Homeಚಳವಳಿಡಬಲ್ ಇಂಜಿನ್ ಸರ್ಕಾರದಿಂದ ಲಸಿಕೆಯಲ್ಲೂ ಮೋಸ: ಭುಗಿಲೆದ್ದ ಕನ್ನಡಿಗರ ಆಕ್ರೋಶ

ಡಬಲ್ ಇಂಜಿನ್ ಸರ್ಕಾರದಿಂದ ಲಸಿಕೆಯಲ್ಲೂ ಮೋಸ: ಭುಗಿಲೆದ್ದ ಕನ್ನಡಿಗರ ಆಕ್ರೋಶ

#ಲಸಿಕೆಯಲ್ಲೂಮೋಸ ಹ್ಯಾಷ್‌ಟ್ಯಾಗ್‌ ಬೆಂಗಳೂರಿನಲ್ಲಿ ನಂಬರ್ ಒನ್ ಸ್ಥಾನದಲ್ಲಿ ಟ್ರೆಂಡ್‌ ಆಗುವುದಲ್ಲದೇ ಕೇವಲ 45 ನಿಮಿಷಗಳಲ್ಲಿ 10 ಸಾವಿರಕ್ಕೂ ಹೆಚ್ಚು ಟ್ವೀಟ್‌ಗಳನ್ನು ದಾಖಲಿಸಿತ್ತು.

- Advertisement -
- Advertisement -

“ವಿಶ್ವ ನಾಯಕ ಎನಿಸಿಕೊಳ್ಳಲು ತನ್ನ ಜನರನ್ನು ಲಸಿಕೆ ನೀಡದೆ ಬಲಿ ಕೊಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಭಾರತದ ಇತಿಹಾಸದಲ್ಲಿ ಕರಾಳ ವ್ಯಕ್ತಿಯಾಗಿ ದಾಖಲಾಗುತ್ತಾರೆ! ಜನತೆ ಕೇಳುತ್ತಿದ್ದಾರೆ, ಎಲ್ಲಿ ನಮ್ಮ ಲಸಿಕೆ! #ಲಸಿಕೆಯಲ್ಲೂಮೋಸ #DoubleEngineMosa”.. ಇದು ಮೋದಿ ಸರ್ಕಾರದ ವಿರುದ್ಧ ಪಲ್ಲವಿ ಚಿದಂಬರ್ ಎಂಬುವವರು ಟ್ವಿಟರ್‌ನಲ್ಲಿ ದಾಖಲಿಸಿದ ಆಕ್ರೋಶದ ನುಡಿ..

ಖಾಸಗಿ ಆಸ್ಪತ್ರೆಗಳ ವ್ಯಾಕ್ಸಿನ್ ಮಾರಾಟ ದಂಧೆಗೆ ಸಂಸದ ತೇಜಸ್ವಿ ಸೂರ್ಯನೇ ಬ್ರಾಂಡ್ ಅಂಬಾಸಿಡರ್. ಶಾಸಕ ರವಿ ಸುಬ್ರಹ್ಮಣ್ಯ ಕಮೀಷನ್ ಏಜೆಂಟ್. ಮಾವ ಅಳಿಯನ ಕಳ್ಳಾಟದಲ್ಲಿ ಬಿಜೆಪಿ ಸರ್ಕಾರಕ್ಕೆ ಪಾಲೆಷ್ಟು? ಲಸಿಕೆ ಹಂಚಿಕೆಯಲ್ಲಿ ಕಮೀಷನ್ ದಂಧೆ ನಡೆದಿಲ್ಲ ಎಂಬುದಾದರೆ ರಾಜ್ಯ ಸರ್ಕಾರ ಈ ಕೂಡಲೇ ಈ ಹಗರಣದ ಬಗ್ಗೆ ಕೇಸು ದಾಖಲಿಸಿ, ಸೂಕ್ತ ತನಿಖೆಗೆ ಒಪ್ಪಿಸಬೇಕು. ಇಲ್ಲವಾದರೆ ಕಮೀಷನ್ ದಂಧೆಯಲ್ಲಿ ಸರ್ಕಾರದ್ದೂ ಪಾಲಿದೆ ಎಂದು ಒಪ್ಪಿಕೊಂಡಂತೆ ಎಂಬ ತೀಕ್ಷ್ಣ ಪ್ರತಿಕ್ರಿಯೆಗಳು ಕರ್ನಾಟಕ ರಕ್ಷಣಾ ವೇದಿಕೆ ಕರೆ ನೀಡಿದ್ದ #ಲಸಿಕೆಯಲ್ಲೂಮೋಸ ಟ್ವಿಟರ್ ಅಭಿಯಾನದಲ್ಲಿ ಕೇಳಿಬಂದಿವೆ.

