Homeಕರ್ನಾಟಕಹಿರಿಯ ನಟಿ, ಅಭಿನಯ ಶಾರದೆ ಜಯಂತಿ (76) ವಿಧಿವಶ

ಹಿರಿಯ ನಟಿ, ಅಭಿನಯ ಶಾರದೆ ಜಯಂತಿ (76) ವಿಧಿವಶ

- Advertisement -
- Advertisement -

ಕನ್ನಡ ಚಿತ್ರರಂಗದ ಹಿರಿಯ ನಟಿ, ಅಭಿನಯ ಶಾರದೆ ಜಯಂತಿ (76) ಬೆಂಗಳೂರಿನಲ್ಲಿ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಸೋಮವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.

ತಮ್ಮ ಮನೋಜ್ಞ ಅಭಿನಯದಿಂದ ಕನ್ನಡ ಚಿತ್ರರಂಗದಲ್ಲಿ ಅಭಿನಯ ಶಾರದೆ ಎಂದೇ ಕರೆಯಲ್ಪಡುತ್ತಿದ್ದ ಜಯಂತಿಯವರು, ಚಿತ್ರರಂಗದ ಬೋಲ್ಡ್ ಅಂಡ್ ಬ್ಯೂಟಿಫುಲ್‌ ನಟಿ ಎಂದು ಗುರುತಿಸಿಕೊಂಡಿದ್ದರು.

ನಟಿ ಜಯಂತಿ ದಕ್ಷಿಣ ಭಾರತ ಚಿತ್ರರಂಗದ ಮೇರು ನಟಿ. ಇವರು ಕನ್ನಡ ಸೇರಿದಂತೆ ತಮಿಳು, ತೆಲುಗು, ಮಲಯಾಳಂ, ಹಿಂದಿ ಮತ್ತು ಮರಾಠಿ ಭಾಷೆಗಳಲ್ಲಿಯೂ ಅಭಿನಯಿಸಿದ್ದರು. ಸುಮಾರು 500 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಹಲವಾರು ಪ್ರಶಸ್ತಿಗಳಿಗೆ ಅಭಿನಯ ಶಾರದೆ ಭಾಜನರಾಗಿದ್ದರು.

ಇದನ್ನೂ ಓದಿ: ಪದ್ಮಶ್ರಿ ಪ್ರಶಸ್ತಿ ನೀಡಿ ಅಭಿಯಾನ: ವೈಜನಾಥ ಬಿರಾದಾರರವರ ಎರಡು ಹಾಸ್ಯ ‘ಸ್ವಗತಗಳು’

ಕನ್ನಡದ ಮೇರು ನಟ ಡಾ.ರಾಜ್‌ಕುಮಾರ್‌ ಅವರೊಂದಿಗೆ 45 ಚಿತ್ರಗಳಲ್ಲಿ ಅಭಿನಯಿಸಿದ ಕೀರ್ತಿ ನಟಿ ಜಯಂತಿಯವರದ್ದು. ವಿಷ್ಣುವರ್ಧನ್, ಉದಯ್ ಕುಮಾರ್, ಕಲ್ಯಾಣ್ ಕುಮಾರ್, ಶ್ರೀನಾಥ್, ಅನಂತ್ ನಾಗ್ ಮುಂತಾದ ನಟರ ಜೊತೆ ತೆರೆ ಹಂಚಿಕೊಂಡಿದ್ದರು.

1968 ರಲ್ಲಿ ತೆರೆ ಕಂಡ ವೈ.ಆರ್.ಸ್ವಾಮಿ ನಿರ್ದೇಶನದ “ಜೇನು ಗೂಡು” ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ ಜಟಿ ಜಯಂತಿ, 500ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದರು.

ಕರ್ನಾಟಕದ ಬಳ್ಳಾರಿಯಲ್ಲಿ ಜನವರಿ 6, 1945 ರಲ್ಲಿ ಜನಿಸಿದ ಜಯಂತಿಯವರ ಮೂಲ ಹೆಸರು ಕಮಲಾ ಕುಮಾರಿ. ತಂದೆ ಬಾಲಸುಬ್ರಹ್ಮಣ್ಯಂ, ತಾಯಿ ಸಂತಾನಲಕ್ಷ್ಮೀ ಗೃಹಿಣಿಯಾಗಿದ್ದರು.

1965ರಲ್ಲಿ ತೆರೆಕಂಡ ಮಿಸ್ ಲೀಲಾವತಿ ಚಿತ್ರದ ಅಭಿನಯಕ್ಕಾಗಿ ಜಯಂತಿಯವರಿಗೆ ರಾಷ್ಟ್ರ ಪ್ರಶಸ್ತಿ ಬಂದಿದೆ. ಈ ಚಿತ್ರಕ್ಕೆ ನಿರ್ಮಾಪಕಿಯೂ ನಿರ್ದೇಶಕಿಯೂ ಜಯಂತಿ. ಎರಡು ಮುಖ, ಮನಸ್ಸಿನಂತೆ ಮಾಂಗಲ್ಯ, ಧರ್ಮ ದಾರಿ ತಪ್ಪಿತು, ಮಸಣದ ಹೂವು, ಆನಂದ್ ಚಿತ್ರಗಳ ಅಭಿನಯಕ್ಕಾಗಿ ಐದು ಬಾರಿ ರಾಜ್ಯ ಪ್ರಶಸ್ತಿ ಗಳಿಸಿದ್ದರು.

