್ರತಿಯೊಂದು ಚುನಾವಣೆಯಲ್ಲೂ ಸಕ್ರಿಯವಾಗಿ ಭಾಗವಹಿಸಿ ಮತದಾನ ಮಾಡುತ್ತಾ ಬಂದಿದ್ದೇನೆ. 2002 ಹಾಗೂ 2025ರ ಮತದಾರರ ಪಟ್ಟಿಯಲ್ಲೂ ನನ್ನ ಹೆಸರಿರುವುದಕ್ಕೆ ನನ್ನ ಬಳಿ ಸಾಕ್ಷ್ಯಾಧಾರಗಳಿವೆ ಎಂದು ಛತ್ರಪ್ಪ ಅವರು ತಿಳಿಸಿದ್ದಾರೆ.

“ಇಷ್ಟಿದ್ದರೂ, ಇತ್ತೀಚೆಗೆ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬೂತ್ ಮಟ್ಟದ ಅಧಿಕಾರಿಗಳು (BLO) ನನಗೆ ಯಾವುದೇ ಎನ್ಯುಮರೇಷನ್ ಫಾರ್ಮ್ ನೀಡಿಲ್ಲ. ನಾನು ಖುದ್ದಾಗಿ ಬಿಎಲ್‌ಒ ಅವರನ್ನು ವಿಚಾರಿಸಿದಾಗ, ‘ಸದ್ಯಕ್ಕೆ ನಿಮ್ಮ ಹೆಸರು ಪಟ್ಟಿಯಲ್ಲಿ ಇಲ್ಲ, ಮುಂದೆ ನೋಡೋಣ’ ಎಂದು ಹಾರಿಕೆ ಉತ್ತರ ನೀಡಿದ್ದಾರೆ. ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ಹೇಳಲಾಗುತ್ತಿದೆ. ತಾಲೂಕು ಸಾಹಿತ್ಯ ಪರಿಷತ್ ಅಧ್ಯಕ್ಷನಾಗಿ, ಸಮ್ಮೇಳನದ ಅಧ್ಯಕ್ಷನಾಗಿ ಊರಿನಲ್ಲಿ ಪ್ರತಿಯೊಬ್ಬರಿಗೂ ಚಿರಪರಿಚಿತನಿರುವ ನನಗೇ ಈ ಪರಿಸ್ಥಿತಿಯಾದರೆ, ಇನ್ನು ಯಾವುದೇ ಬೆಂಬಲವಿಲ್ಲದ ಸಾಮಾನ್ಯ ಜನರ ಮತದಾನದ ಹಕ್ಕಿನ ಕಥೆಯೇನು?” ಎಂದು ಅವರು ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ.

2025ರ ಮತದಾರರ ಪಟ್ಟಿಯಲ್ಲಿ ಇವರ ಹೆಸರಿದ್ದು ಸೀರಿಯಲ್ ನಂಬರ್ 196 ಛತ್ರಪ್ಪ ತಂದೆ ಹನುಮಪ್ಪ ಬೂತ್ ನಂಬರ್ 183
ಚುನಾವಣಾ ಆಯೋಗದ ವಿರುದ್ಧ ಆಕ್ರೋಶ, ತಕ್ಷಣದ ನ್ಯಾಯಕ್ಕೆ ಆಗ್ರಹ

ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕುವ ಮುನ್ನ ಯಾವುದೇ ನೋಟಿಸ್ ನೀಡದಿರುವುದು ಹಾಗೂ ಸೂಕ್ತ ದಾಖಲೆಗಳನ್ನು ಪರಿಶೀಲಿಸದಿರುವುದು ಆಡಳಿತ ಯಂತ್ರದ ಜವಾಬ್ದಾರಿ ರಹಿತ ನಡವಳಿಕೆಯನ್ನು ತೋರಿಸುತ್ತದೆ. ಅಧಿಕಾರಿಗಳು ತಕ್ಷಣವೇ ಈ ಪ್ರಮಾದವನ್ನು ಸರಿಪಡಿಸಿ, ತಮ್ಮ ಮತದಾನದ ಹಕ್ಕನ್ನು ಮರುಸ್ಥಾಪಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಕೊಪ್ಪಳ ಜಿಲ್ಲೆಯಾದ್ಯಂತ ಹಲವು ಹಿರಿಯ ನಾಗರಿಕರು ಹಾಗೂ ಮೂಲ ನಿವಾಸಿಗಳ ಹೆಸರುಗಳು ಇದೇ ರೀತಿ ಮತದಾರರ ಪಟ್ಟಿಯಿಂದ ಮಾಯವಾಗುತ್ತಿರುವ ದೂರುಗಳು ಕೇಳಿಬರುತ್ತಿದ್ದು, ತಾಲೂಕು ಆಡಳಿತ ಹಾಗೂ ಜಿಲ್ಲಾಧಿಕಾರಿಗಳು ತಕ್ಷಣವೇ ಮಧ್ಯಪ್ರವೇಶಿಸಿ ತನಿಖೆ ನಡೆಸಬೇಕಿದೆ.

