Homeಕರ್ನಾಟಕಕನ್ನಡ ವಿವಿ ಉಳಿಸಿ ಅಭಿಯಾನ: ಕರವೇ ಹೋರಾಟಕ್ಕೆ ಭಾಗಶಃ ಗೆಲುವು

ಕನ್ನಡ ವಿವಿ ಉಳಿಸಿ ಅಭಿಯಾನ: ಕರವೇ ಹೋರಾಟಕ್ಕೆ ಭಾಗಶಃ ಗೆಲುವು

ಡಿಸೆಂಬರ್‌ 18 ರಂದು ಕರವೇ #ಕನ್ನಡವಿವಿಉಳಿಸಿ ಟ್ವಿಟ್ಟರ್‌ ಅಭಿಯಾನ ಪ್ರಾರಂಭಿಸಿತ್ತು.

- Advertisement -
- Advertisement -

ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ಅನುದಾನ ನೀಡುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ನಡೆಸುತ್ತಿರುವ ’ಕನ್ನಡವಿವಿಉಳಿಸಿ’ ಅಭಿಯಾನ ತಾರ್ಕಿಕ ಅಂತ್ಯ ಕಾಣುವ ಭರವಸೆ ಮೂಡಿದೆ ಎಂದು ಕರವೇ ರಾಜ್ಯಾಧ್ಯಕ್ಷ ಟಿ.ಎ ನಾರಾಯಣ ಗೌಡ ಹೇಳಿದ್ದಾರೆ. ಕೆಲವು ಔಪಚಾರಿಕ ಕ್ರಿಯೆಗಳು ಮಾತ್ರವೇ ಉಳಿದಿದ್ದು, ಸದ್ಯದಲ್ಲೇ ಅಗತ್ಯ ಹಣ ಬಿಡುಗಡೆಯಾಗಲಿದೆಯೆಂದು ಉನ್ನತ ಶಿಕ್ಷಣ ಸಚಿವರಾದ ಡಾ.ಸಿ.ಎನ್.ಅಶ್ವತ್ಥ ನಾರಾಯಣ ದೂರವಾಣಿ ಮೂಲಕ ತಿಳಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

“ಹಣಕಾಸು ಇಲಾಖೆ ಹಣ ಬಿಡುಗಡೆಗೆ ಒಪ್ಪಿಗೆ ನೀಡಿದ್ದು, ಅನುದಾನ ಬಿಡುಗಡೆಗೆ ಇದ್ದ ಎಲ್ಲ ತೊಡಕುಗಳೂ ನಿವಾರಣೆಯಾಗಿದೆ. ಕನ್ನಡ ವಿಶ್ವವಿದ್ಯಾಲಯಕ್ಕೆ ಯಾವುದೇ ರೀತಿಯಲ್ಲಿ ಹಣಕಾಸಿನ ಕೊರತೆ ಉಂಟಾಗದಂತೆ ನೋಡಿಕೊಳ್ಳುತ್ತೇವೆ. ಕನ್ನಡ ವಿಶ್ವವಿದ್ಯಾಲಯ ಎಂದಿನಂತೆ ಕಾರ್ಯನಿರ್ವಹಿಸಲು ಅನುವಾಗುವಂತೆ ಎಲ್ಲ ಕ್ರಮ ಕೈಗೊಳ್ಳುತ್ತೇವೆ ಎಂದು ಸಚಿವರು ತಿಳಿಸಿದ್ದಾರೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: #ಕನ್ನಡವಿವಿಉಳಿಸಿ ಟ್ವಿಟ್ಟರ್‌‌ ಅಭಿಯಾನ; ಸಿದ್ದರಾಮಯ್ಯ ಸೇರಿದಂತೆ ಹಲವರ ಬೆಂಬಲ

ಹಂಪಿ ಕನ್ನಡ ವಿಶ್ವವಿದ್ಯಾಲಯ ಕನ್ನಡಕ್ಕಾಗಿಯೇ ಇರುವ ಜಗತ್ತಿನ ಏಕೈಕ‌ ವಿಶ್ವವಿದ್ಯಾಲಯ. ಇದರಿಂದ ಸರ್ಕಾರ ಆದಾಯ ನಿರೀಕ್ಷೆ ಮಾಡಬಾರದು. ಇದನ್ನು ಅಫಿಲಿಯೇಟೆಡ್ ವಿಶ್ವವಿದ್ಯಾಲಯವಾಗಿ ಬದಲಿಸುವ ಯಾವುದೇ ದುಸ್ಸಾಹಸಕ್ಕೂ ಸರ್ಕಾರ ಕೈಹಾಕಬಾರದು ಎಂದು ನಾರಾಯಣ ಗೌಡ ಅವರು ಸಚಿವರಿಗೆ ಮನವಿ ಮಾಡಿಕೊಂಡಿದ್ದಾಗಿ ಹೇಳಿದ್ದು, “ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ” ಎಂದು ಅವರು ಹೇಳಿದ್ದಾರೆ.

ಕರವೇ ನಡೆಸುತ್ತಿರುವ ಹಂಪಿ‌ #ಕನ್ನಡವಿವಿಉಳಿಸಿ ಅಭಿಯಾನದ ಸಂಪೂರ್ಣ ಮಾಹಿತಿ ಹೊಂದಿದ್ದು, ಕನ್ನಡದ ಸಾರಸ್ವತ ಲೋಕದ ದಿಗ್ಗಜರು, ಸಾಮಾಜಿಕ ಹೋರಾಟಗಾರರ ಅಭಿಮತವನ್ನು ಗಮನಿಸಿದ್ದು, ಕನ್ನಡ ವಿಶ್ವವಿದ್ಯಾಲಯದ ಅಸ್ಮಿತೆಗೆ, ಅಸ್ತಿತ್ವಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳುವುದಾಗಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ್ ಹೇಳಿದ್ದಾಗಿ ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣ ಗೌಡ ಹೇಳಿದ್ದಾರೆ.

ಡಿಸೆಂಬರ್‌ 18 ರಂದು ಕರವೇ #ಕನ್ನಡವಿವಿಉಳಿಸಿ ಟ್ವಿಟ್ಟರ್‌ ಅಭಿಯಾನ ಪ್ರಾರಂಭಿಸಿತ್ತು. ಇದರಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾಲಯ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸಿ ರಾಜ್ಯ ಸರ್ಕಾರದ ಗಮನ ಸೆಳೆದಿತ್ತು.‌ ಅದರ ನಂತರ ಕರವೇ ತನ್ನ ಅಭಿಯಾನದ ಹಕ್ಕೊತ್ತಾಯಗಳನ್ನು ಉನ್ನತ ಶಿಕ್ಷಣ ಸಚಿವ ಹಾಗೂ ಉಪಮುಖ್ಯಮಂತ್ರಿಯು ಆಗಿರುವ ಅಶ್ವತ್ಥ್ ನಾರಾಯಣ್ ಅವರಿಗೆ ಸಲ್ಲಿಸಿತ್ತು.

ಇದನ್ನೂ ಓದಿ: ಯುವಜನೋತ್ಸವ: ಕನ್ನಡ ಬೇಡ -ಇಂಗ್ಲಿಷ್, ಹಿಂದಿಗೆ ಅವಕಾಶ ಎಂದ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...