ಕನ್ನಡದ ಖ್ಯಾತ ಲೇಖಕಿ ಬಾನು ಮುಷ್ತಾಕ್ ಅವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ‘ಬೂಕರ್ ಪ್ರಶಸ್ತಿ’ಗೆ ಭಾಜನರಾಗಿದ್ದಾರೆ. ಅವರ ‘ಹಸೀನಾ ಮತ್ತು ಇತರ ಕಥೆಗಳು’ ಕೃತಿಯ ಇಂಗ್ಲಿಷ್ ಅನುವಾದಿತ ‘ಹಾರ್ಟ್ ಲ್ಯಾಂಪ್’ಗೆ ಪ್ರಶಸ್ತಿ ಒಲಿದು ಬಂದಿದೆ.
ಮೇ 21ರಂದು ಲಂಡನ್‌ನ ಟೇಟ್ ಮಾಡರ್ನ್‌ನಲ್ಲಿ ನಡೆದ ಸಮಾರಂಭದಲ್ಲಿ ಅಧಿಕೃತವಾಗಿ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಈ ಮೂಲಕ ಇದೇ ಮೊದಲ ಬಾರಿಗೆ ಕನ್ನಡದ ಕೃತಿಗೆ ಈ ಪ್ರತಿಷ್ಠಿತ ಪ್ರಶಸ್ತಿ ದೊರೆತಂತಾಗಿದೆ. ಪ್ರಶಸ್ತಿಯು ಅಂದಾಜು 57.28 ಲಕ್ಷ ರೂಪಾಯಿ (50 ಸಾವಿರ ಪೌಂಡ್) ನಗದು ಒಳಗೊಂಡಿದೆ.
Watch the moment Heart Lamp was announced as the winner of the #InternationalBooker2025.
Discover the book: https://t.co/zwWnDmkLV4@andothertweets pic.twitter.com/2NdxGkiay3
— The Booker Prizes (@TheBookerPrizes) May 20, 2025
1990 ಮತ್ತು 2023ರ ನಡುವೆ ಪ್ರಕಟಗೊಂಡ 12 ಕತೆಗಳನ್ನೊಳಗೊಂಡ ಭಾನು ಮುಷ್ತಾಕ್ ಅವರ ಹಸೀನಾ ಮತ್ತು ಇತರ ಕಥೆಗಳು ಸಂಕಲನವನ್ನು ದೀಪಾ ಭಸ್ತಿ ಅವರು ಕನ್ನಡದಿಂದ ಇಂಗ್ಲಿಷ್‌ಗೆ ಅನುವಾದಿಸಿದ್ದಾರೆ. ಇಂಗ್ಲಿಷ್ ಕೃತಿಗೆ ‘ಹಾರ್ಟ್ ಲ್ಯಾಂಪ್’ ಎಂದು ಹೆಸರಿಡಲಾಗಿದೆ. ಮುಸ್ಲಿಂ ಸಮುದಾಯದ ಬಾಲಕಿಯರು ಹಾಗೂ ಹೆಣ್ಣುಮಕ್ಕಳ ದೈನಂದಿನ ಬದುಕು ಈ ಕತೆಗಳಲ್ಲಿ ಅನಾವರಣಗೊಂಡಿದೆ.
ದೀಪಾ ಭಸ್ತಿ ಅವರ ಇಂಗ್ಲಿಷ್ ಅನುವಾದಿತ ಕೃತಿಗೆ ಈ ಹಿಂದೆ ‘ಪೆನ್ ಟ್ರಾನ್ಸ್‌ಲೇಟ್ಸ್ ಪ್ರಶಸ್ತಿ’ಯೂ ದೊರೆತಿತ್ತು.
ಪ್ರಶಸ್ತಿ ಸ್ವೀಕರಿಸಿ ಮಾತನಾಡಿರುವ ಭಾನು ಮುಷ್ತಾಕ್ ಅವರು, ತಮ್ಮ ಗೆಲುವನ್ನು ‘ವೈವಿಧ್ಯತೆಗೆ ದೊರೆತ ಜಯ’ ಎಂದು ಬಣ್ಣಿಸಿದ್ದಾರೆ. ‘ನನ್ನ ಸುಂದರವಾದ ಭಾಷೆಗೆ ದೊರೆತ ಎಂತಹ ಸೊಗಸಾದ ಗೆಲುವು ಇದು’ ಎಂದು ಅನುವಾದಕಿ ದೀಪಾ ಭಸ್ತಿ ಹರ್ಷ ವ್ಯಕ್ತಪಡಿಸಿದ್ದಾರೆ.
ನೆರವು ನೀಡದಿದ್ದರೆ ಮುಂದಿನ 48 ಗಂಟೆಗಳಲ್ಲಿ ಗಾಜಾದ 14,000 ಶಿಶುಗಳು ಸಾಯಬಹುದು: ವಿಶ್ವಸಂಸ್ಥೆ ಎಚ್ಚರಿಕೆ



CONGRATULATIONS MADAM. PROUD TO YOU MADAM…