ಆಕ್ಸಿಜನ್ ಕೊಡಲಿಲ್ಲ, ರೆಮ್ಡಿಸಿವಿರ್ ಕೊಡಲಿಲ್ಲ, ಆಂಫೋಟೆರಿಸಿನ್ ಕೊಡಲಿಲ್ಲ. ಈಗ ಲಸಿಕೆಯೂ ಇಲ್ಲ‌. ಇಂಥ ಜನವಿರೋಧಿ ಒಕ್ಕೂಟ ಸರ್ಕಾರ ಹಿಂದೆಂದೂ ಇರಲಿಲ್ಲ ಎಂದು ಆರೋಪಿಸಿ ಇಂದು ಟ್ವಿಟರ್ ಅಭಿಯಾನಕ್ಕೆ ಕರೆ ನೀಡಿತ್ತು. ಈ ಕರೆಗೆ ಸಾವಿರಾರು ಜನರು ಕೈಜೋಡಿಸಿದ್ದು ಕೇಂದ್ರ ಸರ್ಕಾರ ಮತ್ತು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. #ಲಸಿಕೆಯಲ್ಲೂಮೋಸ ಹ್ಯಾಷ್‌ಟ್ಯಾಗ್‌ ಬೆಂಗಳೂರಿನಲ್ಲಿ ನಂಬರ್ ಒನ್ ಸ್ಥಾನದಲ್ಲಿ ಟ್ರೆಂಡ್‌ ಆಗುವುದಲ್ಲದೇ ಕೇವಲ 45 ನಿಮಿಷಗಳಲ್ಲಿ 10 ಸಾವಿರಕ್ಕೂ ಹೆಚ್ಚು ಟ್ವೀಟ್‌ಗಳನ್ನು ದಾಖಲಿಸಿತ್ತು.

ಇಷ್ಟು ದಿನ ಕೇಂದ್ರದಿಂದ ಕರ್ನಾಟಕಕ್ಕೆ ನಿರಂತರವಾಗಿ ನಡೆಯುತ್ತಿರುವ ಎಲ್ಲಾ ಬಗೆಯ ತಾರತಮ್ಯಗಳನ್ನು ಪ್ರಶ್ನಿಸದೇ ಇದ್ದುದ್ದಕ್ಕೆ ಇಂದು ನಮಗೆ ಜೀವ ಉಳಿಸೋ ಲಸಿಕೆಯಲ್ಲೂ ಮೋಸ ನಡೆದಿದೆ. ಈಗಲೂ ಪ್ರಶ್ನಿಸದೆ ಇದ್ದರೆ ನಮ್ಮ ಅಳಿವು ಖಂಡಿತ ಎಂದು ರಾಮಚಂದ್ರ ಎಮ್ ಎಂಬುವವರು ಆತಂಕ ವ್ಯಕ್ತಪಡಿಸಿದ್ದಾರೆ.

ಕೋವಿಡ್‍ನಿಂದ ಈಗಾಗಲೇ ಆರ್ಥಿಕತೆ ತತ್ತರಿಸಿದೆ. ಸರಿಯಾದ ಸಮಯಕ್ಕೆ ಲಸಿಕೆ ನೀಡದಿದ್ದರೆ ಲಾಕ್ಡೌನುಗಳು ಹೆಚ್ಚಾಗುತ್ತವೆ. ಹೆಚ್ಚಿದ ಆರ್ಥಿಕ ಹೊರೆ ನಾಗರಿಕರ ಮೇಲೆಯೇ.ಹಸಿವು-ನೋವುಗಳು ಹೆಚ್ಚುತ್ತವೆ. ಈಗಾಗಲೇ ಹೊಡೆತ ಬಿದ್ದಿರುವ ಆರ್ಥಿಕತೆಯಿಂದ ಮೇಲೇಳುವುದು ಸಾಹಸವೇ. ಒಕ್ಕೂಟ ಮತ್ತು ರಾಜ್ಯ ಸರಕಾರಗಳು ಬೇಗನೆ ಲಸಿಕೆ ಒದಗಿಸಬೇಕು ಎಂದು ಶ್ರುತಿ ಎಚ್.ಎಂ ಒತ್ತಾಯಿಸಿದ್ದಾರೆ.

