Homeಕರ್ನಾಟಕಬಸವಣ್ಣನ ಆಶೀರ್ವಾದವಿರುವಾಗ ಕನ್ನಡಿಗರಿಗೆ ಮೋದಿ ಆಶೀರ್ವಾದ ಬೇಕಿಲ್ಲ: ನಡ್ಡಾ ಹೇಳಿಕೆಗೆ ಗುಡುಗಿದ ಪ್ರಿಯಾಂಕಾ ಗಾಂಧಿ

ಬಸವಣ್ಣನ ಆಶೀರ್ವಾದವಿರುವಾಗ ಕನ್ನಡಿಗರಿಗೆ ಮೋದಿ ಆಶೀರ್ವಾದ ಬೇಕಿಲ್ಲ: ನಡ್ಡಾ ಹೇಳಿಕೆಗೆ ಗುಡುಗಿದ ಪ್ರಿಯಾಂಕಾ ಗಾಂಧಿ

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಶಿಗ್ಗಾಂವಿಯಲ್ಲಿ ಮಾತನಾಡಿದ್ದ ಜೆ.ಪಿ ನಡ್ಡಾ, ‘ರಾಜ್ಯದ ಜನತೆ ಪ್ರಧಾನಿ ಮೋದಿ ಅವರ ಆಶೀರ್ವಾದದಿಂದ ವಂಚಿತರಾಗಬಾರದು’ ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ತಿರುಗೇಟು ನೀಡಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಬಸವಣ್ಣನ ಆಶೀರ್ವಾದವಿರುವಾಗ ಕನ್ನಡಿಗರಿಗೆ ಮೋದಿ ಆಶೀರ್ವಾದ ಬೇಕಿಲ್ಲ ಎಂದು ಗುಡುಗಿದ್ದಾರೆ.

ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲ್ಲೂಕಿನ ಹೆಳವರ ಹುಂಡಿಯಲ್ಲಿ ಮಂಗಳವಾರ ನಡೆದ ಪ್ರಚಾರಸಭೆಯಲ್ಲಿ ಮಾತನಾಡಿದ ಅವರು, ”ಮತ ಹಾಕದಿದ್ದರೆ ನರೇಂದ್ರ ಮೋದಿಯವರ ಆಶೀರ್ವಾದ ಸಿಗುವುದಿಲ್ಲವೆಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಅಹಂಕಾರದಿಂದ ಹೇಳಿದ್ದಾರೆ. ಇದು ಬಸವಣ್ಣ, ಕುವೆಂಪು ಅವರ‌ ನಾಡು. ಅವರ ಆಶೀರ್ವಾದವಿರುವಾಗ ಮೋದಿ ಆಶೀರ್ವಾದ ಬೇಕಾಗಿಲ್ಲ” ಎಂದು ತಿರುಗೇಟು ನೀಡಿದ್ದಾರೆ.

”ಈ ಚುನಾವಣೆಯಲ್ಲಿ ಮೋದಿ ಸೇರಿದಂತೆ ಯಾವ ನಾಯಕರೂ ಮುಖ್ಯರಲ್ಲ. ಕರ್ನಾಟಕದ ಜನರಷ್ಟೇ ಮುಖ್ಯ. ನಿಮ್ಮ ಅನುಭವದ ಮೇಲೆ, ಯೋಚಿಸಿ ಮತ ಚಲಾಯಿಸಿ. ಲೂಟಿ‌ಕೋರ ಸರ್ಕಾರವನ್ನು ತೆಗೆದು ಹಾಕಿ. ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿ” ಎಂದರು.

ನಂದಿನಿ ವರ್ಸಸ್‌ ಅಮೂಲ್‌ ಕುರಿತು ಪ್ರಸ್ತಾಪಿಸಿದ ಅವರು, ”ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ‘ನಂದಿನಿ’ ಬ್ರ್ಯಾಂಡ್‌ಗೆ ಬಲ ತುಂಬುವ ಕೆಲಸ ಮಾಡಲಾಗುವುದು. ಹೊರರಾಜ್ಯದ ಹಾಲು ಉತ್ಪಾದಕ ಸಹಕಾರಿ ಸಂಘಕ್ಕೆ ರಾಜ್ಯದಲ್ಲಿ ಹಾಲು ಮಾರಲು ಅವಕಾಶ ನೀಡುವುದಿಲ್ಲ” ಎಂದೂ ಹೇಳಿದರು.

”ರಾಜ್ಯದಲ್ಲಿ ಈ ಹಿಂದೆ ಹೆಚ್ಚುವರಿ ಹಾಲು ಉತ್ಪಾದನೆಯಾಗುತ್ತಿತ್ತು. ಕೆಎಂಎಫ್‌ ಅನ್ನು ದುರ್ಬಲಗೊಳಿಸಲು ಬೇಕಂತಲೇ ಹಾಲು ಉತ್ಪಾದನೆ ಕುಂಠಿತವಾಗುವಂತೆ ನೋಡಿಕೊಳ್ಳಲಾಗಿದೆ” ಎಂದು ಪ್ರಿಯಾಂಕಾ ದೂರಿದರು.

ಇದನ್ನೂ ಓದಿ: “ರಾಜ್ಯದ ಜನತೆ ಪ್ರಧಾನಿ ಮೋದಿ ಅವರ ಆಶೀರ್ವಾದದಿಂದ ವಂಚಿತರಾಗಬಾರದು”: ಜೆ.ಪಿ ನಡ್ಡಾ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು

ಮೋದಿ ಆಶೀರ್ವಾದದ ಹೇಳಿಕೆಗೆ ಅಂದು ಕಾಂಗ್ರೆಸ್ ಕೆಂಡವಾಗಿತ್ತು. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಾರದಿದ್ದರೆ ಕೇಂದ್ರದಿಂದ ಅನುದಾನ ನೀಡುವುದಿಲ್ಲ ಎಂಬ ಅರ್ಥವೇ ಎಂದು ಕಾಂಗ್ರೆಸ್ ಪ್ರಶ್ನಿಸಿತ್ತು.

”ಮೋದಿಯ ಆಶೀರ್ವಾದ ಬೇಕೆಂದರೆ ಬಿಜೆಪಿಗೆ ಮತ ಹಾಕಿ” ಇದು ಜೆ.ಪಿ ನಡ್ಡಾ ಅವರು ಕನ್ನಡಿಗರಿಗೆ ಹಾಕುತ್ತಿರುವ ಬೆದರಿಕೆ. ಬಿಜೆಪಿ ಸರ್ವಾಧಿಕಾರವನ್ನು ಜಾರಿಗೊಳಿಸುತ್ತಿರುವುದಕ್ಕೆ ಈ ಮಾತುಗಳೇ ನಿದರ್ಶನ. ಆಶೀರ್ವಾದ ಮಾಡಬೇಕಿರುವುದು ಜನರೇ ಹೊರತು, ಮೋದಿಯಲ್ಲ. ಒಕ್ಕೂಟ ವ್ಯವಸ್ಥೆ & ಪ್ರಜಾಪ್ರಭುತ್ವದ ಮೇಲೆ ಬಿಜೆಪಿಗೆ ಕಿಂಚಿತ್ ಗೌರವವಿಲ್ಲ” ಎಂದು ಕಾಂಗ್ರೆಸ್ ಟೀಕಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...