Homeಮುಖಪುಟಕಣ್ಣೂರು ವಿವಿ ಪಠ್ಯಕ್ರಮ ಕೇಸರೀಕರಣ: ಸಿಎಂ ಶಿಫಾರಸಿನಂತೆ ಪರಿಶೀಲನೆಗೆ ತಜ್ಞರ ಸಮಿತಿ ರಚನೆ

ಕಣ್ಣೂರು ವಿವಿ ಪಠ್ಯಕ್ರಮ ಕೇಸರೀಕರಣ: ಸಿಎಂ ಶಿಫಾರಸಿನಂತೆ ಪರಿಶೀಲನೆಗೆ ತಜ್ಞರ ಸಮಿತಿ ರಚನೆ

ಸ್ವಾತಂತ್ರ್ಯ ಹೋರಾಟಕ್ಕೆ ಬೆನ್ನು ತೋರಿಸಿದವರನ್ನು ವೈಭವೀಕರಿಸುವುದು ವಿವೇಕವಲ್ಲ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಹೇಳಿದ್ದಾರೆ.

- Advertisement -
- Advertisement -

ಕೇರಳದ ಕಣ್ಣೂರು ವಿಶ್ವವಿದ್ಯಾನಿಲಯದ ಪಠ್ಯಕ್ರಮದಲ್ಲಿ ವಿಡಿ ಸಾವರ್ಕರ್ ಮತ್ತು ಎಂ.ಎಸ್. ಗೋಲ್ವಾಲ್ಕರ್ ಅವರ ಕೃತಿಗಳನ್ನು ಸೇರಿಸುವುದನ್ನು ವಿಶ್ವವಿದ್ಯಾಲಯದ ಇಬ್ಬರು ಸದಸ್ಯರ ತಜ್ಞರ ಸಮಿತಿಯು ಪರಿಶೀಲನೆಗೆ ಒಳಪಡಿಸಲಿದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಶಿಫಾರಸಿನಂತೆ ಈ ಸಮಿತಿಯನ್ನು ರಚಿಸಲಾಗಿದೆ.

ವಿಶ್ವವಿದ್ಯಾನಿಯಲದ ಪಠ್ಯ ಕ್ರಮದಲ್ಲಿ ಆರೆಸ್ಸೆಸ್‌‌ ನಾಯಕರ ಪುಸ್ತಕಗಳ ಸೇರ್ಪಡೆಗೆ ಸಂಬಂಧಿಸಿದ ವಿವಾದಕ್ಕೆ ಪ್ರತಿಕ್ರಿಯಿಸಿದ ಪಿಣರಾಯಿ ವಿಜಯನ್, ಸ್ವಾತಂತ್ರ್ಯ ಹೋರಾಟಕ್ಕೆ ಬೆನ್ನು ತೋರಿಸಿದವರನ್ನು ವೈಭವೀಕರಿಸುವುದು ವಿವೇಕವಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ ಆರ್ಥಿಕ ಹಿಂಜರಿತ: 77,350 ಉದ್ಯೋಗ ಸೃಷ್ಟಿ; 100 ದಿನಗಳ ಕ್ರಿಯಾ ಯೋಜನೆ ಘೋಷಿಸಿದ ಪಿಣರಾಯಿ ಸರ್ಕಾರ