ಕರಡು ಮತದಾರರ ಪಟ್ಟಿ ಪ್ರಕಟಣೆಗೆ ದಿನಗಣನೆ ಆರಂಭವಾಗಿರುವಾಗ, ಬಿಎಲ್‌ಒ (BLO) ಹಂತದಲ್ಲೇ ಎನ್ಯೂಮರೇಷನ್ ಪ್ರಕ್ರಿಯೆಯ ಲೋಪಗಳು ಕಂಡುಬರುತ್ತಿರುವುದು ಪ್ರಜಾಪ್ರಭುತ್ವದ ಆಶಯಕ್ಕೆ ಧಕ್ಕೆ ತರುವಂತಹದ್ದು. ಅರ್ಹ ನಾಗರಿಕರಿಗೆ ಸೂಕ್ತ ಸಮಯದಲ್ಲಿ ಎನ್ಯೂಮರೇಷನ್ ಫಾರಂಗಳು ತಲುಪದಿರುವುದು ಹಾಗೂ ಅವರ ಅರಿವಿಗೆ ಬಾರದೆ ಮತದಾರರ ಪಟ್ಟಿಯಿಂದ ಹೆಸರುಗಳು ಬಿಟ್ಟುಹೋಗುವ ಭೀತಿ ಎದುರಾಗಿರುವುದು ಚುನಾವಣಾ ವ್ಯವಸ್ಥೆಯ ಕಾರ್ಯವೈಖರಿಯನ್ನು ಪ್ರಶ್ನಿಸುವಂತೆ ಮಾಡಿದೆ.

ಬೆಳಕಿಗೆ ಬಾರದ ಇಂತಹ ನೂರಾರು ಪ್ರಕರಣಗಳು ಲಕ್ಷಾಂತರ ಅರ್ಹ ಮತದಾರರನ್ನು ಅತಂತ್ರರನ್ನಾಗಿಸುವ ಮುನ್ನ ಚುನಾವಣಾ ಆಯೋಗ ಹಾಗೂ ಜಿಲ್ಲಾಡಳಿತ ತಕ್ಷಣವೇ ಜಾಗೃತಗೊಳ್ಳಬೇಕಿದೆ. ಕರಡು ಪಟ್ಟಿ ಪ್ರಕಟವಾದ ತಕ್ಷಣ ಪ್ರತಿಯೊಬ್ಬ ನಾಗರಿಕನೂ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಪರಿಶೀಲಿಸಿಕೊಳ್ಳಲು ಜಾಗೃತಿ ಮೂಡಿಸುವುದರ ಜೊತೆಗೆ, ತಾಂತ್ರಿಕ ಹಾಗೂ ಆಡಳಿತಾತ್ಮಕ ಲೋಪಗಳಿಂದ ಮತಹಕ್ಕು ಕಳೆದುಕೊಂಡವರಿಗೆ ತಕ್ಷಣವೇ ಹಕ್ಕುಚಲಾವಣೆಗೆ ಅವಕಾಶ ಕಲ್ಪಿಸುವ ‘ಹಕ್ಕು-ಆಕ್ಷೇಪಣೆ’ (Claims & Objections) ಪ್ರಕ್ರಿಯೆಯನ್ನು ಅತ್ಯಂತ ಸರಳ ಮತ್ತು ಪಾರದರ್ಶಕಗೊಳಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್ ಪ್ರಕ್ರಿಯೆಯಲ್ಲಿನ ಅನ್ಯಾಯ ತಡೆಯಲು ಸರ್ಕಾರ ಮಧ್ಯಪ್ರವೇಶಿಸಬೇಕು; ಮುಖ್ಯಮಂತ್ರಿಗಳಿಗೆ ನಾಗರಿಕ ಸಂಘಟನೆಗಳ ಮನವಿ

"ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಿಂದ ಅರ್ಹ ಮತದಾರರಿಗೆ ಅನ್ಯಾಯವಾಗುತ್ತಿದ್ದು, ಈ ಕುರಿತು ತುರ್ತು ಕ್ರಮ ಕೈಗೊಳ್ಳಬೇಕು" ಎಂದು ನಾಗರಿಕ ಸಂಘಟನೆಗಳು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ...