ಹಾಸಿಗೆ ಬ್ಲಾಕಿಂಗ್ ದಂಧೆಯಲ್ಲಿ ಹೀರೋ ಆಗಲು ಹೊರಟಿದ್ದ ಸಂಸದ ತೇಜಸ್ವಿ ಸೂರ್ಯ ಈ ಕಡೆ ಲಸಿಕೆ ಹಂಚಿಕೆಯ ದಂಧೆಯಲ್ಲಿ ಸಿಕ್ಕಿ ಹಾಕಿಕೊಂಡಿದ್ದಾರೆ. ಉಚಿತವಾಗಿ ಸಾರ್ವಜನಿಕರಿಗೆ ಸಿಗಬೇಕಾದ ಲಸಿಕೆ 900 ರೂಪಾಯಿಗೆ ಬಿಕರಿಯಾಗುತ್ತಿದೆ. ಸಂಸದ ತೇಜಸ್ವಿ ಸೂರ್ಯನಿಂದ #ಲಸಿಕೆಯಲ್ಲೂಮೋಸ ನಡೆದಿದೆ. ಎಂದು ಸರೋವರ್ ಬೆಂಕಿಕೆರೆ ಆರೋಪಿಸಿದ್ದಾರೆ.

ಬಹಳ ದೇಶಗಳಲ್ಲಿ ನಾಗರೀಕರಿಗೆ ಲಸಿಕೆ ನೀಡುವ ಮೂಲಕ ಪರಿಸ್ಥಿತಿಯನ್ನು normal ಮಾಡಲು ಪ್ರಯತ್ನ ನಡೆಸಲಾಗುತ್ತಿದೆ. ಶಾಲಾ ಕಾಲೇಜು ಪ್ರಾರಂಭ ಮಾಡಲಾಗಿದೆ, ವ್ಯಾಪಾರ ವಹಿವಾಟುಗಳು ಮತ್ತೆ ಹಿಂದಿನ ಸ್ತಿತಿಗೆ ಮರಳಲು ಬೇಕಾದ ಕ್ರಮ ಕೈಗೊಳ್ಳುತ್ತಿದ್ದಾರೆ. ನಾವು ಭಾರತ ಸರಕಾರದ ಅಧಿಕಾರ ಹಪಹಪಿಗೆ ಸಿಲುಕಿ ಒದ್ದಾಡುತ್ತಿದ್ದೇವೆ #ಲಸಿಕೆಯಲ್ಲೂಮೋಸ ಎಂದು ಅರುಣ್ ಜಾವಗಲ್ ಟ್ವೀಟ್ ಮಾಡಿದ್ದಾರೆ.

ಒಂದು ಕಡೆ ನಮಗ್ಯಾಕೆ ಲಸಿಕೆ ಸಿಗುತ್ತಿಲ್ಲ, ಹೆಚ್ಚು ತೆರಿಗೆ ಕಟ್ಟುವ ಕರ್ನಾಟಕಕ್ಕೆ ಅನ್ಯಾಯ ಎಂದು ಕನ್ನಡಿಗರು ಪ್ರಶ್ನಿಸಿದರೆ, ಅದೇ ಸಮಯದಲ್ಲಿ ಇನ್ನೊಂದು ಕಡೆ ಕರ್ನಾಟಕದ ಆರೋಗ್ಯ ಸಚಿವ ಸುಧಾಕರ್ “ಲಸಿಕಾ ಅಭಿಯಾನದಲ್ಲಿ ಕರ್ನಾಟಕ ದಕ್ಷಿಣ ಭಾರತದ ನಂ .1 ರಾಜ್ಯವಾಗಿದೆ. ಕೇಂದ್ರದಿಂದ ಲಸಿಕೆ ಪೂರೈಕೆ ಚುರುಕುಗೊಳ್ಳುತ್ತಿರುವುದರಿಂದ, ಲಸಿಕಾ ಅಭಿಯಾನ ಇನ್ನಷ್ಟು ಬೇಗ ಮುನ್ನಡೆಯಲಿದೆ. ರಾಜ್ಯಕ್ಕೆ ನಿನ್ನೆ 80,000 ಡೋಸ್ ಕೋವಾಕ್ಸಿನ್ ಹಾಗೂ 2,17,310 ಡೋಸ್ ಕೊವಿಶೀಲ್ಡ್ ಪೂರೈಸಿದ ಕೇಂದ್ರಕ್ಕೆ ಧನ್ಯವಾದಗಳು” ಎಂದು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಮಾನ್ಯ ಪ್ರಧಾನಿಗಳೇ ಕೊರೋನಾ ಲಸಿಕೆಗಳೆಲ್ಲಿ? ಎಲ್ಲಿ ನೀವು ಹೇಳಿದ ಕೊರೋನಾ ವಿರುದ್ಧದ ಜಯ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Dear readers we are very sorry to say that the development it reveals in all state almost all similar the central government decided to administer the vaccine very long back but due to lack of awareness and also so the confusion of many doctors who are not ready to take shots there why I people refuse to at same time same time government of India produced whose number of vials but people rejected and misunderstanding the the information to take revenge government did not pay any attention towards taking necessary action to control the spreading of this virus and automatically e the vaccine demand increased the pharmaceutical company also artificially created shortage therefore death increased this is nothing but a revenge what I feel it is my personal opinion about the notion about the vaccination thank you very much.
    Ravi Kumar.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...