ಕೇರಳ ರಾಜ್ಯವು ಯಾವಾಗಲೂ ಇಂತಹ ವಿವಾದಾತ್ಮಕ ವ್ಯಕ್ತಿಗಳಿಂದ ಮತ್ತು ಅವರನ್ನು ವೈಭವೀಕರಿಸುವುದರ ಬಗ್ಗೆ ಅಂತರ ಕಾಯ್ದುಕೊಂಡು ಬಂದಿದೆ. ಯಾವುದೇ ಪ್ರತಿಗಾಮಿ ಸಿದ್ಧಾಂತವನ್ನು ವಿಮರ್ಶಾತ್ಮಕವಾಗಿ ಪರಿಶೀಲಿಸಬೇಕು ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಸಮಿತಿಯು ಪಠ್ಯಕ್ರಮವನ್ನು ಪರಿಶೀಲಿಸುತ್ತದೆ ಮತ್ತು ಸಮಿತಿಯ ಶಿಫಾರಸುಗಳ ಪ್ರಕಾರ ಸೂಕ್ತ ಕ್ರಮಗಳನ್ನು ಅನುಸರಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಇತ್ತೀಚೆಗೆ, ಕಣ್ಣೂರು ವಿಶ್ವವಿದ್ಯಾನಿಲಯವು ಸಾವರ್ಕರ್ ಅವರ ‘ಹಿಂದುತ್ವ: ಹಿಂದೂ ಯಾರು’, ಗೋಲ್ವಾಲ್ಕರ್ ಅವರ ‘ಬಂಚ್ ಆಫ್‌ ಥಾಟ್ಸ್‌’, ‘ವಿ ಓರ್‌ ಅವರ್‌ ನೇಷನ್‌ಹುಡ್‌ ಡಿಫೈನೆಡ್‌’ ಕೃತಿಯನ್ನು ಎಂಎ(ಕಲಾ ಸ್ನಾತಕೋತ್ತರ) ಆಡಳಿತ ಮತ್ತು ರಾಜಕೀಯದ ವಿಷಯದ ಪಠ್ಯಕ್ರಮದಲ್ಲಿ ಸೇರಿಸಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್: ಆರೆಸ್ಸೆಸ್ಸಿನ ಸ್ವಯಂ ಸೇವಕಿ ಪಾಕಿಸ್ತಾನದ ಕುಸ್ತಿಪಟುವಿಗೆ ಹೊಡೆದ್ದಾರೆಂದು ವೈರಲ್‌ ಆದ ಈ ವಿಡಿಯೊ ಸುಳ್ಳು!

ದೀನದಯಾಳ್ ಉಪಾಧ್ಯಾಯರ ‘ಸಮಗ್ರ ಮಾನವತಾವಾದ’, ಬಾಲರಾಜ್ ಮಧೋಕ್ ಅವರ ‘ಭಾರತೀಯೀಕರಣ: ಏನು, ಏಕೆ ಮತ್ತು ಹೇಗೆ’ ಭಾಗಗಳು ಕೂಡ ಪಠ್ಯಕ್ರಮದಲ್ಲಿ ಒಳಗೊಂಡಿವೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕಣ್ಣೂರು ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊಫೆಸರ್ ಗೋಪಿನಾಥ್ ರವೀಂದ್ರನ್ ಅವರು ಪಠ್ಯಕ್ರಮದಲ್ಲಿ ಕೇಸರೀಕರಣದ ಆರೋಪವನ್ನು ತಿರಸ್ಕರಿಸಿದ್ದಾರೆ.

“ನಾವು ಗಾಂಧೀಜಿ, ನೆಹರು, ಅಂಬೇಡ್ಕರ್ ಮತ್ತು ಟಾಗೋರ್ ಅವರ ಕೃತಿಗಳನ್ನು ಸೇರಿಸಿದ್ದೇವೆ. ಹಾಗೆಯೆ ಪಠ್ಯಕ್ರಮದಲ್ಲಿ ಸಾವರ್ಕರ್ ಮತ್ತು ಗೋಲ್ವಾಲ್ಕರ್ ಅವರ ಕೃತಿಗಳು ಒಳಗೊಂಡಿದೆ. ವಿದ್ಯಾರ್ಥಿಗಳು ಎಲ್ಲಾ ಸಿದ್ಧಾಂತಗಳ ಹಿಂದಿನ ಮೂಲ ಪಠ್ಯವನ್ನು ಕಲಿಯಲಿ ಮತ್ತು ಅರ್ಥಮಾಡಿಕೊಳ್ಳಲಿ. ಸಾವರ್ಕರ್ ಮತ್ತು ಗೋಲ್ವಾಲ್ಕರ್ ಹೇಳಿದ್ದು ಪ್ರಸ್ತುತ ಭಾರತದ ರಾಜಕೀಯದ ಭಾಗವಾಗಿದೆ. ಅದನ್ನು ಕಲಿಯುವುದರಲ್ಲಿ ತಪ್ಪೇನು?” ಎಂದು ಗೋಪಿನಾಥ್‌ ಅವರು ಹೇಳಿದ್ದಾರೆ.

ಇದನ್ನೂ ಓದಿ: ಆರೆಸ್ಸೆಸ್, ಬಿಜೆಪಿ ಎಮರ್ಜೆನ್ಸಿ ಬಗ್ಗೆ ಮಾತನಾಡುವುದು ಸೋಗಲಾಡಿತನದ ಪರಮಾವಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...