ಮಹಾರಾಷ್ಟ್ರದ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯರ ವಿಚಿತ್ರ ವರ್ತನೆ, ಗೆಜ್ಜೆ ಸದ್ದು: ದೆವ್ವದ ಕಾಟವೆಂದು ಹಾಸ್ಟೆಲ್ ತೊರೆದ 600 ಬುಡಕಟ್ಟು ವಿದ್ಯಾರ್ಥಿಗಳು

ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ದೂರದ ಮೆಲ್ಘಾಟ್ ಬುಡಕಟ್ಟು ಪ್ರದೇಶದಲ್ಲಿ ಮೂಢನಂಬಿಕೆ ಮತ್ತು ಮಾನಸಿಕ ಭಯದ ವಾತಾವರಣವು ಗಂಭೀರ ಶೈಕ್ಷಣಿಕ ಬಿಕ್ಕಟ್ಟನ್ನು ಸೃಷ್ಟಿಸಿದೆ. ಚಿಕಲ್ದಾರಾ ತಾಲ್ಲೂಕಿನ ಡೋಮಾ ಗ್ರಾಮದಲ್ಲಿರುವ ಸರ್ಕಾರಿ ಬುಡಕಟ್ಟು ವಸತಿ ಶಾಲೆಯ...

ಉತ್ತರ ಪ್ರದೇಶ| ಕನ್ವಾರಿ ಯಾತ್ರಿಕರ ಹಲ್ಲೆಯಿಂದ ಮುಸ್ಲಿಂ ಯುವಕ ಸಾವು; ಐವರ ಬಂಧನ

ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಕನ್ವಾರಿ ಯಾತ್ರಿಕರ ಗುಂಪಿನಿಂದ ಹಲ್ಲೆಗೊಳಗಾದ ಮುಸ್ಲಿಂ ಯುವಕ ಸಾವನ್ನಪ್ಪಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಕನ್ವಾರಿಗಳನ್ನು ಬಂಧಿಸಲಾಗಿದೆ. ಬ್ರಿಜ್‌ಘಾಟ್ ಟೋಲ್ ಪ್ಲಾಜಾ ಬಳಿ ನಡೆದ ರಸ್ತೆ ಅಪಘಾತದ ನಂತರ ಮೊರಾದಾಬಾದ್...

ಜಾರ್ಖಂಡ್‌ ಸಿಎಂಗೆ ರಾಹುಲ್ ಗಾಂಧಿ ಪತ್ರ, ಉದ್ಯೋಗಾಕಾಂಕ್ಷಿಗಳ ಬೆಂಬಲಕ್ಕೆ ಆಗ್ರಹ

ಜಾರ್ಖಂಡ್‌ನಲ್ಲಿ ರಾಜ್ಯ ಸರ್ಕಾರಿ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿವೆ ಎನ್ನಲಾದ ಅಕ್ರಮಗಳ ವಿರುದ್ಧ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಹೋರಾಟದ ಬೆನ್ನಲ್ಲೇ, ಕಾಂಗ್ರೆಸ್ ಸಂಸದ ಹಾಗೂ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಮುಖ್ಯಮಂತ್ರಿ ಹೇಮಂತ್ ಸೋರೆನ್...

“NTA ಮಾಡಿದ ತಪ್ಪಿಗೆ ವಿದ್ಯಾರ್ಥಿಗಳಿಗೆ ಶಿಕ್ಷೆ”: UGC-NET ಇಂಗ್ಲಿಷ್, ವಾಣಿಜ್ಯ ಮತ್ತು ಸಮಾಜಶಾಸ್ತ್ರ ಪತ್ರಿಕೆಗಳ ಮರುಪರೀಕ್ಷೆ ನಿರ್ಧಾರಕ್ಕೆ ದೇಶಾದ್ಯಂತ ಆಕ್ರೋಶ

ನವದೆಹಲಿ: ಕಳೆದ ಜೂನ್ ತಿಂಗಳಿನಲ್ಲಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸಿದ್ದ ಯುಜಿಸಿ-ನೆಟ್ (UGC-NET) ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳಲ್ಲಿ ಸಾಲು ಸಾಲು ಗಂಭೀರ ದೋಷಗಳು ಕಂಡುಬಂದ ಹಿನ್ನೆಲೆಯಲ್ಲಿ, ಇಂಗ್ಲಿಷ್, ವಾಣಿಜ್ಯ ಮತ್ತು ಸಮಾಜಶಾಸ್ತ್ರ...

