Homeಮುಖಪುಟಕಾನ್ಪುರ| ಮಹಿಳೆಯ ಮೇಲೆ ಅತ್ಯಾಚಾರವೆಸಗಿದ ಭಜರಂಗದಳದ ಮುಖಂಡನ ಬಂಧನ

ಕಾನ್ಪುರ| ಮಹಿಳೆಯ ಮೇಲೆ ಅತ್ಯಾಚಾರವೆಸಗಿದ ಭಜರಂಗದಳದ ಮುಖಂಡನ ಬಂಧನ

- Advertisement -
- Advertisement -

ಮದುವೆಯ ನೆಪದಲ್ಲಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಜರಂಗದಳದ ನಾಯಕ ದಿಲೀಪ್ ಸಿಂಗ್ ಬಜರಂಗಿ ಅವರನ್ನು ಪೊಲೀಸರು ಬಂಧಿಸಿರುವ ಘಟನೆ ಉತ್ತರ ಪ್ರದೇಶ ರಾಜ್ಯದ ಕಾನ್ಪುರದ ಗೋವಿಂದ್ ನಗರದಲ್ಲಿ ನಡೆದಿದೆ.

ಸುಳ್ಳು ಅತ್ಯಾಚಾರ ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ಆರೋಪಿಸಿ ಸೋಮವಾರ ಗೋವಿಂದ್ ನಗರ ಪೊಲೀಸ್ ಠಾಣೆಯ ಹೊರಗೆ ತನ್ನ ಮುಖದ ಮೇಲೆ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ನಂತರ ಬಜರಂಗಿಯನ್ನು ಬಂಧಿಸಲಾಗಿದೆ ಎಂದು ಹೆಚ್ಚುವರಿ ಡಿಸಿಪಿ (ದಕ್ಷಿಣ) ಮಹೇಶ್ ಕುಮಾರ್ ತಿಳಿಸಿದ್ದಾರೆ.

ನವೆಂಬರ್ 5, 2024 ರಂದು, ಭಜರಂಗಿ ತನ್ನೊಂದಿಗೆ ಸ್ನೇಹ ಬೆಳೆಸಿ, ಘಂಟಾಘರ್‌ನ ಹೋಟೆಲ್‌ಗೆ ಕರೆದೊಯ್ದು ಮದುವೆಯ ನೆಪದಲ್ಲಿ ತನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಿ ಮಹಿಳೆಯೊಬ್ಬರು ಕಲೆಕ್ಟರ್‌ಗಂಜ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಬಜರಂಗಿ ಅಶ್ಲೀಲ ವೀಡಿಯೋಗಳನ್ನು ಕೂಡ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾರೆ ಎಂದು ಮಹಿಳೆ ಹೇಳಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಪ್ರಕರಣದ ತನಿಖೆ ಆರಂಭಿಸಲಾಗಿತ್ತು. ಆದರೆ, ಕಾನ್ಪುರದ ಬಜರಂಗದಳದ ಮಾಜಿ ಜಿಲ್ಲಾ ಸಂಚಾಲಕರಾಗಿದ್ದ ಆರೋಪಿ ತಲೆಮರೆಸಿಕೊಂಡಿದ್ದಾರೆ ಎಂದು ಅವರು ಹೇಳಿದರು.

ಸೋಮವಾರ, ಬಜರಂಗಿ ತನ್ನ ಬೆಂಬಲಿಗರು ಮತ್ತು ಬಜರಂಗದಳದ ಕಾರ್ಯಕರ್ತರೊಂದಿಗೆ ಗೋವಿಂದ್ ನಗರ ಪೊಲೀಸ್ ಠಾಣೆಗೆ ಆಗಮಿಸಿದರು. ಸಾಮಾಜಿಕ ಮಾಧ್ಯಮದಲ್ಲಿ ಲೈವ್ ಸ್ಟ್ರೀಮ್ ಮಾಡುವಾಗ ಬೆಂಕಿ ಹಚ್ಚಿಕೊಳ್ಳಲು ಪ್ರಯತ್ನಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ.

ಸಾರ್ವಜನಿಕರ ಮಧ್ಯೆ ಪೊಲೀಸ್ ಠಾಣೆಯ ಹೊರಗೆ ಬಜರಂಗಿಯ ಆತ್ಮಾಹುತಿ ಯತ್ನವು ಅಧಿಕೃತ ಕರ್ತವ್ಯಗಳನ್ನು ನಿರ್ವಹಿಸಲು ಅಡ್ಡಿಪಡಿಸಿದ ಹಾಗೂ ಆತ್ಮಹತ್ಯೆಗೆ ಪ್ರಯತ್ನಿಸಿದ ಆರೋಪದ ಮೇಲೆ ಮತ್ತೊಂದು ಎಫ್‌ಐಆರ್ ದಾಖಲಿಸಲು ಪೊಲೀಸರನ್ನು ಪ್ರೇರೇಪಿಸಿತು ಎಂದು ಅಧಿಕಾರಿ ಹೇಳಿದರು.

ಇದನ್ನೂ ಓದಿ; ಸಿಪಿಎಂ ಕಾರ್ಯಕರ್ತನ ಹತ್ಯೆ: 9 ಮಂದಿ ಆರೆಸ್ಸೆಸ್ ಕಾರ್ಯಕರ್ತರಿಗೆ ಜೀವಾವಧಿ ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...