ಇದನ್ನೂ ಓದಿ: ಹಿರಿಯ ನಟ ವೈಜನಾಥ ಬಿರಾದಾರ ಅವರಿಗೆ ‘ಪದ್ಮಶ್ರೀ’ ನೀಡಲು ಆಗ್ರಹಿಸಿ ಆನ್‌ಲೈನ್‌ ಅಭಿಯಾನ

ಎಡಕಲ್ಲು ಗುಡ್ಡದ ಮೇಲೆ ಚಿತ್ರದಲ್ಲಿ ಜಯಂತಿಯವರು ವಿಶಿಷ್ಟ ಅಭಿನಯ ನೀಡಿದ್ದಾರೆ. ಕಸ್ತೂರಿ ನಿವಾಸ, ಬ್ಯಾಂಕರ್ ಮಾರ್ಗಯ್ಯ, ಬೆಟ್ಟದ ಹುಲಿ, ಚೂರಿ ಚಿಕ್ಕಣ್ಣ, ಭಲೇ ಬಸವ, ಶ್ರೀ ಕೃಷ್ಣದೇವರಾಯ ಸೇರಿದಂತೆ ಅನೇಕ ಚಿತ್ರಗಳನ್ನು ಕನ್ನಡಕ್ಕೆ ನೀಡಿದ್ದರು.

ವಿಷ್ಣು ಮಾಯ, ಕಲೆಕ್ಟರ್ ಜಾನಕಿ, ಮಾಯದಾರಿ ಮಲ್ಲಿಗಾಡು, ಸಂಸಾರಂ ಸಾಗರಂ, ಕುಲಗೌರವಂ, ಮಾಂಗಲ್ಯ ಭಾಗ್ಯಂ, ಶ್ರೀರಾಮಾಂಜನೇಯ ಯುದ್ಧಂ,ಅಂದರೂ ಮಂಚಿವಾರೆ, ಬೊಮ್ಮರಿಲ್ಲು, ಭಲೇ ಕೊಡಲ್ಲು ಸೇರಿದಂತೆ ಅನೇಕ ತೆಲುಗು ಚಿತ್ರಗಳಲ್ಲಿ ಅಭಿನಯಿಸಿದ್ದರು.

ತಮಿಳು ಚಿತ್ರರಂಗದಲ್ಲಿಯೂ ನಟಿ ಜಯಂತಿ ತಮ್ಮದೆಯಾದ ಛಾಪು ಮೂಡಿಸಿದ್ದಾರೆ. ಗಂಗಾ ಗೌರಿ, ಎಲ್ಲೋರುಮ್ ನಲ್ಲವರೆ, ನಿಲ್ ಗವನಿ ಕಾದಲೈ, ಎದಿರ್ ನೀಚಲ್, ನೀರ್ ಕುಮಿಳಿ, ಕಾದಲ್ ಪಾಡುತುಮ್ ಪಾಡು, ಪೆಣ್ಣೈ ನಂಬುಂಗಳ್, ದೇವತೈ ಸೇರಿ ಹಲವು ಚಿತ್ರಗಳಲ್ಲಿ ಕಾಣಸಿಕೊಂಡಿದ್ದರು.

ಮಲೆಯಾಳಂನ ಕಲಿಯೋದಂ, ಕಾರುತ ಪೌರ್ಣಮಿ, ಕಾಟ್ಟು ಪೂಕ್ಕಳ್, ಲಕ್ಷಪ್ರಭು ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಹಿಂದಿಯ ದಾದಾ, ತೀನ್ ಬಹುರಾಣಿಯಾ, ಆಜ್ ಕೆ ಶೋಲಿ, ಮೆಹರ್ಬಾನ್, ಲಾಲ್ ಬಂಗ್ಲಾ, ತುಮ್ ಸೆ ಅಚ್ಚಾ ಕೌನ್ ಹೈ, ಗುಂಡಾ, ಏಕ್ ಫೂಲ್ ಏಕ್ ಭೂಲ್ ಚಿತ್ರಗಳಲ್ಲಿಯೂ ತಮ್ಮ ಅಭಿನಯದ ಛಾಪು ಮೂಡಿಸಿದ್ದರು ನಟಿ ಜಯಂತಿಯವರು.


ಇದನ್ನೂ ಓದಿ: ಕನ್ನಡದಲ್ಲೂ ’ಜೈ ಭೀಮ್’ ಎಂದ ತಮಿಳು ನಟ ಸೂರ್ಯ: ಹೊಸ ಚಿತ್ರಕ್ಕೆ ಕನ್ನಡಿಗರ ಸ್ವಾಗತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...