ಬಿಹಾರದ ಅಶೋಕಧಾಮ ದೇಗುಲದಲ್ಲಿ ಕಾಲ್ತುಳಿತ: ಶ್ರಾವಣ ಸೋಮವಾರದ ಪೂಜೆ ವೇಳೆ 7 ಮಹಿಳೆಯರು ಸಾವು, 12 ಕ್ಕೂ ಹೆಚ್ಚು ಜನರಿಗೆ ಗಾಯ

ಪಾಟ್ನಾ/ಲಖಿಸರಾಯ್: ಶ್ರಾವಣ ಮಾಸದ ಪವಿತ್ರ ಸೋಮವಾರದಂದು ಧಾರ್ಮಿಕ ಕೇಂದ್ರವೊಂದರಲ್ಲಿ ಸಂಭವಿಸಿದ ಭೀಕರ ಅಪಘಾತ ಇಡೀ ರಾಜ್ಯವನ್ನೇ ದಿಗ್ಭ್ರಮೆಗೊಳಿಸಿದೆ. ಬಿಹಾರದ ಲಖಿಸರಾಯ್ ಜಿಲ್ಲೆಯಲ್ಲಿರುವ ಐತಿಹಾಸಿಕ ಅಶೋಕಧಾಮ ದೇವಾಲಯದ ಆವರಣದ ಬಳಿ ಮುಂಜಾನೆ ನಡೆದ ಭೀಕರ...

ಎಲ್ಲಾ ಯೋಜನೆಗಳೂ ಗುಜರಾತ್‌ಗೇ ಏಕೆ?: ಬಿಜೆಪಿ ಕೇಂದ್ರ ನಾಯಕತ್ವ ವಿರುದ್ಧವೇ ಬಹಿರಂಗವಾಗಿ ತಿರುಗಿಬಿದ್ದ ಅಣ್ಣಾಮಲೈ!

BJP ನಾಯಕತ್ವದ ನಿರ್ಧಾರಗಳು ‘ದೆಹಲಿ ಕೇಂದ್ರಿತ’ ಹಾಗೂ ದೇಶದ ಅಭಿವೃದ್ಧಿ ಮಾದರಿಯು ‘ಗುಜರಾತ್‌ ಕೇಂದ್ರಿತ’ವಾಗುತ್ತಿದೆ ಎಂದು ತಮಿಳುನಾಡು ಬಿಜೆಪಿಯ ನಿಕಟಪೂರ್ವ ರಾಜ್ಯಾಧ್ಯಕ್ಷ ಹಾಗೂ ‘ವಿ ದಿ ಲೀಡರ್ಸ್’ ಸಂಘಟನೆಯ ಸಂಸ್ಥಾಪಕ ಕೆ. ಅಣ್ಣಾಮಲೈ...

ಜಾರ್ಖಂಡ್ ವಿದ್ಯಾರ್ಥಿಗಳ ಹೋರಾಟ; ಹೇಮಂತ್ ಸೊರೇನ್ – ರಾಹುಲ್ ಗಾಂಧಿ ಪ್ರತಿಕೃತಿ ದಹಿಸಿದ ಪ್ರತಿಭಟನಾಕಾರರು

ಜಾರ್ಖಂಡ್ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಆಗಸ್ಟ್ 16 ರಂದು (ಭಾನುವಾರ) ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ತೀವ್ರಗೊಂಡಿದೆ. ಮುಖ್ಯಮಂತ್ರಿ ಹೇಮಂತ್ ಸೊರೇನ್, ರಾಹುಲ್ ಗಾಂಧಿ ಮತ್ತು ಆರ್‌ಜೆಡಿ ನಾಯಕ ತೇಜಸ್ವಿ...

BJP ರಾಷ್ಟ್ರೀಯ ವಕ್ತಾರ ಹುದ್ದೆಗೆ ಮತ್ತೆ ರಾಜೀನಾಮೆ! ಕಾರಣ ಬಿಚ್ಚಿಟ್ಟ ಶೆಹಝಾದ್ ಪೂನಾವಾಲಾ

BJP ರಾಷ್ಟ್ರೀಯ ವಕ್ತಾರ ಶೆಹಝಾದ್ ಪೂನಾವಾಲಾ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವ ಹಾಗೂ ತಮ್ಮ ಹುದ್ದೆಗೆ ಮತ್ತೊಮ್ಮೆ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ತಕ್ಷಣವೇ ಅಂಗೀಕರಿಸುವಂತೆ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ...

NALSAR ಘಟಿಕೋತ್ಸವ ವಿವಾದ: ಆಹ್ವಾನ ತಿರಸ್ಕರಿಸಿದ ಸಿಜೆಐ ಸೂರ್ಯಕಾಂತ್!

ಹೈದರಾಬಾದ್‌ನ ಪ್ರತಿಷ್ಠಿತ NALSAR ಕಾನೂನು ವಿಶ್ವವಿದ್ಯಾಲಯದ ಘಟಿಕೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಭಾಗವಹಿಸುವ ಕುರಿತು ಎದ್ದಿದ್ದ ವಿವಾದಕ್ಕೆ ಕೊನೆಗೂ ತೆರೆ ಬಿದ್ದಿದೆ. ತಾವು ಈ ಆಹ್ವಾನವನ್ನು ಸ್ವೀಕರಿಸಿಲ್ಲ, ಹೀಗಾಗಿ ಘಟಿಕೋತ್ಸವದಲ್ಲಿ ಭಾಗವಹಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ...